• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮೈಸೂರು
  • /5 ತಿಂಗಳ ಬಳಿಕ ಕೊಡಗಿನ ಪ್ರಸಿದ್ಧ ದುಬಾರೆ ಸಾಕಾನೆ ಶಿಬಿರ ಮತ್ತೆ ಪ್ರವಾಸಿಗರ ವೀಕ್ಷಣೆಗೆ ಮುಕ್ತ

5 ತಿಂಗಳ ಬಳಿಕ ಕೊಡಗಿನ ಪ್ರಸಿದ್ಧ ದುಬಾರೆ ಸಾಕಾನೆ ಶಿಬಿರ ಮತ್ತೆ ಪ್ರವಾಸಿಗರ ವೀಕ್ಷಣೆಗೆ ಮುಕ್ತ

ಬರೋಬ್ಬರಿ ಐದು ತಿಂಗಳುಗಳ ಬಳಿಕ ಕೊಡಗಿನ ಸುಪ್ರಸಿದ್ಧ ದುಬಾರೆ ಸಾಕಾನೆ ಶಿಬಿರ ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಿದೆ.

Written ByYashaswini V
Published: Sep 22, 2026, 01:13 PM IST|Updated: Sep 22, 2026, 01:15 PM IST
joinshare
5 ತಿಂಗಳ ಬಳಿಕ ಕೊಡಗಿನ ಪ್ರಸಿದ್ಧ ದುಬಾರೆ ಸಾಕಾನೆ ಶಿಬಿರ ಮತ್ತೆ ಪ್ರವಾಸಿಗರ ವೀಕ್ಷಣೆಗೆ ಮುಕ್ತ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಐದು ತಿಂಗಳ ಬಳಿಕ ಕೊಡಗಿನ ಪ್ರಸಿದ್ಧ ದುಬಾರೆ ಸಾಕಾನೆ ಶಿಬಿರ ಮತ್ತೆ ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಿದೆ. ಆನೆಗಳ ಕಾಳಗದಲ್ಲಿ ಪ್ರವಾಸಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಬಂದ್ ಆಗಿದ್ದ ಶಿಬಿರ ಇದೀಗ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳೊಂದಿಗೆ ತೆರೆಯಲಾಗಿದೆ. ಪ್ರವಾಸಿಗರಿಗೆ ವಿಧಿಸಲಾಗಿರುವ ನಿಯಮಗಳೇನು..? ಒಂದು ದಿನಕ್ಕೆ ಎಷ್ಟು ಮಂದಿಗೆ ಅವಕಾಶ..? ಇಲ್ಲಿದೆ ಸಂಪೂರ್ಣ ಮಾಹಿತಿ.

