• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಶಿವಮೊಗ್ಗ
  • /Viral Video: ಶೋ ರೂಮ್‌ನಿಂದ ಆಚೆ ಬರ್ತಿದ್ದಂತೆಯೇ ಅಪಘಾತ: ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!

Viral Video: ಶೋ ರೂಮ್‌ನಿಂದ ಆಚೆ ಬರ್ತಿದ್ದಂತೆಯೇ ಅಪಘಾತ: ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶೋರೂಮ್‌ನಿಂದ ಹೊರಬರುತ್ತಿದ್ದ ಹೊಸ ಕಾರು ಚಾಲಕನ ನಿಯಂತ್ರಣ ತಪ್ಪಿ, ಬ್ಯಾರಿಕೇಡ್‌ಗೆ ಡಿ*ಕ್ಕಿ ಹೊಡೆದು ಮುಖ್ಯ ರಸ್ತೆಗೆ ನುಗ್ಗಿದೆ. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್‌ಗೆ ಕಾರು ಡಿ*ಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸಾಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಅಪಘಾತದ ದೃಶ್ಯ ಶೋರೂಮ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Written ByPuttaraj K Alur
Published: Oct 21, 2026, 10:38 AM IST|Updated: Oct 21, 2026, 10:52 AM IST
joinshare
Viral Video: ಶೋ ರೂಮ್‌ನಿಂದ ಆಚೆ ಬರ್ತಿದ್ದಂತೆಯೇ ಅಪಘಾತ: ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
Image Credit: Car Accident

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಹುಬ್ಬಳ್ಳಿ–ಧಾರವಾಡದಲ್ಲಿ ಇನ್ಮುಂದೆ AI ಟ್ರಾಫಿಕ್‌ ಕಣ್ಗಾವಲು: ನಿಯಮ ಉಲ್ಲಂಘಿಸಿದ್ರೆ ದಂಡ ಕಟ್ಟಲೇಬೇಕು!

ಹುಬ್ಬಳ್ಳಿ–ಧಾರವಾಡದಲ್ಲಿ ಇನ್ಮುಂದೆ AI ಟ್ರಾಫಿಕ್‌ ಕಣ್ಗಾವಲು: ನಿಯಮ ಉಲ್ಲಂಘಿಸಿದ್ರೆ ದಂಡ ಕಟ್ಟಲೇಬೇಕು!

2

ಕೆಪಿಎಸ್‌ಸಿ ವಿವಾದದ ಬೆನ್ನಲ್ಲೇ ಕೆಎಇ ಬಿರುಸು: 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ತಾತ್ಕಾಲಿಕ ಫಲಿತಾಂಶ ಪ್ರಕಟ!

3

ಚಿನ್ನದ ಅಂಬಾರಿ ಹೊರುವ ಪ್ರಶಾಂತ ಆನೆಗೆ ವಿಶೇಷ ಮಜ್ಜನ, ಆರೈಕೆ

4

Viral Video: ಶೋ ರೂಮ್‌ನಿಂದ ಆಚೆ ಬರ್ತಿದ್ದಂತೆಯೇ ಅಪಘಾತ: ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!

5

“ನನ್ನ ಪ್ರೀತಿಯ ಸ್ವಯಂಸೇವಕರೇ…” RSS ಪಥಸಂಚಲನಕ್ಕೆ ಖರ್ಗೆ ಖಡಕ್ ಸೂಚನೆ; ಅನುಮತಿ ಪಡೆಯಲು ತಾಕೀತು!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Sagara Car Accident: ದಸರಾ ಹಬ್ಬದ ಸಂಭ್ರಮದಲ್ಲಿ ಹೊಸ ಕಾರು ಖರೀದಿಸಿ ಮನೆಗೆ ಕೊಂಡೊಯ್ಯುವ ಸಂತಸದಲ್ಲಿದ್ದವರಿಗೆ ಆಘಾತಕಾರಿ ಘಟನೆ ಎದುರಾಗಿದೆ. ಶೋರೂಮ್‌ನಿಂದ ಹೊಸ ಕಾರನ್ನ ಹೊರತೆಗೆದ ಕೆಲವೇ ಕ್ಷಣಗಳಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಬ್ಯಾರಿಕೇಡ್‌ಗೆ ಡಿ*ಕ್ಕಿ ಹೊಡೆದು, ಬಳಿಕ ಮುಖ್ಯ ರಸ್ತೆಗೆ ನುಗ್ಗಿ ಬೈಕ್‌ಗೆ ಡಿ*ಕ್ಕಿ ಹೊಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದ ಈ ಅಪಘಾತದಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ದೃಶ್ಯ ಶೋರೂಮ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹೊಸ ಕಾರು ಖರೀದಿಸಿದ ಕ್ಷಣದಲ್ಲೇ ಅಪಘಾತ!

