• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಶಿವಮೊಗ್ಗ
  • /ಹಾಲಿನ ಬೆಲೆ 8 ರೂ. ಏರಿಕೆ ಸಮರ್ಥಿಸಿಕೊಂಡ ಕೃಷಿ ಸಚಿವ ನರೇಂದ್ರ ಸ್ವಾಮಿ ಹೇಳಿದ್ದೇನು ಗೊತ್ತಾ?

ಹಾಲಿನ ಬೆಲೆ 8 ರೂ. ಏರಿಕೆ ಸಮರ್ಥಿಸಿಕೊಂಡ ಕೃಷಿ ಸಚಿವ ನರೇಂದ್ರ ಸ್ವಾಮಿ ಹೇಳಿದ್ದೇನು ಗೊತ್ತಾ?

ರಾಜ್ಯದಲ್ಲಿ ಹಾಲಿನ ಬೆಲೆ ಏರಿಕೆ ಭಾರೀ ಸದ್ದು ಮಾಡುತ್ತಿದ್ದು ಈ ಬಗ್ಗೆ ಕೃಷಿ ಸಚಿವ ಪಿ.ಎಂ. ನರೇಂದ್ರ ಸ್ವಾಮಿ ಸರ್ಕಾರದ ಈ ನಿರ್ಧಾರದಿಂದ ಹೈನುಗಾರಿಕೆಯನ್ನೇ ಅವಲಂಬಿಸಿರುವ ರೈತರಿಗೆ ಇದರಿಂದ ಪ್ರಯೋಜನವಾಗಿಲದೆ ಎಂದಿದ್ದಾರೆ.

Written ByYashaswini V
Published: Oct 30, 2026, 12:44 PM IST|Updated: Oct 30, 2026, 12:48 PM IST
joinshare
ಹಾಲಿನ ಬೆಲೆ 8 ರೂ. ಏರಿಕೆ ಸಮರ್ಥಿಸಿಕೊಂಡ ಕೃಷಿ ಸಚಿವ ನರೇಂದ್ರ ಸ್ವಾಮಿ ಹೇಳಿದ್ದೇನು ಗೊತ್ತಾ?

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ನಾಳೆ ಬೆಂಗಳೂರಿನ 50ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ನಾಳೆ ಬೆಂಗಳೂರಿನ 50ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

2

ಅ. 30ರಿಂದ ನ.1ರವರೆಗೆ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ!

3

ಸರ್ಕಾರಿ ನೌಕರರಿಗೆ ಬಂಪರ್‌ ಸುದ್ದಿ: ಇನ್ನು ಮುಂದೆ ಪ್ರತಿ 3 ತಿಂಗಳಿಗೊಮ್ಮೆ ತುಟ್ಟಿಭತ್ಯೆ (DA) ಹೆಚ್ಚಳ!?

4

ಹಾಲಿನ ಬೆಲೆ 8 ರೂ. ಏರಿಕೆ ಸಮರ್ಥಿಸಿಕೊಂಡ ಕೃಷಿ ಸಚಿವ ನರೇಂದ್ರ ಸ್ವಾಮಿ ಹೇಳಿದ್ದೇನು ಗೊತ್ತಾ?

5

ಟಿ20 ಕ್ರಿಕೆಟ್‌ನಲ್ಲಿ ಇತಿಹಾಸ ಸೃಷ್ಟಿಸಿದ ರಶೀದ್‌ ಖಾನ್..‌ ಈ ಸಾಧನೆ ಮಾಡಿದ ವಿಶ್ವದ ಮೊದಲ ಬೌಲರ್‌

