SOCIAL MEDIA

Newsletter

PARTNER SITES
Select Language Select State

ಒಣಗುತ್ತಿದೆ ಕಬಿನಿ ಒಡಲು : ನೀರಿನ ಮಟ್ಟ ಭಾರೀ ಕುಸಿತ

ಕರ್ನಾಟಕದಲ್ಲಿ ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಕುಸಿಯುತ್ತಿದ್ದು, ಕಬಿನಿಯಲ್ಲಿ ಕಳೆದ ವರ್ಷಕ್ಕಿಂತ 5 ಟಿಎಂಸಿ ಕಡಿಮೆ ಅಂದರೆ 12.14 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದ್ದು, ರಾಜ್ಯದಲ್ಲೇ ಅತೀ ಕಡಿಮೆ ನೀರು ಸಂಗ್ರಹ ಜಲಾಶಯವಾಗಿದೆ.

Written By Chetana Devarmani
Published: Nov 14, 2026, 15:53 IST | Updated: Nov 14, 2026, 15:55 IST
Join

ಬೆಂಗಳೂರು: ರಾಜ್ಯದಲ್ಲಿ ಮಳೆಯ ಪ್ರಮಾಣ ಸಂಪೂರ್ಣವಾಗಿ ತಗ್ಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಪ್ರಮಾಣ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಅದರಲ್ಲೂ ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಾದ ಕಬಿನಿ ಮತ್ತು ಕೆ ಆರ್‌ ಎಸ್‌ನಲ್ಲಿ ನೀರಿನ ಮಟ್ಟ ಇಳಿಕೆಯಾಗುತ್ತಿರುವುದು ರೈತರಲ್ಲಿ ಮಾತ್ರವಲ್ಲದೆ, ರಾಜಧಾನಿ ಬೆಂಗಳೂರಿನ ಕುಡಿಯುವ ನೀರಿನ ಪೂರೈಕೆಯ ಬಗ್ಗೆಯೂ ಆತಂಕ ಮೂಡಿಸಿದೆ.

ಮೈಸೂರು ಜಿಲ್ಲೇಯ ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯವಾಗಿ ಇಳಿಕೆ ಖಂಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಕಬಿನಿಯಲ್ಲಿ 17.46 ಟಿಎಂಸಿ ನೀರಿನ ಸಂಗ್ರಹವಿತ್ತು. ಆದರೆ ಈ ಬಾರಿ ಕೇವಲ 12.14 ಟಿಎಂಸಿ ನೀರು ಮಾತ್ರ ಲಭ್ಯವಿದ್ದು, ಕಳೆದ ವರ್ಷಕ್ಕಿಂತ ಸುಮಾರು 5.32 ಟಿಎಂಸಿ ನೀರು ಕಡಿಮೆಯಾಗಿದೆ. ಜಲಾಶಯದ ಗರಿಷ್ಠ ಸಾಮರ್ಥ್ಯ 19.52 ಟಿಎಂಸಿಯಾಗಿದ್ದು, ಇಂದಿನ ನೀರಿನ ಮಟ್ಟ 70.93 ಅಡಿಯಷ್ಟಿದೆ. ಆತಂಕಕಾರಿ ಸಂಗತಿಯೆಂದರೆ, ಜಲಾಶಯದಲ್ಲಿ ಶುದ್ದ ನೀರಿನ ಸಂಗ್ರಹ ಕೇವಲ 2.33 ಟಿಎಂಸಿಯಷ್ಟಿದೆ. ಕಬಿನಿಗೆ ಕೇವಲ 254 ಕ್ಯುಸೆಕ್ ಒಳಹರಿವಿದ್ದು, ಕಬಿನಿ ನದಿಗೆ 600 ಕ್ಯುಸೆಕ್ ಹಾಗೂ ಬಲದಂಡೆ ನಾಲೆಗೆ 750 ಕ್ಯುಸೆಕ್ ಸೇರಿ ಒಟ್ಟು 1,350 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಎಡದಂಡೆ ನಾಲೆಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಲಾಗಿದೆ.

