• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಶಿವಮೊಗ್ಗ
  • /ಹಿರಿಯೂರು ಉಪಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಯಲ್ಲಿ ಟಿಕೆಟ್ ಕದನ! ಹೆಚ್‌ಡಿಕೆ ಜೊತೆ ಚರ್ಚೆಗೆ ಕಮಲ ನಾಯಕರು ಸಜ್ಜು

ಹಿರಿಯೂರು ಉಪಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಯಲ್ಲಿ ಟಿಕೆಟ್ ಕದನ! ಹೆಚ್‌ಡಿಕೆ ಜೊತೆ ಚರ್ಚೆಗೆ ಕಮಲ ನಾಯಕರು ಸಜ್ಜು

ಮೈತ್ರಿ ಧರ್ಮವನ್ನ ಪಾಲಿಸುವುದರ ಜೊತೆಗೆ ಪಕ್ಷದ ರಾಜಕೀಯ ನೆಲೆಯನ್ನ ಉಳಿಸಿಕೊಳ್ಳುವುದು ಕಮಲ ನಾಯಕರ ಮುಂದಿರುವ ಉದ್ದೇಶವಾಗಿದೆ. ಆದರೆ ಜೆಡಿಎಸ್ ಕೂಡ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯನ್ನ ನಿಲ್ಲಿಸುವ ಪ್ರಯತ್ನದಲ್ಲಿರುವುದರಿಂದ ಅಂತಿಮವಾಗಿ ಯಾರಿಗೆ ಟಿಕೆಟ್ ಸಿಗಲಿದೆ ಎಂಬ ಕುತೂಹಲ ಮೂಡಿದೆ.

Written ByPuttaraj K Alur
Published: Oct 12, 2026, 09:54 AM IST|Updated: Oct 12, 2026, 10:09 AM IST
joinshare
ಹಿರಿಯೂರು ಉಪಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಯಲ್ಲಿ ಟಿಕೆಟ್ ಕದನ! ಹೆಚ್‌ಡಿಕೆ ಜೊತೆ ಚರ್ಚೆಗೆ ಕಮಲ ನಾಯಕರು ಸಜ್ಜು
Image Credit: Hiriyur Bypoll

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಮಂಡ್ಯದ ಕೆನ್ನಾಳು ಸರ್ಕಾರಿ ಶಾಲೆಯಲ್ಲಿ ಅಗ್ನಿ ಅವಘಡ, ಪೀಠೋಪಕರಣಗಳು ಸುಟ್ಟು ಭಸ್ಮ!

ಮಂಡ್ಯದ ಕೆನ್ನಾಳು ಸರ್ಕಾರಿ ಶಾಲೆಯಲ್ಲಿ ಅಗ್ನಿ ಅವಘಡ, ಪೀಠೋಪಕರಣಗಳು ಸುಟ್ಟು ಭಸ್ಮ!

2

ದಸರಾ ಸಂಭ್ರಮದ ನಡುವೆ ಪರೀಕ್ಷೆ ಕಿರಿಕ್‌.. ನವರಾತ್ರಿ ಹೊತ್ತಲ್ಲಿ ಪರೀಕ್ಷೆ ಆಯೋಜನೆಗೆ ವಿದ್ಯಾರ್ಥಿಗಳ ಆಕ್ರೋಶ

3

ʼಸ್ವಚ್ಛ ರಾಜಕಾರಣ ಮಾಡುತ್ತಿರುವೆʼ ಎನ್ನುವ ಸಚಿವ ಕೃಷ್ಣ ಭೈರೇಗೌಡರೇ... ಇದು ನಿಜವಾಗಿಯೂ ಎಷ್ಟು ಸತ್ಯ?

4

ಅಮಿರ್ ಖಾನ್ ಸೊಸೆಯ ಮೇಲೆ ಹಲ್ಲೆ ನಡೆದಿತ್ತಾ? ಬಿಡುಗಡೆಯಾದ ಬೆನ್ನಲ್ಲೇ ವಿಡಿಯೋ ಹಂಚಿಕೆ!

