• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಶಿವಮೊಗ್ಗ
  • /ಡೆಡ್ಲಿ ಬೈಕ್ ಆಕ್ಸಿಡೆಂಟ್‌; ಸವಾರ ಸ್ಥಳದಲ್ಲೇ ಸಾ*ವು, ಇಬ್ಬರಿಗೆ ಗಾಯ!

ಡೆಡ್ಲಿ ಬೈಕ್ ಆಕ್ಸಿಡೆಂಟ್‌; ಸವಾರ ಸ್ಥಳದಲ್ಲೇ ಸಾ*ವು, ಇಬ್ಬರಿಗೆ ಗಾಯ!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲು ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿ*ಕ್ಕಿಯಾಗಿ ಶಬ್ಬೀರ್ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ತೀರ್ಥಹಳ್ಳಿಯ ಜೆ.ಸಿ.ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸುತ್ತಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Written ByPuttaraj K Alur
Published: Nov 15, 2026, 15:14 IST|Updated: Nov 15, 2026, 15:35 IST
joinshare
ಡೆಡ್ಲಿ ಬೈಕ್ ಆಕ್ಸಿಡೆಂಟ್‌; ಸವಾರ ಸ್ಥಳದಲ್ಲೇ ಸಾ*ವು, ಇಬ್ಬರಿಗೆ ಗಾಯ!
Image Credit: Shivamogga Bike Accident

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Shivamogga Road Accident: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲು ಸಮೀಪ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನ ಸ್ಥಳೀಯ ನಿವಾಸಿ ಶಬ್ಬೀರ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನ ತಕ್ಷಣವೇ ತೀರ್ಥಹಳ್ಳಿಯ ಜಯಚಾಮರಾಜೇಂದ್ರ (JC) ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ತೀರ್ಥಹಳ್ಳಿ ಪಟ್ಟಣದ ಹೊರವಲಯದಲ್ಲಿರುವ ಬಾಳೆಬೈಲು ಬಳಿ ಈ ದುರಂತ ಸಂಭವಿಸಿದೆ. ಎರಡು ಬೈಕ್‌ಗಳು ಮುಖಾಮುಖಿಯಾಗಿ ಡಿ*ಕ್ಕಿಯಾಗಿದ್ದರಿಂದ ಅಪಘಾತದ ತೀವ್ರತೆಗೆ ಓರ್ವ ಸವಾರ ಪ್ರಾಣ ಕಳೆದುಕೊಂಡಿದ್ದಾನೆ. ಮತ್ತಿಬ್ಬರು ಸವಾರರು ಗಂಭೀರ ಗಾಯಗೊಂಡಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ದಾರಿಹೋಕರು ಗಾಯಾಳುಗಳ ನೆರವಿಗೆ ಧಾವಿಸಿದ್ದಾರೆ.

ಡಿ*ಕ್ಕಿಯ ರಭಸಕ್ಕೆ ಬೈಕ್‌ಗಳು ನಜ್ಜುಗುಜ್ಜು!

ಬಾಳೆಬೈಲು ಸಮೀಪದ ರಸ್ತೆಯಲ್ಲಿ ಎರಡು ಬೈಕ್‌ಗಳು ಪರಸ್ಪರ ಮುಖಾಮುಖಿಯಾಗಿ ಡಿ*ಕ್ಕಿ ಹೊಡೆದಿವೆ. ಡಿ*ಕ್ಕಿಯ ರಭಸಕ್ಕೆ ಬೈಕ್‌ಗಳು ಜಖಂಗೊಂಡಿದ್ದು, ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ ಎನ್ನಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಬ್ಬೀರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೊಂದು ಬೈಕ್‌ನಲ್ಲಿದ್ದ ಇಬ್ಬರು ಸವಾರರಿಗೂ ಗಂಭೀರ ಗಾಯಗಳಾಗಿವೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳದಲ್ಲಿದ್ದವರು ಗಾಯಾಳುಗಳನ್ನ ರಕ್ಷಿಸಲು ಮುಂದಾಗಿದ್ದಾರೆ. ಬಳಿಕ ಅವರನ್ನ ತೀರ್ಥಹಳ್ಳಿಯ ಜೆ.ಸಿ.ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಸದ್ಯ ಇಬ್ಬರಿಗೂ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಗಾಯಾಳುಗಳ ಆರೋಗ್ಯ ಸ್ಥಿತಿಯನ್ನ ಗಮನಿಸುತ್ತಿದ್ದಾರೆ.

