• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮೈಸೂರು
  • /ಕುಮಾರಸ್ವಾಮಿ-ಸಿದ್ದರಾಮಯ್ಯ ಭೇಟಿ ಮಾಡಿದರೆ ತಪ್ಪೇನು? ಸ್ಟಿಂಗ್ ಆಪರೇಷನ್ ಹಿಂದೆ ಯಾರಿದ್ದಾರೆಂದ ಸುರೇಶ್ ಗೌಡ

ಕುಮಾರಸ್ವಾಮಿ-ಸಿದ್ದರಾಮಯ್ಯ ಭೇಟಿ ಮಾಡಿದರೆ ತಪ್ಪೇನು? ಸ್ಟಿಂಗ್ ಆಪರೇಷನ್ ಹಿಂದೆ ಯಾರಿದ್ದಾರೆಂದ ಸುರೇಶ್ ಗೌಡ

ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಭೇಟಿಯಾಗುವ ವಿಚಾರದ ಬಗ್ಗೆ ಮಾಜಿ ಶಾಸಕ ಸುರೇಶ್ ಗೌಡ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ತಮ್ಮ ಪಕ್ಷದಲ್ಲಿದ್ದ ಹಿರಿಯ ನಾಯಕರು. ಹೀಗಿರುವಾಗ ಕುಮಾರಸ್ವಾಮಿ ಅವರನ್ನ ಭೇಟಿಯಾದರೆ ತಪ್ಪೇನು ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಅಧಿಕಾರವನ್ನ ಬಿಟ್ಟುಕೊಟ್ಟ ವಿಚಾರದಲ್ಲಿಯೂ ಅನುಮಾನಗಳು ಮೂಡಿವೆ ಎಂದು ಅವರು ಹೇಳಿದರು. ಸಾರ್ವಜನಿಕರು ಸತ್ಯವನ್ನ ತಿಳಿದುಕೊಳ್ಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ ಸುರೇಶ್ ಗೌಡ, ರಾಜಕೀಯ ಬೆಳವಣಿಗೆಗಳ ಕುರಿತು ಸ್ಪಷ್ಟ ಮಾಹಿತಿ ಹೊರಬರಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದರು.

Written ByPuttaraj K Alur
Published: Oct 27, 2026, 03:48 PM IST|Updated: Oct 27, 2026, 04:28 PM IST
joinshare
ಕುಮಾರಸ್ವಾಮಿ-ಸಿದ್ದರಾಮಯ್ಯ ಭೇಟಿ ಮಾಡಿದರೆ ತಪ್ಪೇನು? ಸ್ಟಿಂಗ್ ಆಪರೇಷನ್ ಹಿಂದೆ ಯಾರಿದ್ದಾರೆಂದ ಸುರೇಶ್ ಗೌಡ
Image Credit: HD Kumaraswamy

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ರೈತರಿಗೆ ಶುಭ ಸುದ್ದಿ.. ಇಂದು ಬ್ಯಾಂಕ್ ಖಾತೆಗಳಿಗೆ 2 ಸಾವಿರ ಜಮಾ PM Kisan ಹಣದ ಕುರಿತು ಪ್ರಮುಖ ಘೋಷಣೆ!

ರೈತರಿಗೆ ಶುಭ ಸುದ್ದಿ.. ಇಂದು ಬ್ಯಾಂಕ್ ಖಾತೆಗಳಿಗೆ 2 ಸಾವಿರ ಜಮಾ PM Kisan ಹಣದ ಕುರಿತು ಪ್ರಮುಖ ಘೋಷಣೆ!

2

ಬೆಂಗಳೂರು ಸ್ಫೋಟ ಪ್ರಕರಣಕ್ಕೆ ಮಸ್ಕಿ ನಂಟು? ಅಸ್ಸಾಂ ಮೂಲದ ಯುವಕನಿದ್ದ ಸ್ಥಳಗಳಲ್ಲಿ ಪೊಲೀಸರಿಂದ ಪಂಚನಾಮೆ

3

ಮುನಿಯಪ್ಪ ಮನೆಗೆ ಹೋದರೆ ಒಂದು ಲೋಟ ನೀರು ಕೊಡಲ್ಲ: ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ!

