• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮೈಸೂರು
  • /ಮಳೆ ತಂದ ಅವಾಂತರ:‌ ತಡರಾತ್ರಿ ಸುರಿದ ಭಾರೀ ಮಳೆಗೆ ಸೇತುವೆಗೆ ಹಾನಿ.. ಬೇಗೂರಿನಲ್ಲಿ ನೆಲಕಚ್ಚಿದ ಬಾಳೆ

ಮಳೆ ತಂದ ಅವಾಂತರ:‌ ತಡರಾತ್ರಿ ಸುರಿದ ಭಾರೀ ಮಳೆಗೆ ಸೇತುವೆಗೆ ಹಾನಿ.. ಬೇಗೂರಿನಲ್ಲಿ ನೆಲಕಚ್ಚಿದ ಬಾಳೆ

ಗಡಿಜಿಲ್ಲೆ ಚಾಮರಾಜನಗರದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ಕೆಲವೆಡೆ ಭಾರೀ ಅವಾಂತರವೇ ಸೃಷ್ಟಿ ಆಗಿದೆ.

Written ByYashaswini V
Published: Sep 30, 2026, 10:05 AM IST|Updated: Sep 30, 2026, 10:08 AM IST
joinshare
ಮಳೆ ತಂದ ಅವಾಂತರ:‌ ತಡರಾತ್ರಿ ಸುರಿದ ಭಾರೀ ಮಳೆಗೆ ಸೇತುವೆಗೆ ಹಾನಿ.. ಬೇಗೂರಿನಲ್ಲಿ ನೆಲಕಚ್ಚಿದ ಬಾಳೆ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹಾಗೂ ಗುಂಡ್ಲುಪೇಟೆ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಒಂದೆಡೆ 40 ವರ್ಷದ ಹಳೆಯ ಸೇತುವೆ ಹಾನಿಯಾಗಿದ್ದರೆ, ಮತ್ತೊಂದೆಡೆ ಬೆಳೆ ಹಾನಿಯಿಂದಾಗಿ ರೈತರು ತತ್ತರಿಸಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಮಳೆಯಿಂದ ಏನೆಲ್ಲಾ ಹಾನಿಯಾಗಿದೆ ಎಂಬ ವರದಿ ಇಲ್ಲಿದೆ.

ಕೊಳ್ಳೆಗಾಲ ಟು ಮಲೆ ಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಹಾನಿಗೊಳಗಾದ ಸೇತುವೆ:
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಳೆಯ ಸೇತುವೆಗೆ ಹಾನಿ ಹಾನಿಯಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕೌದಳ್ಳಿ ಬಳಿಯ ಕೊಳ್ಳೇಗಾಲ ದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯೆ ಮಳೆ ಅವಾಂತರ ಸೃಷ್ಟಿಸಿದ್ದು 40 ವರ್ಷದ ಹಳೆಯ ಸೇತುವೆಗೆ ಮಳೆಯಿಂದ ಹಾನಿಗೊಳಗಾಗಿದೆ.

ಮಳೆಯ ರಭಸಕ್ಕೆ ಸೇತುವೆ ಮೇಲೆ ಹಾಕಿದ್ದ ಡಾಂಬಾರು ಕೊಚ್ಚಿ ಹೋಗಿದ್ದು, ಮಳೆಯಿಂದಾಗಿ ತುವೆ ಮೇಲೆ ಬೃಹತ್‌ ಲಾರಿ ಸಿಲುಕಿರುವುದರಿಂದ ಸಂಚಾರ ದಟ್ಟಣೆಗೆ ಕಾರಣವಾಗಿದೆ.

ಹನೂರು ತಾಲೂಕಿನಲ್ಲಿ ಎರಡು ದಶಕಗಳಿಂದ ಕಂಡು ಕೇಳರಿಯದ ಮಳೆ:
ಇನ್ನು ಕಳೆದ 20 ವರ್ಷಗಳಲ್ಲೆ ಕಂಡು ಕೇಳರಿಯದ ಮಳೆ ಕಂಡು ಹನೂರು ತಾಲೂಕಿನ ಜನತೆ  ಬೆಚ್ಚಿ ಬಿದ್ದಿದ್ದಾರೆ.

