SOCIAL MEDIA

Newsletter

PARTNER SITES
Select Language Select State

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿಕೆ ಹೇಳಿಕೆಗೆ ಖಂಡನೆ.. ಅನ್ನದಾನಿಗೂ ತಿರುಗೇಟು

ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್‌ ಆಪರೇಷನ್‌ ಕೆಸರೆರಚಾಟದ ನಡುವೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ನಿಂದಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಮಂಡ್ಯ ಜಿಲ್ಲೆಯ ಕಾಂಗ್ರೆಸ್‌ ನಾಯಕರು ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

Written By Yashaswini V
Published: Oct 24, 2026, 07:20 AM IST | Updated: Oct 24, 2026, 07:23 AM IST
Join

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಹೆಚ್ಡಿಕೆ ವಿರುದ್ದ ತಿರುಗಿಬಿದ್ದ ಕಾಂಗ್ರೆಸ್ ನಾಯಕರು, ಮಾಜಿ ಶಾಸಕ ಡಾ.ಕೆ.ಅನ್ನದಾನಿಗೂ ತಿರುಗೇಟು ನೀಡಿದ್ದಾರೆ.

ಈ ಕುರಿತಂತೆ ಮಂಡ್ಯದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕುಮಾರ್ ಕೊಪ್ಪ ಹಾಗೂ ಸುಂಡಹಳ್ಳಿ ಮಂಜುನಾಥ್ ಹೇಳಿಕೆ ನೀಡಿದ್ದು, ಕುಮಾರಸ್ವಾಮಿ ಪಾಳೇಗಾರಿಕೆ ನಿಂದನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಸಾಂವಿಧಾನಿಕ ಹುದ್ದೆಯಲ್ಲಿ ಇರುವವರು ಘನತೆಯಿಂದ ಮಾತನಾಡಬೇಕು. ಕುಮಾರಸ್ವಾಮಿ ಪಾಳೇಗಾರಿಕೆ ನಿಂದನೆಯ ಮಾತುಗಳನ್ನು ಆಡಿರುವುದು ಸರಿಯಲ್ಲ. ತಾವು ಕಾನೂನಿಗಿಂತ ದೊಡ್ಡವರು ಎಂಬ ಅಹಂಕಾರದ ಸಂಸ್ಕೃತಿಯಾಗಿದೆ ಎಂದಿದ್ದಾರೆ.

ಬಲಿತ ದಲಿತ ಎಂದು ಕರೆಯುವುದು ಅತ್ಯಂತ ಖಂಡನೀಯ:
ಪ್ರಿಯಾಂಕ್ ಖರ್ಗೆ ಅವರನ್ನು ಬಲಿತ ದಲಿತ ಎಂದು ಕರೆಯುವುದು ಅತ್ಯಂತ ಖಂಡನೀಯ. ಪ್ರಿಯಾಂಕ್ ಖರ್ಗೆ ಗೃಹ ಇಲಾಖೆಯನ್ನ ಜವಾಬ್ದಾರಿಯುತ ಖಾತೆಯನ್ನು ದಕ್ಷತೆಯಿಂದ ನಿಭಾಯಿಸಿದ್ದಾರೆ. ಇವತ್ತು ದಲಿತರು ಸೂಟು-ಬೂಟು ಹಾಕುತ್ತಿರುವುದು ಅಂಬೇಡ್ಕರ್ ಅವರು ನೀಡಿದ ರಾಜಕೀಯ ಮೀಸಲಾತಿಯ ಕೊಡುಗೆಯಾಗಿದೆ.
ಬಲಿತ ದಲಿತ ಮೀಸಲು ಕ್ಷೇತ್ರ ಬಿಟ್ಟು.. ಸಾಮಾನ್ಯ ಕ್ಷೇತ್ರದಲ್ಲಿ ನಿಲ್ಲಲಿ ಎನ್ನುವ ಕುಮಾರಸ್ವಾಮಿ ಮೊದಲು ತಮ್ಮ ಪಕ್ಷದ ದಲಿತರಿಗೆ ಸಾಮಾನ್ಯ ಕ್ಷೇತ್ರದಲ್ಲಿ ಟಿಕೆಟ್ ನೀಡಿ ಗೆಲ್ಲಿಸಲಿ ಎಂದು ಸವಾಲು ಹಾಕಿದ್ದಾರೆ.

