• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಶಿವಮೊಗ್ಗ
  • /ಹಾಸನ ಡಿಸಿ, ಸಚಿವ ಶಿವಲಿಂಗೇಗೌಡ ವಿರುದ್ಧ ಲಂಚದ ಆರೋಪ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಚ್‌.ಡಿ.ಕುಮಾರಸ್ವಾಮಿ!

ಹಾಸನ ಡಿಸಿ, ಸಚಿವ ಶಿವಲಿಂಗೇಗೌಡ ವಿರುದ್ಧ ಲಂಚದ ಆರೋಪ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಚ್‌.ಡಿ.ಕುಮಾರಸ್ವಾಮಿ!

ಹಾಸನ ಜಿಲ್ಲಾಧಿಕಾರಿ ಹಾಗೂ ಸಚಿವ ಕೆ.ಎಂ.ಶಿವಲಿಂಗೇಗೌಡ ವಿರುದ್ಧ 70 ಲಕ್ಷಕ್ಕೂ ಅಧಿಕ ಲಂಚದ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಜಿಲ್ಲಾಧಿಕಾರಿ ಪಿಎ ಅವರದ್ದು ಎನ್ನಲಾದ ವಾಟ್ಸ್‌ಆ್ಯಪ್ ಚಾಟ್‌ಗಳನ್ನ ಸುದ್ದಿಗೋಷ್ಠಿಯಲ್ಲಿ ಬಹಿರಂಗಪಡಿಸಿದ್ದಾರೆ. ಈ ದಾಖಲೆಗಳನ್ನ ಅಪರಿಚಿತ ವ್ಯಕ್ತಿಯೊಬ್ಬರು ತಮಗೆ ನೀಡಿದ್ದಾರೆಂದು ತಿಳಿಸಿರುವ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಈ ಚಾಟ್‌ಗಳ ಕುರಿತು ಡಿಜಿ ಮತ್ತು ಐಜಿಪಿ ಡಾ. ಎಂ.ಎ.ಸಲೀಂ ತನಿಖೆ ನಡೆಸುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.

Written ByPuttaraj K Alur
Published: Nov 08, 2026, 13:54 IST|Updated: Nov 08, 2026, 14:06 IST
joinshare
ಹಾಸನ ಡಿಸಿ, ಸಚಿವ ಶಿವಲಿಂಗೇಗೌಡ ವಿರುದ್ಧ ಲಂಚದ ಆರೋಪ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಚ್‌.ಡಿ.ಕುಮಾರಸ್ವಾಮಿ!
Image Credit: HD Kumaraswamy

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Hassan DC Bribery Allegation: ಹಾಸನ ಜಿಲ್ಲಾಧಿಕಾರಿ ಹಾಗೂ ಸಚಿವ ಶಿವಲಿಂಗೇಗೌಡ ಅವರ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲಂಚದ ಗಂಭೀರ ಆರೋಪ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಪಿಎ ಶಶಿಕಿರಣ್ ಅವರಿಗೆ ಸಂಬಂಧಿಸಿದೆ ಎನ್ನಲಾದ ವಾಟ್ಸ್‌ಆ್ಯಪ್ ಚಾಟ್‌ಗಳನ್ನ ಬಹಿರಂಗಪಡಿಸಿರುವ ಅವರು, ಜಿಲ್ಲೆಯಲ್ಲಿ ಕ್ರಷರ್‌ಗಳ ಮೂರು ಕಡತಗಳ ವಿಲೇವಾರಿಗೆ ಸಂಬಂಧಿಸಿದಂತೆ ಲಕ್ಷಾಂತರ ರೂಪಾಯಿ ಹಣದ ಬೇಡಿಕೆ ಇಡಲಾಗಿದೆ ಎಂದು ಆರೋಪಿಸಿದ್ದಾರೆ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಹಾಸನದಲ್ಲಿ ಮಾತನಾಡಿದ ಕುಮಾರಸ್ವಾಮಿ, ತಮ್ಮ ಕೈಗೆ ಬಂದಿರುವ ವಾಟ್ಸ್‌ಆ್ಯಪ್ ಚಾಟ್‌ಗಳಲ್ಲಿನ ಸಂದೇಶಗಳನ್ನ ಸಾರ್ವಜನಿಕವಾಗಿ ಓದಿ ಹೇಳಿದ್ದಾರೆ. ಈ ದಾಖಲೆಗಳನ್ನ ಯಾರೋ ವ್ಯಕ್ತಿಯೊಬ್ಬರು ತಮಗೆ ತಂದುಕೊಟ್ಟಿದ್ದಾರೆಂದು ತಿಳಿಸಿರುವ ಅವರು, ಇದು ಕೇವಲ ಒಂದು ಜಿಲ್ಲೆಯ ಸಮಸ್ಯೆಯಲ್ಲ, ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಇದೇ ರೀತಿಯ ವಾತಾವರಣ ಇದೆ ಎಂದು ಆರೋಪಿಸಿದ್ದಾರೆ.

ಮೂರು ಕ್ರಷರ್ ಕಡತಗಳಿಗಾಗಿ 60 ಲಕ್ಷ ರೂ. ಬೇಡಿಕೆ?