ಮಳೆ ತಂದ ಅವಾಂತರ:‌ ಬೇಗೂರಿನಲ್ಲಿ ನೆಲಕಚ್ಚಿದ ಬಾಳೆ
ಇನ್ನು ಬಿಸಿಲಿನಿಂದ ತತ್ತರಿಸಿದ್ದ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ವರುಣ ಆರ್ಭಟಿಸಿದ್ದು ಬಹುತೇಕ ಕಡೆ ಜೋರು ಮಳೆಯಾಗಿದೆ‌. ಜೊತೆಗೆ, ಬಿರುಗಾಳಿಯಿಂದ ಬಾಳೆ ನೆಲಕಚ್ಚಿ ರೈತರಿಗೆ ನಷ್ಟ ಉಂಟು ಮಾಡಿದೆ‌.

ಬಿರುಗಾಳಿ ಸಹಿತ ಭಾರೀ ಮಳೆಗೆ ಬಾಳೆ ಬೆಳೆ ಸಂಪೂರ್ಣ ಹಾನಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದ್ದು ಶ್ರೀನಿವಾಸ ಎಂಬವರಿಗೆ ಸೇರಿದ ಒಂದೂವರೆ ಎಕರೆ ಬಾಳೆ ಸಂಪೂರ್ಣ ನೆಲಕಚ್ಚಿದೆ‌.

ಸಾಲ ಮಾಡಿ ಬಾಳೆ ಫಸಲು ಬೆಳೆದಿದ್ದೆವು. ಇನ್ನೇನು ಬೆಳೆ ಕೈಗೆ ಬರಬೇಕಿತ್ತು. ಅಷ್ಟರಲ್ಲೇ ಪ್ರಕೃತಿ ಮುನಿದು ಎಲ್ಲವನ್ನೂ ಮಣ್ಣುಪಾಲು ಮಾಡಿದೆ, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಮಳೆ ಅವಾಂತರದ ಬಗ್ಗೆ ಮಾಧ್ಯಮಗಳೊಂದಿಗೆ ತಮ್ಮ ಅಳಲು ತೋಡಿಕೊಂಡಿರುವ ರೈತ ಶ್ರೀನಿವಾಸ್‌, ಈ ಬಾರಿ ಬಾಳೆ ಫಸಲು ಉತ್ತಮವಾಗಿತ್ತು. ಹೀಗಾಗಿ, ಈ ಫಸಲಿನಲ್ಲಿ ಸುಮಾರು 4 ಲಕ್ಷ ರೂ.ಗಳಷ್ಟು ಆದಾಯ ನಿರೀಕ್ಷೆ ಮಾಡಿದ್ದೆ. ಆದರೆ, ಮಳೆಯಿಂದಾಗಿ ಬೆಳೆ ನೆಲಕಚ್ಚಿರುವುದರಿಂದ ಏನು ಮಾಡಬೇಕೆಂಬುದೇ ಅರಿಯದಂತಾಗಿದೆ ಎಂದಿದ್ದಾರೆ.

ಒಟ್ಟಾರೆಯಾಗಿ ಮೊದಲು ಮುಂಗಾರಿನ ವೇಳೆ ಸರಿಯಾಗಿ ಮಳೆ ಬಾರದೆ ಬಿತ್ತನೆ ನೆಲಕಚ್ಚಿತ್ತು. ಇದೀಗ, ಹಿಂಗಾರು ಅಬ್ಬರ ಜೋರಾಗಿ ರೈತರಿಗೆ ಕೈಗೆ ಬಂದ ಬೆಳೆ ಬಾಯಿಗೆ ಬರದಂತಾಗಿರುವುದು ಮಾತ್ರ ನಿಜಕ್ಕೂ ವಿಪರ್ಯಾಸವೇ ಸರಿ. 
 

Add Zee News as a Preferred Source
TAGS:
Weather Update
Kannada News