5

ಆರಂಭದಲ್ಲೇ ಸಿಕ್ಸರ್‌ಗಳ ಸುರಿಮಳೆ! ವಿಶ್ವ ದಾಖಲೆ ಮುರಿದ ಅಭಿಷೇಕ್ ಶರ್ಮಾ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Hiriyur Bypoll: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಚಟುವಟಿಕೆಗಳಿಗೆ ವೇದಿಕೆಯಾಗುವ ಲಕ್ಷಣಗಳು ಕಾಣಿಸುತ್ತಿವೆ. ಶಾಸಕ ಡಿ.ಸುಧಾಕರ್ ಅವರ ನಿಧನದಿಂದ ತೆರವಾಗಿರುವ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಅಭ್ಯರ್ಥಿಯನ್ನ ಕಣಕ್ಕಿಳಿಸುವ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ ಚರ್ಚೆ ತೀವ್ರಗೊಂಡಿದೆ. ಹಿರಿಯೂರು ಕ್ಷೇತ್ರವನ್ನ ತನ್ನಲ್ಲೇ ಉಳಿಸಿಕೊಳ್ಳಬೇಕು ಎಂಬುದು ಬಿಜೆಪಿ ನಾಯಕರ ಒತ್ತಾಸೆಯಾಗಿದ್ದರೆ, ಜೆಡಿಎಸ್ ಕೂಡ ತನ್ನ ಅಭ್ಯರ್ಥಿಯನ್ನ ಕಣಕ್ಕಿಳಿಸಲು ಆಸಕ್ತಿ ತೋರಿದೆ ಎನ್ನಲಾಗಿದೆ. ಹೀಗಾಗಿ ಮೈತ್ರಿಕೂಟದೊಳಗೆ ಟಿಕೆಟ್ ಹಂಚಿಕೆಯೇ ಪ್ರಮುಖ ರಾಜಕೀಯ ಸವಾಲಾಗಿ ಪರಿಣಮಿಸಿದೆ.

ಹಿರಿಯೂರು ಕ್ಷೇತ್ರದ ಮೇಲೆ ಬಿಜೆಪಿ ಕಣ್ಣು

ಹಿರಿಯೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕು ಎಂಬ ಅಭಿಪ್ರಾಯ ಪಕ್ಷದ ನಾಯಕರ ವಲಯದಲ್ಲಿ ಬಲವಾಗಿ ಕೇಳಿಬರುತ್ತಿದೆ. ಈ ಕುರಿತು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕ್ಷೇತ್ರದ ಟಿಕೆಟ್ ವಿಚಾರವಾಗಿ ಚರ್ಚೆ ನಡೆದಿದ್ದು, ಅಭ್ಯರ್ಥಿಯನ್ನ ಆಯ್ಕೆ ಮಾಡಿ ಹೈಕಮಾಂಡ್‌ಗೆ ನಾಲ್ಕು ಹೆಸರುಗಳನ್ನ ಶಿಫಾರಸು ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹಿರಿಯೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನ ಕಣಕ್ಕಿಳಿಸುವ ನಿಲುವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು, ಈ ವಿಚಾರದಲ್ಲಿ ಜೆಡಿಎಸ್ ನಾಯಕರ ವಿಶ್ವಾಸವನ್ನೂ ಪಡೆಯಲು ಬಿಜೆಪಿ ಮುಂದಾಗಿದೆ. 

ಮೈತ್ರಿ ಧರ್ಮವನ್ನ ಪಾಲಿಸುವುದರ ಜೊತೆಗೆ ಪಕ್ಷದ ರಾಜಕೀಯ ನೆಲೆಯನ್ನ ಉಳಿಸಿಕೊಳ್ಳುವುದು ಕಮಲ ನಾಯಕರ ಮುಂದಿರುವ ಉದ್ದೇಶವಾಗಿದೆ. ಆದರೆ ಜೆಡಿಎಸ್ ಕೂಡ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯನ್ನ ನಿಲ್ಲಿಸುವ ಪ್ರಯತ್ನದಲ್ಲಿರುವುದರಿಂದ ಅಂತಿಮವಾಗಿ ಯಾರಿಗೆ ಟಿಕೆಟ್ ಸಿಗಲಿದೆ ಎಂಬ ಕುತೂಹಲ ಮೂಡಿದೆ. ಮೈತ್ರಿಕೂಟದಲ್ಲಿ ಒಮ್ಮತದ ಅಭ್ಯರ್ಥಿಯನ್ನ ಆಯ್ಕೆ ಮಾಡುವುದು ಈಗ ಎರಡೂ ಪಕ್ಷಗಳ ನಾಯಕರಿಗೆ ಮುಖ್ಯವಾಗಿದೆ.