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಶಿವಮೊಗ್ಗ: ಹಾಲಿನ ದರವನ್ನು ಒಮ್ಮೆಗೆ 8 ರೂ. ಏರಿಕೆ ಮಾಡಿರುವುದು ಇದೀಗ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವನ್ನು ಕೃಷಿ ಸಚಿವ ಪಿ. ಎಂ. ನರೇಂದ್ರ ಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಸಚಿವ ನರೇಂದ್ರ ಸ್ವಾಮಿ, ಹಾಲಿನ ಬೆಲೆ ಏರಿಕೆಯಿಂದ ಹೈನುಗಾರಿಕೆಯನ್ನೇ ಅವಲಂಬಿಸಿರುವ ರೈತರ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಹಾಲಿನ ದರ 8 ರೂ. ಹೆಚ್ಚಳ.. ಇದರ ಹಂಚಿಕೆ ಹೇಗಿರಲಿದೆ? 
ಸಿಎಂ ಹಾಗೂ ಸಚಿವರ ಒಮ್ಮತದೊಂದಿಗೆ ಸಚಿವ ಸಂಪುಟದಲ್ಲಿ ಹಾಲಿನ ದರ 8 ರೂ. ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಹಾಲಿನ ಬೆಲೆಯಲ್ಲಿ ಹೆಚ್ಚಿಸಲಾದ 8 ರೂ.ಗಳಲ್ಲಿ 7 ರೂ. ರೈತರಿಗೇ ಸೇರಲಿದೆ ಹಾಗೂ 1 ರೂ. ಹಾಲು ಒಕ್ಕೂಟಗಳಿಗೆ ನೀಡಲಾಗುತ್ತದೆ. ಹೆಚ್ಚುವರಿ ಹಣವನ್ನು ಸರ್ಕಾರ ತನ್ನ ಬಳಿ ಇಟ್ಟುಕೊಳ್ಳುತ್ತಿಲ್ಲ ಎಂದು ಕೃಷಿ ಸಚಿವರು ವಿವರಿಸಿದರು.

ಮುಂದಿನ ದಿನದಲ್ಲಿ ಒಕ್ಕೂಟಗಳಿಗೇ ಪೂರ್ಣ ಅಧಿಕಾರ:
ಇನ್ಮುಂದೆ ಹಾಲಿನ ಬೆಲೆ ನಿಗದಿ ಮಾಡುವ ಜವಾಬ್ದಾರಿ ಆಯಾ ಹಾಲು ಒಕ್ಕೂಟಗಳಿಗೇ ಸೀಮಿತವಾಗಲಿದೆ. ​ಉತ್ಪಾದನಾ ವೆಚ್ಚ ಮತ್ತು ಮಾರುಕಟ್ಟೆ ಸ್ಥಿತಿ ಅರಿತು ಒಕ್ಕೂಟಗಳೇ ಬೆಲೆ ಪರಿಷ್ಕರಣೆ ಮಾಡಲಿವೆ ಎಂದವರು ಇದೇ ಸಂದರ್ಭದಲ್ಲಿ ತಿಳಿಸಿದರು.  

ಪಶು ಆಹಾರ ಮತ್ತು ನಿರ್ವಹಣಾ ವೆಚ್ಚ ಹೆಚ್ಚುತ್ತಿದ್ದು, ರೈತರ ಪರಿಸ್ಥಿತಿಯನ್ನು ಕಡೆಗಣಿಸಬಾರದು. ಹೈನುಗಾರಿಕೆಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರ ಶ್ರಮವಿದ್ದು, ಅವರಿಗೆ ತಕ್ಕ ಪ್ರತಿಫಲ ಸಿಗಬೇಕು. ​ರಾಜ್ಯದಲ್ಲಿ ಬೆಲೆ ಕಡಿಮೆಯಿರುವ ಕಾರಣ ಪಕ್ಕದ ರಾಜ್ಯದವರು ಹಾಲು ಖರೀದಿಸುತ್ತಿದ್ದಾರೆ ಎಂದು ತಿಳಿಸಿದರು.