4

‘ದೇವೇಗೌಡರ ಕುಟುಂಬ ಮುಗಿಸಲು ₹600 ಕೋಟಿ ಡೀಲ್ ಕೊಡಲು ನಮಗೆ ತಿಕ್ಕಲು ಹಿಡಿದಿದೆಯಾ?’: ಕುಮಾರಸ್ವಾಮಿ ವಿರುದ್ಧ ಚಲುವರಾಯಸ್ವಾಮಿ ವಾಗ್ದಾಳಿ

5

ರ‍್ಯಾಪರ್ ಚಂದನ್ ಶೆಟ್ಟಿಯ ‘ಮೈಮಾಟ’ ಹಾಡಲ್ಲಿ ಬ್ರೇಕಪ್ ನೋವು.. ಇದು ಅವರ ರಿಯಲ್ ಲೈಫ್ ಕಥೆನಾ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Sting Operation Row: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾದರೆ ತಪ್ಪೇನು ಎಂದು ಪ್ರಶ್ನಿಸಿರುವ ಮಾಜಿ ಶಾಸಕ ಸುರೇಶ್ ಗೌಡ, ರಾಜ್ಯ ಸರ್ಕಾರದ ವಿರುದ್ಧ ಹಲವು ಗಂಭೀರ ಆರೋಪಗಳನ್ನ ಮಾಡಿದ್ದಾರೆ. ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳಿಂದ ಕ್ಲಿಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿರುವ ಅವರು, ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಸಮಗ್ರ ತನಿಖೆಯಾಗಬೇಕು ಮತ್ತು ಸತ್ಯ ಹೊರಬರಬೇಕು ಎಂದು ಒತ್ತಾಯಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿರುವ ಸುರೇಶ್ ಗೌಡ, ಸ್ಟಿಂಗ್ ಆಪರೇಷನ್ ವಿಚಾರ, ಸರ್ಕಾರದ ಕಾರ್ಯವೈಖರಿ, ಎಸ್‌ಐಟಿ ತನಿಖೆ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಅವರ ಹೇಳಿಕೆಗಳ ಕುರಿತು ತಮ್ಮ ಅಭಿಪ್ರಾಯಗಳನ್ನ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ವಿರುದ್ಧ ಸ್ಟಿಂಗ್ ಆಪರೇಷನ್ ಆರೋಪ

ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ ಸುರೇಶ್ ಗೌಡ, ಸರ್ಕಾರದ ತಪ್ಪುಗಳನ್ನ ಮುಚ್ಚಿಹಾಕಲು ಸ್ಟಿಂಗ್ ಆಪರೇಷನ್ ವಿಚಾರವನ್ನ ವಿರೋಧ ಪಕ್ಷದತ್ತ ತಿರುಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಸಂತ್ರಸ್ತರು ದೂರು ನೀಡಿದ್ದು, ಸಂಬಂಧಪಟ್ಟವರ ಬಗ್ಗೆ ಮಾಹಿತಿಯನ್ನೂ ನೀಡಿದ್ದಾರೆಂದು ಅವರು ಹೇಳಿದ್ದಾರೆ. ವಿರೋಧ ಪಕ್ಷದ ಜವಾಬ್ದಾರಿಯುತ ನಾಯಕರಾಗಿ ಕುಮಾರಸ್ವಾಮಿ ಈ ವಿಚಾರದಲ್ಲಿ ಧ್ವನಿ ಎತ್ತಿದ್ದಾರೆ. ಸತ್ಯ ಏನೆಂಬುದು ಜನರಿಗೆ ತಿಳಿಯಬೇಕು ಎಂಬುದೇ ನಮ್ಮ ಉದ್ದೇಶವೆಂದು ಸ್ಪಷ್ಟಪಡಿಸಿದರು. ಸ್ಟಿಂಗ್ ಆಪರೇಷನ್ ನಿಜವಾಗಿಯೂ ನಡೆದಿದೆಯೇ? ಅದರ ಹಿಂದೆ ಯಾರಿದ್ದಾರೆ? ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕೆಂದು ಸುರೇಶ್ ಗೌಡ ಆಗ್ರಹಿಸಿದರು. ಈ ಪ್ರಕರಣದ ಕುರಿತು ತನಿಖೆ ನಡೆಯಬೇಕು ಮತ್ತು ವಾಸ್ತವಾಂಶಗಳು ಬಹಿರಂಗವಾಗಬೇಕು ಅಂತಾ ಒತ್ತಾಯಿಸಿದರು.

