• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮೈಸೂರು
  • /6 ದಿನಗಳಲ್ಲಿ ₹360 ಕೋಟಿ ದಸರಾ ಬಿಸಿನೆಸ್‌! ಮೈಸೂರು ದಸರಾಗೆ ಪ್ರವಾಸಿಗರ ದಂಡು

6 ದಿನಗಳಲ್ಲಿ ₹360 ಕೋಟಿ ದಸರಾ ಬಿಸಿನೆಸ್‌! ಮೈಸೂರು ದಸರಾಗೆ ಪ್ರವಾಸಿಗರ ದಂಡು

ಮೈಸೂರು ದಸರಾ ಆರಂಭವಾದ ಮೊದಲ ಆರು ದಿನಗಳಲ್ಲೇ ₹360 ಕೋಟಿ ವಹಿವಾಟು ನಡೆದಿರುವುದಾಗಿ ವರದಿಯಾಗಿದೆ. ಪ್ರವಾಸಿಗರ ಹೆಚ್ಚಳದಿಂದ ಹೋಟೆಲ್‌, ರೆಸ್ಟೋರೆಂಟ್‌, ಸಾರಿಗೆ ಹಾಗೂ ಸ್ಥಳೀಯ ವ್ಯಾಪಾರ ಕ್ಷೇತ್ರಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಹೋಟೆಲ್‌ಗಳ ಕೊಠಡಿಗಳ ಭರ್ತಿಯ ಪ್ರಮಾಣವೂ ಹೆಚ್ಚಿದ್ದು, ಮುಂದಿನ ದಿನಗಳಲ್ಲಿ ವ್ಯಾಪಾರ ವಹಿವಾಟು ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ.

Written ByPuttaraj K Alur
Published: Oct 17, 2026, 02:20 PM IST|Updated: Oct 17, 2026, 02:26 PM IST
joinshare
6 ದಿನಗಳಲ್ಲಿ ₹360 ಕೋಟಿ ದಸರಾ ಬಿಸಿನೆಸ್‌! ಮೈಸೂರು ದಸರಾಗೆ ಪ್ರವಾಸಿಗರ ದಂಡು
Image Credit: Mysuru Dasara 2026

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
"ಐ ಲವ್ ಯು ಡ್ಯಾಡ್ ಆಂಡ್‌ ಮಾಮ್" : ತಂದೆ-ತಾಯಿಗೆ ಮೆಸೇಜ್ ಕಳುಹಿಸಿ ಯುವತಿ ಆತ್ಮಹ*ತ್ಯೆ

"ಐ ಲವ್ ಯು ಡ್ಯಾಡ್ ಆಂಡ್‌ ಮಾಮ್" : ತಂದೆ-ತಾಯಿಗೆ ಮೆಸೇಜ್ ಕಳುಹಿಸಿ ಯುವತಿ ಆತ್ಮಹ*ತ್ಯೆ

2

ಹಬ್ಬದ ಸೀಸನ್‌ನಲ್ಲಿ ಟೊಯೋಟಾ ಅಗ್ಗದ ಕಾರು ಬಿಡುಗಡೆ! ಸುರಕ್ಷತಾ ಫೀಚರ್ಸ್‌ ಮಾತ್ರ ಸೂಪರ್!

3

ಮಾಧ್ಯಮದ ಹೆಸರಲ್ಲಿ ವಸೂಲಿ: ಸಲೂನ್ ಮೇಲೆ ದಾಳಿ ಮಾಡಿ ಸಿಕ್ಕಿಬಿದ್ದ ಐನಾತಿ ಲೇಡಿ ಗ್ಯಾಂಗ್!

4

SBIಯಲ್ಲಿ 180 ದಿನಗಳ FD ಇಟ್ಟರೆ ಎಷ್ಟು ಬಡ್ಡಿ ಸಿಗುತ್ತೆ? ಹಿರಿಯ ನಾಗರಿಕರಿಗೆ ಎಷ್ಟು ಲಾಭ!

5

ಕಾವ್ಯ ಮಾರನ್‌ - ಅನಿರುದ್ಧ್​ ಮದುವೆ.. ಇಬ್ಬರ ಆಸ್ತಿ ಲೆಕ್ಕಚಾರ ಕೇಳಿದ್ರೆ ನಿಮ್ಮ ತಲೆ ಗಿರ್‌ ಅನ್ನುತ್ತೆ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Mysuru Dasara 2026: ನಾಡಹಬ್ಬ ಮೈಸೂರು ದಸರಾ ಕೇವಲ ಸಾಂಸ್ಕೃತಿಕ ಸಂಭ್ರಮಕ್ಕೆ ಸೀಮಿತವಾಗದೆ, ಪ್ರವಾಸೋದ್ಯಮ ಮತ್ತು ವ್ಯಾಪಾರ ಕ್ಷೇತ್ರಕ್ಕೂ ಭರ್ಜರಿ ಆದಾಯ ತಂದುಕೊಟ್ಟಿದೆ. ದಸರಾ ಆರಂಭವಾದ ಮೊದಲ ಆರು ದಿನಗಳಲ್ಲೇ ಸುಮಾರು ₹360 ಕೋಟಿ ವಹಿವಾಟು ನಡೆದಿರುವುದಾಗಿ ವರದಿಯಾಗಿದೆ. ಮೈಸೂರು ಅರಮನೆ, ಜಂಬೂ ಸವಾರಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಪ್ರವಾಸಿ ತಾಣಗಳನ್ನ ಕಣ್ತುಂಬಿಕೊಳ್ಳಲು ದೇಶ-ವಿದೇಶದ ವಿವಿಧ ಭಾಗಗಳಿಂದ ಪ್ರವಾಸಿಗರು ಸಾಂಸ್ಕೃತಿಕ ನಗರಿಗೆ ಆಗಮಿಸುತ್ತಿದ್ದಾರೆ.