​2014ರಿಂದೀಚೆಗೆ ಪೆಟ್ರೋಲ್ ಬೆಲೆ ಎಷ್ಟು ಬಾರಿ ಏರಿಕೆಯಾಗಿದೆ ಎಂಬುದನ್ನೂ ಸಾರ್ವಜನಿಕರು ಪ್ರಶ್ನಿಸಬೇಕು. ​ಹಾಲಿನ ಬೆಲೆ ಏರಿಕೆ ನಿರ್ಧಾರ ಅವೈಜ್ಞಾನಿಕವಾಗಿದೆ ಎಂದು ಯಾರಾದರೂ ಸಾಬೀತುಪಡಿಸಲಿ. ಸರ್ಕಾರದ ಆದೇಶಗಳು ಮತ್ತು ಅನುದಾನಗಳಿಗೆ ನಿರ್ದಿಷ್ಟ ಷರತ್ತು ಹಾಗೂ ಮಾರ್ಗಸೂಚಿಗಳಿರುತ್ತವೆ ಎಂದು ಹೇಳಿದರು.

ರಾಜ್ಯದಲ್ಲಿಲ್ಲ ಮೇವಿನ ಕೊರತೆ:
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಮೇವಿನ ಕೊರತೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದ ಕೃಷಿ ಸಚಿವರು, ಎಂತಹ ಬರಗಾಲ ಇದ್ದರೂ ಸಹ ಧನಕರುಗಳಿಗೆ ಮೇವಿನ ಕೊರತೆ ಆಗದಂತೆ ನಿಗಾವಹಿಸಲು ಸರ್ಕಾರ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ, ವಿಶ್ವ ವಿದ್ಯಾಲಯಗಳ ಜವಾಬ್ದಾರಿಯಲ್ಲಿ ಬೇಡಿಕೆಗೆ ತಕ್ಕಂತೆ ಮೇವಿನ ಸಂಗ್ರಹಣೆ ಮಾಡಲಾಗಿದೆ. ಮತ್ತೆ ಮೇವಿನ ಉತ್ಪಾದನೆಗೂ ತಯಾರಿ ಮಾಡಲಾಗಿದೆ ಎಂದು ದೃಢಪಡಿಸಿದರು.

ಸ್ಟಿಂಗ್ ಆಪರೇಷನ್ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ನರೇಂದ್ರ ಸ್ವಾಮಿ, ಒಬ್ಬ ಮಹಾನ್ ನಾಯಕನ ಷಡ್ಯಂತ್ರ ಇದೀಗ ಬಯಲಾಗಿದೆ. ತಾನೇ ಹಾಕಿದ ಬಲೆಗೆ, ಅವರೇ ಸಿಲುಕಿದ್ದಾರೆ. ತನಿಖೆ ನಡೆಯುತ್ತಿರುವುದರಿಂದ ಸಂಪೂರ್ಣ ಮಾಹಿತಿ ಇಲ್ಲದೆ ಮಾತನಾಡುವುದು ಸರಿಯಲ್ಲ. ಸಿಸಿಬಿ ಕ್ಲೀನ್‌ಚಿಟ್ ವಿಚಾರವಾಗಿ ಗೃಹ ಸಚಿವರು ಸೂಕ್ತ ಉತ್ತರ ನೀಡಲಿದ್ದಾರೆ. ಪಕ್ಷದ ಇಬ್ಬರು ಪ್ರಮುಖ ನಾಯಕರ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಷಡ್ಯಂತ್ರ ನಡೆಯುತ್ತಿದೆ. ​ಕಾಂಗ್ರೆಸ್‌ ಪಕ್ಷದಲ್ಲಿ ಭಿನ್ನಾಭಿಪ್ರಾಯ ತಂದು ರಾಜಕೀಯ ಲಾಭ ಪಡೆಯಲು ಷಡ್ಯಂತ್ರ ರೂಪಿಸಿದ ನಾಯಕನೇ ತಾನು ಹಾಕಿದ ಬಲೆಗೆ ಸಿಲುಕುವ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದರು. 
 

Add Zee News as a Preferred Source
TAGS:
Price Hike
Karnataka Politics
Kannada News