• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮೈಸೂರು
  • /ಸ್ಟಿಂಗ್ ಆಪರೇಷನ್ ಕಾಂಗ್ರೆಸ್‌ನವರದ್ದೇ ಆಟ! ಸಿದ್ದರಾಮಯ್ಯರ ಚಾರಿತ್ರ್ಯವಧೆ ನಿಲ್ಲಿಸಿ ಎಂದ ಪ್ರತಾಪ್ ಸಿಂಹ

ಸ್ಟಿಂಗ್ ಆಪರೇಷನ್ ಕಾಂಗ್ರೆಸ್‌ನವರದ್ದೇ ಆಟ! ಸಿದ್ದರಾಮಯ್ಯರ ಚಾರಿತ್ರ್ಯವಧೆ ನಿಲ್ಲಿಸಿ ಎಂದ ಪ್ರತಾಪ್ ಸಿಂಹ

ಸ್ಟಿಂಗ್ ಆಪರೇಷನ್ ವಿವಾದ ಕಾಂಗ್ರೆಸ್‌ನ ಆಂತರಿಕ ರಾಜಕೀಯದ ಭಾಗವಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯರ ಚಾರಿತ್ರ್ಯವಧೆ ನಿಲ್ಲಿಸಬೇಕು ಎಂದು ಒತ್ತಾಯಿಸಿರುವ ಅವರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಪ್ರಕರಣದ ಸೂಕ್ತ ತನಿಖೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ರೈತರ ಸಮಸ್ಯೆಗಳನ್ನ ಬಿಟ್ಟು ಸ್ಟಿಂಗ್ ವಿವಾದವನ್ನೇ ಚರ್ಚಿಸುತ್ತಿರುವುದಕ್ಕೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Written ByPuttaraj K Alur
Published: Oct 17, 2026, 03:57 PM IST|Updated: Oct 17, 2026, 04:10 PM IST
joinshare
ಸ್ಟಿಂಗ್ ಆಪರೇಷನ್ ಕಾಂಗ್ರೆಸ್‌ನವರದ್ದೇ ಆಟ! ಸಿದ್ದರಾಮಯ್ಯರ ಚಾರಿತ್ರ್ಯವಧೆ ನಿಲ್ಲಿಸಿ ಎಂದ ಪ್ರತಾಪ್ ಸಿಂಹ
Image Credit: Pratap Simha

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಬೆಡ್‌ ರೂಮ್‌ನಲ್ಲಿ ನಡೆದ ಆ ಘಟನೆ ಬಗ್ಗೆ ಬಿಚ್ಚಿಟ್ಟ ನಟ ಸಲ್ಮಾನ್‌ ಖಾನ್‌

ಬೆಡ್‌ ರೂಮ್‌ನಲ್ಲಿ ನಡೆದ ಆ ಘಟನೆ ಬಗ್ಗೆ ಬಿಚ್ಚಿಟ್ಟ ನಟ ಸಲ್ಮಾನ್‌ ಖಾನ್‌

2

ಸ್ಟಿಂಗ್ ಆಪರೇಷನ್ ಹಿಂದೆ ಕಾಂಗ್ರೆಸ್‌ನ ಧುರೀಣರೇ ಇದ್ದಾರೆ : ಶಾಸಕ ಚನ್ನಬಸಪ್ಪ ಗಂಭೀರ ಆರೋಪ

3

ಸ್ಟಿಂಗ್ ಆಪರೇಷನ್ ಕಾಂಗ್ರೆಸ್‌ನವರದ್ದೇ ಆಟ! ಸಿದ್ದರಾಮಯ್ಯರ ಚಾರಿತ್ರ್ಯವಧೆ ನಿಲ್ಲಿಸಿ ಎಂದ ಪ್ರತಾಪ್ ಸಿಂಹ

4

ಅನಿರುದ್ಧ್–ಕಾವ್ಯಾ ಮಾರನ್ ಮದುವೆ ಸುದ್ದಿ ವೈರಲ್‌! ಇಬ್ಬರ ವಯಸ್ಸಿನ ಅಂತರ ಎಷ್ಟು?

