SOCIAL MEDIA

Newsletter

PARTNER SITES
Select Language Select State

ಶಿವಮೊಗ್ಗ ದಸರಾ ಅಂಬಾರಿ ಅವಘಡ ಪ್ರಕರಣ: ಸೋಮಣ್ಣ ಆನೆ ಬಗ್ಗೆ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

ಶಿವಮೊಗ್ಗ ದಸರಾ ಅಂಬಾರಿ ಮೆರವಣಿಗೆಯಲ್ಲಿ ಸೋಮಣ್ಣ ಆನೆ ಗಲಿಬಿಲಿಗೊಂಡ ಘಟನೆಗೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ. ಮಾನವ ಹಾನಿ ಸಂಭವಿಸದಿದ್ದರೂ ಘಟನೆಯಿಂದ ಎಚ್ಚೆತ್ತುಕೊಳ್ಳಬೇಕಿದೆ ಎಂದು ಹೇಳಿದ್ದಾರೆ. ಸಿಸಿಎಫ್ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಸೋಮವಾರ ಮತ್ತೊಮ್ಮೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ. ಘಟನೆ ಕುರಿತು ನ್ಯಾಯಾಂಗ ತನಿಖೆಗೂ ಒತ್ತಾಯಿಸುವುದಾಗಿ ಹೇಳಿದ ಅವರು, ವಾಸ್ತವಾಂಶ ಮತ್ತು ಮಾಧ್ಯಮ ವರದಿಗಳನ್ನ ಪರಿಗಣಿಸಿ ಸರ್ಕಾರ ವೈಜ್ಞಾನಿಕವಾಗಿ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ.

Written By Puttaraj K Alur
Published: Oct 24, 2026, 05:43 PM IST | Updated: Oct 24, 2026, 05:58 PM IST
Image Credit: Somanna Elephant
Join

Somanna Elephant Incident: ಶಿವಮೊಬ್ಬ ದಸರಾ ಹಬ್ಬದ ಕೊನೆಯ ದಿನ ಅಂಬಾರಿ ಮೆರವಣಿಗೆಯಲ್ಲಿ ಸೋಮಣ್ಣ ಆನೆ ಗಲಿಬಿಲಿಗೊಂಡು ಓಡಿದ ಘಟನೆಗೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಘಟನೆಯಲ್ಲಿ ಮಾನವ ಹಾನಿ ಸಂಭವಿಸದಿದ್ದರೂ ಇದರಿಂದ ಎಚ್ಚೆತ್ತುಕೊಳ್ಳಬೇಕಿದೆ ಎಂದು ಹೇಳಿದ್ದಾರೆ. ಘಟನೆಗೆ ಕಾರಣವೇನು ಎಂಬುದರ ಕುರಿತು ಮೊದಲ ದಿನದಿಂದಲೇ ಮಾಹಿತಿ ಪಡೆದುಕೊಳ್ಳುತ್ತಿದ್ದು, ಅಧಿಕಾರಿಗಳೊಂದಿಗೆ ಸಭೆ ನಡೆಸಿರುವುದಾಗಿ ತಿಳಿಸಿದ್ದಾರೆ.

