SOCIAL MEDIA

Newsletter

PARTNER SITES
Select Language Select State

ಮೈಸೂರು ದಸರಾ ವೇಳೆ ಬಲೂನ್ ಮಾರುತ್ತಿದ್ದ ಬಾಲಕಿ ಮೇಲೆ ಅ*ತ್ಯಾಚಾರ, ಕೊ*ಲೆ: ಕಾಮುಕನಿಗೆ ಗಲ್ಲು ಶಿಕ್ಷೆ!

ಕಳೆದ ವರ್ಷ ಮೈಸೂರು ದಸರಾ ವೇಳೆ ಬಲೂನ್ ಮಾರಾಟ ಮಾಡುತ್ತಿದ್ದ 9 ವರ್ಷದ ಬಾಲಕಿಯನ್ನ ಅಪಹರಿಸಿ, ಅ*ತ್ಯಾಚಾರ ಎಸಗಿ ಕೊ*ಲೆ ಮಾಡಿದ ಪ್ರಕರಣದಲ್ಲಿ ಅಪರಾಧಿ ಕಾರ್ತಿಕ್‌ (32)ಗೆ ಮೈಸೂರಿನ ತ್ವರಿತಗತಿ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಘಟನೆ ನಡೆದ 24 ಗಂಟೆಗಳಲ್ಲೇ ಆರೋಪಿಯನ್ನ ಬಂಧಿಸಿದ್ದ ನಜರಬಾದ್ ಠಾಣೆ ಪೊಲೀಸರ ತನಿಖೆಯ ಬಳಿಕ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.

Written By Puttaraj K Alur
Published: Oct 17, 2026, 04:39 PM IST | Updated: Oct 17, 2026, 05:21 PM IST
Image Credit: Mysuru Dasara Crime
Join

Karthik Death Sentence: ಕಳೆದ ವರ್ಷ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ 9 ವರ್ಷದ ಬಾಲಕಿಯ ಅ*ತ್ಯಾಚಾರ ಮತ್ತು ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ತ್ವರಿತಗತಿ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಬಾಲಕಿಯನ್ನ ಅಪಹರಿಸಿ, ಅ*ತ್ಯಾಚಾರ ಎಸಗಿ ಕೊ*ಲೆ ಮಾಡಿದ ಪ್ರಕರಣದಲ್ಲಿ ಅಪರಾಧಿ ಕಾರ್ತಿಕ್‌ (32) ಎಂಬಾತನಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.

ಮೈಸೂರಿನ FTSC-1 ನ್ಯಾಯಾಲಯದ ನ್ಯಾಯಾಧೀಶ ಅನಿಲ್ ಪಿ.ವಘಾಢೆ ಅವರು ಈ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ. ಬಡ ಕುಟುಂಬದ ಬಾಲಕಿಯ ಮೇಲೆ ನಡೆದಿದ್ದ ಅಮಾನವೀಯ ಕೃತ್ಯಕ್ಕೆ ರಾಜ್ಯದಾದ್ಯಂತ ಆಕ್ರೋಶಕ್ಕೆ ವ್ಯಕ್ತವಾಗಿತ್ತು. ಇದೀಗ ಈ ಪ್ರಕರಣದಲ್ಲಿ ಅಪರಾಧಿಗೆ ಮರಣದಂಡನೆ ವಿಧಿಸಿರುವುದು ಮಹತ್ವದ ನ್ಯಾಯಾಂಗ ಬೆಳವಣಿಗೆಯಾಗಿದೆ.

ದಸರಾ ವೇಳೆ ನಡೆದಿದ್ದ ಭೀಕರ ಘಟನೆ

ಕಳೆದ ವರ್ಷ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ವ್ಯಾಪಾರಕ್ಕಾಗಿ ಕಲಬುರಗಿ ಮೂಲದ ಕುಟುಂಬವೊಂದು ಮೈಸೂರಿಗೆ ಆಗಮಿಸಿತ್ತು. ಜೀವನೋಪಾಯಕ್ಕಾಗಿ ಕುಟುಂಬದ ಸದಸ್ಯರು ದಸರಾ ವಸ್ತುಪ್ರದರ್ಶನದ ಆವರಣದ ಸುತ್ತಮುತ್ತ ಬಲೂನ್ ಮಾರಾಟ ಮಾಡುತ್ತಿದ್ದರು. ಕುಟುಂಬದ 9 ವರ್ಷದ ಬಾಲಕಿಯೂ ಬಲೂನ್ ಮಾರಾಟದಲ್ಲಿ ತೊಡಗಿಸಿಕೊಂಡಿದ್ದಳು.