ದಲಿತ ಸಮುದಾಯದ ಸ್ವಾಭಿಮಾನವು ರಾಜಕೀಯಕ್ಕಿಂತ ದೊಡ್ಡದಾಗಿದ್ದು, ಸಂವಿಧಾನ ಬದ್ಧವಾದ ಹಕ್ಕಾಗಿದೆ. ದಲಿತ ಪ್ರಗತಿಪರ ಸಂಘಟನೆಗಳು ನಡೆಸಿದ ಪ್ರತಿಭಟನೆಯು ಯಾವುದೇ ವೈಯಕ್ತಿಕ ದ್ವೇಷಕ್ಕಾಗಿ ಅಲ್ಲ ಎಂದಿದ್ದಾರೆ.

ಸಾಮಾಜಿಕ ನ್ಯಾಯದ ರಕ್ಷಣೆಗಾಗಿ, ಓಲೈಕೆ ರಾಜಕಾರಣಕ್ಕೆ ಸಮರ್ಥನೆ ಸರಿಯಲ್ಲ: 
ಇದೇ ಸಂದರ್ಭದಲ್ಲಿ ಮಳವಳ್ಳಿ ಮಾಜಿ ಶಾಸಕ ಅನ್ನದಾನಿ ಎರಡು ಬಾರಿ ಶಾಸಕರಾಗಿದ್ದವರು. ಆದರೆ ಅವರು ಓಲೈಕೆ ರಾಜಕಾರಣಕ್ಕಾಗಿ ಕುಮಾರಸ್ವಾಮಿ ಅವರನ್ನು ಸಮರ್ಥನೆ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗವು ಸರ್ಕಾರದ ಅಂಗವಲ್ಲ, ಅದು ಸ್ವಾಯತ್ತ ಸಂಸ್ಥೆಯಾಗಿದ್ದು ಸರ್ಕಾರದ ಹಸ್ತಕ್ಷೇಪ ಇರುವುದಿಲ್ಲ. ಪರೀಕ್ಷೆ ನಡೆಸುವುದು, ಮೌಲ್ಯಮಾಪನ ಮಾಡುವುದು ಮತ್ತು ಫಲಿತಾಂಶ ನೀಡುವುದು ಆಯೋಗದ ಕೆಲಸವಾಗಿದೆ. ಓಎಂಆರ್ ಶೀಟ್ ತಿದ್ದುಪಡಿ ಆಗಿರುವುದು ನಿಜ. ಅದಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿದೆ.

ಉಪ್ಪು ತಿಂದವರು ನೀರು ಕುಡಿಯಲೇಬೇಕು. ಬಲಿತ ದಲಿತ ಎಂಬ ಪದವನ್ನು ನೀವು ಒಪ್ಪಿಕೊಳ್ಳುತ್ತೀರಾ? ಎಂದು ಪ್ರಶ್ನಿಸಿರುವ ಅವರು, ನಿಮ್ಮ ನಾಯಕರು ಯಾರ ಸಹಕಾರ ಮತ್ತು ಬೆಂಬಲದಿಂದ ಮುಖ್ಯಮಂತ್ರಿಯಾದರು? ಮಂಡ್ಯಕ್ಕೆ ನಿಮ್ಮ ನಾಯಕರ ಕೊಡುಗೆ ಏನು.? ಕೇಂದ್ರದಿಂದ ನಿಮ್ಮ ಕ್ಷೇತ್ರಕ್ಕೆ ಯಾವ ಅನುದಾನವನ್ನು ತಂದಿದ್ದೀರಿ? 
ಯಾರೋ ಒಬ್ಬರು ಒರಟಾಗಿ ಮಾತನಾಡುತ್ತಾರೆ ಎಂದರೆ ನಾವು ಅದೇ ರೀತಿಯ ಪದಗಳನ್ನು ಹಿಂದಿರುಗಿಸಬೇಕಾಗುತ್ತದೆ. ಆದರೆ ನಮ್ಮ ಬಾಯನ್ನು ಹೊಲಸು ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ. 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 

ZEENEWS TRENDING STORIES