ಬಿಜೆಪಿಯಿಂದ ನಾಲ್ಕು ಹೆಸರುಗಳ ಚರ್ಚೆ

ಹಿರಿಯೂರು ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ನಾಲ್ವರು ಆಕಾಂಕ್ಷಿಗಳ ಹೆಸರುಗಳು ಚರ್ಚೆಯಲ್ಲಿವೆ ಎನ್ನಲಾಗಿದೆ. ರಾಜಣ್ಣ, ಮುರಳಿ, ಲಕ್ಷ್ಮಿಕಾಂತ ಮತ್ತು ದ್ಯಾಮಗೌಡ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ರಾಜಣ್ಣ, ಮುರಳಿ ಮತ್ತು ಲಕ್ಷ್ಮಿಕಾಂತ ಅವರು ಗೊಲ್ಲ ಸಮುದಾಯಕ್ಕೆ ಸೇರಿದವರಾಗಿದ್ದು, ದ್ಯಾಮಗೌಡ ಅವರು ಒಕ್ಕಲಿಗ ಸಮುದಾಯವನ್ನ ಪ್ರತಿನಿಧಿಸುತ್ತಾರೆ. ಸಾಮಾಜಿಕ ಸಮೀಕರಣಗಳು ಹಾಗೂ ಕ್ಷೇತ್ರದಲ್ಲಿನ ರಾಜಕೀಯ ಪ್ರಭಾವವನ್ನ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಯನ್ನ ಆಯ್ಕೆ ಮಾಡುವ ಸಾಧ್ಯತೆಯಿದೆ.

ಈ ನಾಲ್ಕು ಹೆಸರುಗಳ ಪೈಕಿ ರಾಜಣ್ಣ ಅವರ ಹೆಸರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಆದರೆ ಈ ಕುರಿತು ಪಕ್ಷದ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದು, ಸ್ಥಳೀಯ ಮುಖಂಡರ ಅಭಿಪ್ರಾಯ ಹಾಗೂ ಗೆಲುವಿನ ಸಾಧ್ಯತೆಗಳನ್ನ ಪರಿಗಣಿಸಿದ ಬಳಿಕವೇ ಅಂತಿಮ ನಿರ್ಧಾರ ಹೊರಬೀಳುವ ನಿರೀಕ್ಷೆಯಿದೆ.

ಕುಮಾರಸ್ವಾಮಿ ಜೊತೆ ಚರ್ಚೆಗೆ ಬಿಜೆಪಿ ನಾಯಕರು ಸಿದ್ಧತೆ

ಇನ್ನೊಂದೆಡೆ ಹಿರಿಯೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯನ್ನ ಕಣಕ್ಕಿಳಿಸಲು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಆಸಕ್ತಿ ತೋರಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಯಿಂದ ಬಿಜೆಪಿ ನಾಯಕರಲ್ಲಿ ಕ್ಷೇತ್ರವನ್ನ ಮೈತ್ರಿ ಪಕ್ಷಕ್ಕೆ ಬಿಟ್ಟುಕೊಡಬೇಕೇ ಅಥವಾ ಬಿಜೆಪಿ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕೇ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಹಿರಿಯೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನ ಕಣಕ್ಕಿಳಿಸಲು ಸಹಕರಿಸುವಂತೆ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಲು ಕಮಲ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಮೈತ್ರಿಕೂಟದೊಳಗೆ ಯಾವುದೇ ಗೊಂದಲ ಉಂಟಾಗದಂತೆ ಮಾತುಕತೆ ಮೂಲಕ ಸಮಸ್ಯೆಯನ್ನ ಬಗೆಹರಿಸುವುದು ನಾಯಕರ ಉದ್ದೇಶವಾಗಿದೆ. ಅಗತ್ಯವಿದ್ದರೆ ಬಿಜೆಪಿ ಹೈಕಮಾಂಡ್ ಮಟ್ಟದಿಂದಲೂ ಕುಮಾರಸ್ವಾಮಿ ಅವರೊಂದಿಗೆ ಈ ಕುರಿತು ಚರ್ಚೆ ನಡೆಸುವ ಸಾಧ್ಯತೆಯಿದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಉಪಚುನಾವಣೆಯ ಟಿಕೆಟ್ ಹಂಚಿಕೆ ಎರಡೂ ಪಕ್ಷಗಳ ನಡುವಿನ ಹೊಂದಾಣಿಕೆಗೆ ಪರೀಕ್ಷೆಯಾಗಲಿದೆ.