ಇದರಿಂದ ಹೋಟೆಲ್‌, ರೆಸ್ಟೋರೆಂಟ್‌, ಸಾರಿಗೆ, ವ್ಯಾಪಾರ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ದಸರಾ ಸಂದರ್ಭದಲ್ಲಿ ಮೈಸೂರಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುವುದರಿಂದ ಸ್ಥಳೀಯ ವ್ಯಾಪಾರಿಗಳಿಗೆ ಉತ್ತಮ ವಹಿವಾಟು ದೊರೆಯುತ್ತದೆ. ಈ ಬಾರಿಯೂ ಹಬ್ಬದ ಆರಂಭಿಕ ದಿನಗಳಲ್ಲೇ ದೊಡ್ಡ ಪ್ರಮಾಣದ ವ್ಯಾಪಾರ ನಡೆದಿರುವುದು ಮೈಸೂರಿನ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಿದೆ.

ಕಳೆದ ವರ್ಷದ ವಹಿವಾಟನ್ನೂ ಮೀರಿಸಿದ ದಸರಾ

ಕಳೆದ ವರ್ಷದ ಇದೇ ಅವಧಿಯಲ್ಲಿ ಸುಮಾರು ₹120 ಕೋಟಿ ವಹಿವಾಟು ನಡೆದಿತ್ತು ಎನ್ನಲಾಗಿದ್ದು, ಈ ಬಾರಿ ದಸರಾ ಆರಂಭದ ಆರು ದಿನಗಳಲ್ಲೇ ₹360 ಕೋಟಿ ವಹಿವಾಟು ದಾಖಲಾಗಿರುವುದು ವಿಶೇಷವಾಗಿದೆ. ಅಂದರೆ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ವ್ಯಾಪಾರದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ದಸರಾ ಉತ್ಸವಕ್ಕೆ ದೊರೆಯುತ್ತಿರುವ ಜನಬೆಂಬಲ ಹಾಗೂ ಪ್ರವಾಸಿಗರ ಹೆಚ್ಚಳವು ಈ ಬೆಳವಣಿಗೆಗೆ ಪ್ರಮುಖ ಕಾರಣಗಳಾಗಿವೆ.

ಮೈಸೂರು ದಸರಾ ದೇಶದ ಪ್ರಮುಖ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾಗಿದೆ. ದಸರಾ ಸಂದರ್ಭದಲ್ಲಿ ಅರಮನೆ ನಗರಿ ಮೈಸೂರು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತದೆ. ಅರಮನೆಯ ಸೌಂದರ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು, ಆಹಾರ ಮೇಳಗಳು, ವಸ್ತುಪ್ರದರ್ಶನಗಳು ಮತ್ತು ವಿವಿಧ ಮನರಂಜನಾ ಚಟುವಟಿಕೆಗಳು ಪ್ರವಾಸಿಗರನ್ನ ಆಕರ್ಷಿಸುತ್ತವೆ. ಹೀಗಾಗಿ ದಸರಾ ಮೈಸೂರಿನ ವ್ಯಾಪಾರ ವಹಿವಾಟಿಗೆ ಪ್ರಮುಖ ಆಧಾರವಾಗಿದೆ.

