• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮೈಸೂರು
  • /ಮೈಸೂರು ಸಂವಿಧಾನ ದಿನಾಚರಣೆ: ಹೊರಗೆ ಬಿಜೆಪಿ ವಿರುದ್ಧ ಸಮರ, ಒಳಗೆ ಕಾಂಗ್ರೆಸ್ ನಾಯಕತ್ವದ ಲೆಕ್ಕಾಚಾರ

ಮೈಸೂರು ಸಂವಿಧಾನ ದಿನಾಚರಣೆ: ಹೊರಗೆ ಬಿಜೆಪಿ ವಿರುದ್ಧ ಸಮರ, ಒಳಗೆ ಕಾಂಗ್ರೆಸ್ ನಾಯಕತ್ವದ ಲೆಕ್ಕಾಚಾರ

ಮೈಸೂರಿನಲ್ಲಿ ನಡೆದ ಬೃಹತ್ ಸಂವಿಧಾನ ದಿನಾಚರಣೆ ಕಾರ್ಯಕ್ರಮವು ಸಂಭ್ರಮದ ಜೊತೆಗೆ ರಾಜ್ಯ ರಾಜಕೀಯದ ಹಲವು ಕುತೂಹಲಕಾರಿ ಬೆಳವಣಿಗೆಗಳಿಗೆ ವೇದಿಕೆಯಾಯಿತು. ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದರು.. ಸಂಪೂರ್ಣ ವಿವರ ಇಲ್ಲಿದೆ..

Written ByKrishna NK
Published: Nov 26, 2026, 19:15 IST|Updated: Nov 26, 2026, 19:22 IST
joinshare
ಮೈಸೂರು ಸಂವಿಧಾನ ದಿನಾಚರಣೆ: ಹೊರಗೆ ಬಿಜೆಪಿ ವಿರುದ್ಧ ಸಮರ, ಒಳಗೆ ಕಾಂಗ್ರೆಸ್ ನಾಯಕತ್ವದ ಲೆಕ್ಕಾಚಾರ
Image Credit: Constitution Day

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಮಕ್ಕಳ ಬಿಸಿಯೂಟದಲ್ಲೂ ಲಂಚ : 15 ಸಾವಿರ ಪಡೆಯುವಾಗ ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಅಧಿಕಾರಿ

ಮಕ್ಕಳ ಬಿಸಿಯೂಟದಲ್ಲೂ ಲಂಚ : 15 ಸಾವಿರ ಪಡೆಯುವಾಗ ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಅಧಿಕಾರಿ

2

ಪೋಸ್ಟ್ ಆಫೀಸ್‌ನಲ್ಲಿ ₹1,000 ಹೂಡಿಕೆ ಸಾಕು; ಬರೋಬ್ಬರಿ ₹4.40 ಲಕ್ಷ ಪಡೆಯುವ ಅವಕಾಶ!

3

ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ : ನಟನ ಬೆನ್ನು ನೋವಿಗೆ ಸಂಬಂಧಿಸಿ ಕೋರ್ಟ್‌ ಮಹತ್ವದ ಸೂಚನೆ..!

4

ಮೈಸೂರು ಸಂವಿಧಾನ ದಿನಾಚರಣೆ: ಹೊರಗೆ ಬಿಜೆಪಿ ವಿರುದ್ಧ ಸಮರ, ಒಳಗೆ ಕಾಂಗ್ರೆಸ್ ನಾಯಕತ್ವದ ಲೆಕ್ಕಾಚಾರ

