• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮೈಸೂರು
  • /ಕೊ*ಲೆಯಾದ ಮಹಿಳೆ ದಿಢೀರ್ ಪ್ರತ್ಯಕ್ಷ! ತಪ್ಪೇ ಮಾಡದ ನಿರಪರಾಧಿಗೆ ಎರಡೂವರೆ ವರ್ಷ ಜೈಲುವಾಸ

ಕೊ*ಲೆಯಾದ ಮಹಿಳೆ ದಿಢೀರ್ ಪ್ರತ್ಯಕ್ಷ! ತಪ್ಪೇ ಮಾಡದ ನಿರಪರಾಧಿಗೆ ಎರಡೂವರೆ ವರ್ಷ ಜೈಲುವಾಸ

2019ರಲ್ಲಿ ಮಂಜು ಅವರು ಪಾಂಡವಪುರ ಪಟ್ಟಣದಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಅವರ ತಂದೆ ನಾಗರಾಜು ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಗಳು ಕಾಣೆಯಾಗಿರುವ ಬಗ್ಗೆ ದೂರು ನೀಡಿದ ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದರು. ನಾಪತ್ತೆಯಾಗುವ ಮುನ್ನ ಮಂಜು ಅವರು ರಾಜೇಶ್ ಎಂಬುವವರ ಮೊಬೈಲ್‌ನಿಂದ ಕೊನೆಯ ಕರೆ ಮಾಡಿದ್ದರು ಎಂಬ ವಿಚಾರ ತನಿಖೆಯ ವೇಳೆ ಗಮನಕ್ಕೆ ಬಂದಿತ್ತು.

Written ByPuttaraj K Alur
Published: Nov 12, 2026, 15:18 IST|Updated: Nov 12, 2026, 15:38 IST
joinshare
ಕೊ*ಲೆಯಾದ ಮಹಿಳೆ ದಿಢೀರ್ ಪ್ರತ್ಯಕ್ಷ!  ತಪ್ಪೇ ಮಾಡದ ನಿರಪರಾಧಿಗೆ ಎರಡೂವರೆ ವರ್ಷ ಜೈಲುವಾಸ
Image Credit: ರಾಜೇಶ್

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Mandya Murder Case: ಕೊ*ಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಹಿಳೆಯೊಬ್ಬರು ದಿಢೀರ್ ಪ್ರತ್ಯಕ್ಷವಾಗಿರುವ ಘಟನೆ ಹಲವು ವರ್ಷಗಳ ಹಿಂದಿನ ಕೊ*ಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದೆ. 2019ರಲ್ಲಿ ನಾಪತ್ತೆಯಾಗಿದ್ದ ಮಂಜು ಎಂಬ ಮಹಿಳೆ ನಾಗಮಂಗಲದಲ್ಲಿ ಪತ್ತೆಯಾಗಿದ್ದಾರೆ. ಈ ಪ್ರಕರಣದಲ್ಲಿ ಕೊ*ಲೆ ಆರೋಪ ಎದುರಿಸಿ ಸುಮಾರು ಎರಡೂವರೆ ವರ್ಷ ಜೈಲಿನಲ್ಲಿದ್ದ ರಾಜೇಶ್ ಎಂಬುವವರ ವಿರುದ್ಧದ ಆರೋಪಗಳ ಕುರಿತು ಇದೀಗ ಹಲವು ಪ್ರಶ್ನೆಗಳು ಎದುರಾಗಿವೆ.

2019ರಲ್ಲಿ ಮಂಜು ಅವರು ಪಾಂಡವಪುರ ಪಟ್ಟಣದಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಅವರ ತಂದೆ ನಾಗರಾಜು ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಗಳು ಕಾಣೆಯಾಗಿರುವ ಬಗ್ಗೆ ದೂರು ನೀಡಿದ ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದರು. ನಾಪತ್ತೆಯಾಗುವ ಮುನ್ನ ಮಂಜು ಅವರು ರಾಜೇಶ್ ಎಂಬುವವರ ಮೊಬೈಲ್‌ನಿಂದ ಕೊನೆಯ ಕರೆ ಮಾಡಿದ್ದರು ಎಂಬ ವಿಚಾರ ತನಿಖೆಯ ವೇಳೆ ಗಮನಕ್ಕೆ ಬಂದಿತ್ತು.

