SOCIAL MEDIA

Newsletter

PARTNER SITES
Select Language Select State

ಇಸ್ತ್ರಿ ಮಾಡುವಾಗ ವಿದ್ಯುತ್ ಶಾರ್ಟ್ ಸರ್ಕ್ಯೂಟ್, 14 ವರ್ಷದ ಶಾಲಾ ಬಾಲಕ ಸಾವು

ಶಿವಮೊಗ್ಗ: ಮನೆಯಲ್ಲಿ ಬಟ್ಟೆ ಇಸ್ತ್ರಿ ಮಾಡುತ್ತಿದ್ದ ವೇಳೆ ಸಂಭವಿಸಿದ ವಿದ್ಯುತ್ ಅವಘಡಕ್ಕೆ 14 ವರ್ಷದ ಶಾಲಾ ಬಾಲಕ ಬಲಿಯಾಗಿದ್ದಾನೆ.

Written By Ramya. R. Gowda
Published: Oct 27, 2026, 02:11 PM IST | Updated: Oct 27, 2026, 02:53 PM IST
Join

ಶಿವಮೊಗ್ಗ: ಮನೆಯಲ್ಲಿ ಬಟ್ಟೆ ಇಸ್ತ್ರಿ ಮಾಡುತ್ತಿದ್ದ ವೇಳೆ ಸಂಭವಿಸಿದ ವಿದ್ಯುತ್ ಅವಘಡಕ್ಕೆ 14 ವರ್ಷದ ಶಾಲಾ ಬಾಲಕ ಬಲಿಯಾಗಿದ್ದಾನೆ. ಶಿವಮೊಗ್ಗದ ವಾದಿ-ಏ-ಹುದಾ ಪ್ರದೇಶದಲ್ಲಿ ಈ ದಾರುಣ ಘಟನೆ ನಡೆದಿದ್ದು, 9ನೇ ತರಗತಿಯಲ್ಲಿ ಓದುತ್ತಿದ್ದ ಉಮರ್ ಫಾರುಕ್ ಮೃತಪಟ್ಟಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಕಂಪ್ಲೀಟ್‌ ಮಾಹಿತಿ ಇಲ್ಲಿದೆ.

ಶಿವಮೊಗ್ಗದಲ್ಲಿ ವಿಧಿಯಾಟಕ್ಕೆ ಅರಳುವ ಮುನ್ನವೇ ಕಮರಿಹೋಯ್ತು ಬಾಲಕನ ಬದುಕು.. ಮನೆಯಲ್ಲಿ ಬಟ್ಟೆ ಇಸ್ತ್ರಿ ಮಾಡುತ್ತಿದ್ದ ವೇಳೆ ಸಂಭವಿಸಿದ ವಿದ್ಯುತ್ ಅವಘಡಕ್ಕೆ 14 ವರ್ಷದ ಉಮರ್ ಫಾರುಕ್ ಪ್ರಾಣ ಕಳೆದುಕೊಂಡಿದ್ದಾನೆ. 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕನಿಗೆ ಇಸ್ತ್ರಿ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ.

ವಿದ್ಯುತ್ ಸ್ಪರ್ಶಿಸುತ್ತಿದ್ದಂತೆಯೇ ಬಾಲಕ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹಾಗೂ ಸ್ಥಳೀಯರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದ್ದಾರೆ. ಆದರೆ ದುರದೃಷ್ಟವಶಾತ್, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಉಮರ್ ಫಾರುಕ್ ಕೊನೆಯುಸಿರೆಳೆದಿದ್ದಾನೆ. 

ಕಣ್ಣೆದುರೇ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ದುಃಖ ಹೇಳತೀರದಾಗಿದೆ. ಬಾಲಕನ ಅಕಾಲಿಕ ಮರಣದಿಂದ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಶಿವಮೊಗ್ಗದ ವಾದಿ-ಏ-ಹುದಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಸಂಬಂಧಿಸಿದೆ.

ಇತ್ತ ಗಾಜಿನ ಬ್ಲಾಕ್ ಬಿದ್ದ ವ್ಯಕ್ತಿ ಸಾವು

ಉಡುಪಿ: ಉಡುಪಿಯ ಖಾಸಗಿ ಗಾಜಿನ ಕಾರ್ಖಾನೆಯಲ್ಲಿ ಗಾಜಿನ ಬ್ಲಾಕ್‌ಗಳನ್ನು ಇಳಿಸುವಾಗ ಗಾಜಿನ ಬ್ಲಾಕ್ ಬಿದ್ದು ಸಾಮಾಜಿಕ ಕಾರ್ಯಕರ್ತ ಸುನೀಲ್ ಬೈಲಕೆರೆ (48) ಅಕ್ಟೋಬರ್ 26 ರಂದು ನಿಧನರಾದರು.ಪರಿಣಾಮ ಅವರ ಎದೆಗೆ ಪೆಟ್ಟು ಬಿದ್ದಿತ್ತು. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆಯೇ ಮೃತಪಟ್ಟರು ಎಂದು ವರದಿಗಳು ತಿಳಿಸಿವೆ.
 

ಘಟನೆಗೆ ಸಂಬಂಧಿಸಿದಂತೆ ಉಡುಪಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುನಿಲ್ ದಿವಂಗತ ಶಿರೂರು ಮಠದ ಶ್ರೀ ಲಕ್ಷ್ಮಿವರ ತೀರ್ಥ ಸ್ವಾಮೀಜಿಯವರ ಆಪ್ತರಾಗಿದ್ದರು ಮತ್ತು ಕಾರು ಚಾಲಕರಾಗಿಯೂ ಕೆಲಸ ಮಾಡಿದ್ದರು. ಕಲ್ಸಂಕದಲ್ಲಿ ಸಂಚಾರ ನಿರ್ವಹಣೆಯಲ್ಲಿ ಪೊಲೀಸರಿಗೆ ಸಹಾಯ ಮಾಡಿದ್ದರು.


 

Add Zee News as a Preferred Source
TAGS:

About the Author

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.

ZEENEWS TRENDING STORIES