• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಶಿವಮೊಗ್ಗ
  • /ನಾಳೆ ಶೃಂಗೇರಿ ಬಂದ್‌ಗೆ ಕರೆ ಸಿಎಂ ಭರವಸೆ ಬಳಿಕವೂ ಮಲೆನಾಡಿಗರಲ್ಲಿ ಭಾರೀ ಆತಂಕ

ನಾಳೆ ಶೃಂಗೇರಿ ಬಂದ್‌ಗೆ ಕರೆ ಸಿಎಂ ಭರವಸೆ ಬಳಿಕವೂ ಮಲೆನಾಡಿಗರಲ್ಲಿ ಭಾರೀ ಆತಂಕ

chikkamangaluru sringeri bandh for tomorrow: ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಮಲೆನಾಡಿನ ಜನರ ಆತಂಕ ಇನ್ನೂ ದೂರವಾಗಿಲ್ಲ..ಸಿಎಂ ಭರವಸೆ ನೀಡಿದ್ರೂ ಹೋರಾಟ ಮಾತ್ರ ಮುಂದುವರಿದಿದೆ..ನಾಳೆ ಶೃಂಗೇರಿ ಸಂಪೂರ್ಣ ಬಂದ್‌ಗೆ ರೈತ ಮತ್ತು ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ..

Written ByRamya. R. Gowda
Published: Sep 20, 2026, 01:38 PM IST|Updated: Sep 20, 2026, 01:50 PM IST
joinshare
ನಾಳೆ ಶೃಂಗೇರಿ ಬಂದ್‌ಗೆ ಕರೆ ಸಿಎಂ ಭರವಸೆ ಬಳಿಕವೂ ಮಲೆನಾಡಿಗರಲ್ಲಿ ಭಾರೀ ಆತಂಕ

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

chikkamangaluru sringeri bandh for tomorrow: ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಮಲೆನಾಡಿನ ಜನರ ಆತಂಕ ಇನ್ನೂ ದೂರವಾಗಿಲ್ಲ..ಸಿಎಂ ಭರವಸೆ ನೀಡಿದ್ರೂ ಹೋರಾಟ ಮಾತ್ರ ಮುಂದುವರಿದಿದೆ..ನಾಳೆ ಶೃಂಗೇರಿ ಸಂಪೂರ್ಣ ಬಂದ್‌ಗೆ ರೈತ ಮತ್ತು ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ.. 

ಇದೇ ವೇಳೆ, ಕಸ್ತೂರಿ ರಂಗನ್ ವರದಿ ಕುರಿತು ವಿಧಾನಮಂಡಲದ ವಿಶೇಷ ಅಧಿವೇಶನದಲ್ಲೂ ಚರ್ಚೆ ನಡೆಯಲಿದೆ..ಕೇರಳ ಮಾದರಿಯಲ್ಲಿ ಭೌತಿಕ ಸರ್ವೆ ನಡೆಸಿ ಕಾಡು–ನಾಡು ಪ್ರತ್ಯೇಕಿಸುವಂತೆ ಆಗ್ರಹ ಕೇಳಿಬಂದಿದೆ.. ಅಷ್ಟಕ್ಕೂ ಮಲೆನಾಡಿನ ಜನರ ಆತಂಕವೇನು? ಸರ್ಕಾರದ ಮುಂದಿರುವ ಸವಾಲುಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ..

ಮಲೆನಾಡಿನಲ್ಲಿ ಕರ್ಸೂರಿ ರಂಗನ್ ವರದಿ ಭೀತಿ
ಪಶ್ಚಿಮ ಘಟ್ಟದ ಸಂರಕ್ಷಣೆಗಾಗಿ ಶಿಫಾರಸು ಮಾಡಲಾಗಿರುವ ಕಸ್ತೂರಿ ರಂಗನ್ ವರದಿ ಜಾರಿ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ..ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ಮಲೆನಾಡಿನ ಜನರಲ್ಲಿ ಆತಂಕ ಮೂಡಿಸಿದೆ ಎಂಬ ಆರೋಪ ಕೇಳಿಬರುತ್ತಿದೆ..ವರದಿ ಜಾರಿಯಾದರೆ ಕೃಷಿ, ತೋಟಗಾರಿಕೆ, ಮನೆ ನಿರ್ಮಾಣ ಸೇರಿದಂತೆ ಹಲವು ಚಟುವಟಿಕೆಗಳ ಮೇಲೆ ನಿರ್ಬಂಧಗಳು ಎದುರಾಗಬಹುದು ಎಂಬ ಆತಂಕವನ್ನು ಸ್ಥಳೀಯರು ವ್ಯಕ್ತಪಡಿಸುತ್ತಿದ್ದಾರೆ..

