• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮೈಸೂರು
  • /ಸಂಪೂರ್ಣ ಹದಗೆಟ್ಟ ಗಾಳಿಬೀಡು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ: ಗ್ರಾಮಸ್ಥರಿಂದ ಪ್ರತಿಭಟನೆ

ಸಂಪೂರ್ಣ ಹದಗೆಟ್ಟ ಗಾಳಿಬೀಡು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ: ಗ್ರಾಮಸ್ಥರಿಂದ ಪ್ರತಿಭಟನೆ

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಗಾಳಿಬೀಡು ಎಂಬ ಹಳ್ಳಿಗೆ ಸಂಪರ್ಕಗೊಳ್ಳುವ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಈ ಬಗ್ಗೆ ಆಕ್ರೋಶ ಹೊರಹಾಕಿರುವ ಗ್ರಾಮಸ್ಥರು ರಸ್ತೆ ಬಂದ್‌ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

Written ByYashaswini V
Published: Nov 16, 2026, 13:14 IST|Updated: Nov 16, 2026, 13:17 IST
joinshare
ಸಂಪೂರ್ಣ ಹದಗೆಟ್ಟ ಗಾಳಿಬೀಡು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ: ಗ್ರಾಮಸ್ಥರಿಂದ ಪ್ರತಿಭಟನೆ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ. ರಸ್ತೆಯುದ್ದಕ್ಕೂ ಬೃಹತ್ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಪ್ರತಿನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ರಸ್ತೆ ಕಾಮಗಾರಿ ಆರಂಭಿಸುವುದಾಗಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಹಲವು ಬಾರಿ ಭರವಸೆ ನೀಡಿದ್ದರೂ, ಇದುವರೆಗೂ ಕಾಮಗಾರಿ ಆರಂಭವಾಗಿಲ್ಲ. ಇದರಿಂದಾಗಿ ಸಿಡಿದೆದ್ದ ಗ್ರಾಮಸ್ಥರು ದಿಡೀರ್ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಗಾಳಿಬೀಡು ಗ್ರಾಮದ ರಸ್ತೆಯಲ್ಲಿ ವಾಹನಗಳ ಸಂಚಾರವೇ ದುಸ್ಥರ:
ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾಗಿರುವ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದು. ಮಡಿಕೇರಿಯಿಂದ ಕೇವಲ ಎಂಟು ಕಿಲೋಮೀಟರ್ ದೂರದಲ್ಲಿರುವ ಈ ರಸ್ತೆಯ ಸ್ಥಿತಿ ಮಾತ್ರ ಹೇಳತೀರದಾಗಿದೆ. ರಸ್ತೆಯುದ್ದಕ್ಕೂ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ವಾಹನಗಳ ಸಂಚಾರವೇ ದುಸ್ತರವಾಗಿದೆ.

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಪಾಲಜಿ ಕನ್ಸ್ಟ್ರಕ್ಷನ್ ಸಂಸ್ಥೆ ಕಾಮಗಾರಿಯ ಗುತ್ತಿಗೆ ಪಡೆದಿದೆ ಎನ್ನಲಾಗಿದೆ. ಆದರೆ ಕಾಮಗಾರಿ ಆರಂಭಿಸುವುದಾಗಿ ಭರವಸೆ ನೀಡಿ ಹಲವು ದಿನಗಳು ಕಳೆದರೂ ಇಂದಿಗೂ ಕೆಲಸ ಆರಂಭವಾಗಿಲ್ಲ. ಆಗಾಗ ಜಲ್ಲಿ ಹಾಕಿ ಹೋಗುವುದನ್ನು ಬಿಟ್ಟರೆ ಶಾಶ್ವತ ಪರಿಹಾರ ಮಾತ್ರ ಮರೀಚಿಕೆಯಾಗಿದೆ.

ಪ್ರತಿ ದಿನ ಅಪಘಾತ!
ಪ್ರತಿನಿತ್ಯ ಈ ರಸ್ತೆಯಲ್ಲಿ ಸಂಚರಿಸುವ ಗ್ರಾಮಸ್ಥರು, ಶಾಲಾ ಮಕ್ಕಳು, ಕಾರ್ಮಿಕರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ರಸ್ತೆ ಹದಗೆಟ್ಟಿರುವುದರಿಂದ ಪ್ರತಿದಿನ ಅಪಘಾತಗಳು ಸಂಭವಿಸುತ್ತಿವೆ. ಆಟೋ ಚಾಲಕರು ಕೂಡ ಈ ರಸ್ತೆಯಲ್ಲಿ ಸಂಚರಿಸಲು ಹಿಂದೇಟು ಹಾಕುತ್ತಿದ್ದು, ಕೆಲವರು ನಡೆದುಕೊಂಡೇ ತಮ್ಮ ಊರುಗಳಿಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಗಾಳಿಬೀಡು ಭಾಗದಿಂದಲೇ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರಿನ ಪೂರೈಕೆಯೂ ನಡೆಯುತ್ತದೆ. ಇಂತಹ ಪ್ರಮುಖ ಸಂಪರ್ಕ ರಸ್ತೆಯನ್ನೇ ನಿರ್ಲಕ್ಷಿಸಿರುವುದಕ್ಕೆ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನೂ ಈ ಭಾಗದ ಗ್ರಾಮಸ್ಥರು ರಸ್ತೆ ಸರಿಪಡಿಸುವಂತೆ ಈ ಹಿಂದೆ ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಶಾಸಕರ ಗಮನಕ್ಕೂ ಸಮಸ್ಯೆ ತರಲಾಗಿದ್ದು, ಗ್ರಾಮಸ್ಥರು ಹಾಗೂ ಅಧಿಕಾರಿಗಳ ಸಭೆಯೂ ನಡೆದಿದೆ. ಸಭೆಯಲ್ಲಿ ಶೀಘ್ರ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದ್ದರೂ, ಅಧಿಕಾರಿಗಳ ಭರವಸೆ ಮಾತ್ರ ಭರವಸೆಯಾಗಿಯೇ ಉಳಿದಿದೆ. ಇದೀಗ ತಾಳ್ಮೆ ಕಳೆದುಕೊಂಡ ಗ್ರಾಮಸ್ಥರು ಒಗ್ಗಟ್ಟಾಗಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