ಕೆಆರ್‌ಎಸ್ ಜಲಾಶಯದ ಸ್ಥಿತಿ:

ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ (KRS) ನೀರಿನ ಮಟ್ಟ ಇಳಿಕೆಯಾಗಿದೆ. 124.80 ಅಡಿ ಗರಿಷ್ಠ ಮಟ್ಟ ಹಾಗೂ 49.452 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 97.96 ಅಡಿ ನೀರಿದ್ದು, 21.252 ಟಿಎಂಸಿ ನೀರು ಸಂಗ್ರಹವಾಗಿದೆ. ಇದರಲ್ಲಿ ಶುದ್ಧ ನೀರಿನ ಸಂಗ್ರಹ 12.873 ಟಿಎಂಸಿಯಷ್ಟಿದೆ. ಜಲಾಶಯಕ್ಕೆ 892 ಕ್ಯುಸೆಕ್ ಒಳಹರಿವು ಇದ್ದರೆ, ಕಾಲುವೆ ಮತ್ತು ಕುಡಿಯುವ ನೀರಿನ ಉದ್ದೇಶಕ್ಕಾಗಿ ಒಟ್ಟು 1,295 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಬೆಂಗಳೂರಿನ ಕುಡಿಯುವ ನೀರಿನ ಪೂರೈಕೆಯು ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳ ನೀರಿನ ಸಂಗ್ರಹವನ್ನೇ ಪ್ರಮುಖವಾಗಿ ಅವಲಂಬಿಸಿರುವುದರಿಂದ, ಈ ಇಳಿಕೆ ಗಮನ ಸೆಳೆದಿದೆ.

ಇನ್ನು ಉತ್ತರ ಕರ್ನಾಟಕದ ಜೀವನಾಡಿಗಳಾದ ತುಂಗಾಭದ್ರಾ ಮತ್ತು ಆಲಮಟ್ಟಿಜಲಾಶಯಗಳಿಗೆ ಒಳಹರಿವು ಸಂಪೂರ್ಣವಾಗಿ ನಿಂತುಹೋಗಿದೆ.

ತುಂಗಭದ್ರಾ ಜಲಾಶಯ: 1,633 ಅಡಿ ಗರಿಷ್ಠ ಮಟ್ಟದ ತುಂಗಭದ್ರಾ ಜಲಾಶಯದಲ್ಲಿ ಸದ್ಯ 1,606.219 ಅಡಿ ನೀರಿನ ಮಟ್ಟವಿದ್ದು, 30.706 ಟಿಎಂಸಿ ನೀರು ಸಂಗ್ರಹವಾಗಿದೆ. ಒಳಹರಿವು ಸಂಪೂರ್ಣ ಶೂನ್ಯವಾಗಿದ್ದರೂ, ಕಾಲುವೆಗಳ ಮೂಲಕ 8,619 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿರುವುದು ನೀರಿನ ಸಂಗ್ರಹದ ಮೇಲೆ ಒತ್ತಡ ಹೆಚ್ಚಿಸಿದೆ.

ಆಲಮಟ್ಟಿ ಜಲಾಶಯ: ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದ ಗರಿಷ್ಠ ಮಟ್ಟ 519.60 ಮೀಟರ್ ಆಗಿದ್ದು, ಇಂದು 513.87 ಮೀಟರ್ ನೀರಿದೆ. ಒಳಹರಿವು ಶೂನ್ಯವಾಗಿದ್ದು, 1,317 ಕ್ಯುಸೆಕ್ ಹೊರಹರಿವಿದೆ.

ಬಸವಸಾಗರ ಜಲಾಶಯ: ಯಾದಗಿರಿ ಜಿಲ್ಲೆಯ ಬಸವಸಾಗರ ಜಲಾಶಯದ ಗರಿಷ್ಠ ಮಟ್ಟ 492.25 ಮೀಟರ್ ಇದ್ದು, ಪ್ರಸ್ತುತ 489.19 ಮೀಟರ್ ಮಟ್ಟವಿದೆ. 51 ಕ್ಯುಸೆಕ್ ಒಳಹರಿವು ಹಾಗೂ 843 ಕ್ಯುಸೆಕ್ ಹೊರಹರಿವು ದಾಖಲಾಗಿದೆ.

ಒಟ್ಟಾರೆಯಾಗಿ, ರಾಜ್ಯದ ಪ್ರಮುಖ ಜಲಾಶಯಗಳಿಗೆ ಒಳಹರಿವು ತೀವ್ರವಾಗಿ ಕುಸಿದಿದ್ದು, ಹೊರಹರಿವು ಮುಂದುವರಿದಿದೆ. ಮುಂದಿನ ದಿನಗಳಲ್ಲಿ ಮಳೆಯಾಗದಿದ್ದರೆ ಬೇಸಿಗೆಗೂ ಮುನ್ನವೇ ಕುಡಿಯುವ ನೀರು ಹಾಗೂ ಕೃಷಿಗೆ ತೀವ್ರ ಅಭಾವ ಎದುರಾಗುವ ಸಾಧ್ಯತೆಯಿದೆ. ಹೀಗಾಗಿ ಈಗಿನಿಂದಲೇ ನೀರನ್ನು ಅತ್ಯಂತ ಮಿತವಾಗಿ ಬಳಸುವುದು ಅನಿವಾರ್ಯವಾಗಿದೆ.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ZEENEWS TRENDING STORIES