ವಿಶೇಷ ಅಧಿವೇಶನ
ಇದೇ ವಿಚಾರ ಇದೀಗ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲೂ ಚರ್ಚೆಯಾಗುವ ಸಾಧ್ಯತೆ ಇದೆ..ನಾಳೆಯಿಂದ ವಿಧಾನಮಂಡಲದ ಉಭಯ ಸದನಗಳ ಮೂರು ದಿನಗಳ ವಿಶೇಷ ಅಧಿವೇಶನ ಆರಂಭವಾಗಲಿದೆ.. ಪಶ್ಚಿಮ ಘಟ್ಟ ಹಾಗೂ ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿಚಾರವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಿ ಚರ್ಚೆ ನಡೆಸುವ ಸಾಧ್ಯತೆ ಇದೆ.. ಜನರ ಆತಂಕಕ್ಕೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವೂ ಕೇಳಿಬರುತ್ತಿದೆ..

ಸಿಎಂ ಭರವಸೆ
ಇನ್ನು ಕಸ್ತೂರಿ ರಂಗನ್ ವರದಿ ವಿಚಾರವಾಗಿ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಪ್ರತಿಕ್ರಿಯಿಸಿದ್ದಾರೆ..ಜನರ ಭಾವನೆ ಮತ್ತು ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡೇ ಸರ್ಕಾರ ಮುಂದುವರಿಯಲಿದೆ ಎಂದು ಭರವಸೆ ನೀಡಿದ್ದಾರೆ..ಮಂಗಳೂರು, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ..
ಹಾಸನ ಜಿಲ್ಲೆಗೂ ತೆರಳಿ ಜನರ ಸಮಸ್ಯೆಗಳನ್ನು ತಿಳಿದುಕೊಳ್ಳುವುದಾಗಿ ಹೇಳಿದ್ದಾರೆ..ಎಲ್ಲರ ಅಭಿಪ್ರಾಯ ಪಡೆದು ಜನರ ಸಮಸ್ಯೆ ನಿವಾರಣೆಗೆ ಕಾರ್ಯಕ್ರಮ ರೂಪಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ..

ಶೃಂಗೇರಿ ಬಂದ್
ಆದ್ರೆ ಸಿಎಂ ಭರವಸೆ ನಡುವೆಯೂ ಮಲೆನಾಡಿನ ಜನರ ಆತಂಕ ಮಾತ್ರ ಕಡಿಮೆಯಾಗಿಲ್ಲ..ಇದಕ್ಕೆ ಸಾಕ್ಷಿ ಎಂಬಂತೆ ಸೆಪ್ಟೆಂಬರ್ 21ರಂದು ಶೃಂಗೇರಿ ಸಂಪೂರ್ಣ ಬಂದ್‌ಗೆ ಕರೆ ನೀಡಲಾಗಿದೆ..
ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಬಂದ್‌ಗೆ ಕರೆ ನೀಡಿದ್ದು, ರೈತ ಹಾಗೂ ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿವೆ..ವಿವಿಧ ರಾಜಕೀಯ ಪಕ್ಷಗಳ ಬೆಂಬಲವೂ ಬಂದ್‌ಗೆ ದೊರೆತಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ..

ಅಂಗಡಿ–ಮುಂಗಟ್ಟು ಬಂದ್ ಮಾಡುವುದರ ಜೊತೆಗೆ ವಾಹನ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ..ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡಿನ ಜನರಿಗೆ ತೊಂದರೆಯಾಗಲಿದೆ..ಜನರ ಆತಂಕವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು..ಕೇರಳ ಮಾದರಿಯಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬುದು ನಮ್ಮ ಆಗ್ರಹ ಎಂದು ರೈತರು ಒತ್ತಾಯಿಸಿದ್ದಾರೆ.


ಕೇರಳ ಮಾದರಿ ಪರಿಹಾರಕ್ಕೆ ಆಗ್ರಹ
ಇನ್ನು ಕಸ್ತೂರಿ ರಂಗನ್ ವರದಿ ವಿಚಾರವಾಗಿ ಕೇರಳ ಮಾದರಿಯ ಪರಿಹಾರ ಕಂಡುಕೊಳ್ಳಬೇಕು ಎಂಬ ಆಗ್ರಹವೂ ಕೇಳಿಬಂದಿದೆ..ಉಡುಪಿಯಲ್ಲಿ ಮಾತನಾಡಿರುವ ಕೋಟ ಶ್ರೀನಿವಾಸ ಪೂಜಾರಿ, ಸಮಾಜದ ಹಿತದ ಪ್ರಶ್ನೆ ಬಂದಾಗ ಎಲ್ಲಾ ಪಕ್ಷಗಳು ಒಟ್ಟಾಗಿ ನಿಲ್ಲಬೇಕು ಎಂದಿದ್ದಾರೆ..

