• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಶಿವಮೊಗ್ಗ
  • /ತಂದೆಯ ಅಂತ್ಯಸಂಸ್ಕಾರಕ್ಕೆ ಹೊರಟಿದ್ದ ಮಗನಿಗೂ ದಾರಿ ಮಧ್ಯೆಯೇ ಸಾ*ವು! ಲಾರಿ-ಕಾರು ಡಿ*ಕ್ಕಿಗೆ ಮೂವರು ಬಲಿ

ತಂದೆಯ ಅಂತ್ಯಸಂಸ್ಕಾರಕ್ಕೆ ಹೊರಟಿದ್ದ ಮಗನಿಗೂ ದಾರಿ ಮಧ್ಯೆಯೇ ಸಾ*ವು! ಲಾರಿ-ಕಾರು ಡಿ*ಕ್ಕಿಗೆ ಮೂವರು ಬಲಿ

ತಂದೆಯ ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನಿಂದ ಕುಷ್ಟಗಿಗೆ ತೆರಳುತ್ತಿದ್ದ ಕಾರು ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ಲಾರಿಗೆ ಡಿ*ಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಮೂವರು ಯುವಕರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Written ByPuttaraj K Alur
Published: Oct 07, 2026, 03:46 PM IST|Updated: Oct 07, 2026, 03:57 PM IST
joinshare
ತಂದೆಯ ಅಂತ್ಯಸಂಸ್ಕಾರಕ್ಕೆ ಹೊರಟಿದ್ದ ಮಗನಿಗೂ ದಾರಿ ಮಧ್ಯೆಯೇ ಸಾ*ವು! ಲಾರಿ-ಕಾರು ಡಿ*ಕ್ಕಿಗೆ ಮೂವರು ಬಲಿ
Image Credit: Chitradurga Road Accident

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಕರ್ನಾಟಕದಲ್ಲಿ ಬಸ್ ಟಿಕೆಟ್ ದರದ ಏರಿಕೆಯಾಗೋದು ಪಕ್ಕಾ!!

ಕರ್ನಾಟಕದಲ್ಲಿ ಬಸ್ ಟಿಕೆಟ್ ದರದ ಏರಿಕೆಯಾಗೋದು ಪಕ್ಕಾ!!

2

8ನೇ ವೇತನ ಆಯೋಗ: ಸರ್ಕಾರಿ ನೌಕರರ ಮೂಲ ವೇತನ ₹47,600 ದಿಂದ ₹1,22,332 ಮೀರುವ ಸಾಧ್ಯತೆ!

3

ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ.. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

4

ಮದುವೆ ದಿನವೇ ಅಪಘಾತ; ICUನಲ್ಲೇ ವಧುವಿಗೆ ತಾಳಿ ಕಟ್ಟಿದ ವರ! ಇದು ಅಪರೂಪದ ಮದುವೆ

5

ಮೈಸೂರು ದಸರಾ: ಮೂಲಸೌಕರ್ಯ, ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Hiriyur Road Accident: ತಂದೆಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಸ್ವಗ್ರಾಮದತ್ತ ತೆರಳುತ್ತಿದ್ದ ಕುಟುಂಬಕ್ಕೆ ದಾರಿಯಲ್ಲೇ ಮತ್ತೊಂದು ಆಘಾತ ಎದುರಾಗಿದೆ. ಚಲಿಸುತ್ತಿದ್ದ ಲಾರಿಯ ಟೈರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಲಾರಿಗೆ ಹಿಂಬದಿಯಿಂದ ಕಾರು ಡಿ*ಕ್ಕಿ ಹೊಡೆದ ಭೀಕರ ಅಪಘಾತದಲ್ಲಿ ಮೂವರು ಯುವಕರು ಮೃತಪಟ್ಟಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ನಡೆದಿದೆ. ಈ ಅಪಘಾತದಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  

ಮೃತರನ್ನ ಕೊಪ್ಪಳ ಜಿಲ್ಲೆಯ ಕುಷ್ಟಗಿ ಮೂಲದ ಶಶಿಧರ್ (22), ಮಂಜುನಾಥ್ (22) ಹಾಗೂ ಬಸವರಾಜ್ (21) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಹನುಮೇಶ್ (22) ಹಾಗೂ ಪ್ರವೀಣ್ (20) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.  

ತಂದೆಯ ಅಂತ್ಯಸಂಸ್ಕಾರಕ್ಕೆ ಹೊರಟಿದ್ದಾಗಲೇ ದುರಂತ!

ಮೃತ ಬಸವರಾಜ್ ಅವರ ತಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು ಎನ್ನಲಾಗಿದೆ. ತಂದೆಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಸವರಾಜ್ ಸೇರಿದಂತೆ ಐವರು ಬೆಂಗಳೂರಿನಿಂದ ಕುಷ್ಟಗಿ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದರು. ಆದರೆ ಸ್ವಗ್ರಾಮ ತಲುಪುವ ಮುನ್ನವೇ ಸಂಭವಿಸಿದ ಅಪಘಾತ ಮೂವರ ಜೀವವನ್ನೇ ಬಲಿ ಪಡೆದಿದೆ. ಮಂಗಳವಾರ ಸಂಜೆ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ವಾಹನಗಳು ಸಂಚರಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಐವರು ಸ್ನೇಹಿತರು ಬೆಂಗಳೂರಿನಿಂದ ಕುಷ್ಟಗಿ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.  

