SOCIAL MEDIA

Newsletter

PARTNER SITES
Select Language Select State

ಮನ್‌ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ: ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿ ಬಂಧನ!

ಮನ್‌ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಉಪ ವ್ಯವಸ್ಥಾಪಕ ಟಿ.ರಾಮಕೃಷ್ಣ ಎಂದು ಹೇಳಲಾಗಿದೆ. ಇದರೊಂದಿಗೆ ಹಾಲಿನ ಪುಡಿ ಕಲಬೆರಕೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 12 ಕ್ಕೆ ಏರಿದೆ.

Written By Yashaswini V
Published: Nov 14, 2026, 08:42 IST | Updated: Nov 14, 2026, 08:49 IST
Join

ಮನ್‌ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣದಲ್ಲಿ ಎರಡೂವರೆ ತಿಂಗಳಿಂದ ತಲೆಮರೆಸಿ ಕೊಂಡಿದ್ದ ಪ್ರಕರಣದಲ್ಲಿ 2ನೇ ಆರೋಪಿಯಾಗಿದ್ದ ಉಪ ವ್ಯವಸ್ಥಾಪಕ ಟಿ. ರಾಮಕೃಷ್ಣ ಮದ್ದೂರು ನ್ಯಾಯಾಲಯಕ್ಕೆ ಶರಣಾಗಲು ಬಂದಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ. ಸಿಪಿಐ ನವೀನ್ ಕುಮಾರ್ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು, ನಂತರ ಆತನನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.  

ಮನ್‌ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣದಲ್ಲಿ ಮನ್ಮುಲ್ ಹಾಲಿನ ಪುಡಿ ಘಟಕ ಮತ್ತು ಗುಣಮಟ್ಟ ಭರವಸೆ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದ ಟಿ.ರಾಮಕೃಷ್ಣ ವಿರುದ್ದವೂ ಮನ್‌ಮುಲ್ ಆಡಳಿತ ಮಂಡಳಿ ದೂರು ನೀಡಿದ ಮೇರೆಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಆಗಸ್ಟ್ 30ರಂದು ಎಫ್‌ಐಆರ್ ದಾಖಲಾಗಿತ್ತು.

ಟಿ.ರಾಮಕೃಷ್ಣ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಉತ್ಪಾದನೆಯಾದ ಹಾಲಿನ ಪುಡಿ ಚೀಲಗಳಲ್ಲಿ ಕಲಬೆರಕೆ ಕಂಡುಬಂದಿತ್ತು. ಒಕ್ಕೂಟದ ಹಾಲಿನ ಪುಡಿ ದಾಸ್ತಾನು ಕೊರತೆಗೆ ಹಾಗೂ ಕಲಬೆರಕೆಗೆ ಸಂಬಂಧಿಸಿ ಕ್ರಮಕ್ಕೆ ಆಡಳಿತ ಮಂಡಳಿ ಆಗ್ರಹಿಸಿತ್ತು.

ಹೈಕೋರ್ಟ್‌ನಲ್ಲಿ ರಾಮಕೃಷ್ಣ ಜಾಮೀನು ಅರ್ಜಿ ತಿರಸ್ಕೃತ:
ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾದ ಬೆನ್ನಲ್ಲೇ ಟಿ.ರಾಮಕೃಷ್ಣ  ಉಚ್ಚ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್‌ನಲ್ಲಿ ರಾಮಕೃಷ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

ಮನ್‌ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಮುಖ ಆರೋಪಿ ಜಾದವ್, ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಸೇರಿದಂತೆ 11 ಮಂದಿ ಬಂಧಿಸಲಾಗಿತ್ತು. ಇದೀಗ ಪ್ರಮುಖ ಆರೋಪಿ ಟಿ. ರಾಮಕೃಷ್ಣ ಬಂಧನದೊಂದಿಗೆ ಈ ಪ್ರಕರಣದಲ್ಲಿ ಒಟ್ಟು 12 ಜನರನ್ನು ಬಂಧಿಸಲಾಗಿದೆ.

ಹಾಲಿನ ಪುಡಿ ಕಲಬೆರೆಕೆ ಪ್ರಕತಣದಲ್ಲಿ ಇದುವರೆಗೆ ಬಂಧನವಾಗಿರೋ ಆರೋಪಿಗಳ ವಿವರ ಈ ಕೆಳಕಂಡಂತಿದೆ:
ಮನ್ಮುಲ್ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ, ಖರೀದಿ ಅಧಿಕಾರಿ ಪ್ರದೀಪ್‌ಕುಮಾರ್ ಜಾಧವ್, ಸಿಸ್ಟಂ ಆಪರೇಟ‌ರ್ ಶ್ರುತಿ ಎಂ.ಸಿ., ಮಾಸ್ಟ‌ರ್ ಇನ್ಸುಲೇಷನ್ ಗೋದಾಮಿನ ನೌಕರ ರವಿ, ಹಾಲಿನ ಪುಡಿ ಬ್ಯಾಗ್ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕೆಲಸಗಾರ ಶ್ರೀನಿವಾಸ ಆರ್.ಎಸ್., ಹಾಲುಪುಡಿ ಉತ್ಪಾದನಾ ಘಟಕದ ಹಿಂದಿನ ಮುಖ್ಯಾಧಿಕಾರಿ ಶ್ರೀನಿವಾಸಮೂರ್ತಿ ಕೆ.ಎನ್., ಕೇರಳದ ಕ್ಯಾಲಿಕಟ್‌ನ ವಿ.ಕೆ.ಎಸ್. ಮಾರ್ಕೆಟಿಂಗ್ ಮಾಲೀಕ ಸುರೇಶ್ ವಿ.ಕೆ., ಗುತ್ತಿಗೆದಾರ ಸುರೇಶ ಯು.ಜಿ., ಕೇರಳ ಮೂಲದ ಅನಸ್, ಮಂಡ್ಯ ತಾಲ್ಲೂಕಿನ ತೂಬಿನಕೆರೆಯ ವಿಜೇಶ್ ಮತ್ತು ಮದ್ದೂರು ಪಟ್ಟಣದ ನಿವಾಸಿ ಅರ್ಪಿತ್ ಬಂಧಿತರು.
 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ZEENEWS TRENDING STORIES