• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮೈಸೂರು
  • /‘ದೇವೇಗೌಡರ ಕುಟುಂಬ ಮುಗಿಸಲು ₹600 ಕೋಟಿ ಡೀಲ್ ಕೊಡಲು ನಮಗೆ ತಿಕ್ಕಲು ಹಿಡಿದಿದೆಯಾ?’: ಕುಮಾರಸ್ವಾಮಿ ವಿರುದ್ಧ ಚಲುವರಾಯಸ್ವಾಮಿ ವಾಗ್ದಾಳಿ

‘ದೇವೇಗೌಡರ ಕುಟುಂಬ ಮುಗಿಸಲು ₹600 ಕೋಟಿ ಡೀಲ್ ಕೊಡಲು ನಮಗೆ ತಿಕ್ಕಲು ಹಿಡಿದಿದೆಯಾ?’: ಕುಮಾರಸ್ವಾಮಿ ವಿರುದ್ಧ ಚಲುವರಾಯಸ್ವಾಮಿ ವಾಗ್ದಾಳಿ

ಹಾಸನದ ಪೆನ್‌ಡ್ರೈವ್ ಪ್ರಕರಣವನ್ನು ಉಲ್ಲೇಖಿಸಿದ ಚಲುವರಾಯಸ್ವಾಮಿ, ಸುಮಾರು 350 ಮಹಿಳೆಯರಿಗೆ ಅನ್ಯಾಯವಾಗಿದೆ ಎಂಬ ಆರೋಪಗಳಿದ್ದ ಸಂದರ್ಭದಲ್ಲಿ ಸಂತ್ರಸ್ತರ ಪರವಾಗಿ ನಿಲ್ಲುವ ಬದಲು ಪೆನ್‌ಡ್ರೈವ್ ಬಿಡುಗಡೆ ಮಾಡಿದವರ ಕ್ರಮದ ವಿರುದ್ಧ ಕುಮಾರಸ್ವಾಮಿ ಹೋರಾಟ ನಡೆಸಿದ್ದರು ಎಂದು ಟೀಕಿಸಿದರು.

Written ByChetana Devarmani
Published: Oct 27, 2026, 04:54 PM IST|Updated: Oct 27, 2026, 04:58 PM IST
joinshare
‘ದೇವೇಗೌಡರ ಕುಟುಂಬ ಮುಗಿಸಲು ₹600 ಕೋಟಿ ಡೀಲ್ ಕೊಡಲು ನಮಗೆ ತಿಕ್ಕಲು ಹಿಡಿದಿದೆಯಾ?’: ಕುಮಾರಸ್ವಾಮಿ ವಿರುದ್ಧ ಚಲುವರಾಯಸ್ವಾಮಿ ವಾಗ್ದಾಳಿ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
SIR ಅಂತಿಮ ಪಟ್ಟಿ ಪ್ರಕಟ: ರಾಜ್ಯದಲ್ಲಿ ಬರೋಬ್ಬರಿ 99 ಲಕ್ಷ 32 ಸಾವಿರ  ಮತದಾರರು ಡಿಲೀಟ್

SIR ಅಂತಿಮ ಪಟ್ಟಿ ಪ್ರಕಟ: ರಾಜ್ಯದಲ್ಲಿ ಬರೋಬ್ಬರಿ 99 ಲಕ್ಷ 32 ಸಾವಿರ ಮತದಾರರು ಡಿಲೀಟ್

2

ಚಿತ್ರದುರ್ಗ ಸಮೀಪ ತಲೆ ಎತ್ತಲಿದೆ ಬುಡಕಟ್ಟು ವಿಶ್ವವಿದ್ಯಾಲಯ: ಸಚಿವ ಟಿ. ರಘುಮೂರ್ತಿ

3

ರೈತರಿಗೆ ಶುಭ ಸುದ್ದಿ.. ಇಂದು ಬ್ಯಾಂಕ್ ಖಾತೆಗಳಿಗೆ 2 ಸಾವಿರ ಜಮಾ PM Kisan ಹಣದ ಕುರಿತು ಪ್ರಮುಖ ಘೋಷಣೆ!

