SOCIAL MEDIA

Newsletter

PARTNER SITES
Select Language Select State

ಮಹಿಳೆಯರ ಸಬಲೀಕರಣವೇ ಸಮಾಜದ ಮುಖ್ಯ ಗುರಿ: ‘ಮಹಿಳಾ ದಸರಾ’ದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಜೆ.ಕೆ. ಮೈದಾನದಲ್ಲಿ ‘ಮಹಿಳಾ ದಸರಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Written By Yashaswini V
Published: Oct 13, 2026, 02:20 PM IST | Updated: Oct 13, 2026, 02:21 PM IST
Join

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ‘ಮಹಿಳಾ ದಸರಾ’ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ "ಮಹಿಳೆಯರ ಸಬಲೀಕರಣವೇ ಸಮಾಜದ ಮುಖ್ಯ ಗುರಿ" ಎಂದು ಅವರು ಹೇಳಿದರು.

ಮೈಸೂರಿನ ಜೆ.ಕೆ. ಮೈದಾನದಲ್ಲಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ವತಿಯಿಂದ ಅತ್ಯಂತ ಸಂಭ್ರಮದಿಂದ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ನಮ್ಮ ಸಮಾಜ ಮತ್ತು ಕುಟುಂಬದ ಪ್ರತಿ ಹಂತದಲ್ಲೂ ಮಹಿಳೆಯರ ಪಾತ್ರವೇ ಅತ್ಯಂತ ಪ್ರಮುಖವಾದುದು. ಒಂದೆಡೆ ಸ್ತ್ರೀಯರನ್ನು ದೇವತೆಯಂತೆ ಪೂಜಿಸುತ್ತಲೇ, ಮತ್ತೊಂದೆಡೆ ಅವರ ಮೇಲೆ ಕಟ್ಟುಪಾಡುಗಳನ್ನು ಹಾಕಿ ಬಿಗಿಯುವ ಸಂಪ್ರದಾಯವನ್ನು ನಾವು ಸಂಪೂರ್ಣವಾಗಿ ಹೋಗಲಾಡಿಸಬೇಕಿದೆ ಎಂದು ತಿಳಿಸಿದರು.

ಭಗವಾನ್ ಬುದ್ಧ, ಜಗಜ್ಯೋತಿ ಬಸವಣ್ಣ ಹಾಗೂ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರು ನಮಗೆ ಬೋಧಿಸಿದ ಸಮಾನತೆಯ ಆಶಯದಂತೆ, ಲಿಂಗತಾರತಮ್ಯವನ್ನು ತೊರೆದು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಇಂದು ಮಹಿಳೆಯರು ಶಿಕ್ಷಣ, ಕ್ರೀಡೆ, ಸಮಾಜಸೇವೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಅಪಾರ ಸಾಧನೆ ಮಾಡುತ್ತಿದ್ದಾರೆ. ಅಂತಹ ಸಾಧಕಿಯರ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ರೂಪಿಸಲಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯ ಈ ಶ್ಲಾಘನೀಯ ಪ್ರಯತ್ನಕ್ಕೆ  ಸಚಿವರು ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಸ್ವಾವಲಂಬಿಯಾಗಿ ಮಹಿಳೆಯರು ನಿರ್ಮಿಸಿರುವ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ಸಚಿವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಪುಟ್ಟರಂಗಶೆಟ್ಟಿ, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ. ಪದ್ಮಾವತಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಮೈಸೂರು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ರಂಗಸ್ವಾಮಿ, ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ (MPVL) ಸಂಸ್ಥೆಯ ಅಧ್ಯಕ್ಷರಾದ ಹೆಚ್.ಡಿ. ಗಣೇಶ್, ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯ ಅಧ್ಯಕ್ಷರಾದ ಚೂಡಾಮಣಿ, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್  ನಿಕಟಪೂರ್ವ ಅಧ್ಯಕ್ಷರಾದ ಡಾ. ಬಿ.ಜೆ. ವಿಜಯ್ ಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅರುಣ್ ಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ರಾಕೇಶ್ ಪಾಪಣ್ಣ, ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯ ಕಾರ್ಯದರ್ಶಿಗಳಾದ ನಾಗರಾಜ್ ಆರ್, ವಿಶೇಷ ಕರ್ತವ್ಯಾಧಿಕಾರಿ ಹಾಗೂ ಉಪಕಾರ್ಯದರ್ಶಿಗಳಾದ ಬಿ. ಎಂ ಸವಿತಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 

ZEENEWS TRENDING STORIES