5

UP Polls: ನಿರುದ್ಯೋಗಿಗಳಿಗೆ ₹5,000 ಭತ್ಯೆ, 25 ಲಕ್ಷ ಉದ್ಯೋಗದ ಭರವಸೆ! ಪ್ರತ್ಯೇಕ ಪ್ರಣಾಳಿಕೆಯಿಂದ SP-Congress ಮೈತ್ರಿಯಲ್ಲಿ ಬಿರುಕು?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಮೈಸೂರು : ನಗರದಲ್ಲಿ ಇಂದು ಸಂವಿಧಾನ ದಿನಾಚರಣೆಯ ಸಂಭ್ರಮದ ಜೊತೆಗೆ ಹೈವೋಲ್ಟೇಜ್ ರಾಜಕೀಯ ಮೇಲಾಟಕ್ಕೂ ಸಾಕ್ಷಿಯಾಗಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಭಾಷಣದ ಮೂಲಕ ರಾಜಕೀಯ ರಣಕಹಳೆ ಮೊಳಗಿಸಿದ್ದಾರೆ. ಇತ್ತ ಕಾರ್ಯಕ್ರಮದ ಯಶಸ್ಸಿನ ಮೂಲಕ ಕೃಷಿ ಸಚಿವ ನರೇಂದ್ರಸ್ವಾಮಿ ಮೈಸೂರು ಭಾಗದಲ್ಲಿ ತಮ್ಮ ರಾಜಕೀಯ ವರ್ಚಸ್ಸು ಹೆಚ್ಚಿಸಿಕೊಳ್ಳುತ್ತಿರುವ ಬೆನ್ನಲ್ಲೇ, ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಅವರ ರಾಜಕೀಯ ನಡೆ ಬಗ್ಗೆಯೂ ಚರ್ಚೆ ಜೋರಾಗಿದೆ. ಆಗಿದ್ರೆ, ಹಳೆ ಮೈಸೂರಿನಲ್ಲಿ ಕಾಂಗ್ರೆಸ್‌ನ ನಾಯಕತ್ವದ ಲೆಕ್ಕಾಚಾರ ಹೇಗಿದೆ.? ಹೆಚ್ಚಿನ ಮಾಹಿತಿ ಇಲ್ಲಿದೆ..

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಸಂವಿಧಾನ ದಿನಾಚರಣೆಯ ಸಂಭ್ರಮ ಮನೆ ಮಾಡಿತ್ತು. ಟೌನ್‌ಹಾಲ್ ಬಳಿಯ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಹಾಗೂ ಸಂವಿಧಾನ ಪೀಠಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪಾರ್ಚನೆ ಸಲ್ಲಿಸಿದರು. ಬಳಿಕ ಗನ್‌ಹೌಸ್ ವೃತ್ತದ ಬಳಿ ಬೃಹತ್ ಮೆರವಣಿಗೆಗೆ ಚಾಲನೆ ನೀಡಲಾಯಿತು. ಗನ್‌ಹೌಸ್‌ನಿಂದ ಮಹಾರಾಜ ಕಾಲೇಜು ಮೈದಾನದವರೆಗೆ ಸಾಗಿದ ಮೆರವಣಿಗೆಯಲ್ಲಿ ಸಂವಿಧಾನದ ಮಹತ್ವ ಸಾರುವ ಸ್ತಬ್ಧಚಿತ್ರಗಳು, ಡೊಳ್ಳು, ತಮಟೆ, ನಗಾರಿ ಸೇರಿದಂತೆ ವಿವಿಧ ಕಲಾ ತಂಡಗಳು ಗಮನ ಸೆಳೆದವು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಜಮೀರ್ ಅಹಮದ್, ಪಿ.ಎಂ. ನರೇಂದ್ರಸ್ವಾಮಿ, ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಶಾಸಕ ತನ್ವೀರ್ ಸೇಠ್, HV ರಾಜೀವ್ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದರು.

ಬಳಿಕ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ಭರ್ಜರಿ ಭಾಷಣದ ಮೂಲಕ ಅಬ್ಬರಿಸಿದರು. ಇದು ಸಂವಿಧಾನ ದಿನಾಚರಣೆಯಲ್ಲ, ಕಾಂಗ್ರೆಸ್ ಸಮಾವೇಶ ಎಂಬ ಬಿಜೆಪಿ ಟೀಕೆಗೆ ಸಿದ್ದರಾಮಯ್ಯ ಖಡಕ್ ತಿರುಗೇಟು ನೀಡಿದರು.

