• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮೈಸೂರು
  • /ಬೆಲೆ ಏರಿಕೆಯನ್ನು ಡೈವರ್ಟ್ ಮಾಡಲು ಎಥೆನಾಲ್ ವಿಚಾರ ಮುನ್ನೆಲೆಗೆ: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಬೆಲೆ ಏರಿಕೆಯನ್ನು ಡೈವರ್ಟ್ ಮಾಡಲು ಎಥೆನಾಲ್ ವಿಚಾರ ಮುನ್ನೆಲೆಗೆ: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರ ಗಮನ ಬೇರೆಡೆಗೆ ತಿರುಗಿಸಲು ಎಥೆನಾಲ್‌ ವಿಚಾರವನ್ನು ಮುನ್ನೆಲೆಗೆ ತರಲಾಗಿದೆ ಎಂದು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.

Written ByYashaswini V
Published: Nov 09, 2026, 15:28 IST|Updated: Nov 09, 2026, 15:31 IST
joinshare
ಬೆಲೆ ಏರಿಕೆಯನ್ನು ಡೈವರ್ಟ್ ಮಾಡಲು ಎಥೆನಾಲ್ ವಿಚಾರ ಮುನ್ನೆಲೆಗೆ: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಲೆ ಏರಿಕೆಯನ್ನು ಡೈವರ್ಟ್ ಮಾಡಲು ಎಥೆನಾಲ್ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರು ಮೈಸೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ಬಗ್ಗೆಯೂ ಮಾಹಿತಿ ನೀಡಿದರು.

ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಎಥೆನಾಲ್ ವಿಚಾರ ಮುಂದಕ್ಕೆ ತಂದಿದ್ದಾರೆ. ಈ ಬಗ್ಗೆ ಸೂಕ್ತ ದಾಖಲೆಗಳಿದ್ದರೆ ಕೊಡಲಿ, ಸುಮ್ಮನೆ ಆರೋಪಗಳನ್ನು ಮಾಡಬಾರದು. ಎಥೆನಾಲ್ ಬಳಕೆಯಿಂದ ವಾಹನಗಳ ಕಾರ್ಯಕ್ಷಮತೆ ಹಾಳಾಗುತ್ತದೆ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ವಿಶ್ವದ ಮೊದಲ ತಾರಾಲಯ:
ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಿರ್ಮಿಸಿರುವ ತಾರಾಲಯ ಉದ್ಘಾಟನೆ ಮಾಡಲಿದ್ದಾರೆ. ಇದು ವಿಶ್ವದ ಮೊದಲ ತಾರಾಲಯ ಆಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡ ಅನುದಾನ ನೀಡಿದ್ದಾರೆ. ನೂತನ ತಾರಾಲಯದಲ್ಲಿ ವಿದ್ಯಾರ್ಥಿಗಳು ತರಬೇತಿ ಪಡೆಯಲು ಅನುಕೂಲವಾಗಲಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವೆ ಸಂಘರ್ಷ:
ಮೈಸೂರು ಅರಮನೆ ಒಡೆತನದ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವೆ ಸಂಘರ್ಷ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಈ ಬಗ್ಗೆ ಈಗಾಗಲೇ ತಾಯಿಯವರು ಮಾತನಾಡಿದ್ದಾರೆ. ಈ ವಿಚಾರ ನ್ಯಾಯಾಲಯದ ಸುಪರ್ದಿಯಲ್ಲಿದೆ ಹಾಗಾಗಿ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ. ಕಾನೂನಾತ್ಮಕವಾಗಿಯೇ ಎಲ್ಲವೂ ಬಗೆಹರಿಯಲಿದೆ ಎಂದರು.

ಮೈಸೂರು ಅರಮನೆಯನ್ನು ಸರ್ಕಾರದ ವಶಕ್ಕೆ ಪಡೆದುಕೊಳ್ಳಲು ಕಾರ್ಯಾಂಗದ ದುರ್ಬಳಕೆ ಮಾಡಿಕೊಳ್ಳುವ ಯತ್ನಗಳು ನಡೆದಿವೆ. ನ್ಯಾಯಾಲಯದ ಮೂಲಕ ನ್ಯಾಯ ಸಿಗುವ ವಿಶ್ವಾಸವಿದೆ. ಈ ಬಾರಿಯ ದಸರಾದಲ್ಲಿ ಆಗಿರುವ ಕೆಲ ಲೋಪಗಳನ್ನು ಮುಂದಿನ ದಸರಾದಲ್ಲಿ ಸರಿಪಡಿಸಿಕೊಳ್ಳುವ ಅಗತ್ಯವಿದೆ. ಈ ಬಾರಿಯ ದಸರಾ ಮುಗಿದು ಹೋಗಿದೆ‌.
ಹಾಗಾಗಿ ಲೋಪಗಳ ಬಗ್ಗೆ ಚರ್ಚೆ ಮುಂದುವರಿಸುವ ಅಗತ್ಯವಿಲ್ಲ. ಅರಮನೆ ಆವರಣದ ಭದ್ರತೆಯನ್ನು ಹೊರಗಿನವರಿಗೆ ವಹಿಸಿದ್ದರಿಂದ ಜೆಟ್ಟಿಕಾಳಗಕ್ಕೆ ಅಡಚಣೆ ಆಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಸುದ್ದಿಗೋಷ್ಠಿ ವೇಳೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೊಂದಿಗೆ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ, ಎಂಎಲ್ಸಿ., ರಘು ಕೌಟಿಲ್ಯ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ಮಾಜಿ ಮೇಯರ್ ಸಂದೇಶ್ ಸ್ವಾಮಿ, ಬಿಜೆಪಿ ವಕ್ತಾರ ಮೋಹನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
 

Add Zee News as a Preferred Source
TAGS:
Price Hike
Narendra Modi
Kannada News