ಪಾಂಡವಪುರ ಬಸ್ ನಿಲ್ದಾಣದಲ್ಲಿ ಆಕಸ್ಮಿಕವಾಗಿ ದೊರೆತ ರಾಜೇಶ್ ಅವರ ಮೊಬೈಲ್‌ನಿಂದ ಮಂಜು ಕರೆ ಮಾಡಿದ್ದರೆಂಬ ಮಾಹಿತಿ ಪ್ರಕರಣದಲ್ಲಿ ಪ್ರಮುಖವಾಗಿತ್ತು. ಕೊನೆಯ ಕರೆ ರಾಜೇಶ್ ಅವರ ಮೊಬೈಲ್‌ನಿಂದ ಬಂದಿದ್ದ ಹಿನ್ನೆಲೆಯಲ್ಲಿ ಅವರ ಮೇಲೆ ಅನುಮಾನ ವ್ಯಕ್ತವಾಗಿತ್ತು. ಸುಮಾರು ಎರಡು ವರ್ಷಗಳ ಬಳಿಕ ರಾಜೇಶ್ ವಿರುದ್ಧ ಕೊ*ಲೆ ಪ್ರಕರಣ ದಾಖಲಿಸಲಾಯಿತು. ಪಾಂಡವಪುರ ತಾಲೂಕಿನ ರಾಗಿಮುದ್ದನಹಳ್ಳಿ ನಿವಾಸಿಯಾಗಿದ್ದ ರಾಜೇಶ್ ಅವರನ್ನ ಪೊಲೀಸರು ಕೊ*ಲೆ ಆರೋಪಿಯಾಗಿ ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ಆದರೆ ರಾಜೇಶ್ ಅವರು ಕೊ*ಲೆ ಮಾಡಿರುವುದಾಗಿ ಒಪ್ಪಿಕೊಂಡ ಹೇಳಿಕೆ ಪೊಲೀಸರಿಗೆ ನೀಡಿದ್ದರ ಹಿಂದೆ ಚಿತ್ರಹಿಂಸೆ ಮತ್ತು ಬೆದರಿಕೆಯ ಆರೋಪಗಳೂ ಕೇಳಿಬಂದಿವೆ. ಅಂದಿನ ಪೊಲೀಸ್ ಇನ್‌ಸ್ಪೆಕ್ಟರ್ ಪ್ರಭಾಕರ್ ಅವರ ತನಿಖೆಯ ವಿರುದ್ಧ ರಾಜೇಶ್ ಪರ ವಕೀಲರು ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ರಾಜೇಶ್ ಅವರಿಗೆ ಬೂಟಿನಿಂದ ಒದ್ದು ಹಲ್ಲೆ ನಡೆಸಲಾಗಿತ್ತು, ವಿದ್ಯುತ್ ಶಾಕ್ ನೀಡಲಾಗಿತ್ತು ಹಾಗೂ ಮನೆಯವರನ್ನೂ ಬಂಧಿಸುವುದಾಗಿ ಬೆದರಿಕೆ ಹಾಕಲಾಗಿತ್ತು ಎಂದು ಆರೋಪಿಸಲಾಗಿದೆ.

ಪೊಲೀಸರ ಭಯದಿಂದ ತಾನು ಮಾಡದ ತಪ್ಪನ್ನ ಒಪ್ಪಿಕೊಳ್ಳುವ ಪರಿಸ್ಥಿತಿ ಎದುರಾಯಿತು ಎಂಬುದು ರಾಜೇಶ್ ಅವರ ಆರೋಪವಾಗಿದೆ. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಅವರು 2021ರಿಂದ ಸುಮಾರು ಎರಡೂವರೆ ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದರು. ಬಳಿಕ 2024ರ ಜನವರಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಈ ಪ್ರಕರಣಕ್ಕೆ ಅನಿರೀಕ್ಷಿತ ತಿರುವು ಸಿಕ್ಕಿದೆ. ಕೊ*ಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಂಜು ಜೀವಂತವಾಗಿರುವುದು ಬೆಳಕಿಗೆ ಬಂದಿದೆ. ಬುಧವಾರ ನಾಗಮಂಗಲದಲ್ಲಿ ಅವರನ್ನ ಪತ್ತೆಹಚ್ಚಲಾಗಿದೆ. ರಾಜೇಶ್ ಪರ ವಕೀಲ ನಟೇಶ್ ಅವರಿಗೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಮಂಜು ಅವರನ್ನ ಪತ್ತೆಹಚ್ಚಲಾಗಿದೆ ಎಂದು ತಿಳಿದುಬಂದಿದೆ.

