SOCIAL MEDIA

Newsletter

PARTNER SITES
Select Language Select State

ಶಿವಮೊಗ್ಗದಲ್ಲಿ ವಿದ್ಯುತ್ ಬೇಲಿಗೆ ಕಾಡಾನೆ ಬಲಿ.. ಕಡೂರಿನಲ್ಲಿ ಎಸ್ಟೇಟ್ ಕಾರ್ಮಿಕನ ಬರ್ಬರ ಹತ್ಯೆ!

Shivamoga wild elephant Death: ರಾಜ್ಯದಲ್ಲಿ ಎರಡು ಪ್ರತ್ಯೇಕ ಘಟನೆಗಳು ಆತಂಕ ಮೂಡಿಸಿವೆ. ಶಿವಮೊಗ್ಗದಲ್ಲಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ಬೇಲಿಗೆ ಸಿಲುಕಿ ಕಾಡಾನೆಯೊಂದು ಮೃತಪಟ್ಟಿದೆ. ಇತ್ತ ಚಿಕ್ಕಮಗಳೂರಿನಲ್ಲಿ ಎಸ್ಟೇಟ್ ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ಕೃಷಿ ಕಾರ್ಮಿಕನ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

Written By Ramya. R. Gowda
Published: Nov 07, 2026, 13:18 IST | Updated: Nov 07, 2026, 13:30 IST
Join

ರಾಜ್ಯದಲ್ಲಿ ಎರಡು ಪ್ರತ್ಯೇಕ ಘಟನೆಗಳು ಆತಂಕ ಮೂಡಿಸಿವೆ. ಶಿವಮೊಗ್ಗದಲ್ಲಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ಬೇಲಿಗೆ ಸಿಲುಕಿ ಕಾಡಾನೆಯೊಂದು ಮೃತಪಟ್ಟಿದೆ. ಇತ್ತ ಚಿಕ್ಕಮಗಳೂರಿನಲ್ಲಿ ಎಸ್ಟೇಟ್ ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ಕೃಷಿ ಕಾರ್ಮಿಕನ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಎರಡೂ ಘಟನೆಗಳು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿವೆ.

ಶಿವಮೊಗ್ಗದಲ್ಲಿ ವಿದ್ಯುತ್ ಬೇಲಿಗೆ ಕಾಡಾನೆ ಬಲಿ
ಕಾಡು ಪ್ರಾಣಿಗಳ ಜೀವಕ್ಕೆ ಕಂಟಕವಾಗ್ತಿದೆ ಅಕ್ರಮ ವಿದ್ಯುತ್ ಬೇಲಿ. ಶಿವಮೊಗ್ಗ ತಾಲೂಕಿನ ಬಸವಾಪುರ ಗ್ರಾಮದಲ್ಲಿ ಭತ್ತದ ಗದ್ದೆಯ ಸುತ್ತ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆಯೊಂದು ಮೃತಪಟ್ಟಿದೆ. ತಡರಾತ್ರಿ ಆಹಾರ ಅರಸಿ ಗದ್ದೆಗೆ ಬಂದಿದ್ದ ಆನೆಗೆ ವಿದ್ಯುತ್ ಸ್ಪರ್ಶಿಸಿದ್ದು, ಸ್ಥಳದಲ್ಲೇ ಪ್ರಾಣಬಿಟ್ಟಿದೆ. ಘಟನೆ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಅಲಿಮಿಯಾ ಅಲಿಯಾಸ್ ಸೈಯದ್ ಅಲಿ ಎಂಬಾತನನ್ನು ಬಂಧಿಸಿದ್ದಾರೆ. ಶಿವಮೊಗ್ಗ ಸಿಸಿಎಫ್ ಹನುಮಂತಪ್ಪ ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಕಡೂರು ತಾಲೂಕಿನ ಕುಪ್ಪಲು ಗ್ರಾಮದ ಎಸ್ಟೇಟ್ ಮನೆಯೊಂದರಲ್ಲಿ 52 ವರ್ಷದ ಕೃಷಿ ಕಾರ್ಮಿಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ತಿರುಪತಿಹಳ್ಳಿ ಗ್ರಾಮದ ಲಕ್ಷ್ಮಣ ಕೊಲೆಯಾದ ವ್ಯಕ್ತಿ. ಕುಪ್ಪಲು ಗ್ರಾಮದ ಎಸ್ಟೇಟ್ ನೋಡಿಕೊಳ್ಳುತ್ತಿದ್ದ ಲಕ್ಷ್ಮಣ ಅದೇ ಮನೆಯಲ್ಲಿ ವಾಸವಾಗಿದ್ದರು. ಶುಕ್ರವಾರ ಅಪರಿಚಿತ ದುಷ್ಕರ್ಮಿಗಳು ಮನೆಗೆ ನುಗ್ಗಿ ಕತ್ತು ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