5

ಸ್ಟಿಂಗ್ ಆಪರೇಷನ್ ವಿಚಾರವನ್ನು ಪ್ರತಿದಿನ ಚರ್ಚಿಸುವುದು ಬೇಡ: ಕಾಂಗ್ರೆಸ್ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Sting Operation Row: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ವಿವಾದದ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯರನ್ನ ಗುರಿಯಾಗಿಸಿಕೊಂಡು ಪ್ರತಿದಿನ ಆರೋಪ-ಪ್ರತ್ಯಾರೋಪ ಮಾಡುವುದು ಸರಿಯಲ್ಲವೆಂದು ಹೇಳಿರುವ ಅವರು, ಈ ಪ್ರಕರಣವನ್ನ ಕಾಂಗ್ರೆಸ್‌ನ ಆಂತರಿಕ ರಾಜಕೀಯ ಬೆಳವಣಿಗೆಗಳೊಂದಿಗೆ ತಳುಕು ಹಾಕಿದ್ದಾರೆ. ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಸಿದ್ದರಾಮಯ್ಯರ ಚಾರಿತ್ರ್ಯವಧೆ ಮಾಡುವುದನ್ನ ನಿಲ್ಲಿಸಬೇಕು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಸ್ಟಿಂಗ್ ಆಪರೇಷನ್ ವಿಚಾರ ರಾಜ್ಯದ ಪ್ರಮುಖ ರಾಜಕೀಯ ಚರ್ಚೆಯಾಗಿ ಮಾರ್ಪಟ್ಟಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ರೈತರ ಸಮಸ್ಯೆ, ಬೆಳೆ ನಷ್ಟ, ಪರಿಹಾರ ಸೇರಿದಂತೆ ಹಲವು ಗಂಭೀರ ಸಮಸ್ಯೆಗಳಿದ್ದರೂ ಅವುಗಳ ಬಗ್ಗೆ ಚರ್ಚೆಯಾಗುತ್ತಿಲ್ಲ ಎಂದು ಟೀಕಿಸಿದರು.

‘ಸಿದ್ದರಾಮಯ್ಯ ಅವರ ಚಾರಿತ್ರ್ಯವಧೆ ಮಾಡಬೇಡಿ’

ಸ್ಟಿಂಗ್ ಆಪರೇಷನ್ ವಿಚಾರವಾಗಿ ಸಿದ್ದರಾಮಯ್ಯನವರು ಈಗಾಗಲೇ ದೂರು ನೀಡಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತನಿಖೆಗೆ ಆಗ್ರಹಿಸಿದ್ದಾರೆ. ಸರ್ಕಾರವೂ ಪ್ರಕರಣದ ಕುರಿತು ತನಿಖೆ ನಡೆಸುತ್ತಿದೆ. ಹೀಗಿರುವಾಗ ಪ್ರತಿದಿನ ಇದೇ ವಿಷಯವನ್ನ ಚರ್ಚಿಸುವ ಅಗತ್ಯವೇನಿದೆ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದರು. ಸಿದ್ದರಾಮಯ್ಯರ ರಾಜಕೀಯ ವಿರೋಧಿಗಳು ಸ್ಟಿಂಗ್ ಆಪರೇಷನ್ ವಿಚಾರವನ್ನ ಮುಂದಿಟ್ಟುಕೊಂಡು ಪ್ರತಿದಿನ ಅವರ ಚಾರಿತ್ರ್ಯವಧೆ ಮಾಡುವುದು ಬೇಡ. ನಿರಂತರ ಚರ್ಚೆಯ ಮೂಲಕ ಮುಜುಗರ ಉಂಟುಮಾಡಬಾರದು ಎಂದು ಹೇಳಿದರು. ರಾಜ್ಯದ ಜನರಿಗೆ ಸಂಬಂಧಿಸಿದ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕೇ ಹೊರತು, ರಾಜಕೀಯ ಆರೋಪ-ಪ್ರತ್ಯಾರೋಪಗಳೇ ಪ್ರಮುಖ ವಿಷಯವಾಗಬಾರದು ಎಂದು ಅಭಿಪ್ರಾಯಪಟ್ಟರು.

‘ಕೆಪಿಸಿಸಿ ಅಂದರೆ ಕರ್ನಾಟಕ ಪ್ರದೇಶ ಸಿಡಿ ಕಮಿಟಿ!’

ಸ್ಟಿಂಗ್ ಆಪರೇಷನ್ ವಿವಾದದ ಕುರಿತು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ ಪ್ರತಾಪ್ ಸಿಂಹ, ಕಾಂಗ್ರೆಸ್‌ನವರೇ ಇಂತಹ ಪ್ರಕರಣಗಳಲ್ಲಿ ಪರಿಣತರು ಎಂದು ಆರೋಪಿಸಿದರು. ‘ಕೆಪಿಸಿಸಿ ಅಂದರೆ ಕರ್ನಾಟಕ ಪ್ರದೇಶ ಸಿಡಿ ಕಮಿಟಿ ಎಂಬುದು ಎಲ್ಲರಿಗೂ ಗೊತ್ತು’ ಎಂದು ವ್ಯಂಗ್ಯವಾಡಿದ ಅವರು, ಸ್ಟಿಂಗ್ ಆಪರೇಷನ್ ವಿವಾದ ಕಾಂಗ್ರೆಸ್‌ನ ಆಂತರಿಕ ರಾಜಕೀಯದ ಭಾಗವಾಗಿದೆ ಎಂದು ಆರೋಪಿಸಿದರು. ಇದು ಕಾಂಗ್ರೆಸ್ ಒಳಗಿನವರದ್ದೇ ಆಟ ಎಂದು ಹೇಳಿದ ಪ್ರತಾಪ್ ಸಿಂಹ, ಈ ವಿಷಯವನ್ನ ಪ್ರತಿದಿನ ಸಾರ್ವಜನಿಕ ಚರ್ಚೆಯ ಕೇಂದ್ರವನ್ನಾಗಿ ಮಾಡುತ್ತಿರುವುದೇಕೆ ಎಂದು ಪ್ರಶ್ನಿಸಿದರು.  