ಎಸ್‌ಐಟಿ ತನಿಖೆ ಬಗ್ಗೆ ಅಸಮಾಧಾನ

ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಸುರೇಶ್ ಗೌಡ, ಎಸ್‌ಐಟಿ ತನಿಖೆಗಳು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲವೆಂದು ಆರೋಪಿಸಿದರು. ತನಿಖೆಯನ್ನ ಹಳ್ಳ ಹಿಡಿಸಲಾಗಿದೆ ಎಂಬ ಆಕ್ಷೇಪವನ್ನೂ ಅವರು ವ್ಯಕ್ತಪಡಿಸಿದರು. ಭವಿಷ್ಯದಲ್ಲಿ ತಮ್ಮ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದರೆ, ಈ ಪ್ರಕರಣಗಳಿಗೆ ಸಂಬಂಧಿಸಿದ ತನಿಖೆಗಳನ್ನ ಮರುತೆರೆಯಲಾಗುವುದು ಎಂದು ಹೇಳಿದರು. ಗೃಹ ಸಚಿವರು ತಮ್ಮ ಜವಾಬ್ದಾರಿಯನ್ನ ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ ಮತ್ತು ಸರಿಯಾದ ರೀತಿಯಲ್ಲಿ ತನಿಖೆ ನಡೆಯುತ್ತಿಲ್ಲವೆಂಬುದು ಅವರ ಆರೋಪವಾಗಿತ್ತು. ಸರ್ಕಾರದ ತಪ್ಪುಗಳು, ಅಕ್ರಮಗಳು ಮತ್ತು ಅನಾಚಾರಗಳನ್ನ ಜನರ ಮುಂದೆ ತರುವುದು ವಿರೋಧ ಪಕ್ಷದ ಕರ್ತವ್ಯವೆಂದು ಸುರೇಶ್ ಗೌಡ ತಿಳಿಸಿದರು.

ಕುಮಾರಸ್ವಾಮಿ ವಿರುದ್ಧ ಮಾತನಾಡುತ್ತಿರುವ ಸಚಿವರ ಬಗ್ಗೆ ಪ್ರಶ್ನೆ

ಜೆಡಿಎಸ್‌ನಿಂದ ಹೊರಹೋಗಿರುವ ಕೆಲವು ಸಚಿವರು ಈಗ ಕುಮಾರಸ್ವಾಮಿ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಸುರೇಶ್ ಗೌಡ ಹೇಳಿದರು. ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ನಾಲ್ಕೈದು ಸಚಿವರ ಪಾತ್ರವಿದೆಯೇ ಎಂಬ ಪ್ರಶ್ನೆಯನ್ನೂ ಅವರು ಮುಂದಿಟ್ಟರು. ಈ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪೂರ್ಣ ಮೌನ ವಹಿಸಿದ್ದಾರೆಂದು ಟೀಕಿಸಿದ ಅವರು, ಪ್ರಕರಣದ ಬಗ್ಗೆ ಸ್ಪಷ್ಟತೆ ಬರಬೇಕಿದೆ ಎಂದು ಅಭಿಪ್ರಾಯಪಟ್ಟರು. ಸಚಿವ ಚಲುವರಾಯಸ್ವಾಮಿ ಅವರು ಕುಮಾರಸ್ವಾಮಿ ಕುರಿತು ಮಾತನಾಡುತ್ತಿರುವುದನ್ನೂ ಉಲ್ಲೇಖಿಸಿದ ಸುರೇಶ್ ಗೌಡ, ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕೆಂಬುದು ತಮ್ಮ ನಿಲುವು ಎಂದು ಹೇಳಿದರು.

ಚಲುವರಾಯಸ್ವಾಮಿ ವಿರುದ್ಧ ರೈತರ ವಿಚಾರ ಮುಂದಿಟ್ಟು ಟೀಕೆ

ಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧವೂ ಸುರೇಶ್ ಗೌಡ ವಾಗ್ದಾಳಿ ನಡೆಸಿದರು. ರೈತರ ಬಗ್ಗೆ ಈಗ ಕಾಳಜಿ ವ್ಯಕ್ತಪಡಿಸುತ್ತಿರುವ ಸಚಿವರು, ಕೃಷಿ ಸಚಿವರಾಗಿ ತಮ್ಮ ಸಾಧನೆ ಏನು ಎಂಬುದನ್ನ ತಿಳಿಸಬೇಕೆಂದು ಸವಾಲು ಹಾಕಿದರು. ರೈತರ ಸಾಲ ಮನ್ನಾ ಮಾಡಿದ್ದು ಕುಮಾರಸ್ವಾಮಿ ಎಂದು ಹೇಳಿದ ಅವರು, ಮಂಡ್ಯ ಜಿಲ್ಲೆಗೆ ಕೃಷಿ ಸಚಿವರ ಕೊಡುಗೆ ಏನು ಮತ್ತು 2,500 ರೈತರಿಗೆ ಪರಿಹಾರ ನೀಡಲಾಗಿದೆಯೇ ಎಂಬ ಪ್ರಶ್ನೆಗಳನ್ನ ಮುಂದಿಟ್ಟರು. ಒಟ್ನಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ, ಸರ್ಕಾರದ ಕಾರ್ಯವೈಖರಿ, ಕುಮಾರಸ್ವಾಮಿ-ಸಿದ್ದರಾಮಯ್ಯ ಭೇಟಿ ಹಾಗೂ ಕೃಷಿ ಸಚಿವರ ಜವಾಬ್ದಾರಿಗಳ ಕುರಿತು ಸುರೇಶ್ ಗೌಡ ತಮ್ಮ ಹೇಳಿಕೆಗಳ ಮೂಲಕ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

Add Zee News as a Preferred Source
TAGS:
Karnataka Politics
Kannada News