• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಶಿವಮೊಗ್ಗ
  • /ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ 56 ವರ್ಷದ ವ್ಯಕ್ತಿ ಬಲಿ? ಆಸ್ಪತ್ರೆ ಮುಂಭಾಗದಲ್ಲೇ ಸಾವು

ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ 56 ವರ್ಷದ ವ್ಯಕ್ತಿ ಬಲಿ? ಆಸ್ಪತ್ರೆ ಮುಂಭಾಗದಲ್ಲೇ ಸಾವು

ಕುಟುಂಬಸ್ಥರು ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಇಂದು ಮುಂಜಾನೆ ಮತ್ತೆ ಅವರ ಕೈ ನಡುಗಲು ಆರಂಭಿಸಿದ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಡಮಾಡದೆ ಖಾಸಗಿ ಓಮಿನಿ ವಾಹನದಲ್ಲಿ ಮೆಗ್ಗಾನ್ ಆಸ್ಪತ್ರೆಗೆ ಕರೆತಂದಿದ್ದರು.

Written ByChetana Devarmani
Published: Nov 02, 2026, 03:35 PM IST|Updated: Nov 02, 2026, 03:41 PM IST
joinshare
ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ 56 ವರ್ಷದ ವ್ಯಕ್ತಿ ಬಲಿ? ಆಸ್ಪತ್ರೆ ಮುಂಭಾಗದಲ್ಲೇ ಸಾವು

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಸ್ವದೇಶಿ ಬುಲೆಟ್‌ ಟ್ರೈನ್‌ ನಿರ್ಮಾಣದತ್ತ ಐತಿಹಾಸಿಕ ಹೆಜ್ಜೆ: ಬೆಂಗಳೂರಿನಲ್ಲಿ ಸ್ಕ್ವೀಜ್ ಟೆಸ್ಟ್‌ ಪರೀಕ್ಷೆ ಯಶಸ್ವಿ

ಸ್ವದೇಶಿ ಬುಲೆಟ್‌ ಟ್ರೈನ್‌ ನಿರ್ಮಾಣದತ್ತ ಐತಿಹಾಸಿಕ ಹೆಜ್ಜೆ: ಬೆಂಗಳೂರಿನಲ್ಲಿ ಸ್ಕ್ವೀಜ್ ಟೆಸ್ಟ್‌ ಪರೀಕ್ಷೆ ಯಶಸ್ವಿ

2

ರಾಮಾಯಣದ ಇಡೀ ಸಂಭಾವನೆಯನ್ನೇ ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ದೇಣಿಗೆ ಕೊಟ್ಟ ಖ್ಯಾತ ನಟ

3

2026 TVS Radeon ಹೊಸ ಬೈಕ್ ಲಾಂಚ್; ಸ್ಟೈಲಿಶ್‌ ಲುಕ್ ಹೊಂದಿರುವ ಇದರ ಬೆಲೆ ಎಷ್ಟು ಗೊತ್ತಾ?

4

ಇಂದು ನೂರಾರು ಕೋಟಿ ಸಂಭಾವನೆ ಪಡೆವ ಐಶ್ವರ್ಯಾ ರೈ ಬಚ್ಚನ್ 1992ರಲ್ಲಿ ಪಡೆದ ಸಂಭಾವನೆ ಎಷ್ಟು ಗೊತ್ತೇ!

5

ಕೇವಲ ₹1.38 ಲಕ್ಷಕ್ಕೆ 350 ಸಿಸಿ ಬೈಕ್! ಸ್ಟೈಲಿಶ್ ಲುಕ್, ಡೈಲಿ ರೈಡ್‌ಗೂ ಸೂಕ್ತವಾದ ಬೈಕ್‌ಗಳಿವು...

