• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ರಾಷ್ಟ್ರೀಯ
  • /ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತಕ್ಕೆ 26 ಮಂದಿ ಬಲಿ! ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತಕ್ಕೆ 26 ಮಂದಿ ಬಲಿ! ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಅಸ್ಸಾಂನ ಗೋಲಾಘಾಟ್ ಜಿಲ್ಲೆಯ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಮಿನಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 26 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನವರು ಕಾಲೇಜು ವಿದ್ಯಾರ್ಥಿಗಳಾಗಿದ್ದು, 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಿದ್ದಾರೆ. ಅಪಘಾತದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Written ByPuttaraj K Alur
Published: Nov 14, 2026, 13:19 IST|Updated: Nov 14, 2026, 13:35 IST
joinshare
ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತಕ್ಕೆ 26 ಮಂದಿ ಬಲಿ! ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
Image Credit: Assam Road Accident

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Assam Road Accident: ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 26 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಸುಮಾರು 40 ಪ್ರಯಾಣಿಕರನ್ನ ಹೊತ್ತೊಯ್ಯುತ್ತಿದ್ದ ಮಿನಿ ಬಸ್ ಜೋರ್ಹಟ್‌ನಿಂದ ಗುವಾಹಟಿಯತ್ತ ಪ್ರಯಾಣಿಸುತ್ತಿತ್ತು. ಗೋಲಾಘಾಟ್ ಜಿಲ್ಲೆಯ ಕೊಹೊರಾ ವ್ಯಾಪ್ತಿಯ ಹತಿಕುಲಿ ಚಹಾ ತೋಟದ ಸಮೀಪವಿರುವ ರಂಗಜನ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 715ರಲ್ಲಿ (NH-715) ಈ ಭೀಕರ ಅಪಘಾತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ವೇಗವಾಗಿ ಬಂದ ಮಿನಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಮಿನಿ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪರಿಣಾಮ ಬಸ್‌ನಲ್ಲಿದ್ದ ಪ್ರಯಾಣಿಕರು ವಾಹನದೊಳಗೆ ಸಿಲುಕಿಕೊಂಡಿದ್ದರು. ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಆದರೂ ಈ ದುರ್ಘಟನೆಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತರಲ್ಲಿ ಹೆಚ್ಚಿನವರು ಕಾಲೇಜು ವಿದ್ಯಾರ್ಥಿಗಳಾಗಿದ್ದು, ಈ ಘಟನೆ ಇಡೀ ರಾಜ್ಯವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.

ಪ್ರಧಾನಿ ಮೋದಿಯಿಂದ ಸಂತಾಪ

 

Deeply anguished by the loss of lives in the mishap in Golaghat district of Assam. I extend my condolences to the bereaved families in this hour of grief. Praying for the speedy recovery of the injured. An ex-gratia of Rs. 2 lakh from PMNRF would be given to the next of kin of each of those who lost their lives. The injured would be given Rs. 50,000: PM @narendramodi

— PMO India (@PMOIndia) November 13, 2026

 ಅಸ್ಸಾಂನಲ್ಲಿ ಸಂಭವಿಸಿದ ಈ ಭೀಕರ ರಸ್ತೆ ಅಪಘಾತದ ಕುರಿತು ಪ್ರಧಾನಿ ಮೋದಿಯವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ 'ಎಕ್ಸ್‌' ಖಾತೆಯಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ʼಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜನರು ಪ್ರಾಣ ಕಳೆದುಕೊಂಡಿರುವುದು ಅತ್ಯಂತ ದುಃಖಕರ ಸಂಗತಿ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳನ್ನ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆʼ ಎಂದು ತಿಳಿಸಿದ್ದಾರೆ.

 

ಇದೇ ವೇಳೆ ಅಪಘಾತದ ಸಂತ್ರಸ್ತರಿಗೆ ಆರ್ಥಿಕ ನೆರವನ್ನೂ ಘೋಷಿಸಿದ್ದಾರೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ.

ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನ ತಕ್ಷಣವೇ ಅಪಘಾತ ಸ್ಥಳದ ಸಮೀಪದಲ್ಲಿರುವ ಕೊಹೊರಾ ಮಾದರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಗಾಯಾಳುಗಳ ಪೈಕಿ ಗಂಭೀರ ಸ್ಥಿತಿಯಲ್ಲಿದ್ದ 13 ಮಂದಿಯನ್ನ ಹೆಚ್ಚಿನ ಚಿಕಿತ್ಸೆಗಾಗಿ ಜೋರ್ಹಟ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತ ಸ್ಥಳಕ್ಕೆ ಸಚಿವ ಅತುಲ್ ಬೋರಾ ಭೇಟಿ

ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ಅಸ್ಸಾಂ ಸಚಿವ ಅತುಲ್ ಬೋರಾ ಅವರು ಅಪಘಾತ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನ ಅವಲೋಕಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಿನಿ ಬಸ್ ಜಖಂಗೊಂಡಿರುವ ಭೀಕರ ಸ್ಥಿತಿಯನ್ನ ಗಮನಿಸಿದರೆ ವಾಹನವು ಅತಿಯಾದ ವೇಗದಲ್ಲಿ ಚಲಿಸುತ್ತಿದ್ದಂತೆ ಕಂಡುಬರುತ್ತದೆ ಎಂದು ತಿಳಿಸಿದ್ದಾರೆ. ಆದರೆ ಅಪಘಾತಕ್ಕೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ಸಮಗ್ರ ತನಿಖೆಯ ನಂತರವಷ್ಟೇ ತಿಳಿದುಬರಲಿದೆ ಎಂದು ಅವರು ಹೇಳಿದ್ದಾರೆ. 

ಸದ್ಯ ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆಂದು ಸಚಿವರು ಮಾಹಿತಿ ನೀಡಿದ್ದಾರೆ. ಒಟ್ನಲ್ಲಿ ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಸಂಭವಿಸಿದ ಈ ಭೀಕರ ರಸ್ತೆ ಅಪಘಾತದಲ್ಲಿ 26 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸುವುದರ ಜೊತೆಗೆ ಪರಿಹಾರ ಘೋಷಿಸಿದ್ದಾರೆ. ಅಪಘಾತದ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Add Zee News as a Preferred Source
TAGS:
Crime
Accident
Kannada News