ಕೇರಳದಲ್ಲಿ ಉಮರ್ ಸಮಿತಿ ಮಾದರಿಯಲ್ಲಿ ಭೌತಿಕ ಸರ್ವೆ ನಡೆಸಿ ಕಾಡು–ನಾಡನ್ನು ಪ್ರತ್ಯೇಕಿಸಲಾಗಿದೆ.. ಬಫರ್ ಝೋನ್ ಅನ್ನೂ ಸರಿಯಾಗಿ ಗುರುತಿಸಲಾಗಿದೆ..
 

ಕೇಂದ್ರ ಸರ್ಕಾರ ಕೇರಳದ ವರದಿಯನ್ನು ಒಪ್ಪಿಕೊಂಡಿದೆ ಎಂದು ಅವರು ಹೇಳಿದ್ದಾರೆ.. ಕರ್ನಾಟಕದಲ್ಲೂ ತಜ್ಞರ ಸಮಿತಿ ರಚಿಸಿ ಭೌತಿಕ ಸರ್ವೆ ನಡೆಸಬೇಕು..ನಂತರ ಕೇಂದ್ರಕ್ಕೆ ವರದಿ ಸಲ್ಲಿಸಿ ಕೇರಳ ಮಾದರಿಯಲ್ಲಿ ಪರಿಹಾರ ಕಂಡುಕೊಳ್ಳಬೇಕು ಎಂಬುದು ಅವರ ಆಗ್ರಹವಾಗಿದೆ.

ಕೋಟ ಶ್ರೀನಿವಾಸ ಪೂಜಾರಿ
ರಾಜ್ಯದ ಹಿತದ ವಿಚಾರದಲ್ಲಿ ಪಕ್ಷಭೇದ ಮರೆತು ಎಲ್ಲರೂ ಒಟ್ಟಾಗಿ ನಿಲ್ಲಬೇಕು.. ತಜ್ಞರ ಸಮಿತಿ ರಚಿಸಿ ಕೇಂದ್ರಕ್ಕೆ ವರದಿ ಕಳುಹಿಸಿದರೆ ಕೇರಳ ಮಾದರಿಯಲ್ಲಿ ನಮಗೂ ಪರಿಹಾರ ಸಿಗಬಹುದು..

ಒಂದೆಡೆ ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಮಲೆನಾಡಿನ ಜನರ ಆತಂಕ..ಮತ್ತೊಂದೆಡೆ ಜನರ ಭಯ ನಿವಾರಿಸುವುದಾಗಿ ಸಿಎಂ ಭರವಸೆ..ಇದರ ನಡುವೆ ನಾಳೆ ಶೃಂಗೇರಿ ಸಂಪೂರ್ಣ ಬಂದ್‌ಗೆ ಕರೆ ನೀಡಲಾಗಿದೆ.. ಮೂರು ದಿನಗಳ ವಿಶೇಷ ಅಧಿವೇಶನದಲ್ಲೂ ಈ ವಿಚಾರ ಪ್ರತಿಧ್ವನಿಸುವ ಸಾಧ್ಯತೆ ಇದೆ.. 

ಕೇರಳ ಮಾದರಿಯಲ್ಲಿ ವೈಜ್ಞಾನಿಕ ಹಾಗೂ ಭೌತಿಕ ಸರ್ವೆ ನಡೆಸಿ ಕಾಡು–ನಾಡಿನ ಗಡಿ ಸ್ಪಷ್ಟಪಡಿಸುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂಬ ಆಗ್ರಹ ಇದೀಗ ಮುನ್ನೆಲೆಗೆ ಬಂದಿದೆ.. ಮಲೆನಾಡಿನ ಆತಂಕಕ್ಕೆ ವಿಶೇಷ ಅಧಿವೇಶನದಲ್ಲಿ ಯಾವ ರೀತಿಯ ಪರಿಹಾರ ಸಿಗಲಿದೆ ಅನ್ನೋದು ಇದೀಗ ಕುತೂಹಲ ಮೂಡಿಸಿದೆ..

 

Add Zee News as a Preferred Source
TAGS:
Kannada News