ಐದು ತಿಂಗಳ ಬಳಿಕ ಮತ್ತೆ ದುಬಾರೆ ಸಾಕಾನೆ ಶಿಬಿರಕ್ಕೆ ಪ್ರವಾಸಿಗರಿಗೆ ಎಂಟ್ರಿ:
ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ದುಬಾರೆ ಸಾಕಾನೆ ಶಿಬಿರ ಇದೀಗ ಮತ್ತೆ ಪ್ರವಾಸಿಗರ ಭೇಟಿಗೆ ಮುಕ್ತವಾಗಿದೆ. ಸುಮಾರು ಐದು ತಿಂಗಳುಗಳ ನಂತರ ದುಬಾರೆ ಸಾಕಾನೆ ಶಿಬಿರದಲ್ಲಿ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಸದ್ಯ ಪ್ರತಿದಿನ ಬೆಳಿಗ್ಗೆ 9.30ರಿಂದ 11.30ರವರೆಗೆ ಮಾತ್ರ ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ತಂಡ ರಚಿಸಿ ಮಾರ್ಗದರ್ಶಕರೊಂದಿಗೆ ಪ್ರವೇಶ:
ಆದಾಗ್ಯೂ, ಈ ಬಾರಿ ಮೊದಲಿನಂತೆ ಪ್ರವಾಸಿಗರು ಒಮ್ಮೆ ದುಬಾರಿ ಸಾಕಾನೆ ಶಿಬಿರಕ್ಕೆ ಎಂಟ್ರಿ ಆಗಿ ತಮಗೆ ಸಾಕೆನಿಸುವವರೆಗೂ ಅಲ್ಲಿಯೇ ಉಳಿಯಲು ಸಾಧ್ಯವಿಲ್ಲ. ಅಲ್ಲದೆ, ಯಾವುದೇ ಪ್ರವಾಸಿಗರಿಗೂ ಕೂಡ ತಮ್ಮಷ್ಟಕ್ಕೆ ತಾವೇ ಜಸ್ಟ್‌ ಟಿಕೆಟ್‌ ತೋರಿಸಿ ಆನೆ ಶಿಬಿರದೊಳಗೆ ಹೋಗಲು ಸಾಧ್ಯವಾಗುವುದಿಲ್ಲ. ಬದಲಿಗೆ 45 ನಿಮಿಷದ ಅವಧಿಗೆ ಗರಿಷ್ಠ 150 ಪ್ರವಾಸಿಗರಿಗೆ ಮಾತ್ರ ದುಬಾರೆ ಸಾಕಾನೆ ಶಿಬಿರದೊಳಗೆ ಎಂಟ್ರಿ ಆಗಲು ಅವಕಾಶ ನೀಡಲಾಗಿದೆ. ಇದಕ್ಕಾಗಿ, 25 ಜನರ ಆರು ತಂಡಗಳನ್ನು ರಚಿಸಿ, ಒಂದೊಂದು ತಂಡಕ್ಕೂ ಒಬ್ಬೊಬ್ಬ ಮಾರ್ಗದರ್ಶಕರೊಂದಿಗೆ ಶಿಬಿರ ವೀಕ್ಷಣೆಗೆ ಕರೆದೊಯ್ಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇಷ್ಟು ದೂರದಲ್ಲಿದ್ದುಕೊಂಡೇ ಆನೆಗಳ ವೀಕ್ಷಣೆಗೆ ಅವಕಾಶ: 
ಈ ಮೊದಲು ದುಬಾರೆ ಸಾಕಾನೆ ಶಿಬಿರದೊಳಗೆ ಪ್ರವೇಶಿಸಿದ ಬಳಿಕ ನಿಗದಿತ ಜಾಗದಲ್ಲಿ ಆನೆಗಳಿಗೆ ಸ್ನಾನ ಮಾಡಿಸುವಾಗ ಅಲ್ಲಿ ವಿಶೇಷ ಟಿಕೆಟ್‌ ಖರೀದಿಸಿ ಪ್ರವಾಸಿಗರು ಆನೆಗಳ ಬಳಿಗೇ ಹೋಗಿ ಫೋಟೋ ತೆಗೆದುಕೊಳ್ಳಲು, ಆನೆಗೆ ಸ್ನಾನ ಮಾಡಿಸುವಾಗ ನೀರೆರಚಿ ಆಟವಾಡಲು ಅವಕಾಶವಿತ್ತು. ಆದರೆ, ಇನ್ಮುಂದೆ ಇದು ಸಾಧ್ಯವಿಲ್ಲ. ಆನೆಗಳ ಸುರಕ್ಷತೆಯ ಜೊತೆ ಜೊತೆಗೆ ಪ್ರವಾಸಿಗರ ಸುರಕ್ಷತೆಯನ್ನೂ ಸಹ ಗಮನದಲ್ಲಿಟ್ಟುಕೊಂಡು ಪ್ರವಾಸಿಗರು 10 ಮೀಟರ್ ಅಂತರದಲ್ಲಿದ್ದುಕೊಂಡೇ ಆನೆಗಳನ್ನು ವೀಕ್ಷಿಸಬೇಕಾಗಿದೆ. ಈ ಸಂದರ್ಭದಲ್ಲಿ ಪ್ರವಾಸಿಗರಿಗೆ ಆನೆಗಳನ್ನು ಮುಟ್ಟಲು, ಅವುಗಳಿಗೆ ಕೈಯಾರೆ ಆಹಾರ ನೀಡಲು, ಸ್ನಾನ ಮಾಡಿಸಲು ಅವಕಾಶ ಇರುವುದಿಲ್ಲ. ಇದಕ್ಕಾಗಿ ಆನೆಗಳು ಮತ್ತು ಪ್ರವಾಸಿಗರ ನಡುವೆ ಸುರಕ್ಷಿತ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಬ್ಯಾರಿಕೇಡ್‌ಗಳನ್ನು ಕೂಡ ಅಳವಡಿಸಲಾಗಿದೆ.

ಎಂಟ್ರಿ ಫೀಸ್‌ನಲ್ಲೂ ಬದಲಾವಣೆ:
ಸುಮಾರು ಐದು ತಿಂಗಳುಗಳ ಬಳಿಕ ಪ್ರವಾಸಿಗರ ಪ್ರವೇಶಕ್ಕೆ ಮುಕ್ತವಾಗುತ್ತಿರುವ ದುಬಾರೆ ಸಾಕಾನೆ ಶಿಬಿರದಲ್ಲಿ ಇನ್ನು ಪ್ರವೇಶ ದರದಲ್ಲೂ ಬದಲಾವಣೆ ಮಾಡಲಾಗಿದೆ. ಸಾಮಾನ್ಯ ದಿನಗಳಲ್ಲಿ 140 ರೂಪಾಯಿ ಹಾಗೂ ವಾರಾಂತ್ಯ ಮತ್ತು ರಜಾ ದಿನಗಳಲ್ಲಿ 160 ರೂಪಾಯಿ ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ.

