SOCIAL MEDIA

Newsletter

PARTNER SITES
Select Language Select State

ಬ್ರಹ್ಮಗಿರಿ ಎಸ್ಟೇಟ್‌ನಲ್ಲಿ ಕಾರ್ಮಿಕರ ಮೇಲೆ ದೌರ್ಜನ್ಯ – ಮಾಲೀಕನ ಬಂಧನಕ್ಕೆ ಸಿಪಿಐ (ಎಂಎಲ್) ಆಗ್ರಹ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಸ್ಟೇಟ್ ಮಾಲೀಕನ ದರ್ಪಕ್ಕೆ ಕಾರ್ಮಿಕರು ಕಂಗಾಲಾಗಿದ್ದಾರೆ. ಕೂಲಿ ಹೆಚ್ಚಳಕ್ಕೆ ಆಗ್ರಹಿಸಿದ್ದಕ್ಕೆ ಮಹಿಳೆಯರು ಸೇರಿದಂತೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಕಟ್ರುಮನೆ ಬ್ರಹ್ಮಗಿರಿ ಎಸ್ಟೇಟ್‌ನಲ್ಲಿ ನಡೆದಿರುವ ಈ ಘಟನೆ ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Written By Ramya. R. Gowda
Published: Nov 29, 2026, 17:54 IST | Updated: Nov 29, 2026, 18:03 IST
Join

 Brahmagiri Estate: ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಸ್ಟೇಟ್ ಮಾಲೀಕನ ದರ್ಪಕ್ಕೆ ಕಾರ್ಮಿಕರು ಕಂಗಾಲಾಗಿದ್ದಾರೆ. ಕೂಲಿ ಹೆಚ್ಚಳಕ್ಕೆ ಆಗ್ರಹಿಸಿದ್ದಕ್ಕೆ ಮಹಿಳೆಯರು ಸೇರಿದಂತೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಕಟ್ರುಮನೆ ಬ್ರಹ್ಮಗಿರಿ ಎಸ್ಟೇಟ್‌ನಲ್ಲಿ ನಡೆದಿರುವ ಈ ಘಟನೆ ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಗಾಯಗೊಂಡ ಕಾರ್ಮಿಕರು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಾರ್ಮಿಕರ ಪರವಾಗಿ ಸಿಪಿಐ (ಎಂಎಲ್) ರೆಡ್ ಸ್ಟಾರ್ ಪಕ್ಷದ ಜಿಲ್ಲಾ ಸಮಿತಿ ಧ್ವನಿ ಎತ್ತಿದೆ. ಎಸ್ಟೇಟ್ ಮಾಲೀಕನನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಕಟ್ರುಮನೆ ಬ್ರಹ್ಮಗಿರಿ ಎಸ್ಟೇಟ್‌ನಲ್ಲಿ ಕಾರ್ಮಿಕರ ಮೇಲೆ ಹಲ್ಲೆ ಆರೋಪ ಕೇಳಿ ಬಂದಿದೆ.  ಕೂಲಿ ಹೆಚ್ಚಳಕ್ಕೆ ಒತ್ತಾಯಿಸಿದ್ದಕ್ಕೆ ಮಹಿಳೆಯರು ಸೇರಿದಂತೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಆರೋಪಕಾರ್ಮಿಕರಿಗೆ ಬೆದರಿಕೆ ಹಾಕಿ ದೌರ್ಜನ್ಯ ಎಸಗಿರುವುದಕ್ಕೆ ಸಿಪಿಐ (ಎಂಎಲ್) ರೆಡ್ ಸ್ಟಾರ್ ಖಂಡನೆ ಹಲ್ಲೆಯಿಂದ ಗಾಯಗೊಂಡ ಕಾರ್ಮಿಕರು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.  ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಪಕ್ಷದ ಜಿಲ್ಲಾ ಸಮಿತಿ ನಿಯೋಗ ಕಾಂ. ಸಂದೀಪ್ ಬಿ.ಆರ್., ಕಾಂ. ಬಸವರಾಜ್, ಕಾಂ. ಶಂಕರ್ ಹಾಗೂ ಕಾಂ. ಗೋಪಾಲ್ ನಿಯೋಗದಲ್ಲಿದ್ದರು
ಘಟನೆಯ ಕುರಿತು ಗಾಯಗೊಂಡ ಕಾರ್ಮಿಕರಿಂದ ಮಾಹಿತಿ ಸಂಗ್ರಹಿಸಿದ ಮುಖಂಡರು