ಕುಮಾರಸ್ವಾಮಿ ಓದಿದರೆನ್ನಲಾದ ವಾಟ್ಸ್‌ಆ್ಯಪ್ ಸಂದೇಶಗಳಲ್ಲಿ ಮೂರು ಕ್ರಷರ್‌ಗಳಿಗೆ ಸಂಬಂಧಿಸಿದ ಕಡತಗಳ ಕುರಿತು ಚರ್ಚೆ ನಡೆದಿದೆ. ಕಳೆದ ಮೂರು ವರ್ಷಗಳಿಂದ ಹಲವು ಕೆಲಸಗಳನ್ನ ಮಾಡಿಸಿಕೊಟ್ಟಿದ್ದು, ಕೇಳಿದಷ್ಟು ಹಣವನ್ನೂ ನೀಡಲಾಗಿದೆ. ಆದರೆ ಈಗ ಮತ್ತೆ ಹೆಚ್ಚಿನ ಹಣ ಕೇಳಲಾಗುತ್ತಿದೆ ಎಂಬ ಅರ್ಥದ ಸಂದೇಶವೊಂದು ಚಾಟ್‌ನಲ್ಲಿದೆ ಅಂತಾ ಅವರು ತಿಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಬಂದಿರುವ ಸಂದೇಶದಲ್ಲಿ, ಜಿಲ್ಲಾಧಿಕಾರಿಗಳಿಗೆ ನೀಡಬೇಕಾದ ಹಣದ ಜೊತೆಗೆ ಉಳಿದ ಮೊತ್ತವನ್ನ ತಮ್ಮ ವಿಭಾಗದ ಸಿಬ್ಬಂದಿಗೆ ಹಂಚಬೇಕಾಗುತ್ತದೆ. ಎಲ್ಲರಿಗೂ ಹಣ ನೀಡಿದ ಬಳಿಕ ತಮ್ಮ ಕೈಗೆ ಉಳಿಯುವುದು ಅಲ್ಪ ಮೊತ್ತ ಮಾತ್ರ ಎಂಬ ರೀತಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕಳೆದ ಏಪ್ರಿಲ್‌ನಲ್ಲಿ ಒಂದು ಕೆಲಸಕ್ಕಾಗಿ ಒತ್ತಾಯಪೂರ್ವಕವಾಗಿ 15 ಲಕ್ಷ ರೂಪಾಯಿ ಪಡೆಯಲಾಗಿದೆ ಎಂಬ ಆರೋಪವೂ ಚಾಟ್‌ನಲ್ಲಿ ವ್ಯಕ್ತವಾಗಿದೆ. ಜಿಲ್ಲಾಧಿಕಾರಿಗಳು ಒಂದು ರೂಪಾಯಿ ಕಡಿಮೆ ಮಾಡಬಾರದು ಎಂದು ಹೇಳುತ್ತಾರೆ ಎಂಬ ಅರ್ಥದ ಸಂದೇಶವನ್ನೂ ಅವರು ಓದಿ ಹೇಳಿದ್ದಾರೆ. ಹಿಂದೆ ಇದ್ದ ಜಿಲ್ಲಾಧಿಕಾರಿ ಸತ್ಯಭಾಮ ಅವರ ಅವಧಿಯಲ್ಲಿ ಕೆಲಸಗಳಿಗಾಗಿ ಕಡಿಮೆ ಹಣ ಕೇಳಲಾಗುತ್ತಿತ್ತು. ಆದರೆ ಈಗಿನ ಜಿಲ್ಲಾಧಿಕಾರಿಗಳು ಬಂದ ಬಳಿಕ ತಮಗೂ ಖರ್ಚು ಹೆಚ್ಚಾಗಿದೆ ಎಂಬ ಅರ್ಥದ ಮಾತುಗಳು ಚಾಟ್‌ನಲ್ಲಿ ದಾಖಲಾಗಿವೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಮೂರು ಕಡತಗಳಿಗೆ ಒಟ್ಟು 60 ಲಕ್ಷ ರೂ. ಮಾತುಕತೆ

ಮೂರು ಕ್ರಷರ್ ಕಡತಗಳಿಗೆ ಸಂಬಂಧಿಸಿದಂತೆ ಅಂತಿಮವಾಗಿ ಎಷ್ಟು ಹಣ ನೀಡಬೇಕು ಎಂದು ಮತ್ತೊಂದು ಕಡೆಯವರು ಪ್ರಶ್ನಿಸಿರುವ ಸಂದೇಶವಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯೆಯಾಗಿ ಒಟ್ಟು 60 ಲಕ್ಷ ರೂಪಾಯಿ ನೀಡಲು ಸಿದ್ಧರಿದ್ದರೆ ಮಾತುಕತೆ ನಡೆಸಬಹುದು. ಇಲ್ಲದಿದ್ದರೆ ಪದೇಪದೇ ಕಿರುಕುಳ ನೀಡಬಾರದು ಎಂಬ ಅರ್ಥದ ಸಂದೇಶ ಕಳುಹಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. ಇದೇ ವೇಳೆ ಸಚಿವರು ಹಾಗೂ ಇತರರ ಮೂಲಕ ವಿಷಯ ತಿಳಿಸುವುದಾಗಿ ಹೇಳಿದಾಗ, ಶಿವಲಿಂಗೇಗೌಡರು ಜಿಲ್ಲಾಧಿಕಾರಿಯನ್ನ ಬದಲಾವಣೆ ಮಾಡಿಸುವುದಾಗಿ ಹೇಳಿದ್ದರು ಎಂಬ ಉಲ್ಲೇಖವೂ ಚಾಟ್‌ನಲ್ಲಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

