• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮೈಸೂರು
  • /ಒಂದೇ ಕುಟುಂಬದ 7 ಮಂದಿಯ ಕೊಲೆ - ಚಾಮುಂಡಿ ಬೆಟ್ಟದಲ್ಲಿ ಮತ್ತೆರಡು ಶವ ಪತ್ತೆ.!

ಒಂದೇ ಕುಟುಂಬದ 7 ಮಂದಿಯ ಕೊಲೆ - ಚಾಮುಂಡಿ ಬೆಟ್ಟದಲ್ಲಿ ಮತ್ತೆರಡು ಶವ ಪತ್ತೆ.!

ಮೈಸೂರು: ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಒಂದೇ ಕುಟುಂಬದ ಏಳು ಮಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆರಡು ಮೃತದೇಹಗಳು ಪತ್ತೆಯಾಗಿವೆ.

Written ByRamya. R. Gowda
Published: Nov 09, 2026, 16:58 IST|Updated: Nov 09, 2026, 17:05 IST
joinshare
ಒಂದೇ ಕುಟುಂಬದ 7 ಮಂದಿಯ ಕೊಲೆ - ಚಾಮುಂಡಿ ಬೆಟ್ಟದಲ್ಲಿ ಮತ್ತೆರಡು ಶವ ಪತ್ತೆ.!

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಮೈಸೂರು: ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಒಂದೇ ಕುಟುಂಬದ ಏಳು ಮಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆರಡು ಮೃತದೇಹಗಳು ಪತ್ತೆಯಾಗಿವೆ. ಆರೋಪಿ ಇಂದುಶೇಖರ್‌ನ ಬಾಮೈದ ಶಿವಕುಮಾರ್ ಹಾಗೂ ಆತನ ಪತ್ನಿ ದಿವ್ಯಾ ಅವರ ಮೃತದೇಹಗಳು ಚಾಮುಂಡಿ ಬೆಟ್ಟದಲ್ಲಿ ಪತ್ತೆಯಾಗಿದ್ದು ಭೀಕರ ಭೀಬತ್ಸಕ್ಕೆ ಜಗನ್ಮಾತೆಯ ಅಡವಿ ಕೂಡ ಸೇರಿಕೊಂಡಿದೆ.

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ 7 ಮಂದಿಯ ಕೊಲೆ‌ ಪ್ರಕರಣ ಇದೀಗಾ ಮೈಸೂರಿಗೆ ಬಂದು ನಿಂತಿದೆ. ಒಂದೊಂದು ದಿಕ್ಕಿನಲ್ಲಿ ಒಂದೊಂದು ಶವ ಎಸೆದಿರುವ ಪಾಪಿ ಇಂದುಶೇಖರ್‌ ಮೈಸೂರಿನ ಚಾಮುಂಡಿ ತಾಯಿಯ ಅಡವಿಯಲ್ಲು ಶವ ಎಸೆದಿದ್ದಾನೆ. ನಿನ್ನೆ ತಡರಾತ್ರಿವರೆಗು ಕಾರ್ಯಚರಣೆ ನಡೆಸಿ ಶವ ಹೊರತೆಗೆದ ಸಿಬ್ಬಂದಿಗಳಿಗೆ ಇಂದುಶೇಖರನ ಕ್ರೌರ್ಯ ಎಂತಹದು ಎಂದು ಸಾಕ್ಷಿಯಾಗಿದೆ. ಇನ್ನು ಆರೋಪಿಯನ್ನ ಚಾಮುಂಡಿ ಬೆಟ್ಟಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ ಪೊಲೀಸರಿಗೆ ರಾತ್ರಿಯೆಲ್ಲ ಹುಡುಕಾಟ ನಡೆಸಿ, ಎರಡು ಶವ ಪತ್ತೆಯಾಗಿದ್ದು, ಮೃತದೇಹಗಳನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಇಂದು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಲಿದ್ದು, ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಆಸ್ತಿ ವಿಚಾರವೇ ಕೊಲೆಗೆ ಕಾರಣ? ಹೌದು, ಸದ್ಯ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಕೊಲೆಗಳು ನಡೆದಿವೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆರೋಪಿ ಈ ರೀತಿಯ ಕೃತ್ಯ ಎಸಗುತ್ತಾನೆ ಎಂದು ತಾವು ಊಹಿಸಿರಲಿಲ್ಲ. ನಿತ್ಯ ಅವರ ಅತ್ತೆಯೊಂದಿಗೆ ಜಗಳ ಮಾಡುತ್ತಿದ್ದ, ಆದರೆ, ಈ ವಿಚಾರವನ್ನು ಆಕೆ ನಮ್ಮೊಂದಿಗೆ ಹೇಳಿಕೊಂಡಿರಲಿಲ್ಲ. ಶಿವಕುಮಾರ್ ಮತ್ತು ದಿವ್ಯಾ ಅವರ ಮೃತದೇಹಗಳನ್ನು ಚಾಮುಂಡಿ ಬೆಟ್ಟದಲ್ಲಿ ಎಸೆದಿರುವುದಾಗಿ ಆತ ಪೊಲೀಸರಿಗೆ ಮಾಹಿತಿ ನೀಡಿದ್ದ ಎಂದು ಮೃತ ದಿವ್ಯಾ ಅವರ ತಾಯಿ ಹಾಗೂ ಚಿಕ್ಕಮ್ಮ ಹೇಳಿದ್ದಾರೆ. ಇನ್ನು, ಆರೋಪಿ ಇಂದುಶೇಖರ್‌ನನ್ನು ತಮ್ಮ ವಶಕ್ಕೆ ನೀಡಬೇಕು. ಆತನಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮೃತ ದಿವ್ಯಾ ಅವರ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಆದ್ರೆ, ಪ್ರಕರಣದ ತನಿಖೆ ಮುಂದುವರಿದಿದ್ದು, ಮೃತದೇಹಗಳ ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಪೊಲೀಸರ ತನಿಖೆಯಿಂದ ಸಾವಿನ ನಿಖರ ಕಾರಣ ಮತ್ತು ಪ್ರಕರಣದ ಮತ್ತಷ್ಟು ಮಾಹಿತಿ ಹೊರ ಬರಲಿದೆ.

