• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಶಿವಮೊಗ್ಗ
  • /ದೇವಿರಮ್ಮ ಬೆಟ್ಟದಲ್ಲಿ ದುರಂತ.. ಬೆಟ್ಟ ಹತ್ತುವಾಗಲೇ ಹೃದಯಾಘಾತ, ಭಕ್ತ ಸಾ*ವು!

ದೇವಿರಮ್ಮ ಬೆಟ್ಟದಲ್ಲಿ ದುರಂತ.. ಬೆಟ್ಟ ಹತ್ತುವಾಗಲೇ ಹೃದಯಾಘಾತ, ಭಕ್ತ ಸಾ*ವು!

Tragedy at Deviramma Hill : ಚಿಕ್ಕಮಗಳೂರಿನ ಪ್ರಸಿದ್ಧ ದೇವಿರಮ್ಮ ಬೆಟ್ಟದಲ್ಲಿ ದುರಂತ ಸಂಭವಿಸಿದೆ. ದೇವಿಯ ದರ್ಶನ ಪಡೆಯಲು ಬೆಟ್ಟ ಹತ್ತುತ್ತಿದ್ದ ಭಕ್ತನೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

Written ByRamya. R. Gowda
Published: Nov 08, 2026, 12:53 IST|Updated: Nov 08, 2026, 13:00 IST
joinshare
ದೇವಿರಮ್ಮ ಬೆಟ್ಟದಲ್ಲಿ ದುರಂತ.. ಬೆಟ್ಟ ಹತ್ತುವಾಗಲೇ ಹೃದಯಾಘಾತ, ಭಕ್ತ ಸಾ*ವು!

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Tragedy at Deviramma Hill : ಚಿಕ್ಕಮಗಳೂರಿನ ಪ್ರಸಿದ್ಧ ದೇವಿರಮ್ಮ ಬೆಟ್ಟದಲ್ಲಿ ದುರಂತ ಸಂಭವಿಸಿದೆ. ದೇವಿಯ ದರ್ಶನ ಪಡೆಯಲು ಬೆಟ್ಟ ಹತ್ತುತ್ತಿದ್ದ ಭಕ್ತನೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮತ್ತೊಂದೆಡೆ ಮಾಣಿಕ್ಯಧಾರ ಜಲಪಾತದ ಮಾರ್ಗದಲ್ಲಿ ಕಾಲು ಜಾರಿ ಬಿದ್ದ ಮತ್ತೊಬ್ಬ ಭಕ್ತನನ್ನು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ದೇವಿರಮ್ಮ ಬೆಟ್ಟದಲ್ಲಿ ಭಕ್ತರ ದಟ್ಟಣೆಯ ನಡುವೆ ಎರಡು ಪ್ರತ್ಯೇಕ ಘಟನೆಗಳು ಆತಂಕ ಮೂಡಿಸಿವೆ.

ದೇವಿಯ ದರ್ಶನಕ್ಕೆಂದು ಬೆಟ್ಟ ಹತ್ತುತ್ತಿದ್ದ ಭಕ್ತನಿಗೆ ವಿಧಿ ಕ್ರೂರವಾಗಿ ಕಾಡಿದೆ. ಬೆಟ್ಟ ಹತ್ತುವಾಗಲೇ ಹೃದಯಾಘಾತ ಸಂಭವಿಸಿ ಲಕ್ಷ್ಮಣ್ (35) ಎಂಬುವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕನ್ಯಾಡಿ ನಿವಾಸಿಯಾಗಿದ್ದ ಲಕ್ಷ್ಮಣ್, ಬೆಂಗಳೂರಿನ ಬಾಷ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಹೂವಿನಹಳ್ಳಿಯಲ್ಲಿರುವ ತಮ್ಮ ಭಾವನ ಮನೆಗೆ ಬಂದಿದ್ದ ಅವರು, ಬೆಳಗಿನ ಜಾವ ಭಾವನೊಂದಿಗೆ ದೇವಿರಮ್ಮ ಬೆಟ್ಟ ಹತ್ತಲು ತೆರಳಿದ್ದರು.

ಮಲ್ಲೇನಹಳ್ಳಿ ಕಡೆಯಿಂದ ಬೆಟ್ಟ ಹತ್ತುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದ ಲಕ್ಷ್ಮಣ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬೆಟ್ಟದ ಮೇಲೆ ದಟ್ಟ ಮಂಜು ಆವರಿಸಿತ್ತು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಬೆಟ್ಟದಿಂದ ಕೆಳಕ್ಕೆ ತಂದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಹಿಂದೆ ಲಕ್ಷ್ಮಣ್ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆದಿತ್ತು ಎಂಬ ಮಾಹಿತಿ ಲಭ್ಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರಕುಮಾರ್ ದಯಾಮ ತಿಳಿಸಿದ್ದಾರೆ.

ಇನ್ನು ಇದೇ ಬೆಟ್ಟದ ಮತ್ತೊಂದು ಮಾರ್ಗದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಮಾಣಿಕ್ಯಧಾರ ಜಲಪಾತದ ಭಾಗದ ಮಾರ್ಗದಲ್ಲಿ ತೆರಳುತ್ತಿದ್ದ ಮಂಡ್ಯ ಮೂಲದ ಸುನೀಲ್ (31) ಕಾಲು ಜಾರಿ ಬಿದ್ದಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಭಕ್ತರು ಅವರನ್ನು ರಕ್ಷಣೆ ಮಾಡಿ ಮೇಲಕ್ಕೆ ಕರೆತಂದಿದ್ದಾರೆ. ಅಸ್ವಸ್ಥಗೊಂಡಿದ್ದ ಸುನೀಲ್ ಅವರನ್ನು ಅಗ್ನಿಶಾಮಕ ಸಿಬ್ಬಂದಿ ಹೊತ್ತುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಂದಹಾಗೆ, ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ದೇವಿರಮ್ಮ ಬೆಟ್ಟದ ತಪ್ಪಲಿನಲ್ಲಿ ದೇವಿಯ ದೇಗುಲವಿದೆ. ವರ್ಷಕ್ಕೊಮ್ಮೆ ಮಾತ್ರ ದೇವಿಯ ಉತ್ಸವ ಮೂರ್ತಿಯನ್ನು ಬೆಟ್ಟದ ತುದಿಗೆ ಕೊಂಡೊಯ್ಯಲಾಗುತ್ತದೆ. ಈ ಬಾರಿ ಎರಡು ದಿನಗಳ ಕಾಲ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಲಕ್ಷಾಂತರ ಭಕ್ತರು ಬೆಟ್ಟ ಹತ್ತಿ ದೇವಿಯ ದರ್ಶನ ಪಡೆಯುತ್ತಿದ್ದಾರೆ. ಈ ನಡುವೆ ನಡೆದ ದುರಂತ ಭಕ್ತರಲ್ಲಿ ಆತಂಕ ಮೂಡಿಸಿದೆ.
ದೇವಿರಮ್ಮ ಬೆಟ್ಟಕ್ಕೆ ತೆರಳುವ ಭಕ್ತರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ. ಬೆಟ್ಟ ಹತ್ತುವಾಗ ಯಾವುದೇ ತೊಂದರೆ ಕಾಣಿಸಿಕೊಂಡರೂ ನಿರ್ಲಕ್ಷ್ಯ ಮಾಡದೆ ತಕ್ಷಣ ನೆರವು ಪಡೆಯುವುದು ಅತ್ಯಗತ್ಯವಾಗಿದೆ

Add Zee News as a Preferred Source
TAGS:
Kannada News