ಪೂರ್ಣಿಮಾ ಶ್ರೀನಿವಾಸ್ ರಾಜಕೀಯ ಬದಲಾವಣೆ ಕುತೂಹಲ

ಹಿರಿಯೂರು ಕ್ಷೇತ್ರದ ರಾಜಕೀಯ ಇತಿಹಾಸವೂ ಈ ಉಪಚುನಾವಣೆಗೆ ಮಹತ್ವ ನೀಡಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಪೂರ್ಣಿಮಾ ಶ್ರೀನಿವಾಸ್ ಅವರು ಗೆಲುವು ಸಾಧಿಸಿದ್ದರು. ಆದರೆ, ಅವರು ಈಗ ಕಾಂಗ್ರೆಸ್ ಪಕ್ಷದಲ್ಲಿರುವುದು ಕ್ಷೇತ್ರದ ರಾಜಕೀಯ ಲೆಕ್ಕಾಚಾರಕ್ಕೆ ಮತ್ತೊಂದು ಆಯಾಮ ನೀಡಿದೆ. ಈ ಹಿಂದೆ ಬಿಜೆಪಿ ಗೆಲುವು ಸಾಧಿಸಿದ್ದ ಕ್ಷೇತ್ರದಲ್ಲಿ ಈಗ ಯಾವ ಪಕ್ಷ ತನ್ನ ಅಭ್ಯರ್ಥಿಯನ್ನ ಕಣಕ್ಕಿಳಿಸಲಿದೆ, ಯಾರಿಗೆ ಟಿಕೆಟ್ ಸಿಗಲಿದೆ ಮತ್ತು ಮೈತ್ರಿಕೂಟದ ನಾಯಕರು ಯಾವ ರೀತಿಯ ಒಮ್ಮತಕ್ಕೆ ಬರಲಿದ್ದಾರೆ ಎಂಬುದರ ಮೇಲೆ ಮುಂದಿನ ರಾಜಕೀಯ ಬೆಳವಣಿಗೆಗಳು ಅವಲಂಬಿತವಾಗಿವೆ.

ಒಟ್ನಲ್ಲಿ ಹಿರಿಯೂರು ಉಪಚುನಾವಣೆ ಇನ್ನೂ ಅಭ್ಯರ್ಥಿಗಳ ಆಯ್ಕೆಯ ಹಂತದಲ್ಲಿದ್ದರೂ ಬಿಜೆಪಿ ಮತ್ತು ಜೆಡಿಎಸ್ ನಡುವೆ ಟಿಕೆಟ್ ವಿಚಾರವಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ತನ್ನ ಅಭ್ಯರ್ಥಿಯನ್ನ ಕಣಕ್ಕಿಳಿಸಲು ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರೊಂದಿಗಿನ ಮಾತುಕತೆ ನಿರ್ಣಾಯಕವಾಗುವ ಸಾಧ್ಯತೆಯಿದೆ. ಅಂತಿಮವಾಗಿ ಹಿರಿಯೂರು ಕ್ಷೇತ್ರ ಯಾರ ಪಾಲಾಗಲಿದೆ ಎಂಬುದನ್ನ ಕಾದು ನೋಡಬೇಕಿದೆ.

Add Zee News as a Preferred Source
TAGS:
Karnataka Politics
Kannada News