ಸಿಸಿಟಿವಿಯಲ್ಲಿ ಸೆರೆಯಾದ ಅಪಘಾತದ ದೃಶ್ಯ!

ಬಾಳೆಬೈಲು ಬಳಿ ನಡೆದ ಈ ಅಪಘಾತದ ದೃಶ್ಯಗಳು ಸಮೀಪದ ಕಟ್ಟಡವೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಎರಡು ಬೈಕ್‌ಗಳು ವೇಗವಾಗಿ ಬಂದು ಮುಖಾಮುಖಿಯಾಗಿ ಡಿ*ಕ್ಕಿ ಹೊಡೆಯುವ ದೃಶ್ಯಗಳು ಕ್ಯಾಮೆರಾದಲ್ಲಿ ದಾಖಲಾಗಿವೆ. ಡಿ*ಕ್ಕಿಯ ಬಳಿಕ ಸವಾರರು ರಸ್ತೆಯ ಮೇಲೆ ಬಿದ್ದಿರುವ ದೃಶ್ಯಗಳೂ ಸೆರೆಯಾಗಿವೆ ಎನ್ನಲಾಗಿದೆ.

ಸದ್ಯ ಈ ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವಾಹನಗಳ ವೇಗ ಮತ್ತು ಚಾಲನೆಯ ನಿರ್ಲಕ್ಷ್ಯ ಈ ದುರ್ಘಟನೆಗೆ ಕಾರಣವಾಗಿರಬಹುದು ಎಂಬ ಮಾತುಗಳು ಕೇಳಿಬಂದಿವೆ. ಆದರೆ ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

ಸ್ಥಳಕ್ಕೆ ಪೊಲೀಸರ ಭೇಟಿ, ತನಿಖೆ ಆರಂಭ

ಅಪಘಾತದ ಮಾಹಿತಿ ದೊರೆಯುತ್ತಿದ್ದಂತೆಯೇ ತೀರ್ಥಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ಬೈಕ್‌ಗಳನ್ನ ರಸ್ತೆಯಿಂದ ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ.

ಮೃತ ಶಬ್ಬೀರ್ ಅವರ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಸ್ಥಳೀಯರಿಂದ ಮಾಹಿತಿ ಹಾಗೂ ಹೇಳಿಕೆಗಳನ್ನ ಪಡೆದುಕೊಂಡಿದ್ದಾರೆ. ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲನೆಗಾಗಿ ಪಡೆದುಕೊಂಡು ತನಿಖೆ ಮುಂದುವರಿಸಿದ್ದಾರೆ.

ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಬ್ಬೀರ್ ಅವರ ಸಾ*ವಿನಿಂದ ಕುಟುಂಬಸ್ಥರಲ್ಲಿ ದುಃಖ ಮಡುಗಟ್ಟಿದ್ದು, ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ. ಮತ್ತೊಂದೆಡೆ ಗಾಯಗೊಂಡಿರುವ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಟ್ನಲ್ಲಿ ಬಾಳೆಬೈಲು ಸಮೀಪ ನಡೆದ ಎರಡು ಬೈಕ್‌ಗಳ ಮುಖಾಮುಖಿ ಡಿ*ಕ್ಕಿ ಓರ್ವನ ಜೀವ ಬಲಿ ಪಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅಪಘಾತದ ಸಂಪೂರ್ಣ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ತಿರುವು ರಸ್ತೆಗಳು ಸೇರಿದಂತೆ ವಾಹನ ಸಂಚಾರದ ವೇಳೆ ಸವಾರರು ಎಚ್ಚರಿಕೆಯಿಂದ ಇರಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.

Add Zee News as a Preferred Source
TAGS:
Crime
Kannada News