• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮೈಸೂರು
  • /ಇಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: ವಿಶ್ವದ ಮೊದಲ 'ಕಾಸ್ಮೋಸ್' ತಾರಾಲಯ ಲೋಕಾರ್ಪಣೆ

ಇಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: ವಿಶ್ವದ ಮೊದಲ 'ಕಾಸ್ಮೋಸ್' ತಾರಾಲಯ ಲೋಕಾರ್ಪಣೆ

ಪ್ರವಾಸಿಗರ ಸ್ವರ್ಗ ಎಂದೇ ಖ್ಯಾತಿ ಪಡೆದಿರುವ ಮೈಸೂರು ಇನ್ನು ಮುಂದೆ ವೈಜ್ಞಾನಿಕ ಸ್ವರ್ಗವಾಗಿಯೂ ಗುರುತಿಸಿಕೊಳ್ಳಲಿದೆ. ಇಂದು ಪ್ರಧಾನಿ ನರೇಂದ್ರ ಮೋದಿ, ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಿರ್ಮಾಣವಾಗಿರುವ ವಿಶ್ವದ ಮೊದಲ ಕಾಸ್ಮೋಸ್ ತಾರಾಲಯವನ್ನು ಲೋಕಾರ್ಪಣೆ ಮಾಡಲಿದ್ದಾರೆ. . ಇದು ವಿಶ್ವದ ಮೊದಲ ಸಾಲಿನ ಅತ್ಯಾಧುನಿಕ ಟಿಲ್ಟೆಡ್ ಎಲ್ಇಡಿ ಡೋಮ್ ತಾರಾಲಯಗಳಲ್ಲಿ ಒಂದಾಗಿದೆ.

Written ByYashaswini V
Published: Nov 13, 2026, 10:55 IST|Updated: Nov 13, 2026, 11:05 IST
joinshare
ಇಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: ವಿಶ್ವದ ಮೊದಲ 'ಕಾಸ್ಮೋಸ್' ತಾರಾಲಯ ಲೋಕಾರ್ಪಣೆ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು (ನ.13) ಮಧ್ಯಾಹ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದು, ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿರ್ಮಾಣವಾಗಿರುವ ಅತ್ಯಾಧುನಿಕ ಹಾಗೂ ವಿಶಿಷ್ಟ ತಾರಾಲಯವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಪ್ರಧಾನಿಗಳ ಆಗಮನದ ಹಿನ್ನೆಲೆಯಲ್ಲಿ ಇಡೀ ಮೈಸೂರು ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ತಾರಾಲಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

ತಾರಾಲಯದ ವಿಶೇಷತೆ ಏನು?
ಚಾಮುಂಡಿ ಬೆಟ್ಟದ ಬಳಿ ನಿರ್ಮಾಣಗೊಂಡಿರುವ ಕಾಸ್ಮೋಸ್ ತಾರಾಲಯವನ್ನು ಪಿಎಂ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಈ ಕೇಂದ್ರವು ವಿಶ್ವದ ಮೊದಲ ಅತ್ಯಾಧುನಿಕ ಟಿಲ್ಟೆಡ್ ಎಲ್ಇಡಿ ಡೋಮ್ ತಾರಾಲಯಗಳಲ್ಲಿ ಒಂದಾಗಿದೆ.  ಇದು 18 ಮೀಟರ್‌ ವ್ಯಾಸ ಮತ್ತು 353.4 ಚದರ ಮೀಟರ್ ವಿಸ್ತೀರ್ಣದ ಬೃಹತ್ ಪ್ರದರ್ಶನ ಪರದೆಯನ್ನು ಹೊಂದಿರುವ ಈ ತಾರಾಲಯದಲ್ಲಿ ಏಕಕಾಲಕ್ಕೆ 160 ಮಂದಿ ಕುಳಿತು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ತಾಂತ್ರಿಕವಾಗಿ ಅತ್ಯುನ್ನತ ದರ್ಜೆಯಲ್ಲಿರುವ ಈ ತಾರಾಲಯದಲ್ಲಿ 6,148 ಎಲ್‌ಇಡಿ ಪ್ಯಾನೆಲ್‌ಗಳನ್ನು ಅಳವಡಿಸಲಾಗಿದ್ದು, 4.27 ಕೋಟಿ ಪಿಕ್ಸೆಲ್‌ಗಳ ಸ್ಪಷ್ಟ ದೃಶ್ಯ ತಂತ್ರಜ್ಞಾನವನ್ನು ಇದು ಒಳಗೊಂಡಿದೆ. ಬ್ರಹ್ಮಾಂಡದ ವಿಸ್ಮಯಗಳನ್ನು ಅತ್ಯಂತ ನೈಜವಾಗಿ ತೋರಿಸಲು ಇಲ್ಲಿ 'ಸ್ಕೈ ಎಕ್ಸ್‌ಪ್ಲೋರ್' ಸಾಫ್ಟ್‌ವೇರ್ ಬಳಸಲಾಗುತ್ತಿದೆ. ಇಲ್ಲಿ ಪ್ರದರ್ಶನಗೊಳ್ಳುವ "ಅವರ್ ಹೋಮ್, ಅವರ್ ಕಾಸ್ಮೋಸ್" ಹೆಸರಿನ 12 ನಿಮಿಷಗಳ ವಿಶೇಷ ಪ್ರದರ್ಶನವನ್ನು ಕನ್ನಡ, ಇಂಗ್ಲಿಷ್‌ ಮತ್ತು ಹಿಂದಿ ಭಾಷೆಗಳಲ್ಲಿ ವೀಕ್ಷಿಸಬಹುದಾಗಿದ್ದು, ಇದು ಮೈಸೂರನ್ನು ಜಾಗತಿಕ ವಿಜ್ಞಾನ ಭೂಪಟದಲ್ಲಿ ಗುರುತಿಸುವಂತೆ ಮಾಡಿದೆ.

