SOCIAL MEDIA

Newsletter

PARTNER SITES
Select Language Select State

ಶ್ರೀರಂಗಪಟ್ಟಣ ದಸರಾ; ಇಂದು ಧನಂಜಯನ ಹೆಗಲೇರಲಿದೆ ಅಂಬಾರಿ

ಇಂದು ನಡೆಯಲಿರುವ ಜಂಬೂಸವಾರಿ ಮೆರವಣಿಗೆಯಲ್ಲಿ ಧನಂಜಯ ಆನೆ ಅಂಬಾರಿ ಹೊತ್ತು ಸಾಗಲಿದೆ.

Written By Chetana Devarmani
Published: Oct 15, 2026, 07:30 AM IST | Updated: Oct 15, 2026, 07:31 AM IST
Join

ಮಂಡ್ಯ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದೆ. ಇಂದು ಮಧ್ಯಾಹ್ನ ನಡೆಯಲಿರುವ ಜಂಬೂಸವಾರಿ ಮೆರವಣಿಗೆಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿರುವ ಆನೆಗಳು ಸಹ ಸಿದ್ಧವಾಗಿವೆ. ನಿನ್ನೆ ಧನಂಜಯ, ರೂಪ ಹಾಗೂ ಲಕ್ಷ್ಮಿ ಆನೆಗಳು ಶ್ರೀರಂಗಪಟ್ಟಣಕ್ಕೆ ಬಂದಿಳಿಯುತ್ತಿದ್ದಂತೆ ಅವುಗಳನ್ನು ನೋಡಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದರು.

ಶ್ರೀರಂಗಪಟ್ಟಣದ ರಂಗನಾಥ ದೇವಾಲಯದ ಆವರಣದಲ್ಲಿ ಆನೆಗಳಿಗೆ ಸಾಂಪ್ರದಾಯಿಕವಾಗಿ ಸ್ವಾಗತ ಕೋರಲಾಯಿತು. ಬಳಿಕ ದೇವಾಲಯದಲ್ಲಿ ಪೂಜೆ ಸಲ್ಲಿಸಿ ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಯಿತು. ಆನೆಗಳ ಆಗಮನದಿಂದ ಪಟ್ಟಣದಲ್ಲಿ ದಸರಾ ಹಬ್ಬದ ವಾತಾವರಣ ಮತ್ತಷ್ಟು ಕಳೆಗಟ್ಟಿದ್ದು, ಸ್ಥಳೀಯರು ಹಾಗೂ ಪ್ರವಾಸಿಗರಲ್ಲಿ ಉತ್ಸಾಹ ಮನೆಮಾಡಿದೆ.

ಧನಂಜಯನ ಹೆಗಲೇರಲಿದೆ ಅಂಬಾರಿ:

ಇಂದು ನಡೆಯಲಿರುವ ಜಂಬೂಸವಾರಿ ಮೆರವಣಿಗೆಯಲ್ಲಿ ಧನಂಜಯ ಆನೆ ಅಂಬಾರಿ ಹೊತ್ತು ಸಾಗಲಿದೆ. ಧನಂಜಯನಿಗೆ ರೂಪ ಹಾಗೂ ಲಕ್ಷ್ಮಿ ಆನೆಗಳು ಸಾಥ್ ನೀಡಲಿವೆ. ದಸರಾ ಮೆರವಣಿಗೆಯಲ್ಲಿ ಸಾಂಪ್ರದಾಯಿಕ ವೈಭವ ಮತ್ತು ಉತ್ಸವದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಜನರು ಕಾತರರಾಗಿದ್ದಾರೆ.

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಜಂಬೂಸವಾರಿ ಮೆರವಣಿಗೆಯೂ ಒಂದಾಗಿದೆ. ಅಲಂಕೃತ ಆನೆಗಳೊಂದಿಗೆ ನಡೆಯುವ ಈ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ಪ್ರತಿ ವರ್ಷ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಈ ಬಾರಿಯೂ ಮೆರವಣಿಗೆಯನ್ನು ಯಶಸ್ವಿಯಾಗಿ ನಡೆಸಲು ಸಿದ್ಧತೆಗಳು ನಡೆಯುತ್ತಿವೆ.

ನಟ ವಿ.ರವಿಚಂದ್ರನ್‌ ಅವರಿಂದ ಚಾಲನೆ:

ಅಕ್ಟೋಬರ್ 15 ರಿಂದ ಅಕ್ಟೋಬರ್ 18 ರವರೆಗೆ ಅದ್ಧೂರಿಯಾಗಿ ನಡೆಯಲಿದೆ. ಖ್ಯಾತ ನಟ ವಿ. ರವಿಚಂದ್ರನ್ ಅವರು ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನಂದಿ ಧ್ವಜದ ಪೂಜೆ ನಡೆಯಲಿದೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಜಂಬೂ ಸವಾರಿ ಮೆರವಣಿಗೆಗೆ ನಟ ರವಿಚಂದ್ರನ್‌ ಚಾಲನೆ ನೀಡಲಿದ್ದಾರೆ. ಜಂಬೂ  ಸವಾರಿ ಜೊತೆ 50 ಕ್ಕೂ ಹೆಚ್ಚು ಜಾನಪದ ಕಲಾ ತಂಡಗಳು ಮತ್ತು 30 ಸ್ತಬ್ಧ ಚಿತ್ರಗಳು ಸಾಗಲಿವೆ.  

ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಶ್ರೀರಂಗಪಟ್ಟಣದ ಪ್ರಮುಖ ಬೀದಿಗಳು, ವೃತ್ತಗಳು ಮತ್ತು ಮರಗಳಿಗೆ ಸೆಸ್ಕ್ (CESC) ವತಿಯಿಂದ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಸಾವಿರಾರು ದೀಪಗಳಿಂದ ಶ್ರೀರಂಗಪಟ್ಟಣ ಕ ಗೊಳಿಸುತ್ತಿದೆ. ಅಕ್ಟೋಬರ್ 21 ರವರೆಗೆ ದೀಪಗಳ ಅಲಂಕಾರ ಇರಲಿದೆ.

ಐತಿಹಾಸಿಕ ಶ್ರೀರಂಗಪಟ್ಟಣದ ದಸರಾ ವೈಭವವನ್ನು ಕಣ್ತುಂಬಿಕೊಳ್ಳಲು ಸಾರ್ವಜನಿಕರು ಎದುರು ನೋಡುತ್ತಿದ್ದಾರೆ. ಆನೆಗಳ ಸಾಂಪ್ರದಾಯಿಕ ಸ್ವಾಗತದೊಂದಿಗೆ ಆರಂಭವಾಗಿರುವ ಸಂಭ್ರಮ, ನಾಳಿನ ಜಂಬೂಸವಾರಿ ಮೆರವಣಿಗೆಯೊಂದಿಗೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES