• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಶಿವಮೊಗ್ಗ
  • /‌ಶಿವಮೊಗ್ಗದಲ್ಲಿ ₹1,800 ಕೋಟಿ ಬಿಲ್ ಬಾಕಿ.. ಕಾಮಗಾರಿ ಮುಗಿದರೂ ಕೈ ಸೇರದ ಹಣ!

‌ಶಿವಮೊಗ್ಗದಲ್ಲಿ ₹1,800 ಕೋಟಿ ಬಿಲ್ ಬಾಕಿ.. ಕಾಮಗಾರಿ ಮುಗಿದರೂ ಕೈ ಸೇರದ ಹಣ!

1,800 crore in pending bills in Shivamogga: ಶಿವಮೊಗ್ಗ ಜಿಲ್ಲೆಯಲ್ಲಿ 2022–23ನೇ ಸಾಲಿನಿಂದ ಸುಮಾರು 1,800 ಕೋಟಿ ಬಾಕಿ ಹಣ ವಿವಿಧ ಇಲಾಖೆಗಳಿಂದ ಬಿಡುಗಡೆ ಆಗಬೇಕು. ಕಾಮಗಾರಿಗಳು ನಡೆಯುತ್ತಿದ್ದು, ಬಿಲ್‍ಗಳನ್ನೂ ಸಲ್ಲಿಸಲಾಗುತ್ತಿದೆ.

Written ByRamya. R. Gowda
Published: Oct 13, 2026, 03:55 PM IST|Updated: Oct 13, 2026, 04:04 PM IST
joinshare
‌ಶಿವಮೊಗ್ಗದಲ್ಲಿ ₹1,800 ಕೋಟಿ ಬಿಲ್ ಬಾಕಿ.. ಕಾಮಗಾರಿ ಮುಗಿದರೂ ಕೈ ಸೇರದ ಹಣ!

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

Trending

  • News
  • Photos
  • Videos
'ಬಿಗ್ ಬಾಸ್ ಕನ್ನಡ ಸೀಸನ್ 13'ಕ್ಕೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ಲಕ್ಷ್ಮೀ ಗೌಡ ಹಿನ್ನೆಲೆ ಏನು?

'ಬಿಗ್ ಬಾಸ್ ಕನ್ನಡ ಸೀಸನ್ 13'ಕ್ಕೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ಲಕ್ಷ್ಮೀ ಗೌಡ ಹಿನ್ನೆಲೆ ಏನು?

2

LPG ಸಬ್ಸಿಡಿ ನಿಮ್ಮ ಅಕೌಂಟ್‌ಗೆ ಜಮಾ ಆಗಿದ್ಯಾ? ಈ ರೀತಿ ಸುಲಭವಾಗಿ ತಿಳಿಯಿರಿ

3

40 ವರ್ಷಗಳಿಂದ ಸಂಪ್ರದಾಯ ಕೂರಿಸೋ ಪಾಲಿಸ್ತಿರೋ ಪಟ್ಟಣದ ಆದರ್ಶ ದಂಪತಿ....

4

‘ನೀವು ಇನ್ನೂ ವರ್ಜಿನ್‌ ಆಗಿದ್ದೀರಾ?’; ಕರಣ್ ಜೋಹರ್ ಪ್ರಶ್ನೆಗೆ ಸಲ್ಮಾನ್ ಖಾನ್​ ಹೇಳಿದ್ದೇನು!

5

ಮನೆಯಲ್ಲಿರುವ ದಾಸವಾಳದ ಹೂವನ್ನು ಕಡೆಗಣಿಸಬೇಡಿ.. ಇದರ ಅದ್ಭುತ ಆರೋಗ್ಯ ಪ್ರಯೋಜನಗಳು ನಿಮಗೆ ಗೊತ್ತಾ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಶಿವಮೊಗ್ಗ ಜಿಲ್ಲೆಯಲ್ಲಿ 2022–23ನೇ ಸಾಲಿನಿಂದ ಸುಮಾರು 1,800 ಕೋಟಿ ಬಾಕಿ ಹಣ ವಿವಿಧ ಇಲಾಖೆಗಳಿಂದ ಬಿಡುಗಡೆ ಆಗಬೇಕು. ಕಾಮಗಾರಿಗಳು ನಡೆಯುತ್ತಿದ್ದು, ಬಿಲ್‍ಗಳನ್ನೂ ಸಲ್ಲಿಸಲಾಗುತ್ತಿದೆ. ಆದರೆ, ಸಣ್ಣಪುಟ್ಟ ಕಾಮಗಾರಿಗಳಿಗೆ ಮಾತ್ರ ಹಣ ಬಿಡುಗಡೆಯಾಗುತ್ತಿದೆ. ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ ಎಂದು ಮಲೆನಾಡು ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ಎಚ್.ಸಿ. ಉಮೇಶ್ ಆರೋಪಿಸಿದ್ದಾರೆ.

ಕಾಮಗಾರಿ ಪೂರ್ಣಗೊಳಿಸಿ ಬಿಲ್ ಸಲ್ಲಿಸಿದ್ದರೂ ಪಾವತಿ ವಿಳಂಬವಾಗುತ್ತಿದೆ. ಕಾರ್ಮಿಕರಿಗೆ ವೇತನ ನೀಡುವುದು, ಕಾಮಗಾರಿಗೆ ಅಗತ್ಯವಾದ ಸಾಮಗ್ರಿಗಳನ್ನು ಖರೀದಿಸುವುದು ಹಾಗೂ ಬ್ಯಾಂಕ್ ಸಾಲ ಮರುಪಾವತಿ ಮಾಡುವುದು ಕಷ್ಟವಾಗಿದೆ. ದಸರಾ ಹಬ್ಬದ ಸಂದರ್ಭದಲ್ಲಿ ಕಾರ್ಮಿಕರಿಗೆ ವೇತನ ಮತ್ತು ಬೋನಸ್ ನೀಡಬೇಕಿರುವುದರಿಂದ, ಈಗಾಗಲೇ ಅನುದಾನ ಬಿಡುಗಡೆಯಾಗಿರುವ ಕಾಮಗಾರಿಗಳ ಬಾಕಿ ಬಿಲ್‍ಗಳನ್ನು ಒಂದು ಅಥವಾ ಎರಡು ದಿನಗಳಲ್ಲಿ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕ ನೀರಾವರಿ ನಿಗಮದಲ್ಲಿ - ಕೆಎನ್‍ಎನ್‍ಎಲ್ ಬಿಲ್‍ಗಳು ಪಾವತಿಗೆ ಶಿಫಾರಸ್ಸಾಗುವ ಮೊದಲು 30 ರಿಂದ 35 ಹಂತಗಳನ್ನು ದಾಟಬೇಕಿದೆ. ಇದರಿಂದ ಪಾವತಿ ಪ್ರಕ್ರಿಯೆ ವಿಳಂಬವಾಗುತ್ತಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಅನುಸರಿಸುತ್ತಿರುವಂತೆ ಸರಳ, ಪಾರದರ್ಶಕ ಹಾಗೂ ತ್ವರಿತ ಪಾವತಿ ವ್ಯವಸ್ಥೆಯನ್ನು ಕೆಎನ್‍ಎನ್‍ಎಲ್‍ನಲ್ಲಿಯೂ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.  ಅಗತ್ಯ ದಾಖಲೆಗಳನ್ನು ಸಲ್ಲಿಸಿ ಬಿಲ್ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಪಾವತಿ ವಿಳಂಬ ಮಾಡುವ ಅಧಿಕಾರಿಗಳ ಹೊಣೆಗಾರಿಕೆ ನಿಗದಿಪಡಿಸಬೇಕು.ಮುಖ್ಯಮಂತ್ರಿಗಳು, ಸಂಬಂಧಪಟ್ಟ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಗುತ್ತಿಗೆದಾರರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು. ಈಗಾಗಲೇ ಅನುದಾನ ಬಿಡುಗಡೆಯಾಗಿರುವ ಕಾಮಗಾರಿಗಳ ಬಾಕಿ ಬಿಲ್‍ಗಳನ್ನು ಪಾವತಿಸುವ ಮೂಲಕ ಗುತ್ತಿಗೆದಾರರು ಕಾರ್ಮಿಕರಿಗೆ ವೇತನ ಮತ್ತು ಬೋನಸ್ ನೀಡಲು ಅನುಕೂಲ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.


ಶಿವಮೊಗ್ಗ ಜಿಲ್ಲೆಯಲ್ಲಿ ಗುತ್ತಿಗೆದಾರರಿಗೆ ಬರೋಬ್ಬರಿ 1,800 ಕೋಟಿ ರೂಪಾಯಿ ಬಿಲ್ ಬಾಕಿ ಉಳಿದಿದೆಯಂತೆ..! 2022–23ನೇ ಸಾಲಿನಿಂದ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಬಿಲ್ ಸಲ್ಲಿಸಿದ್ರೂ, ಹಣ ಮಾತ್ರ ಕೈ ಸೇರುತ್ತಿಲ್ಲವಂತೆ..! ಇದರಿಂದ ಕಾರ್ಮಿಕರಿಗೆ ಸಂಬಳ ನೀಡುವುದರಿಂದ ಹಿಡಿದು, ಬ್ಯಾಂಕ್ ಸಾಲ ಮರುಪಾವತಿ ಮಾಡುವವರೆಗೆ ಗುತ್ತಿಗೆದಾರರು ಪರದಾಡುವಂತಾಗಿದೆ. ಅದರಲ್ಲೂ ದಸರಾ ಹಬ್ಬ ಹತ್ತಿರವಾಗ್ತಿದ್ದು, ಕಾರ್ಮಿಕರಿಗೆ ವೇತನ ಮತ್ತು ಬೋನಸ್ ನೀಡೋದು ಹೇಗೆ ಅನ್ನೋ ಚಿಂತೆ ಎದುರಾಗಿದೆ. ಹಾಗಾದ್ರೆ, ಗುತ್ತಿಗೆದಾರರ ಈ ಸಂಕಷ್ಟಕ್ಕೆ ಕಾರಣವೇನು? ಅವರ ಬೇಡಿಕೆಗಳೇನು? ಇಲ್ಲಿದೆ ಸಂಪೂರ್ಣ ವರದಿ.


ಶಿವಮೊಗ್ಗ ಜಿಲ್ಲೆಯಲ್ಲಿ ಗುತ್ತಿಗೆದಾರರ ಆರ್ಥಿಕ ಸಂಕಷ್ಟ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. 2022–23ನೇ ಸಾಲಿನಿಂದ ವಿವಿಧ ಸರ್ಕಾರಿ ಇಲಾಖೆಗಳಿಂದ ಸುಮಾರು 1,800 ಕೋಟಿ ರೂಪಾಯಿ ಬಾಕಿ ಹಣ ಬಿಡುಗಡೆಯಾಗಬೇಕಿದೆ ಎಂದು ಮಲೆನಾಡು ಗುತ್ತಿಗೆದಾರರ ಸಂಘ ಆರೋಪಿಸಿದೆ. ಕಾಮಗಾರಿಗಳು ನಡೆಯುತ್ತಿದ್ದು, ಪೂರ್ಣಗೊಂಡ ಕಾಮಗಾರಿಗಳ ಬಿಲ್‌ಗಳನ್ನೂ ಸಲ್ಲಿಸಲಾಗಿದೆ. ಆದ್ರೆ, ದೊಡ್ಡ ಮೊತ್ತದ ಬಾಕಿ ಹಣ ಬಿಡುಗಡೆಯಾಗದೆ ಗುತ್ತಿಗೆದಾರರು ಪರದಾಡುವಂತಾಗಿದೆ. ಸಣ್ಣಪುಟ್ಟ ಕಾಮಗಾರಿಗಳಿಗೆ ಮಾತ್ರ ಹಣ ಬಿಡುಗಡೆಯಾಗುತ್ತಿದ್ದು, ಉಳಿದ ಬಿಲ್‌ಗಳ ಪಾವತಿ ವಿಳಂಬವಾಗುತ್ತಿದೆ ಎನ್ನಲಾಗಿದೆ.