ಈ ತಾರಾಲಯವು ಕೇವಲ ಮನರಂಜನೆ ಮತ್ತು ಆಕಾಶ ವೀಕ್ಷಣೆಗೆ ಸೀಮಿತವಾಗದೆ, ವಿಜ್ಙಾನ ಶಿಕ್ಷಣ ಹಾಗೂ ಸಂಶೋಧನೆಯೂ ಮಹತ್ವದ ವೇದಿಕೆಯಾಗಲಿದೆ. ವಿದ್ಯಾರ್ಥಿಗಳು ಮತ್ತು ಯುವ ವಿಜ್ಞಾನಿಗಳಿಗೆ ಖಗೋಳಶಾಸ್ತ್ರದ ಬಗ್ಗೆ ವಿಶೇಷ ತರಬೇತಿ ನೀಡುವ ಉದ್ದೇಶದಿಂದ ಇಲ್ಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಮೋದಿಯ ಮೈಸೂರು ಪ್ರವಾಸದ ವೇಳಾಪಟ್ಟಿ:
ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ 3.25ಕ್ಕೆ ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್‌ ಮೂಲಕ ಮೈಸೂರಿನ ಲಲಿತ್‌ ಮಹಲ್‌ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ. ಬಳಿಕ ಮಧ್ಯಾಹ್ನ 3.30 ರಿಂದ 3.45ರವರೆಗೆ ಕೆ.ಸಿ ಬಡಾವಣೆಯಲ್ಲಿ ನಿರ್ಮಿಸಲಾಗಿರುವ ಭಾರತ್‌ ವನ ಉದ್ಯಾನವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಉದ್ಯಾನವನದ ಉದ್ಘಾಟನೆಯ ನಂತರ  ರಸ್ತೆ ಮಾರ್ಗವಾಗಿ ಪ್ರಯಾಣ ಬೆಳಸಲಿರುವ ಪ್ರಧಾನಿ ರಸ್ತೆ ಮಾರ್ಗವಾಗಿ ಪ್ರಯಾಣ ಬೆಳೆಸಿ ಮಧ್ಯಾಹ್ನ 3.55ಕ್ಕೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಮೈಸೂರು ವಿಶ್ವ ವಿದ್ಯಾನಿಲಯದ ಶ್ರೀ ಜಯಚಾಮರಾಜ ಒಡೆಯರ್ ಸೆಂಟರ್ ಫಾರ್ ಹೈಯರ್ ಲರ್ನಿಂಗ್ ಆವರಣಕ್ಕೆ ಆಗಮಿಸಲಿದ್ದಾರೆ. ಇಲ್ಲಿ ಸಂಜೆ 4 ಗಂಟೆಯಿಂದ 5.45ರವರಗೆ ವಿಶ್ವದ ಮೊದಲ ಟಿಲ್ಟೆಡ್ ಎಲ್ಇಡಿ ಡೋಮ್ ಪ್ಲಾನೆಟೋರಿಯಂ 'ಕಾಸ್ಮೋಸ್'(COSMOS) ಅನ್ನು ಲೋಕಾರ್ಪಣೆಗೊಳಿಸಿ ಬೃಹತ್‌ ವೇದಿಕೆಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮ ಮುಗಿದ ಬಳಿಕ ಸಂಜೆ 5.45ಕ್ಕೆ ರಸ್ತೆ ಮಾರ್ಗವಾಗಿ ಮೈಸೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಸಂಜೆ 6.05ಕ್ಕೆ ವಿಶೇಷ ವಿಮಾನದ ಮೂಲಕ ನವದೆಹಲಿಗೆ ವಾಪಸಾಗಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಮೈಸೂರು - ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಮೋದಿ ಅವರ ಲಲಿತ್‌ ಮಹಲ್‌ ಹೆಲಿಪ್ಯಾಡ್‌ನಿಂದ ಪ್ಲಾನೆಟೋರಿಯಂವರೆಗೆ ರೋಡ್ ಶೋ ನಡೆಸಲಿದ್ದಾರೆ. ನೆಚ್ಚಿನ ನಾಯಕರನ್ನು ಕಣ್ತುಂಬಿಸಿಕೊಳ್ಳಲು ಹೆಲಿಪ್ಯಾಡ್‌ನಿಂದ ತಾರಾಲಯದವರೆಗೂ ರಸ್ತೆಯ ಇಕ್ಕೆಲಗಳಲ್ಲಿ ಸಾರ್ವಜನಿಕರು ನಿಲ್ಲಲು ವಿಶೇಷ ಅವಕಾಶ ಮಾಡಿಕೊಡಲಾಗಿದೆ. ತಾರಾಲಯ ಉದ್ಘಾಟನೆಯ ಬಳಿಕ ನಡೆಯಲಿರುವ ಮುಖ್ಯ ವೇದಿಕೆ ಕಾರ್ಯಕ್ರಮದಲ್ಲಿ ಸುಮಾರು 8 ಸಾವಿರ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಈಗಾಗಲೇ ಜಿಲ್ಲಾಡಳಿದ ವತಿಯಿಂದ ಪಾಸ್‌ಗಳನ್ನು ವಿತರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 
 

Add Zee News as a Preferred Source
TAGS:
Narendra Modi
Kannada News