 

A new car being delivered for Dasara went out of control near a Maruti showroom in Sagar and rammed a bike. The rider and pillion rider sustained serious injuries and were hospitalised. The accident was captured on CCTV. Sagar Town Police have registered a case and begun an investigation. #Shivamogga #Karnataka

— Imran Khan (@KeypadGuerilla) October 20, 2026

 ಸಾಗರ ನಗರದ ಮಾರುತಿ ಕಾರು ಶೋರೂಮ್‌ ಬಳಿ ಈ ಘಟನೆ ನಡೆದಿದೆ. ದಸರಾ ಹಬ್ಬದ ಹಿನ್ನೆಲೆಯಲ್ಲಿ ಹೊಸ ಕಾರು ಖರೀದಿಸಿ, ಅದನ್ನ ಶೋರೂಮ್‌ನಿಂದ ಹೊರತೆಗೆದುಕೊಂಡು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಹೊಸ ಕಾರಿನೊಂದಿಗೆ ಮನೆಗೆ ತೆರಳಬೇಕಿದ್ದ ಗ್ರಾಹಕರಿಗೆ ಈ ಘಟನೆ ಆಘಾತ ತಂದಿದೆ. ಲಭ್ಯ ಮಾಹಿತಿಯ ಪ್ರಕಾರ, ಶೋರೂಮ್‌ನಿಂದ ಹೊರಬರುತ್ತಿದ್ದ ಹೊಸ ಕಾರು ಏಕಾಏಕಿ ನಿಯಂತ್ರಣ ತಪ್ಪಿದೆ. ಶೋರೂಮ್‌ ಮುಂಭಾಗದಲ್ಲಿ ಅಳವಡಿಸಲಾಗಿದ್ದ ಬ್ಯಾರಿಕೇಡ್‌ಗೆ ಕಾರು ಡಿ*ಕ್ಕಿ ಹೊಡೆದಿದೆ. 

 

ಬಳಿಕ ಬ್ಯಾರಿಕೇಡ್‌ ದಾಟಿ ಮುಖ್ಯ ರಸ್ತೆಗೆ ನುಗ್ಗಿದ ಕಾರು, ಆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್‌ಗೆ ಬಲವಾಗಿ ಡಿ*ಕ್ಕಿ ಹೊಡೆದಿದೆ. ಹೊಸ ಕಾರು ರಸ್ತೆಗಿಳಿದ ಕೆಲವೇ ಕ್ಷಣಗಳಲ್ಲಿ ನಡೆದ ಈ ಅಪಘಾತದಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕಾರು ನಿಯಂತ್ರಣ ತಪ್ಪಲು ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ಬೈಕ್‌ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯ

ಕಾರಿನ ಡಿ*ಕ್ಕಿಯ ರಭಸಕ್ಕೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಯಿಂದ ಗಾಯಾಳುಗಳಿಗೆ ತಕ್ಷಣವೇ ಚಿಕಿತ್ಸೆ ನೀಡುವ ಅಗತ್ಯ ಎದುರಾಗಿದೆ. ಕೂಡಲೇ ಅವರನ್ನ ಸಾಗರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.

ಹೊಸ ಕಾರು ಶೋರೂಮ್‌ನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿರುವುದರಿಂದ, ರಸ್ತೆ ಬಳಕೆದಾರರ ಸುರಕ್ಷತೆ ಮತ್ತು ವಾಹನ ಚಾಲನೆಯಲ್ಲಿನ ಎಚ್ಚರಿಕೆಯ ಕುರಿತು ಮತ್ತೊಮ್ಮೆ ಪ್ರಶ್ನೆಗಳು ಎದ್ದಿವೆ. ಶೋರೂಮ್‌ ಮುಂಭಾಗದ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿರುವಾಗ ಚಾಲಕರು ಹೆಚ್ಚಿನ ಜಾಗರೂಕತೆ ವಹಿಸುವುದು ಎಷ್ಟು ಮುಖ್ಯ ಎಂಬುದನ್ನ ಈ ಘಟನೆ ನೆನಪಿಸಿದೆ.