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಶಿವಮೊಗ್ಗ: ಜಿಲ್ಲೆಯ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಿಬ್ಬಂದಿಯ ನಿರ್ಲಕ್ಷ್ಯದ ಆರೋಪ ಕೇಳಿಬಂದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ 56 ವರ್ಷದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮುಂಭಾಗದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ತುರ್ತು ಸಂದರ್ಭದಲ್ಲಿ ಸ್ಟ್ರೆಚರ್ ಅಥವಾ ವೀಲ್‌ಚೇರ್ ವ್ಯವಸ್ಥೆ ಮಾಡದ ಕಾರಣ ಅರ್ಧ ಗಂಟೆಗೂ ಹೆಚ್ಚು ಕಾಲ ಕಾಯಬೇಕಾಯಿತು ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.

ಮೃತರನ್ನು ಶಿವಮೊಗ್ಗ ಜಿಲ್ಲೆಯ ಮುದುವಾಲ ಗ್ರಾಮದ ನಿವಾಸಿ ಕರಿಬಸಪ್ಪ (56) ಎಂದು ಗುರುತಿಸಲಾಗಿದೆ. ಸುಮಾರು ಒಂದು ವರ್ಷದ ಹಿಂದೆ ಕರಿಬಸಪ್ಪ ಅವರಿಗೆ ಸ್ಟ್ರೋಕ್ ಆಗಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಇಂದು ಮುಂಜಾನೆ ಮತ್ತೆ ಅವರ ಕೈ ನಡುಗಲು ಆರಂಭಿಸಿದ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಡಮಾಡದೆ ಖಾಸಗಿ ಓಮಿನಿ ವಾಹನದಲ್ಲಿ ಮೆಗ್ಗಾನ್ ಆಸ್ಪತ್ರೆಗೆ ಕರೆತಂದಿದ್ದರು.

ಆದರೆ, ಆಸ್ಪತ್ರೆಗೆ ಬಂದ ಬಳಿಕ ಕರಿಬಸಪ್ಪ ಅವರನ್ನು ಒಳಗೆ ಕರೆದೊಯ್ಯಲು ಸ್ಟ್ರೆಚರ್ ಅಥವಾ ವೀಲ್‌ಚೇರ್ ಲಭ್ಯವಿರಲಿಲ್ಲ ಎನ್ನಲಾಗಿದೆ. ಸುಮಾರು ಅರ್ಧ ಗಂಟೆ ಕಳೆದರೂ ಅಗತ್ಯ ವ್ಯವಸ್ಥೆ ಸಿಗದ ಹಿನ್ನೆಲೆಯಲ್ಲಿ ಕುಟುಂಬಸ್ಥರೇ ಅವರನ್ನು ಕೈಯಲ್ಲಿ ಎತ್ತಿಕೊಂಡು ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಈ ವೇಳೆ, ಕೈಯಲ್ಲಿ ಎತ್ತಿಕೊಂಡು ಹೋಗಲು ಅವಕಾಶವಿಲ್ಲ ಎಂದು ಆಸ್ಪತ್ರೆಯ ಭದ್ರತಾ ಸಿಬ್ಬಂದಿ ತಡೆದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಕರಿಬಸಪ್ಪ ಅವರು ಆಸ್ಪತ್ರೆಯ ಮುಂಭಾಗದಲ್ಲೇ ಮೃತಪಟ್ಟಿದ್ದಾರೆ. ತುರ್ತು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬಂದಿದ್ದ ವ್ಯಕ್ತಿಗೆ ಸಕಾಲದಲ್ಲಿ ಅಗತ್ಯ ನೆರವು ಸಿಗಲಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯಿಂದ ಕೋಪಗೊಂಡ ಮೃತರ ಕುಟುಂಬಸ್ಥರು ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಮೆಗ್ಗಾನ್ ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಜೀವ ಉಳಿಸಿಕೊಳ್ಳಲು ಆಸ್ಪತ್ರೆಗೆ ಬಂದರೆ ಜೀವವನ್ನೇ ತೆಗೆದಿದ್ದೀರಾ’ ಎಂದು ಕಿಡಿಕಾರಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯದ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಆಸ್ಪತ್ರೆಯ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.

 

Add Zee News as a Preferred Source
TAGS:
Kannada News