ಏಕಾಏಕಿ ಸ್ಫೋಟಗೊಂಡ ಲಾರಿ ಟೈರ್!

ಪ್ರಾಥಮಿಕ ಮಾಹಿತಿಯ ಪ್ರಕಾರ, ಮುಂದೆ ಸಾಗುತ್ತಿದ್ದ ಸರಕು ಸಾಗಣೆ ಲಾರಿಯ ಟೈರ್ ಏಕಾಏಕಿ ಸ್ಫೋಟಗೊಂಡಿದೆ. ಪರಿಣಾಮ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಭಾಗಕ್ಕೆ ತಿರುಗಿದೆ. ಇದೇ ವೇಳೆ ಲಾರಿಯ ಹಿಂದೆಯೇ ಬರುತ್ತಿದ್ದ ಸ್ವಿಫ್ಟ್ ಕಾರಿನ ಚಾಲಕನಿಗೆ ಪರಿಸ್ಥಿತಿ ನಿಭಾಯಿಸಲು ಸಮಯ ಸಿಗದೆ ಲಾರಿಯ ಹಿಂಭಾಗಕ್ಕೆ ರಭಸವಾಗಿ ಡಿ*ಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಡಿ*ಕ್ಕಿಯ ರಭಸ ಎಷ್ಟಿತ್ತೆಂದರೆ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನಲ್ಲಿದ್ದ ಶಶಿಧರ್ ಮತ್ತು ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಬಸವರಾಜ್ ಅವರನ್ನ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಲಾಯಿತಾದರೂ, ಚಿಕಿತ್ಸೆಗಾಗಿ ಸಾಗಿಸುವ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.  

ಇಬ್ಬರಿಗೆ ಗಂಭೀರ ಗಾಯ

ಅಪಘಾತದಲ್ಲಿ ಕಾರಿನಲ್ಲಿದ್ದ ಹನುಮೇಶ್ ಮತ್ತು ಪ್ರವೀಣ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳನ್ನ ತಕ್ಷಣ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ. ಸದ್ಯ ಇಬ್ಬರಿಗೂ ಹಿರಿಯೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ವರದಿಯಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಜಖಂಗೊಂಡ ವಾಹನಗಳನ್ನ ತೆರವುಗೊಳಿಸಿ ಹೆದ್ದಾರಿಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣ ಹಾಗೂ ಘಟನೆಗೆ ಸಂಬಂಧಿಸಿದ ಇತರ ಅಂಶಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

ಒಂದೇ ಕುಟುಂಬಕ್ಕೆ ಎರಡೆರಡು ಆಘಾತ!

ತಂದೆಯ ಸಾವಿನ ಸುದ್ದಿ ಕೇಳಿ ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದ ಬಸವರಾಜ್ ಅವರಿಗೂ ದಾರಿಯಲ್ಲೇ ಸಾ*ವು ಎದುರಾಗಿರುವುದು ಘಟನೆಯ ದುರಂತವನ್ನ ಮತ್ತಷ್ಟು ಹೆಚ್ಚಿಸಿದೆ. ಒಂದೆಡೆ ತಂದೆಯ ಅಗಲಿಕೆಯ ನೋವು, ಮತ್ತೊಂದೆಡೆ ಮಗನನ್ನೂ ಕಳೆದುಕೊಂಡ ಕುಟುಂಬದ ಸ್ಥಿತಿ ಸ್ಥಳೀಯರಲ್ಲಿ ತೀವ್ರ ನೋವು ಮೂಡಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಈ ಅಪಘಾತ ಮತ್ತೊಮ್ಮೆ ವಾಹನಗಳ ಸುರಕ್ಷತೆ ಹಾಗೂ ಟೈರ್ ನಿರ್ವಹಣೆಯ ಮಹತ್ವವನ್ನ ನೆನಪಿಸಿದೆ. ವಿಶೇಷವಾಗಿ ಭಾರೀ ಸರಕು ಸಾಗಣೆ ವಾಹನಗಳ ಟೈರ್‌ಗಳ ಸ್ಥಿತಿ, ವೇಗ ಮತ್ತು ನಿರ್ವಹಣೆಯಲ್ಲಿ ನಿರ್ಲಕ್ಷ್ಯವಾಗದಂತೆ ಮುನ್ನೆಚ್ಚರಿಕೆ ಅಗತ್ಯವೆಂಬ ಚರ್ಚೆಯೂ ನಡೆದಿದೆ. ಸದ್ಯ ಹಿರಿಯೂರು ಗ್ರಾಮಾಂತರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಅಪಘಾತದ ಸಂಪೂರ್ಣ ಕಾರಣ ತನಿಖೆಯಿಂದ ಸ್ಪಷ್ಟವಾಗಬೇಕಿದೆ.  

Add Zee News as a Preferred Source
TAGS:
Kannada News