ದಸರಾ ಆಚರಣೆ ನಡುವೆ ನಡೆದ ಘಟನೆ

ಈ ಬಾರಿಯ ದಸರಾ ಹಬ್ಬದ ಎಲ್ಲಾ ದಿನಗಳಲ್ಲೂ ವಿಜೃಂಭಣೆಯಿಂದ ಕಾರ್ಯಕ್ರಮಗಳು ನಡೆದಿವೆ. ಆದರೆ ಕೊನೆಯ ದಿನದ ಅಂಬಾರಿ ಮೆರವಣಿಗೆಯ ಸಂದರ್ಭದಲ್ಲಿ ಒಂದು ಘಟನೆ ಸಂಭವಿಸಿದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. ಈ ಘಟನೆಯ ಬಗ್ಗೆ ಸರ್ಕಾರ ಈಗಾಗಲೇ ಮಾಹಿತಿ ಪಡೆದುಕೊಂಡಿದ್ದು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ಇನ್ನಷ್ಟು ಮಾಹಿತಿ ಪರಿಶೀಲಿಸಬೇಕಿದೆ ಎಂದು ಹೇಳಿರುವ ಸಚಿವರು, ಕೆಲವು ಪ್ರಶ್ನೆಗಳಿಗೆ ಉತ್ತರ ನೀಡುವ ಮೊದಲು ಮಾಹಿತಿ ಪಡೆದುಕೊಳ್ಳಬೇಕಿದೆ ಎಂದಿದ್ದಾರೆ. ಘಟನೆ ನಡೆದ ದಿನದಿಂದಲೇ ತಾವು ನಿರಂತರವಾಗಿ ಅಪ್‌ಡೇಟ್‌ಗಳನ್ನ ಪಡೆಯುತ್ತಿದ್ದು, ಅಧಿಕಾರಿಗಳೊಂದಿಗೆ ಸಭೆ ನಡೆಸಿರುವುದಾಗಿ ವಿವರಿಸಿದ್ದಾರೆ.

ಸೋಮಣ್ಣ ಆನೆ ಆಯ್ಕೆ ನಿಯಮದ ಪ್ರಕಾರ ನಡೆದಿದೆ

ಅಂಬಾರಿ ಹೊರುವ ಆನೆಯ ಆಯ್ಕೆ ಹಾಗೂ ತಾಲೀಮು ನಡೆಸುವ ವಿಚಾರದಲ್ಲಿ ನಿಗದಿತ ಮಾರ್ಗಸೂಚಿಗಳಿವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಅಂಬಾರಿ ಹೊರುವ ಆನೆಯನ್ನ ಆಯ್ಕೆ ಮಾಡುವ ಪ್ರಕ್ರಿಯೆ ಜವಾಬ್ದಾರಿಯುತವಾಗಿ ಹಾಗೂ ನಿಯಮಗಳ ಪ್ರಕಾರ ನಡೆದಿದೆ ಎಂದು ತಿಳಿಸಿದ್ದಾರೆ. ಸೋಮಣ್ಣ ಆನೆ ಅಂಬಾರಿ ಹೊರುವ ಬಗ್ಗೆ ಗೊಂದಲವಿರಲಿಲ್ಲ. ಎಲ್ಲರ ಒಮ್ಮತದಿಂದಲೇ ಸೋಮಣ್ಣ ಆನೆಯನ್ನ ಆಯ್ಕೆ ಮಾಡಲಾಗಿತ್ತು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ತಾಲೀಮು ನಡೆಸಲಾಗಿದೆ ಎಂದೂ ಹೇಳಿದ್ದಾರೆ.

ಸೋಮಣ್ಣ ಆನೆ ಗಲಿಬಿಲಿಯಿಂದ ಘಟನೆ

ಅಂಬಾರಿ ಮೆರವಣಿಗೆಯಲ್ಲಿ ಯಾವುದೇ ನ್ಯೂನತೆ ಆಗಿಲ್ಲವೆಂದು ಹೇಳಿರುವ ಮಧು ಬಂಗಾರಪ್ಪ, ಸೋಮಣ್ಣ ಆನೆ ಗಲಿಬಿಲಿಗೊಂಡಿದ್ದರಿಂದ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ. ಆನೆ ಗಾಬರಿಗೊಂಡು ಜನರ ಕಡೆಗೆ ತಿರುಗಿ ಬರದೆ, ಹೋಗಬೇಕಾದ ದಿಕ್ಕಿನಲ್ಲೇ ತೆರಳಿದೆ ಎಂದು ಹೇಳಿದ್ದಾರೆ. ಆನೆ ಗಲಿಬಿಲಿಗೊಂಡು ಈ ಘಟನೆ ನಡೆದಿದ್ದು, ಅದು ಅತಿರೇಕದ ಪರಿಸ್ಥಿತಿಗೆ ಹೋಗದೆ ಎಚ್ಚರಿಕೆ ನೀಡಿದಂತಾಗಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ. ಘಟನೆಯಲ್ಲಿ ಮಾನವ ಹಾನಿ ಸಂಭವಿಸದಿದ್ದರೂ ಇಂತಹ ಸಂದರ್ಭಗಳಿಂದ ಪಾಠ ಕಲಿಯಬೇಕಿದೆ ಎಂದು ತಿಳಿಸಿದ್ದಾರೆ.