 ಶಿವಮೊಗ್ಗ ತಾಲೂಕಿನ ಬಸವಾಪುರ ಗ್ರಾಮದಲ್ಲಿ ಭತ್ತದ ಗದ್ದೆಯ ಸುತ್ತಲೂ ಅಕ್ರಮವಾಗಿ ಹಾಕಲಾಗಿದ್ದ ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡು ಆನೆಯೊಂದು ಸಾವನ್ನಪ್ಪಿದೆ.
ತಡರಾತ್ರಿ ಆನೆ ಭತ್ತದ ಗದ್ದೆಗೆ ನುಗ್ಗಿದಾಗ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದೆ.ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಅಲಿಮಿಯಾ ಅಲಿಯಾಸ್ ಸೈಯದ್ ಅಲಿ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ.ಶಿವಮೊಗ್ಗ ಸಿಸಿಎಫ್ ಹನುಮಂತಪ್ಪ ಮತ್ತು ಇತರ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕುಪ್ಪಲು ಗ್ರಾಮದ ಎಸ್ಟೇಟ್ ಮನೆಯೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು 52 ವರ್ಷದ ಕೃಷಿ ಕಾರ್ಮಿಕನ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ.ಮೃತ ವ್ಯಕ್ತಿಯನ್ನು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ತಿರುಪತಿಹಳ್ಳಿ ಗ್ರಾಮದ ಲಕ್ಷ್ಮಣ ಎಂದು ಗುರುತಿಸಲಾಗಿದೆ. ಲಕ್ಷ್ಮಣ ಕುಪ್ಪಲು ಗ್ರಾಮದ ಬಳಿಯ ಎಸ್ಟೇಟ್ ಅನ್ನು ನೋಡಿಕೊಳ್ಳಲು ಕೆಲಸ ಮಾಡುತ್ತಿದ್ದು, ಅದೇ ಮನೆಯಲ್ಲಿ ವಾಸಿಸುತ್ತಿದ್ದರು. ಅಪರಿಚಿತ ದುಷ್ಕರ್ಮಿಗಳು ಎಸ್ಟೇಟ್ ಮನೆಗೆ ನುಗ್ಗಿ, ಅವರ ಕತ್ತು ಕೊಯ್ದು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ನಂತರ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾ‌ರ್ ದಯಾಮ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕಡೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.

ಒಂದೆಡೆ ಅಕ್ರಮ ವಿದ್ಯುತ್ ಬೇಲಿಗೆ ಕಾಡಾನೆ ಬಲಿಯಾಗಿದ್ದರೆ, ಮತ್ತೊಂದೆಡೆ ಎಸ್ಟೇಟ್ ಕಾರ್ಮಿಕನ ಬರ್ಬರ ಹತ್ಯೆ ನಡೆದಿದೆ. ಎರಡೂ ಪ್ರಕರಣಗಳ ಸಂಬಂಧ ತನಿಖೆ ಮುಂದುವರಿದಿದ್ದು, ಅರಣ್ಯ ಇಲಾಖೆ ಹಾಗೂ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

 

 

 

 

 

 

Add Zee News as a Preferred Source
TAGS:

About the Author

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ZEENEWS TRENDING STORIES