4

ಬೆಂಗಳೂರು ಸ್ಫೋಟ ಪ್ರಕರಣಕ್ಕೆ ಮಸ್ಕಿ ನಂಟು? ಅಸ್ಸಾಂ ಮೂಲದ ಯುವಕನಿದ್ದ ಸ್ಥಳಗಳಲ್ಲಿ ಪೊಲೀಸರಿಂದ ಪಂಚನಾಮೆ

5

ಮುನಿಯಪ್ಪ ಮನೆಗೆ ಹೋದರೆ ಒಂದು ಲೋಟ ನೀರು ಕೊಡಲ್ಲ: ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಮಂಡ್ಯ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ವಿಚಾರವಾಗಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೇವೇಗೌಡರ ಕುಟುಂಬವನ್ನು ಮುಗಿಸಲು ₹600 ಕೋಟಿ ಡೀಲ್ ನೀಡುವ ಅಗತ್ಯ ನಮಗೇನಿದೆ ಎಂದು ಪ್ರಶ್ನಿಸಿರುವ ಅವರು, ಸ್ಟಿಂಗ್ ಪ್ರಕರಣದ ಹಿಂದೆ ಕುಮಾರಸ್ವಾಮಿ ಅವರೇ ಇದ್ದಾರೆ ಎಂಬ ಆರೋಪ ಮಾಡಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಸ್ಟಿಂಗ್ ಆಪರೇಷನ್ ವಿಚಾರವಾಗಿ ಹಲವು ಪ್ರಶ್ನೆಗಳನ್ನು ಮುಂದಿಟ್ಟರು. ಸ್ಟಿಂಗ್‌ನಲ್ಲಿ ಕೇಳಿಬಂದಿರುವ ಆರೋಪಗಳು ಇನ್ನೂ ತನಿಖೆಯಲ್ಲಿ ಸಾಬೀತಾಗಿಲ್ಲ. ಸದ್ಯಕ್ಕೆ ಧ್ವನಿ ದಾಖಲೆ ಇದೆ ಅಷ್ಟೇ. ತನಿಖೆಯಲ್ಲಿ ಸತ್ಯಾಸತ್ಯತೆ ಸಾಬೀತಾದ ಬಳಿಕ ಮುಂದಿನ ವಿಚಾರ ನೋಡೋಣ ಎಂದು ಹೇಳಿದರು.

ಹಾಸನದ ಪೆನ್‌ಡ್ರೈವ್ ಪ್ರಕರಣದ ಪ್ರಸ್ತಾಪ

ಹಾಸನದ ಪೆನ್‌ಡ್ರೈವ್ ಪ್ರಕರಣವನ್ನು ಉಲ್ಲೇಖಿಸಿದ ಚಲುವರಾಯಸ್ವಾಮಿ, ಸುಮಾರು 350 ಮಹಿಳೆಯರಿಗೆ ಅನ್ಯಾಯವಾಗಿದೆ ಎಂಬ ಆರೋಪಗಳಿದ್ದ ಸಂದರ್ಭದಲ್ಲಿ ಸಂತ್ರಸ್ತರ ಪರವಾಗಿ ನಿಲ್ಲುವ ಬದಲು ಪೆನ್‌ಡ್ರೈವ್ ಬಿಡುಗಡೆ ಮಾಡಿದವರ ಕ್ರಮದ ವಿರುದ್ಧ ಕುಮಾರಸ್ವಾಮಿ ಹೋರಾಟ ನಡೆಸಿದ್ದರು ಎಂದು ಟೀಕಿಸಿದರು.

ಸಂತ್ರಸ್ತರ ಬಗ್ಗೆ ಅನುಕಂಪ ತೋರಿಸುವುದಕ್ಕಿಂತ ರೆಕಾರ್ಡಿಂಗ್ ಮಾಡಿದ ವ್ಯಕ್ತಿಯ ರಕ್ಷಣೆಗೆ ಮುಂದಾದರು ಎಂಬ ಆರೋಪವನ್ನೂ ಮಾಡಿದರು. ಈ ಮೂಲಕ ಕುಮಾರಸ್ವಾಮಿ ಅವರ ನಡೆ ಬಗ್ಗೆ ಪ್ರಶ್ನೆ ಎತ್ತಿದರು.