ಹಬ್ಬದ ಸಂಭ್ರಮದಲ್ಲಿ ಜೀವನೋಪಾಯ ಕಂಡುಕೊಳ್ಳಲು ಬಂದಿದ್ದ ಕುಟುಂಬಕ್ಕೆ ಆಘಾತಕಾರಿ ಘಟನೆ ಎದುರಾಗಿತ್ತು. ರಾತ್ರಿ ವೇಳೆ ಕುಟುಂಬದೊಂದಿಗೆ ಟೆಂಟ್‌ನಲ್ಲಿ ನಿದ್ರಿಸುತ್ತಿದ್ದ ಬಾಲಕಿಯನ್ನ ಕಾರ್ತಿಕ್ ಅಪಹರಿಸಿಕೊಂಡು ಹೋಗಿದ್ದ. ಬಳಿಕ ಆಕೆಯ ಮೇಲೆ ಅ*ತ್ಯಾಚಾರ ಎಸಗಿ ಕೊ*ಲೆ ಮಾಡಿದ್ದ. ಕೃತ್ಯದ ನಂತರ ಬಾಲಕಿಯ ಮೃತದೇಹವನ್ನ ಬಿಟ್ಟು ಆರೋಪಿ ಪರಾರಿಯಾಗಿದ್ದ. ಬಾಲಕಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದರು. ದಸರಾ ಸಂಭ್ರಮದ ನಡುವೆಯೇ ನಡೆದ ಈ ಘಟನೆ ಮೈಸೂರಿನ ಜನತೆಯನ್ನ ಬೆಚ್ಚಿಬೀಳಿಸಿತ್ತು.

24 ಗಂಟೆಯಲ್ಲೇ ಆರೋಪಿ ಬಂಧಿಸಿದ್ದ ಪೊಲೀಸರು

ಬಾಲಕಿಯ ಅ*ತ್ಯಾಚಾರ ಮತ್ತು ಕೊ*ಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮೈಸೂರಿನ ನಜರಬಾದ್ ಪೊಲೀಸ್ ಠಾಣೆಯ ಪೊಲೀಸರು ತನಿಖೆ ಆರಂಭಿಸಿದ್ದರು. ಪ್ರಕರಣದ ಗಂಭೀರತೆಯನ್ನ ಪರಿಗಣಿಸಿ ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಘಟನೆ ನಡೆದ ಕೇವಲ 24 ಗಂಟೆಗಳ ಒಳಗಾಗಿ ಆರೋಪಿ ಕಾರ್ತಿಕ್‌ನನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ತ್ವರಿತ ತನಿಖೆ ನಡೆಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನ ಸಂಗ್ರಹಿಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಅಪ್ರಾಪ್ತ ಬಾಲಕಿಯ ಮೇಲಿನ ಲೈಂ*ಗಿಕ ದೌರ್ಜನ್ಯ ಮತ್ತು ಕೊ*ಲೆ ಪ್ರಕರಣವಾಗಿದ್ದರಿಂದ ತನಿಖೆ ಹಾಗೂ ನ್ಯಾಯಾಂಗ ವಿಚಾರಣೆ ಹೆಚ್ಚಿನ ಮಹತ್ವ ಪಡೆದುಕೊಂಡಿತ್ತು.

ಕಾರ್ತಿಕ್‌ಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಪ್ರಕರಣದ ವಿಚಾರಣೆ ಮೈಸೂರಿನ FTSC-1 ತ್ವರಿತಗತಿ ವಿಶೇಷ ನ್ಯಾಯಾಲಯದಲ್ಲಿ ನಡೆದಿತ್ತು. ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರವಾಗಿ ಸಾಕ್ಷ್ಯಾಧಾರಗಳನ್ನ ಮಂಡಿಸಲಾಗಿತ್ತು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜಯಂತಿ ಅವರು ವಾದ ಮಂಡಿಸಿದ್ದರು. ಪ್ರಕರಣದ ಸಾಕ್ಷ್ಯಗಳು, ವಾದ-ಪ್ರತಿವಾದಗಳು ಹಾಗೂ ಇತರ ಅಂಶಗಳನ್ನ ಪರಿಶೀಲಿಸಿದ ನ್ಯಾಯಾಲಯ ಕಾರ್ತಿಕ್‌ನ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿದೆ. ನ್ಯಾಯಾಧೀಶ ಅನಿಲ್ ಪಿ.ವಘಾಢೆ ಅವರು ಅಪರಾಧಿಗೆ ಮರಣದಂಡನೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಒಂಬತ್ತು ವರ್ಷದ ಬಾಲಕಿಯ ಮೇಲೆ ನಡೆದಿದ್ದ ಗಂಭೀರ ಅಪರಾಧಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ಈ ತೀರ್ಪು ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದೆ.