ಸಿಸಿಎಫ್ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆ

ಈ ಘಟನೆಯ ಕುರಿತು ಸಿಸಿಎಫ್ ಆಂತರಿಕ ತನಿಖೆ ನಡೆಸಿ ಸತ್ಯಾಸತ್ಯತೆ ಕುರಿತ ವರದಿಯನ್ನ ಸರ್ಕಾರಕ್ಕೆ ಸಲ್ಲಿಸಿದ್ದಾರೆ ಎಂದು ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದ ಎಲ್ಲಾ ಅಂಶಗಳನ್ನ ಸರ್ಕಾರ ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ. ಸೋಮವಾರ ಮತ್ತೊಮ್ಮೆ ಈ ವಿಚಾರವಾಗಿ ಚರ್ಚೆ ನಡೆಸುವುದಾಗಿ ತಿಳಿಸಿರುವ ಸಚಿವರು, ಶಿವಮೊಗ್ಗ ಜಿಲ್ಲೆ ತಮ್ಮ ಜಿಲ್ಲೆಯಾಗಿದ್ದು, ಇಲ್ಲಿನ ಭಾವನೆಗಳು ಮತ್ತು ಪರಂಪರೆಗೆ ತಾವು ಗೌರವ ನೀಡುವುದಾಗಿ ಹೇಳಿದ್ದಾರೆ. ಅದೇ ವೇಳೆ, ಸರ್ಕಾರ ವೈಜ್ಞಾನಿಕವಾಗಿ ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ನ್ಯಾಯಾಂಗ ತನಿಖೆಗೂ ಒತ್ತಾಯಿಸುವುದಾಗಿ ಹೇಳಿಕೆ

ಘಟನೆಗೆ ಸಂಬಂಧಿಸಿದ ವಾಸ್ತವಾಂಶಗಳು ಹಾಗೂ ಮಾಧ್ಯಮಗಳಲ್ಲಿ ಬಂದ ವರದಿಗಳನ್ನ ಪರಿಗಣಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಚರ್ಚೆಯಾದ ಎಲ್ಲಾ ವಿಚಾರಗಳನ್ನ ಸರ್ಕಾರದ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ನ್ಯಾಯಾಂಗ ತನಿಖೆ ನಡೆಸುವಂತೆಯೂ ತಾವು ಒತ್ತಾಯಿಸುವುದಾಗಿ ಸಚಿವರು ಹೇಳಿದ್ದಾರೆ. ಬೆಳ್ಳಿ ಮಂಟಪಕ್ಕೆ ಹಾನಿಯಾದಾಗ ನೋವಾಗುತ್ತದೆ ಎಂದು ಹೇಳಿದ ಅವರು, ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಿಸಿದ ನಿರ್ಧಾರಗಳನ್ನ ಧಾರ್ಮಿಕ ಇಲಾಖೆ ಕೈಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

ಒಟ್ನಲ್ಲಿ ಶಿವಮೊಗ್ಗ ದಸರಾ ಅಂಬಾರಿ ಮೆರವಣಿಗೆಯಲ್ಲಿ ಸೋಮಣ್ಣ ಆನೆ ಗಲಿಬಿಲಿಗೊಂಡ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಮಾಹಿತಿ ಪಡೆದುಕೊಂಡಿದೆ. ತನಿಖಾ ವರದಿಯನ್ನ ಪರಿಶೀಲಿಸಿ, ವಾಸ್ತವ ಘಟನೆ ಮತ್ತು ಮಾಧ್ಯಮ ವರದಿಗಳನ್ನ ಪರಿಗಣಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 

ZEENEWS TRENDING STORIES