ಬಿಜೆಪಿಯವರು ಸಂವಿಧಾನ ವಿರೋಧಿಗಳು. ಅವರಿಗೆ ನಮ್ಮನ್ನು ಪ್ರಶ್ನಿಸುವ ನೈತಿಕ ಹಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದ್ರು. ಸಾವರ್ಕರ್ ಸಂವಿಧಾನವನ್ನು ವಿರೋಧಿಸಿದ್ದರು, ಮನುಸ್ಮೃತಿಯನ್ನು ಒಪ್ಪಿಕೊಂಡವರ ಬಳಿ ನಾವು ಸಂವಿಧಾನದ ಪಾಠ ಕೇಳಬೇಕಾ ಎಂದು ಪ್ರಶ್ನಿಸಿದರು. ಇತ್ತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಸಂವಿಧಾನ ರಕ್ಷಣೆಯ ಸಂಕಲ್ಪದೊಂದಿಗೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ಈ ಇಡೀ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಿದ ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಅವರ ಕಾರ್ಯವೈಖರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನರೇಂದ್ರಸ್ವಾಮಿ ಅವರ ಸಂಘಟನಾ ಸಾಮರ್ಥ್ಯವನ್ನು ಶ್ಲಾಘಿಸಿದ್ದಾರೆ. ಇತ್ತ ಮೈಸೂರು ಭಾಗದಲ್ಲಿ ನರೇಂದ್ರಸ್ವಾಮಿ ಅವರ ರಾಜಕೀಯ ಪ್ರಭಾವ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ದಲಿತ ನಾಯಕತ್ವದ ಪ್ರಮುಖ ಮುಖವಾಗಿರುವ ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಅವರ ರಾಜಕೀಯ ಲೆಕ್ಕಾಚಾರ ಏನು ಎಂಬ ಪ್ರಶ್ನೆ ಮೂಡಿದೆ. ಇದರ ಬೆನ್ನಲ್ಲೇ ಮಹದೇವಪ್ಪ ಅವರು ಕಾರ್ಯಕ್ರಮದಲ್ಲಿ ಆಸಕ್ತಿ ಇಲ್ಲದಿದ್ದರು ಕೂಡ ವೇದಿಕೆಗೆ ಆಗಮಿಸಿದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಒಂದೆಡೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ವೇದಿಕೆಯಿಂದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರೆ.. ಮತ್ತೊಂದೆಡೆ ನರೇಂದ್ರಸ್ವಾಮಿ ಅವರ ಸಂಘಟನಾ ಸಾಮರ್ಥ್ಯಕ್ಕೆ ಹೈಕಮಾಂಡ್ ಮೆಚ್ಚುಗೆ ವ್ಯಕ್ತಪಡಿಸಿರುವುದು ಕಾಂಗ್ರೆಸ್‌ನ ಆಂತರಿಕ ರಾಜಕೀಯದಲ್ಲೂ ಹೊಸ ಲೆಕ್ಕಾಚಾರಕ್ಕೆ ಕಾರಣವಾಗಿದೆ. ನರೇಂದ್ರಸ್ವಾಮಿ ವರ್ಸಸ್ ಮಹದೇವಪ್ಪ ಎನ್ನುವ ನಾಯಕತ್ವದ ಚರ್ಚೆ ಇದೀಗ ಹಳೆ ಮೈಸೂರು ಭಾಗದಲ್ಲಿ ಸದ್ದು ಮಾಡುತ್ತಿದೆ. ಆದ್ರೆ, ಇದು ಕೇವಲ ರಾಜಕೀಯ ಪೈಪೋಟಿಯೇ? ಅಥವಾ ಮುಂದಿನ ದಿನಗಳ ಕಾಂಗ್ರೆಸ್ ರಾಜಕೀಯದ ಹೊಸ ಸಮೀಕರಣಕ್ಕೆ ಮುನ್ನುಡಿಯೇ? ಎಂಬ ಪ್ರಶ್ನೆಗೆ ಮುಂದಿನ ದಿನಗಳಲ್ಲಿ ಉತ್ತರ ಸಿಗಬೇಕಿದೆ.

Add Zee News as a Preferred Source
TAGS:
Kannada News