ಮಹಿಳೆಯನ್ನ ಪತ್ತೆಹಚ್ಚಿದ ಬಳಿಕ ಬಿಂಡಿಗನವಿಲೆ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಪೊಲೀಸರು ಅವರ ಹೇಳಿಕೆಯನ್ನ ದಾಖಲಿಸಿಕೊಂಡಿದ್ದಾರೆ. ಈ ವೇಳೆ ಮಂಜು ತಮ್ಮ ಇಚ್ಛೆಗೆ ವಿರುದ್ಧವಾಗಿ ಮದುವೆ ಮಾಡಿದ್ದರಿಂದ ಮನೆ ಬಿಟ್ಟು ಹೋಗಿದ್ದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಮನೆ ತೊರೆದ ಬಳಿಕ ಮತ್ತೊಬ್ಬ ವ್ಯಕ್ತಿಯನ್ನ ಮದುವೆಯಾಗಿ ಜೀವನ ನಡೆಸುತ್ತಿರುವುದಾಗಿಯೂ ಹೇಳಿದ್ದಾರೆ. ಇನ್ನೊಂದು ಪ್ರಮುಖ ವಿಚಾರವೆಂದರೆ, ರಾಜೇಶ್ ಅವರ ಪರಿಚಯವೇ ತನಗಿಲ್ಲವೆಂದು ಮಂಜು ಹೇಳಿಕೆ ನೀಡಿದ್ದಾರೆ. ನಾಪತ್ತೆಯಾಗುವ ಮೊದಲು ರಾಜೇಶ್ ಅವರ ಮೊಬೈಲ್‌ನಿಂದ ಕರೆ ಮಾಡಿದ್ದರೆಂಬ ಮಾಹಿತಿಯ ಆಧಾರದ ಮೇಲೆ ಕೊ*ಲೆ ಪ್ರಕರಣ ದಾಖಲಾಗಿತ್ತು. ಆದರೆ ಇದೀಗ ಮಂಜು ಜೀವಂತವಾಗಿ ಪತ್ತೆಯಾಗಿರುವುದರಿಂದ ಅಂದಿನ ತನಿಖೆ ಮತ್ತು ಪ್ರಕರಣದ ಬೆಳವಣಿಗೆಗಳ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ.

2019ರಲ್ಲಿ ನಾಪತ್ತೆಯಾಗಿದ್ದ ಮಹಿಳೆ, ಎರಡು ವರ್ಷಗಳ ಬಳಿಕ ದಾಖಲಾಗಿದ್ದ ಕೊ*ಲೆ ಪ್ರಕರಣ, ಆರೋಪಿಯ ಬಂಧನ, ಜೈಲುವಾಸ ಮತ್ತು ಇದೀಗ ಮಹಿಳೆ ಜೀವಂತವಾಗಿ ಪತ್ತೆಯಾಗಿರುವ ಬೆಳವಣಿಗೆಗಳು ಪ್ರಕರಣಕ್ಕೆ ಹೊಸ ತಿರುವು ನೀಡಿವೆ. ಮಹಿಳೆಯ ಹೇಳಿಕೆಯ ಬಳಿಕ ಮುಂದಿನ ಪೊಲೀಸ್ ತನಿಖೆಯಲ್ಲಿ ಯಾವ ಅಂಶಗಳು ಬಹಿರಂಗವಾಗಲಿವೆ ಎಂಬುದು ಕುತೂಹಲ ಮೂಡಿಸಿದೆ.

Add Zee News as a Preferred Source
TAGS:
Crime
Kannada News