SOCIAL MEDIA

Newsletter

PARTNER SITES
Select Language Select State

ಸರ್ಕಾರ ಯಾವುದೇ ಜನಪರ ಯೋಜನೆಗಳನ್ನು ನಿಲ್ಲಿಸದೆ ಜನರ ಪರವಾಗಿ ಕಾರ್ಯನಿರ್ವಹಿಸುತ್ತಿದೆ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ವರುಣ ಕ್ಷೇತ್ರದಲ್ಲಿ ₹183.78 ಕೋಟಿ ವೆಚ್ಚದ 161 ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹಣದುಬ್ಬರದಂತಹ ಸವಾಲುಗಳ ನಡುವೆಯೂ ಸರ್ಕಾರ ಜನಪರ ಕಾರ್ಯಗಳನ್ನು ಮುಂದುವರೆಸಿದೆ ಎಂದು ಹೇಳಿದರು.

Written By Yashaswini V
Published: Oct 05, 2026, 04:21 PM IST | Updated: Oct 05, 2026, 04:26 PM IST
Join

ನಂಜನಗೂಡು: ಬೆಲೆ ಏರಿಕೆಯ ಸವಾಲುಗಳ ನಡುವೆಯೂ ಕಾಂಗ್ರೆಸ್ ಸರ್ಕಾರವು ಚುನಾವಣೆಯಲ್ಲಿ ನೀಡಿದ್ದ 165 ಭರವಸೆಗಳ ಪೈಕಿ ಈಗಾಗಲೇ 158 ಭರವಸೆಗಳನ್ನು ಈಡೇರಿಸಿದ್ದು, ಯಾವುದೇ ಜನಪರ ಯೋಜನೆಗಳನ್ನು ನಿಲ್ಲಿಸದೆ ಜನರ ಕಲ್ಯಾಣಕ್ಕಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಮೈಸೂರು ಇವರ ಸಹಯೋಗದಲ್ಲಿ ವರುಣ ವಿಧಾನಸಭಾ ಕ್ಷೇತ್ರದ ದಾಸನೂರು ಗ್ರಾಮದಲ್ಲಿ ಇಂದು ಆಯೋಜಿಸಿದ್ದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ವರುಣ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು, ಒಟ್ಟು ₹183.78 ಕೋಟಿ ವೆಚ್ಚದ 161 ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಗಿದೆ. ಇದರಲ್ಲಿ ₹143.38 ಕೋಟಿ ಅಂದಾಜು ಮೊತ್ತದ 134 ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ₹40.40 ಕೋಟಿ ವೆಚ್ಚದ 27 ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಾಗಿದೆ ಎಂದು ಸಚಿವರು ತಿಳಿಸಿದರು.

ನಿಕಟಪೂರ್ವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಜನರ ಅಗತ್ಯಗಳಿಗೆ ಅನುಗುಣವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಇದು ಅವರ ಜನಪರ ಕಾಳಜಿ ಹಾಗೂ ವರುಣ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಬದ್ಧತೆಗೆ ಸಾಕ್ಷಿಯಾಗಿದೆ ಎಂದರು.

ಎಲ್ಲ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ: 
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ನಿರ್ಮಿತಿ ಕೇಂದ್ರ, ಲೋಕೋಪಯೋಗಿ ಇಲಾಖೆ, ಮೈಸೂರು ಅಭಿವೃದ್ಧಿ ಪ್ರಾಧಿಕಾರ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ರಸ್ತೆ, ಶಿಕ್ಷಣ, ವಸತಿ, ನೀರಾವರಿ, ಕುಡಿಯುವ ನೀರು ಹಾಗೂ ಮೂಲಸೌಕರ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸಮಗ್ರ ಅಭಿವೃದ್ಧಿ ಸಾಧಿಸುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಸಚಿವರು ಹೇಳಿದರು.

ಜನಕಲ್ಯಾಣಕ್ಕೆ ಹಲವು ಕಾರ್ಯಕ್ರಮಗಳು: 
ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರಿಗೆ ನೆರವು ನೀಡಲಾಗುತ್ತಿದೆ. ಸಾರ್ವಜನಿಕ ಸೇವೆಗಳು ಸುಲಭವಾಗಿ ಹಾಗೂ ತ್ವರಿತವಾಗಿ ದೊರೆಯುವಂತೆ ‘ಸೇವಾ ಒನ್’ ಪೋರ್ಟಲ್ ಜಾರಿಗೊಳಿಸಲಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್ ಪಾಸ್ ಒದಗಿಸಲಾಗುತ್ತಿದ್ದು, ಯುವಜನರ ಅಭಿವೃದ್ಧಿ ಹಾಗೂ ಸಾಮಾಜಿಕ ಪಾಲ್ಗೊಳ್ಳುವಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ *‘ಭಾರತ್ ಜೋಡೋ ಸಂಘ’*ಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.

ರೈತರ ಅಭಿವೃದ್ಧಿಗೆ ‘ನೇಗಿಲ ಯೋಗಿ’ ಹಾಗೂ ‘ರೈತ ಚೈತನ್ಯ’ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ‘ನೇಗಿಲ ಯೋಗಿ’ ಯೋಜನೆಯಡಿ ರೈತರಿಗೆ ವರ್ಷಕ್ಕೆ ಮೂರು ಬಾರಿ ಉಚಿತವಾಗಿ ಉಳುಮೆ ಮಾಡಿಕೊಡುವ ವ್ಯವಸ್ಥೆ ರೂಪಿಸಲಾಗಿದೆ ಎಂದು ತಿಳಿಸಿದರು.

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ವಿಶೇಷ ಆದ್ಯತೆ: 
ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ವಸತಿ ಶಾಲೆಗಳನ್ನು ಸ್ಥಾಪಿಸಲಾಗಿದೆ. ಶುದ್ಧ ಕುಡಿಯುವ ನೀರು, ಉತ್ತಮ ಶಿಕ್ಷಣ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಮಕ್ಕಳ ಭವಿಷ್ಯವನ್ನು ಉತ್ತಮಗೊಳಿಸಲು ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಸಚಿವರು ಹೇಳಿದರು.

ಬೆಲೆ ಏರಿಕೆಯಂತಹ ಸವಾಲುಗಳ ನಡುವೆಯೂ ಜನಪರ ಯೋಜನೆಗಳನ್ನು ಮುಂದುವರಿಸಿಕೊಂಡು, ಅಭಿವೃದ್ಧಿ ಹಾಗೂ ಸಾಮಾಜಿಕ ಕಲ್ಯಾಣವನ್ನು ಸಮಾನವಾಗಿ ಮುನ್ನಡೆಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಸ್ವಾವಲಂಬಿ ಸಾರಥಿ ಯೋಜನೆಯ ಫಲಾನುಭವಿಗಳಿಗೆ ವಾಹನ ವಿತರಣೆ ಮಾಡಿ, ಶುಭ ಹಾರೈಸಲಾಯಿತು.

ಸಮಾರಂಭದಲ್ಲಿ ಶಾಸಕರಾದ ದರ್ಶನ್ ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಶಿವಕುಮಾರ್, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬೀರಿಹುಂಡಿ ಬಸವಣ್ಣ, ಮೈಸೂರು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ರಂಗಸ್ವಾಮಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 

ZEENEWS TRENDING STORIES