ರಸ್ತೆ ಸಂಚಾರ ತಡೆದು ಆಕ್ರೋಶ:
ಸುಮಾರು ಒಂದು ಗಂಟೆಗೂ ಅಧಿಕ ಕಾಲ ರಸ್ತೆ ಸಂಚಾರ ತಡೆದು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಯಾವುದೇ ರಾಜಕೀಯ ಪಕ್ಷದ ಪರ ಅಥವಾ ವಿರೋಧವಾಗಿ ಹೋರಾಟ ಮಾಡುತ್ತಿಲ್ಲ. ನಮ್ಮ ಗ್ರಾಮದ ಮೂಲಭೂತ ಹಕ್ಕಾಗಿರುವ ಉತ್ತಮ ರಸ್ತೆಯನ್ನು ಒದಗಿಸಬೇಕೆಂಬುದಷ್ಟೇ ನಮ್ಮ ಬೇಡಿಕೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇಪ್ಪತ್ತೈದು ವರ್ಷಗಳಿಂದ ಒಂದೇ ಪಕ್ಷಕ್ಕೆ ಬೆಂಬಲ ನೀಡಿದ್ದೇವೆ. ಇದೀಗ ಗ್ರಾಮಸ್ಥರು ರಸ್ತೆ ಯಾವಾಗ ಅಭಿವೃದ್ಧಿಯಾಗುತ್ತದೆ ಎಂದು ನಮ್ಮನ್ನೇ ಪ್ರಶ್ನಿಸುತ್ತಿದ್ದಾರೆ. ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅಪಘಾತ ಸಂಭವಿಸಿದ ಬಳಿಕ ಎಚ್ಚೆತ್ತುಕೊಳ್ಳುವ ಬದಲು ಈಗಲೇ ರಸ್ತೆ ಕಾಮಗಾರಿ ಆರಂಭಿಸಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.

ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು ಹೇಳಿದ್ದೇನು?
ಈ ನಡುವೆ ಪಿಡಬ್ಲ್ಯೂಡಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಅಗಮಿಸಿ ಡಿಸೆಂಬರ್ 16 ಮೇಲೆ ರಸ್ತೆ ಕಾಮಗಾರಿ ನಡೆಸುತ್ತೇವೆ. ಟೆಂಡರ್ ಪಡೆದ ಗುತ್ತಿಗೆದಾರ ಕಾಮಗಾರಿ ನಡೆಸಲು ಹಿಂದೆಟ್ಟು ಹಾಕುತ್ತಿರುವ ಪರಿಣಾಮದಿಂದ ಈ ರೀತಿಯ ಸಮಸ್ಯೆ ಎದುರಾಗಿದೆ ತಕ್ಷಣವೇ ರೀ ಟೆಂಡರ್ ಪ್ರತಿಕ್ರಿಯೆ ನಡೆಸಿ ರಸ್ತೆ ಕಾಮಗಾರಿ ನಡೆಸುತ್ತೇವೆ ಎಂದು ತಿಳಿಸಿದ್ದಾರೆ‌‌‌.

ಒಟ್ಟಾರೆ ಒಂದು ವರ್ಷಗಳಿಂದ ರಸ್ತೆ ಕಾಮಗಾರಿ ಅರಂಭವಾಗುತ್ತದೆ ಎಂದು ಕಾದುಕೊಂಡ ಇದ್ದ ಗ್ರಾಮಸ್ಥರಿಗೆ ಕಾಮಗಾರಿ ಪ್ರಕ್ರಿಯೆ ನಡೆಯದೇ ಇರುವುದರಿಂದ ಇಂದು ನೂರಾರು ಗ್ರಾಮಸ್ಥರು ಸಿಡಿದಿದ್ದಾರೆ. ಟೆಂಡರ್ ಪ್ರಕ್ರಿಯೆ, ತಾಂತ್ರಿಕ ಸಮಸ್ಯೆ ಸೇರಿದಂತೆ ಯಾವುದೇ ಕಾರಣಗಳಿದ್ದರೂ ಅವುಗಳನ್ನು ಶೀಘ್ರ ಬಗೆಹರಿಸಿ ಕಾಮಗಾರಿ ಆರಂಭಿಸಬೇಕು. ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳ ಸಮ್ಮುಖದಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
 

Add Zee News as a Preferred Source
TAGS:
Civic Issues
Kannada News