• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮೈಸೂರು
  • /ನರಭಕ್ಷಕ ಹುಲಿ ಸೆರೆಗೆ ಗಜಪಡೆ ಎಂಟ್ರಿ: ಬಡಗಲಪುರದಲ್ಲಿ ಕಂಜನ್-ಈಶ್ವರನಿಂದ ಟೈಗರ್ ಕೂಂಬಿಂಗ್

ನರಭಕ್ಷಕ ಹುಲಿ ಸೆರೆಗೆ ಗಜಪಡೆ ಎಂಟ್ರಿ: ಬಡಗಲಪುರದಲ್ಲಿ ಕಂಜನ್-ಈಶ್ವರನಿಂದ ಟೈಗರ್ ಕೂಂಬಿಂಗ್

tiger combing in chamarajnagar: ಬಡಗಲಪುರದಲ್ಲಿ ಆತಂಕಕ್ಕೆ ಕಾರಣವಾಗಿರುವ ನರಭಕ್ಷಕ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿದೆ.

Reported ByChetana DevarmaniEdited ByChetana Devarmani
Published: Sep 20, 2026, 12:38 PM IST|Updated: Sep 20, 2026, 12:41 PM IST
joinshare
ನರಭಕ್ಷಕ ಹುಲಿ ಸೆರೆಗೆ ಗಜಪಡೆ ಎಂಟ್ರಿ: ಬಡಗಲಪುರದಲ್ಲಿ ಕಂಜನ್-ಈಶ್ವರನಿಂದ ಟೈಗರ್ ಕೂಂಬಿಂಗ್

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

2

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

3

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

4

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

5

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಬಡಗಲಪುರ ಗ್ರಾಮದಲ್ಲಿ ರೈತ ಬಸವಣ್ಣ ಅವರನ್ನು ಹುಲಿ ಬಲಿ ಪಡೆದ ಪ್ರಕರಣದ ಬಳಿಕ ಅರಣ್ಯ ಇಲಾಖೆ ಹುಲಿ ಸೆರೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಹುಲಿಯನ್ನು ಪತ್ತೆಹಚ್ಚಿ ಸೆರೆ ಹಿಡಿಯುವ ಕಾರ್ಯಾಚರಣೆಗೆ ಇದೀಗ ಗಜಪಡೆಯನ್ನೂ ಬಳಸಿಕೊಳ್ಳಲಾಗುತ್ತಿದ್ದು, ದುಬಾರೆ ಆನೆ ಶಿಬಿರದಿಂದ ಕಂಜನ್ ಹಾಗೂ ಈಶ್ವರ ಎಂಬ ಎರಡು ಕುಮ್ಕಿ ಆನೆಗಳನ್ನು ಬಡಗಲಪುರಕ್ಕೆ ಕರೆತರಲಾಗಿದೆ.

ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಅನುಭವ ಹೊಂದಿರುವ ಕಂಜನ್ ಹಾಗೂ ಈಶ್ವರ ಆನೆಗಳು ಈ ಹಿಂದೆಯೂ ಹಲವು ಕಾರ್ಯಾಚರಣೆಗಳಲ್ಲಿ ಪಾಲ್ಗೊಂಡು ಯಶಸ್ವಿಯಾಗಿವೆ. ಹೀಗಾಗಿ ಬಡಗಲಪುರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಲಿಯ ಚಲನವಲನ ಪತ್ತೆಹಚ್ಚಲು ಈ ಆನೆಗಳನ್ನು ಬಳಸಿಕೊಳ್ಳಲಾಗುತ್ತಿದೆ. ದಟ್ಟ ಪೊದೆ ಹಾಗೂ ಅರಣ್ಯದಂಚಿನ ಪ್ರದೇಶಗಳಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಲು ಕುಮ್ಕಿ ಆನೆಗಳು ನೆರವಾಗಲಿವೆ.

ರೈತ ಬಸವಣ್ಣ ಹುಲಿ ದಾಳಿಗೆ ಬಲಿಯಾದ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಹುಲಿ ಮತ್ತೆ ಜನವಸತಿ ಪ್ರದೇಶದತ್ತ ಬರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಬೆಳಗ್ಗೆಯಿಂದಲೇ ಬಿಆರ್‌ಟಿ ಅರಣ್ಯ ಸಿಬ್ಬಂದಿ ವಿವಿಧ ತಂಡಗಳಾಗಿ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಬಡಗಲಪುರ ಸುತ್ತಮುತ್ತ ಟೈಗರ್ ಕೂಂಬಿಂಗ್ ನಡೆಸಲಾಗುತ್ತಿದೆ.

ಹುಲಿಯ ಸುಳಿವು ಪತ್ತೆಹಚ್ಚಲು ಗಜಪಡೆಯ ಜೊತೆಗೆ ಶ್ವಾನದಳವನ್ನೂ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ. ಹುಲಿ ಸಂಚರಿಸಬಹುದಾದ ಪ್ರದೇಶಗಳು, ಜಮೀನುಗಳು ಹಾಗೂ ಅರಣ್ಯದಂಚಿನಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ. ಅಲ್ಲದೆ ಹುಲಿಯನ್ನು ಸುರಕ್ಷಿತವಾಗಿ ಸೆರೆ ಹಿಡಿಯುವ ಉದ್ದೇಶದಿಂದ ಕೊಟ್ಟಿಗೆ ಮಾದರಿಯ ಬೋನ್‌ ಅನ್ನೂ ಅಳವಡಿಸಲಾಗಿದೆ.

ಹುಲಿಯ ಹೆಜ್ಜೆ ಗುರುತು ಸೇರಿದಂತೆ ಅದರ ಚಲನವಲನಕ್ಕೆ ಸಂಬಂಧಿಸಿದ ಸುಳಿವುಗಳಿಗಾಗಿ ಅರಣ್ಯ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ತಂಡಗಳು ಹುಲಿಯ ಇರುವಿಕೆ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದು, ಸುತ್ತಮುತ್ತಲಿನ ಪ್ರದೇಶಗಳ ಮೇಲೂ ನಿಗಾ ಇಡಲಾಗಿದೆ.

ಕಂಜನ್ ಮತ್ತು ಈಶ್ವರ ಕುಮ್ಕಿ ಆನೆಗಳ ಆಗಮನದಿಂದ ಹುಲಿ ಸೆರೆ ಕಾರ್ಯಾಚರಣೆಗೆ ಮತ್ತಷ್ಟು ಬಲ ಸಿಕ್ಕಿದೆ. ಹುಲಿಯನ್ನು ಆದಷ್ಟು ಬೇಗ ಪತ್ತೆಹಚ್ಚಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆಯನ್ನು ಮುಂದುವರಿಸಿದೆ. ಬಡಗಲಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಹುಲಿ ಸೆರೆ ಸಿಗುವವರೆಗೂ ಅರಣ್ಯ ಇಲಾಖೆ ಕಾರ್ಯಾಚರಣೆ ಮುಂದುವರಿಸುವ ಸಾಧ್ಯತೆಯಿದೆ.

Add Zee News as a Preferred Source
TAGS:
Kannada News