10 ಆನೆಗಳ ವೀಕ್ಷಣೆಗೆ ಮಾತ್ರ ಅವಕಾಶ:
ಶಿಬಿರದಲ್ಲಿರುವ ಒಟ್ಟು 30 ಆನೆಗಳ ಪೈಕಿ ಸದ್ಯ 10 ಆನೆಗಳನ್ನು ಮಾತ್ರ ಪ್ರವಾಸಿಗರು ವೀಕ್ಷಿಸಲು ಅವಕಾಶ ನೀಡಲಾಗಿದೆ. ಪ್ರಸ್ತುತ, ಆನೆ ಶಿಬಿರಗಳಿಗಾಗಿ ರೂಪಿಸಿರುವ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಅನುಷ್ಠಾನಗೊಳಿಸಿ ಕರ್ನಾಟಕ ಸರ್ಕಾರ ದುಬಾರೆ ಆನೆ ಶಿಬಿರದಲ್ಲಿ ಪ್ರವಾಸಿಗರ ಎಂಟ್ರಿಗೆ ಅವಕಾಶ ಕಲ್ಪಿಸಿದೆ. ಪರಿಸ್ಥಿತಿ ಪರಿಶೀಲಿಸಿ ಮುಂದಿನ ದಿನಗಳಲ್ಲಿ ಇತರೆ ಅವಧಿಗಳಲ್ಲೂ ಶಿಬಿರದ ಕಾರ್ಯಾಚರಣೆಯನ್ನು ವಿಸ್ತರಿಸುವ ಕುರಿತು ನಿರ್ಧರಿಸಲಾಗುವುದು.” ಎಂದು ಮೂಲಗಳು ತಿಳಿಸಿವೆ.

ಗಮನಾರ್ಹವಾಗಿ ಇದೇ ವರ್ಷದ ಜೂನ್ 1ರಂದು ಕಂಜನ್ ಮತ್ತು ಮಾರ್ತಾಂಡ ಎಂಬ ಸಾಕಾನೆಗಳ ನಡುವೆ ಕಾಳಗ ನಡೆದಿತ್ತು. ಈ ಸಂದರ್ಭದಲ್ಲಿ ಆನೆಗಳ ಮಧ್ಯೆ ಸಿಲುಕಿ ತಮಿಳುನಾಡಿನಿಂದ ದುಬಾರೆ ಸಾಕಾನೆ ಶಿಬಿರ ನೋಡಲು ಬಂದಿದ್ದ ಪ್ರವಾಸಿ ಮಹಿಳೆಯೊಬ್ಬರು  ಮೃತಪಟ್ಟಿದ್ದರು. ಕಾಳಗದಲ್ಲಿ ಗಾಯಗೊಂಡಿದ್ದ ಸಾಕಾನೆಯೂ ಬಳಿಕ ಮೃತಪಟ್ಟಿತ್ತು.

ದುಬಾರೆ ಸಾಕಾನೆ ಶಿಬಿರದಲ್ಲಿ ಸಂಭವಿಸಿದ್ದ ಈ ದುರ್ಘಟನೆಯ ಬಳಿಕ ಪ್ರವಾಸಿಗರ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದ ದುಬಾರೆ ಸಾಕಾನೆ ಶಿಬಿರದಲ್ಲಿ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿತ್ತು. ಈ ರೀತಿ 2026ರ ಜೂನ್‌ನಿಂದ ಬಂದ್‌ ಆಗಿದ್ದ ದುಬಾರೆ ಸಾಕಾನೆ ಶಿಬಿರ ಇದೀಗ ಬರೋಬ್ಬರಿ ಐದು ತಿಂಗಳುಗಳ ನಂತರ ಪುನಃ ಪ್ರವಾಸಿಗರಿಗೆ ಮುಕ್ತವಾಗಿದೆ. ಆದರೆ ಈ ಬಾರಿ ಕಟ್ಟುನಿಟ್ಟಿನ ನಿಯಮಗಳೊಂದಿಗೆ ಪ್ರವಾಸಿಗರಿಗೆ ಆನೆಗಳ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಪರಿಶೀಲಿಸಿ ಪ್ರವಾಸಿ ವೀಕ್ಷಣೆಯ ಅವಧಿಯನ್ನು ವಿಸ್ತರಿಸುವ ಕುರಿತು ಅರಣ್ಯ ಇಲಾಖೆ ನಿರ್ಧರಿಸಲಿದೆ.

ಒಟ್ಟಾರೆ ಐದು ತಿಂಗಳ ಬಳಿಕ ದುಬಾರೆ ಸಾಕಾನೆ ಶಿಬಿರಕ್ಕೆ ಮತ್ತೆ ಪ್ರವಾಸಿಗರ ಪ್ರವೇಶ ಆರಂಭವಾಗಿದೆ. ಆನೆಗಳ ವೀಕ್ಷಣೆಯ ಜೊತೆಗೆ ಸುರಕ್ಷತಾ ನಿಯಮಗಳ ಪಾಲನೆಗೆ ಪ್ರವಾಸಿಗರು ಆದ್ಯತೆ ನೀಡಬೇಕಿದೆ.
 

Add Zee News as a Preferred Source
TAGS:
Kannada News
News