75 ಲಕ್ಷ ರೂ. ಪಾವತಿ ಮಾಡಿರುವುದಾಗಿ ಚಾಟ್‌ನಲ್ಲಿ ಉಲ್ಲೇಖ

ಈ ಪ್ರಕರಣದಲ್ಲಿ ಅಂತಿಮವಾಗಿ 75 ಲಕ್ಷ ರೂಪಾಯಿ ನೀಡಲಾಗಿದೆ ಎಂಬ ವಿಚಾರವನ್ನೂ ಕುಮಾರಸ್ವಾಮಿ ಪ್ರಸ್ತಾಪಿಸಿದ್ದಾರೆ. ಜಿಲ್ಲಾಧಿಕಾರಿಗಳು ಅರಸೀಕೆರೆ ತಹಶೀಲ್ದಾರ್ ಸಂತೋಷ್ ಅವರ ಮೂಲಕ ಮಾತನಾಡಿಸಿ 75 ಲಕ್ಷ ರೂಪಾಯಿ ಪಡೆದು ಸುಮ್ಮನಾಗಿದ್ದಾರೆ ಎಂಬ ಅರ್ಥದ ಸಂದೇಶ ಚಾಟ್‌ನಲ್ಲಿದೆ ಎಂದು ಅವರು ಹೇಳಿದ್ದಾರೆ. ಆ ಮೊತ್ತವನ್ನ ತಾನು ವಿವಿಧ ಕಡೆಗಳಿಂದ ಹೊಂದಿಸಿ ತಂದು ನೀಡಿದ್ದೇನೆ ಎಂಬುದಾಗಿಯೂ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಎಲ್ಲಾ ಸಂದೇಶಗಳನ್ನ ಸಾರ್ವಜನಿಕವಾಗಿ ಓದಿದ ಅವರು, ಜಿಲ್ಲೆಯಲ್ಲಿ ನಡೆಯುತ್ತಿದೆ ಎನ್ನಲಾದ ಹಣದ ವ್ಯವಹಾರಗಳ ಕುರಿತು ಪ್ರಶ್ನೆಗಳನ್ನ ಎತ್ತಿದ್ದಾರೆ.

ಡಿಜಿ-ಐಜಿಪಿ ತನಿಖೆಗೆ ಮುಂದಾಗುತ್ತಾರಾ?

ವಾಟ್ಸ್‌ಆ್ಯಪ್ ಚಾಟ್‌ಗಳಲ್ಲಿರುವ ಆರೋಪಗಳ ಕುರಿತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ತನಿಖೆ ನಡೆಸಬೇಕೆಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಡಿಜಿ ಮತ್ತು ಐಜಿಪಿ ಡಾ.ಎಂ.ಎ.ಸಲೀಂ ಅವರು ಈ ವಿಚಾರದ ಬಗ್ಗೆ ತನಿಖೆ ನಡೆಸುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ. ಈ ಹಣದ ವ್ಯವಹಾರಗಳಲ್ಲಿ ಮಧ್ಯವರ್ತಿಗಳು ಯಾರು? ಹಣ ಯಾರಿಗೆಲ್ಲ ಹೋಗುತ್ತಿದೆ? ಎಂಬುದನ್ನ ಪತ್ತೆಹಚ್ಚಬೇಕಿದೆ ಎಂದು ಅವರು ಹೇಳಿದ್ದಾರೆ.

ಹಾಸನಕ್ಕೆ ಆಗಮಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳುತ್ತಾರೆಯೇ ಎಂಬ ಪ್ರಶ್ನೆಯನ್ನೂ ಮುಂದಿಟ್ಟಿದ್ದಾರೆ. ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದನ್ನ ಜನರ ಮುಂದೆ ಇಡುವ ಉದ್ದೇಶದಿಂದಲೇ ಈ ವಿಚಾರವನ್ನ ಪ್ರಸ್ತಾಪಿಸುತ್ತಿರುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಇಂತಹ ವಿಷಯಗಳ ಬಗ್ಗೆ ಪದೇಪದೇ ಮಾತನಾಡಿ ಬೇಸರವಾಗಿದೆ ಎಂದಿರುವ ಅವರು, ಸಾರ್ವಜನಿಕರು ಈ ವಿಚಾರವನ್ನ ಬೇರೆ ರೀತಿಯಲ್ಲಿ ಅರ್ಥೈಸಿಕೊಳ್ಳಬಾರದು ಎಂದು ತಿಳಿಸಿದ್ದಾರೆ.

Add Zee News as a Preferred Source
TAGS:
Karnataka Politics
Kannada News