ಡಿಕೆ ಶಿವಕುಮಾರ್ ವಿರುದ್ಧವೂ ವಾಗ್ದಾಳಿ

ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧವೂ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯರಿಗೆ ಸಂಬಂಧಿಸಿದ ಸ್ಟಿಂಗ್ ಆಪರೇಷನ್ ಪ್ರಕರಣವನ್ನ ಡಿ.ಕೆ.ಶಿವಕುಮಾರ್ ಗಂಭೀರವಾಗಿ ಪರಿಗಣಿಸಬೇಕು. ಸರಿಯಾದ ತನಿಖೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು. ‘ಡಿ.ಕೆ.ಶಿವಕುಮಾರ್ ವೇದಾಂತಿಯಂತೆ ಮಾತನಾಡುವುದನ್ನ ಮಾತ್ರ ಕಲಿತಿದ್ದಾರೆ’ ಎಂದು ಟೀಕಿಸಿದ ಅವರು, ಕೇವಲ ಹೇಳಿಕೆಗಳನ್ನ ನೀಡುವ ಬದಲು ಪ್ರಕರಣದ ಸತ್ಯಾಸತ್ಯತೆ ಹೊರಬರುವಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

‘ರೈತರ ಬೆಳೆ ನಷ್ಟದ ಪರಿಹಾರ ಬೀಡಿ ಕಾಸಿಗೂ ಸಾಲುತ್ತಿಲ್ಲ’

ಸ್ಟಿಂಗ್ ಆಪರೇಷನ್ ವಿವಾದದ ನಡುವೆಯೇ ರಾಜ್ಯ ಸರ್ಕಾರದ ವಿರುದ್ಧ ರೈತರ ಸಮಸ್ಯೆಗಳ ವಿಚಾರದಲ್ಲಿಯೂ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದರು. ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಪರಿಹಾರ ಅತ್ಯಂತ ಕಡಿಮೆಯಾಗಿದೆ. ಅದು ಬೀಡಿ ಕಾಸಿಗೂ ಸಾಲುತ್ತಿಲ್ಲ ಎಂದು ಟೀಕಿಸಿದರು. ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಜನಸಾಮಾನ್ಯರ ಸಂಕಷ್ಟಗಳ ಕುರಿತು ಗಂಭೀರ ಚರ್ಚೆ ನಡೆಯಬೇಕಿದೆ. ಆದರೆ ರಾಜಕೀಯ ವಿವಾದಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಾಲಕಿ ಅ*ತ್ಯಾಚಾರ, ಕೊ*ಲೆ ಪ್ರಕರಣದ ತೀರ್ಪಿಗೆ ಸ್ವಾಗತ

ಇದೇ ಸಂದರ್ಭದಲ್ಲಿ ಮೈಸೂರಿನ ಅಪ್ರಾಪ್ತ ಬಾಲಕಿ ಅ*ತ್ಯಾಚಾರ ಮತ್ತು ಕೊ*ಲೆ ಪ್ರಕರಣದಲ್ಲಿ ಅಪರಾಧಿಗೆ ಗಲ್ಲು ಶಿಕ್ಷೆ ಪ್ರಕಟವಾಗಿರುವ ವಿಚಾರಕ್ಕೂ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದರು. ಈ ಪ್ರಕರಣ ಮೈಸೂರಿನ ಜನತೆಗೆ ತೀವ್ರ ನೋವುಂಟುಮಾಡಿತ್ತು. ಘಟನೆಯಿಂದ ಮೈಸೂರು ಎಲ್ಲರ ಮುಂದೆ ತಲೆತಗ್ಗಿಸುವಂತಾಗಿತ್ತು ಎಂದು ಹೇಳಿದರು. ಪ್ರಕರಣದ ತನಿಖೆಯಲ್ಲಿ ಕಾರ್ಯನಿರ್ವಹಿಸಿದ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಹಾಗೂ ಇನ್‌ಸ್ಪೆಕ್ಟರ್ ಮಹದೇವಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದರು. ತೀರ್ಪು ನೀಡಿದ ನ್ಯಾಯಾಧೀಶರಿಗೆ ಮೈಸೂರಿನ ಜನತೆಯ ಪರವಾಗಿ ಧನ್ಯವಾದ ತಿಳಿಸಿದರು.

ಒಟ್ನಲ್ಲಿ ಸ್ಟಿಂಗ್ ಆಪರೇಷನ್ ವಿವಾದವನ್ನ ಅನಗತ್ಯವಾಗಿ ರಾಜಕೀಯಗೊಳಿಸಬಾರದು ಎಂದು ಪ್ರತಾಪ್ ಸಿಂಹ ಹೇಳಿದ್ದು, ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂಬ ನಿಲುವು ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್‌ನ ಆಂತರಿಕ ರಾಜಕೀಯದ ಕುರಿತು ಅವರು ಮಾಡಿರುವ ಆರೋಪಗಳು ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆಯಿದೆ.

Add Zee News as a Preferred Source
TAGS:
Karnataka Politics
Kannada News