SOCIAL MEDIA

Newsletter

PARTNER SITES
Select Language Select State

ಕೇಂದ್ರ ಸಚಿವ ವಿ.ಸೋಮಣ್ಣನಿಗೆ ಶಿವಮೊಗ್ಗದಲ್ಲಿ ಪ್ರತಿಭಟನೆ ಬಿಸಿ

ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣನಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ. ಯುವ ಕಾಂಗ್ರೆಸ್‌ ಕಾರ್ಯಕರ್ತ ಕಪ್ಪು ಪಟ್ಟಿ ಪ್ರದರ್ಶಿಸಿ ಹುಚ್ಚಾಟ ಪ್ರದರ್ಶಿಸಲಾಗಿದೆ.

Written By Ramya. R. Gowda
Published: Oct 12, 2026, 11:59 AM IST | Updated: Oct 12, 2026, 12:07 PM IST
Join

ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣಗೆ ಪ್ರತಿಭಟನೆಯ ಬಿಸಿ ತಟ್ಟಿದೆ. ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು, ಸಚಿವರ ಕಾನ್ವೆಗೆ ಅಡ್ಡಬಂದು ಕಪ್ಪು ಪಟ್ಟಿ ಪ್ರದರ್ಶಿಸಿದ್ದಾರೆ. ಎಸ್‌ಐಆರ್‌ ವಿರುದ್ಧ ಪ್ರತಿಭಟನೆ ದಾಖಲಿಸುವ ಉದ್ದೇಶದಿಂದ ಈ ಹೋರಾಟ ನಡೆಸಲಾಗಿದ್ದು, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪ್ರತಿಭಟನಾಕಾರರನ್ನು ಪೊಲೀಸರು ತಕ್ಷಣವೇ ತಡೆದಿದ್ದಾರೆ.

ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಸೋಮವಾರ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಮತ್ತು ನೈಋತ್ಯ ರೈಲ್ವೆಯ ಹಿರಿಯ ಅಧಿಕಾರಿಗಳೊಂದಿಗೆ ರೈಲ್ವೆ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ. ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಸೋಮವಾರ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಮತ್ತು ನೈಋತ್ಯ ರೈಲ್ವೆಯ ಹಿರಿಯ ಅಧಿಕಾರಿಗಳೊಂದಿಗೆ ರೈಲ್ವೆ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ.

ಶಿವಮೊಗ್ಗ ನಗರದ ಅಶೋಕ ಸರ್ಕಲ್ ಸಮೀಪದ ಬಿ.ಎಚ್. ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರು ಖಾಸಗಿ ಕಾರ್ಯಕ್ರಮ ಹಾಗೂ ರೈಲ್ವೆ ಇಲಾಖೆ ಸಭೆಯಲ್ಲಿ ಭಾಗವಹಿಸಲು ಶಿವಮೊಗ್ಗಕ್ಕೆ ಆಗಮಿಸಿದ್ದರು. ವಿಶೇಷ ರೈಲಿನಲ್ಲಿ ನಗರಕ್ಕೆ ಬಂದಿದ್ದ ಸಚಿವರು, ನೂತನ ಬಟ್ಟೆ ಶೋ ರೂಂ ಉದ್ಘಾಟನೆಗಾಗಿ ತೆರಳುತ್ತಿದ್ದರು.
ಈ ವೇಳೆ ವಿನಾಯಕ ಮಾಲ್ ಸಮೀಪ ಸಚಿವರ ಕಾನ್ವೆ ಎದುರು ಬಂದ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು, ಕಪ್ಪು ಪಟ್ಟಿ ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎಸ್‌ಐಆರ್‌ ವಿರುದ್ಧ ತಮ್ಮ ಪ್ರತಿಭಟನೆಯನ್ನು ದಾಖಲಿಸಲು ಕಾರ್ಯಕರ್ತರು ಮುಂದಾದರು.

ಸಚಿವರ ವಾಹನ ಸಾಗುತ್ತಿದ್ದ ಮಾರ್ಗದಲ್ಲೇ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾದರು. ಪ್ರತಿಭಟನಾಕಾರರನ್ನು ತಡೆದು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಸಚಿವರ ಭೇಟಿಯ ಸಂದರ್ಭದಲ್ಲಿ ನಡೆದ ಈ ಪ್ರತಿಭಟನೆ ಶಿವಮೊಗ್ಗದಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.


ಒಟ್ಟಿನಲ್ಲಿ, ಕೇಂದ್ರ ಸಚಿವ ವಿ. ಸೋಮಣ್ಣ ಅವರ ಶಿವಮೊಗ್ಗ ಭೇಟಿ ವೇಳೆ ಎಸ್‌ಐಆರ್‌ ವಿರೋಧಿ ಪ್ರತಿಭಟನೆ ಕಾವೇರಿದ್ದು, ಯುವ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರ ಕಪ್ಪು ಪಟ್ಟಿ ಪ್ರದರ್ಶನ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

 

 

Add Zee News as a Preferred Source
TAGS:

About the Author

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.

ZEENEWS TRENDING STORIES