ಕಾರ್ಮಿಕರು ತಮ್ಮ ರಕ್ತ ಮತ್ತು ಬೆವರನ್ನು ಸುರಿಸಿ ಎಸ್ಟೇಟ್‌ಗಳನ್ನು ಕಟ್ಟಿದ್ದಾರೆ. ಅಂತಹ ಕಾರ್ಮಿಕರು ನ್ಯಾಯಯುತ ಕೂಲಿ ಕೇಳುವುದು ಅಪರಾಧವೇ ಎಂದು ಜಿಲ್ಲಾ ಸಮಿತಿಯ ಸಂದೀಪ್ ಪ್ರಶ್ನಿಸಿದ್ದಾರೆ. ಕೂಲಿ ಹೆಚ್ಚಳ ಕೇಳಿದರೆ ಹಲ್ಲೆ ನಡೆಸುವುದು, ಬೆದರಿಕೆ ಹಾಕುವುದು, ಮಹಿಳೆಯರ ಮೇಲೂ ದೌರ್ಜನ್ಯ ಎಸಗುವುದು ಜಮೀನ್ದಾರಿ ಗುಲಾಮಗಿರಿ ಪದ್ಧತಿಯನ್ನು ನೆನಪಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಜಿಲ್ಲೆಯ ಬಹುತೇಕ ಎಸ್ಟೇಟ್‌ಗಳಲ್ಲಿ ಕಾರ್ಮಿಕರಿಗೆ ಕನಿಷ್ಠ ಕೂಲಿ ಹಾಗೂ ಮೂಲಭೂತ ಸೌಲಭ್ಯಗಳು ಸಿಗುತ್ತಿಲ್ಲ ಎಂಬ ಆರೋಪವನ್ನೂ ಸಮಿತಿ ಮಾಡಿದೆ. ಕಾರ್ಮಿಕ ಕಾನೂನುಗಳು ಬಹಿರಂಗವಾಗಿ ಉಲ್ಲಂಘನೆಯಾಗುತ್ತಿದ್ದರೂ ಕಾರ್ಮಿಕ ಇಲಾಖೆ ಮತ್ತು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಟೀಕಿಸಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ಸಮಿತಿ ನಾಲ್ಕು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ ಹಲ್ಲೆ ನಡೆಸಿದ ಎಸ್ಟೇಟ್ ಮಾಲೀಕ ಮತ್ತು ಸಹಚರರನ್ನು ತಕ್ಷಣ ಬಂಧಿಸಬೇಕು.ಗಾಯಗೊಂಡ ಎಲ್ಲಾ ಕಾರ್ಮಿಕರಿಗೆ ಉಚಿತ ಚಿಕಿತ್ಸೆ ಹಾಗೂ ಸೂಕ್ತ ಪರಿಹಾರ ನೀಡಬೇಕು.ಕಾರ್ಮಿಕರ ಕೂಲಿ ಹೆಚ್ಚಳದ ಬೇಡಿಕೆಯನ್ನು ತಕ್ಷಣ ಈಡೇರಿಸಬೇಕು.ಜಿಲ್ಲೆಯ ಎಲ್ಲಾ ಎಸ್ಟೇಟ್‌ಗಳಲ್ಲಿನ ಕಾರ್ಮಿಕ ಕಾನೂನು ಉಲ್ಲಂಘನೆ ಬಗ್ಗೆ ತನಿಖೆ ನಡೆಸಬೇಕು.ಅಲ್ಲದೆ, ಕೂಲಿ ಹೆಚ್ಚಳ ಕೇಳಿದ ಕಾರಣಕ್ಕೆ ಯಾವುದೇ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಬಾರದು ಅಥವಾ ಬೆದರಿಸಬಾರದು ಎಂದು ಆಗ್ರಹಿಸಿದೆ.

ಒಟ್ಟಿನಲ್ಲಿ, ಬ್ರಹ್ಮಗಿರಿ ಎಸ್ಟೇಟ್ ಕಾರ್ಮಿಕರ ಪರವಾಗಿ ಹೋರಾಟಕ್ಕೆ ಸಿಪಿಐ (ಎಂಎಲ್) ರೆಡ್ ಸ್ಟಾರ್ ಜಿಲ್ಲಾ ಸಮಿತಿ ಸಜ್ಜಾಗಿದೆ. ಜಿಲ್ಲಾಡಳಿತ ಕೂಡಲೇ ಮಧ್ಯಪ್ರವೇಶಿಸಿ ನ್ಯಾಯ ಒದಗಿಸದಿದ್ದರೆ, ಗಾಯಗೊಂಡ ಕಾರ್ಮಿಕರು ಹಾಗೂ ಜಿಲ್ಲೆಯ ಇತರ ಕಾರ್ಮಿಕರನ್ನು ಒಗ್ಗೂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಕಾರ್ಮಿಕರಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಸಮಿತಿ ಸ್ಪಷ್ಟಪಡಿಸಿದೆ.

Add Zee News as a Preferred Source
TAGS:

About the Author

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ZEENEWS TRENDING STORIES