ಬಾಲಕಿಯ ಕುಟುಂಬಕ್ಕೆ ನ್ಯಾಯದ ಭರವಸೆ

ದಸರಾ ಮಹೋತ್ಸವದ ಸಂದರ್ಭದಲ್ಲಿ ದುಡಿದು ಬದುಕು ಕಟ್ಟಿಕೊಳ್ಳುವ ಉದ್ದೇಶದಿಂದ ಮೈಸೂರಿಗೆ ಬಂದಿದ್ದ ಕುಟುಂಬಕ್ಕೆ ಈ ಘಟನೆ ತುಂಬಲಾರದ ನಷ್ಟ ಉಂಟುಮಾಡಿತ್ತು. ತಮ್ಮ ಮಗಳನ್ನ ಕಳೆದುಕೊಂಡ ಕುಟುಂಬಕ್ಕೆ ನ್ಯಾಯ ದೊರೆಯಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳು ಹಾಗೂ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಭಿಯೋಜಕರ ಕಾರ್ಯವೂ ಈ ತೀರ್ಪಿನ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ. ಮಕ್ಕಳ ಸುರಕ್ಷತೆ, ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಮತ್ತು ಅಪ್ರಾಪ್ತರ ಮೇಲಿನ ಲೈಂ*ಗಿಕ ದೌರ್ಜನ್ಯ ತಡೆಗಟ್ಟುವ ಅಗತ್ಯವನ್ನ ಈ ಪ್ರಕರಣ ಮತ್ತೊಮ್ಮೆ ನೆನಪಿಸಿದೆ.

ಮರಣದಂಡನೆ ಜಾರಿಗೆ ಕಾನೂನು ಪ್ರಕ್ರಿಯೆ ಅಗತ್ಯ

ಅಪರಾಧಿಗೆ ತ್ವರಿತಗತಿ ನ್ಯಾಯಾಲಯ ಮರಣದಂಡನೆ ವಿಧಿಸಿದ್ದರೂ, ಅದರ ಜಾರಿಗೆ ಮುಂದಿನ ಕಾನೂನು ಪ್ರಕ್ರಿಯೆಗಳು ಅನ್ವಯಿಸುತ್ತವೆ. ಭಾರತೀಯ ಕಾನೂನಿನ ಪ್ರಕಾರ ಸೆಷನ್ಸ್ ನ್ಯಾಯಾಲಯ ವಿಧಿಸುವ ಮರಣದಂಡನೆಗೆ ಹೈಕೋರ್ಟ್ ದೃಢೀಕರಣ ಅಗತ್ಯವಿದೆ. ಅಪರಾಧಿಗೆ ಮೇಲ್ಮನವಿ ಸಲ್ಲಿಸುವ ಕಾನೂನುಬದ್ಧ ಅವಕಾಶವೂ ಇರುತ್ತದೆ. ಒಟ್ನಲ್ಲಿ ಮೈಸೂರು ದಸರಾ ಸಂದರ್ಭದಲ್ಲಿ ನಡೆದಿದ್ದ ಬಾಲಕಿಯ ಅ*ತ್ಯಾಚಾರ ಮತ್ತು ಕೊ*ಲೆ ಪ್ರಕರಣದಲ್ಲಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ ವಿಧಿಸಿರುವುದು ಮಹತ್ವದ ತೀರ್ಪಾಗಿದೆ. ಈ ಪ್ರಕರಣವು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ಪರಿಣಾಮಕಾರಿ ತನಿಖೆ, ಕಾನೂನು ಕ್ರಮ ಹಾಗೂ ಸುರಕ್ಷತಾ ವ್ಯವಸ್ಥೆಗಳ ಅಗತ್ಯವನ್ನ ಎತ್ತಿತೋರಿಸಿದೆ.

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 

ZEENEWS TRENDING STORIES