ವಿಡಿಯೋ ಬಿಡುಗಡೆ ವಿಚಾರವಾಗಿ ಪ್ರಶ್ನೆ

ಸ್ಟಿಂಗ್ ವಿಡಿಯೋ ಬಿಡುಗಡೆಗೆ ಸಂಬಂಧಿಸಿದಂತೆ ತನಿಖೆಯಲ್ಲಿ ಶೇಕಡಾ 90ರಷ್ಟು ಮಾಹಿತಿ ಪತ್ತೆಹಚ್ಚಲಾಗಿದೆ ಎಂದು ಹೇಳಿದ ಚಲುವರಾಯಸ್ವಾಮಿ, ಈ ವಿಚಾರವಾಗಿ ಕುಮಾರಸ್ವಾಮಿ ಅವರಿಗೆ ಏಕೆ ಸಿಟ್ಟು ಬರುತ್ತಿದೆ ಎಂದು ಪ್ರಶ್ನಿಸಿದರು.

‘ಇವರ ಮನೆಯ ಹುಡುಗರು, ಸೋಶಿಯಲ್ ಮೀಡಿಯಾದಲ್ಲಿ ಕೆಲಸ ಮಾಡುವ ಹುಡುಗರು, ದೆಹಲಿ ಮತ್ತು ನೇಪಾಳಕ್ಕೆ ಹೋಗಿರುವವರು ಯಾರು? ಫೋನ್ ಎಲ್ಲಿಂದ ತೆಗೆದುಕೊಂಡರು ಎಂಬುದೂ ಸೇರಿದಂತೆ ದಾಖಲೆಗಳು ಸಿಕ್ಕಿವೆ. ಸಂಬಂಧಪಟ್ಟ ಅಧಿಕಾರಿಗಳು ಅವುಗಳನ್ನು ಬಿಡುಗಡೆ ಮಾಡುತ್ತಾರೆ’ ಎಂದು ಹೇಳಿದರು.

ಈ ಪ್ರಕರಣದಲ್ಲಿ ಅಮಾಯಕರು ತೊಂದರೆ ಅನುಭವಿಸಬೇಕಾಗುತ್ತದೆ ಎಂಬ ಅರ್ಥದಲ್ಲಿ ಮಾತನಾಡಿದ ಅವರು, ತನಿಖೆಯ ಪ್ರಗತಿಯ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

‘ಕುಮಾರಸ್ವಾಮಿ ಅವರೇ ಇಂತಹ ಕೆಲಸ ಮಾಡಿರುವುದು’

ಕುಮಾರಸ್ವಾಮಿ ಅವರ ಹಿಂದಿನ ರಾಜಕೀಯ ನಡೆಗಳನ್ನು ಪ್ರಸ್ತಾಪಿಸಿದ ಚಲುವರಾಯಸ್ವಾಮಿ, ದೇವೇಗೌಡರು ಪ್ರಧಾನಮಂತ್ರಿ ಸ್ಥಾನದಿಂದ ಕೆಳಗಿಳಿದ ಸಂದರ್ಭದಲ್ಲಿ ರೈಲ್ವೆ ನಿಲ್ದಾಣಕ್ಕೆ ಎಲ್ಲರನ್ನೂ ಕರೆದುಕೊಂಡು ಹೋಗಿ ಹೋರಾಟ ನಡೆಸಿದ್ದವರು ಇದೇ ಕುಮಾರಸ್ವಾಮಿ ಎಂದು ಹೇಳಿದರು.

ಅಲ್ಲದೆ, ಸಿದ್ದರಾಮಯ್ಯ ಅವರನ್ನು ಬಹಿರಂಗಪಡಿಸುವ ಕೆಲಸವನ್ನೂ ಕುಮಾರಸ್ವಾಮಿ ಅವರೇ ಮಾಡಿದ್ದರು ಎಂದು ಆರೋಪಿಸಿದರು. ಈ ಹಿಂದೆಯೂ ಇಂತಹ ರಾಜಕೀಯ ನಡೆಗಳನ್ನು ಅನುಸರಿಸಿಕೊಂಡು ಬಂದಿರುವವರು ಅವರೇ ಎಂಬರ್ಥದಲ್ಲಿ ಟೀಕಿಸಿದರು.

‘ಕುಮಾರಸ್ವಾಮಿ ಇನ್ನೊಬ್ಬರನ್ನು ತಿರುಗಿ ಬೀಳಿಸುವುದಕ್ಕಾಗಿ ಇಂತಹ ಕೆಲಸಗಳನ್ನು ಮಾಡಿದ್ದಾರೆ ವಿನಃ ಬೇರೆ ಯಾರೂ ಮಾಡಿಲ್ಲ’ ಎಂದು ಚಲುವರಾಯಸ್ವಾಮಿ ಆರೋಪಿಸಿದರು.
 

Add Zee News as a Preferred Source
TAGS:
Karnataka Politics