ಹೋಟೆಲ್‌ ಉದ್ಯಮಕ್ಕೂ ಭರ್ಜರಿ ಬೇಡಿಕೆ

ದಸರಾ ಹಿನ್ನೆಲೆಯಲ್ಲಿ ಮೈಸೂರಿನ ಹೋಟೆಲ್‌ ಉದ್ಯಮದಲ್ಲಿಯೂ ಚಟುವಟಿಕೆ ಹೆಚ್ಚಾಗಿದೆ. ಮಾಹಿತಿಯ ಪ್ರಕಾರ, ಹೋಟೆಲ್‌ಗಳಲ್ಲಿ ಸುಮಾರು ಶೇ.75ರಷ್ಟು ಕೊಠಡಿಗಳು ಭರ್ತಿಯಾಗಿವೆ. ರಾಜ್ಯದ ವಿವಿಧ ಜಿಲ್ಲೆಗಳು ಮಾತ್ರವಲ್ಲದೆ ಹೊರರಾಜ್ಯಗಳಿಂದಲೂ ಪ್ರವಾಸಿಗರು ಮೈಸೂರಿಗೆ ಆಗಮಿಸುತ್ತಿರುವುದರಿಂದ ವಸತಿ ವ್ಯವಸ್ಥೆ, ಆಹಾರ ಮತ್ತು ಸಾರಿಗೆ ಸೇವೆಗಳಿಗೆ ಬೇಡಿಕೆ ಹೆಚ್ಚಾಗಿದೆ. ಪ್ರವಾಸಿಗರ ಆಗಮನದಿಂದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಸ್ಥಳೀಯ ಅಂಗಡಿಗಳು, ಆಟೋ ಮತ್ತು ಟ್ಯಾಕ್ಸಿ ಚಾಲಕರು ಸೇರಿದಂತೆ ವಿವಿಧ ವಲಯಗಳ ವ್ಯಾಪಾರಿಗಳಿಗೆ ಆದಾಯ ಗಳಿಸಲು ಅವಕಾಶ ದೊರೆಯುತ್ತಿದೆ. ದಸರಾ ಸಂದರ್ಭದಲ್ಲಿ ತಾತ್ಕಾಲಿಕ ಮಳಿಗೆಗಳು ಹಾಗೂ ಆಹಾರ ಮಳಿಗೆಗಳಿಗೂ ಉತ್ತಮ ವ್ಯಾಪಾರವಾಗುತ್ತದೆ.

ಪ್ರವಾಸಿ ತಾಣಗಳಲ್ಲಿ ಜನಸಂದಣಿ

ಮೈಸೂರು ಅರಮನೆ, ಮೃಗಾಲಯ ಸೇರಿದಂತೆ ನಗರದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಚಾರ ಹೆಚ್ಚಾಗಿದೆ. ಕುಟುಂಬ ಸಮೇತರಾಗಿ ಮೈಸೂರಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚುತ್ತಿರುವುದು ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡಿದೆ. ದಸರಾ ಕಾರ್ಯಕ್ರಮಗಳನ್ನ ವೀಕ್ಷಿಸುವುದರ ಜೊತೆಗೆ ಪ್ರವಾಸಿಗರು ನಗರದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸ್ಥಳೀಯ ವ್ಯಾಪಾರಕ್ಕೂ ಕೊಡುಗೆ ನೀಡುತ್ತಿದ್ದಾರೆ. ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿ, ಅರಮನೆಯ ದೀಪಾಲಂಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರವಾಸಿಗರನ್ನ ಸೆಳೆಯುತ್ತವೆ. ಹಬ್ಬದ ದಿನಗಳಲ್ಲಿ ಜನಸಂದಣಿ ಹೆಚ್ಚಾಗುವುದರಿಂದ ವ್ಯಾಪಾರ ವಹಿವಾಟು ಕೂಡ ಚುರುಕಾಗುತ್ತದೆ.

ಮುಂದಿನ ದಿನಗಳಲ್ಲಿ ವಹಿವಾಟು ಮತ್ತಷ್ಟು ಹೆಚ್ಚುವ ನಿರೀಕ್ಷೆ

ದಸರಾ ಉತ್ಸವದ ಪ್ರಮುಖ ಕಾರ್ಯಕ್ರಮಗಳು ಹಾಗೂ ರಜಾ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ವ್ಯಾಪಾರ ವಹಿವಾಟು ಇನ್ನಷ್ಟು ಏರಿಕೆಯಾಗಬಹುದು ಎಂಬ ನಿರೀಕ್ಷೆ ವ್ಯಾಪಾರ ವಲಯದಲ್ಲಿದೆ. ಒಟ್ನಲ್ಲಿ ಮೈಸೂರು ದಸರಾ ಸಾಂಸ್ಕೃತಿಕ ಪರಂಪರೆಯ ಸಂಭ್ರಮದ ಜೊತೆಗೆ ನಗರದ ಆರ್ಥಿಕ ಚಟುವಟಿಕೆಗಳಿಗೂ ದೊಡ್ಡ ಉತ್ತೇಜನ ನೀಡುತ್ತಿದೆ. ಕೇವಲ ಆರು ದಿನಗಳಲ್ಲಿ ₹360 ಕೋಟಿ ವಹಿವಾಟು ನಡೆದಿರುವುದು ದಸರಾ ಪ್ರವಾಸೋದ್ಯಮದ ಆರ್ಥಿಕ ಮಹತ್ವವನ್ನ ಎತ್ತಿತೋರಿಸುತ್ತದೆ. ಪ್ರವಾಸಿಗರ ಹೆಚ್ಚಳ, ಹೋಟೆಲ್‌ಗಳ ಬೇಡಿಕೆ ಮತ್ತು ಸ್ಥಳೀಯ ವ್ಯಾಪಾರ ಚಟುವಟಿಕೆಗಳು ಈ ಬಾರಿಯ ದಸರಾವನ್ನ ವ್ಯಾಪಾರ ದೃಷ್ಟಿಯಿಂದಲೂ ಗಮನಾರ್ಹವಾಗಿಸಿವೆ.

Add Zee News as a Preferred Source
TAGS:
Kannada News