ಕಾಮಗಾರಿ ಪೂರ್ಣಗೊಳಿಸಿದರೂ ಹಣ ಪಾವತಿಯಾಗದ ಕಾರಣ ಗುತ್ತಿಗೆದಾರರು ತೀವ್ರ ಆರ್ಥಿಕ ಒತ್ತಡ ಎದುರಿಸುತ್ತಿದ್ದಾರೆ. ಕಾಮಗಾರಿಗೆ ಬೇಕಾದ ಸಾಮಗ್ರಿಗಳ ಖರೀದಿ, ಕಾರ್ಮಿಕರಿಗೆ ವೇತನ ಪಾವತಿ ಹಾಗೂ ಬ್ಯಾಂಕ್ ಸಾಲದ ಕಂತುಗಳನ್ನು ಕಟ್ಟುವುದು ಕಷ್ಟವಾಗಿದೆ. ಈಗ ದಸರಾ ಹಬ್ಬದ ಸಮಯ. ಕಾರ್ಮಿಕರಿಗೆ ಸಂಬಳದ ಜೊತೆಗೆ ಬೋನಸ್ ನೀಡಬೇಕಾದ ಅನಿವಾರ್ಯತೆಯೂ ಇದೆ. ಹೀಗಾಗಿ, ಈಗಾಗಲೇ ಅನುದಾನ ಬಿಡುಗಡೆಯಾಗಿರುವ ಕಾಮಗಾರಿಗಳ ಬಾಕಿ ಬಿಲ್‌ಗಳನ್ನು ಒಂದು ಅಥವಾ ಎರಡು ದಿನಗಳೊಳಗೆ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಗುತ್ತಿಗೆದಾರರು ಒತ್ತಾಯಿಸಿದ್ದಾರೆ.

ಇನ್ನು ಕರ್ನಾಟಕ ನೀರಾವರಿ ನಿಗಮದ ಬಿಲ್ ಪಾವತಿ ಪ್ರಕ್ರಿಯೆ ಬಗ್ಗೆಯೂ ಗುತ್ತಿಗೆದಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಲ್‌ಗಳು ಪಾವತಿಗೆ ಶಿಫಾರಸ್ಸಾಗುವ ಮೊದಲೇ ಸುಮಾರು 30ರಿಂದ 35 ಹಂತಗಳನ್ನು ದಾಟಬೇಕಿದೆ. ಇದರಿಂದ ಪಾವತಿ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂಬುದು ಅವರ ಆರೋಪ. ಲೋಕೋಪಯೋಗಿ ಇಲಾಖೆಯಲ್ಲಿ ಅನುಸರಿಸುವ ರೀತಿಯಲ್ಲಿ ಸರಳ, ಪಾರದರ್ಶಕ ಮತ್ತು ತ್ವರಿತ ಪಾವತಿ ವ್ಯವಸ್ಥೆಯನ್ನು ಕೆಎನ್‌ಎನ್‌ಎಲ್‌ನಲ್ಲಿಯೂ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.

ಅಗತ್ಯ ದಾಖಲೆಗಳನ್ನು ಸಲ್ಲಿಸಿ ಬಿಲ್ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಪಾವತಿ ವಿಳಂಬ ಮಾಡುವ ಅಧಿಕಾರಿಗಳ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕು ಎಂದು ಮಲೆನಾಡು ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ಎಚ್.ಸಿ. ಉಮೇಶ್ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗಳು, ಸಂಬಂಧಪಟ್ಟ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು. ಈಗಾಗಲೇ ಅನುದಾನ ಬಿಡುಗಡೆಯಾಗಿರುವ ಕಾಮಗಾರಿಗಳ ಬಾಕಿ ಬಿಲ್‌ಗಳನ್ನು ಪಾವತಿಸಿದರೆ ಕಾರ್ಮಿಕರಿಗೆ ವೇತನ ಮತ್ತು ಬೋನಸ್ ನೀಡಲು ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದಾರೆ.

ಒಟ್ಟಿನಲ್ಲಿ, ಕಾಮಗಾರಿ ಪೂರ್ಣಗೊಳಿಸಿದರೂ ಕೈ ಸೇರದ ಬಿಲ್ ಹಣದಿಂದ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಬ್ಬದ ಸಂದರ್ಭದಲ್ಲಿ ಕಾರ್ಮಿಕರಿಗೆ ವೇತನ ಮತ್ತು ಬೋನಸ್ ನೀಡುವುದಕ್ಕೂ ಹಣದ ಕೊರತೆ ಎದುರಾಗಿದೆ. ಸರ್ಕಾರ ಈ ಸಮಸ್ಯೆಗೆ ಯಾವಾಗ ಪರಿಹಾರ ನೀಡಲಿದೆ? ಗುತ್ತಿಗೆದಾರರ ಬಾಕಿ ಬಿಲ್‌ಗಳು ಯಾವಾಗ ಬಿಡುಗಡೆಯಾಗಲಿವೆ? ಅನ್ನೋದನ್ನ ಕಾದು ನೋಡಬೇಕಿದೆ.
 

Add Zee News as a Preferred Source
TAGS:
Kannada News