ಬೆಂಗಳೂರಿನಲ್ಲಿ 7 ಮಂದಿಯ ಬರ್ಬರ ಹತ್ಯೆ ಪ್ರಕರಣ

ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ ಏಳು ಮಂದಿಯ ಸಾಮೂಹಿಕ ಹತ್ಯೆ ಪ್ರಕರಣ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಕ್ಯಾಬ್ ಚಾಲಕ ಇಂದೂಶೇಖರ್ ಅಲಿಯಾಸ್ ಶೇಖರ್ ತನ್ನ ಪತ್ನಿ ಸೇರಿದಂತೆ ಆಕೆಯ ಕುಟುಂಬದ ಏಳು ಮಂದಿಯನ್ನು ಹತ್ಯೆಗೈದಿರುವ ಆರೋಪ ಎದುರಿಸುತ್ತಿದ್ದಾನೆ. 

ಪೊಲೀಸರ ಪ್ರಕಾರ, ಸುಮಾರು 15 ದಿನಗಳ ಅವಧಿಯಲ್ಲಿ ಹತ್ಯೆಗಳು ನಡೆದಿವೆ. ಮೃತದೇಹಗಳನ್ನು ವಿವಿಧ ಪ್ರದೇಶಗಳಲ್ಲಿ ಎಸೆದಿರುವ ಆರೋಪವಿದೆ. ಇದುವರೆಗೆ ಐದು ಮೃತದೇಹಗಳು ಪತ್ತೆಯಾಗಿವೆ. ನಂದಿ ಬೆಟ್ಟದ ತಪ್ಪಲಿನಲ್ಲಿ ಪುನೀತ್, ತಮಿಳುನಾಡಿನ ಸೇಲಂ ಅರಣ್ಯ ಪ್ರದೇಶದಲ್ಲಿ ಸುನೀತಾ ಮತ್ತು ರೂಪಾವತಿ, ಮೈಸೂರಿನ ಚಾಮುಂಡಿ ಬೆಟ್ಟದ ಸಮೀಪ ಶಿವಕುಮಾರ್ ಮತ್ತು ದಿವ್ಯಾ ಅವರ ಮೃತದೇಹಗಳು ಪತ್ತೆಯಾಗಿವೆ. 

 

Add Zee News as a Preferred Source
TAGS:
Kannada News