ಸಿಸಿಟಿವಿಯಲ್ಲಿ ಸೆರೆಯಾದ ಭೀಕರ ದೃಶ್ಯ!

ಅಪಘಾತದ ಸಂಪೂರ್ಣ ದೃಶ್ಯ ಶೋರೂಮ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದೃಶ್ಯಗಳಲ್ಲಿ ಹೊಸ ಕಾರು ಶೋರೂಮ್‌ ಮುಂಭಾಗದ ಬ್ಯಾರಿಕೇಡ್‌ಗೆ ಡಿ*ಕ್ಕಿ ಹೊಡೆದು, ನಂತರ ಮುಖ್ಯ ರಸ್ತೆಗೆ ನುಗ್ಗಿ ಬೈಕ್‌ಗೆ ಅಪ್ಪಳಿಸುವುದು ಕಂಡುಬಂದಿದೆ ಎಂದು ವರದಿಯಾಗಿದೆ.

ಸಾಮಾನ್ಯವಾಗಿ ಹೊಸ ವಾಹನವನ್ನ ಖರೀದಿಸಿದ ಬಳಿಕ ಅದನ್ನ ಶೋರೂಮ್‌ನಿಂದ ಹೊರತೆಗೆದುಕೊಂಡು ಹೋಗುವ ಕ್ಷಣ ಗ್ರಾಹಕರಿಗೆ ವಿಶೇಷವಾಗಿರುತ್ತದೆ. ಆದರೆ ಸಾಗರದಲ್ಲಿ ಇದೇ ಕ್ಷಣ ಅಪಘಾತಕ್ಕೆ ಸಾಕ್ಷಿಯಾಗಿದೆ. ಸಿಸಿಟಿವಿ ದೃಶ್ಯಗಳು ಘಟನೆಯ ಕುರಿತು ಮಾಹಿತಿ ನೀಡಲು ಸಹಕಾರಿಯಾಗಲಿವೆ. ಆದರೆ ಕಾರು ಚಾಲಕನ ನಿಯಂತ್ರಣ ತಪ್ಪಲು ಕಾರಣವೇನು, ತಾಂತ್ರಿಕ ದೋಷವಿತ್ತೇ ಅಥವಾ ಚಾಲನೆಯಲ್ಲಿನ ಯಾವುದಾದರೂ ತಪ್ಪಿನಿಂದ ಅಪಘಾತ ಸಂಭವಿಸಿತೇ ಎಂಬುದನ್ನ ಅಧಿಕೃತ ತನಿಖೆಯ ಬಳಿಕವೇ ತಿಳಿಯಲಿದೆ.

ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಘಟನೆಗೆ ಸಂಬಂಧಿಸಿದಂತೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ಕುರಿತು ಮುಂದಿನ ತನಿಖೆ ಕೈಗೊಂಡಿದ್ದಾರೆ. ಅಪಘಾತದ ನಿಖರ ಕಾರಣ, ಘಟನೆಗೆ ಸಂಬಂಧಿಸಿದ ಪರಿಸ್ಥಿತಿಗಳು ಮತ್ತು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಒಟ್ನಲ್ಲಿ ಹೊಸ ಕಾರು ಖರೀದಿಸಿ ಶೋರೂಮ್‌ನಿಂದ ಹೊರಬರುತ್ತಿದ್ದ ಕ್ಷಣದಲ್ಲೇ ಸಂಭವಿಸಿದ ಈ ಅಪಘಾತ ಸಾಗರದಲ್ಲಿ ಆತಂಕ ಮೂಡಿಸಿದೆ. ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಾಹನ ಚಾಲಕರು ಎಚ್ಚರಿಕೆಯಿಂದ ವಾಹನ ಚಲಾಯಿಸುವುದು ಹಾಗೂ ರಸ್ತೆ ಸುರಕ್ಷತಾ ನಿಯಮಗಳನ್ನ ಪಾಲಿಸುವುದು ಇಂತಹ ಅಪಘಾತಗಳನ್ನ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

Add Zee News as a Preferred Source
TAGS:
Viral
Kannada News