• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ರಾಷ್ಟ್ರೀಯ
  • /ಬದರಿನಾಥ ಧಾಮದಿಂದ ಹಿಂತಿರುಗುತ್ತಿದ್ದ ಹೆಲಿಕಾಪ್ಟರ್‌ ಪತನ: ಪೈಲಟ್‌ ಸೇರಿ 6 ಮಂದಿ ಸಾವು

ಬದರಿನಾಥ ಧಾಮದಿಂದ ಹಿಂತಿರುಗುತ್ತಿದ್ದ ಹೆಲಿಕಾಪ್ಟರ್‌ ಪತನ: ಪೈಲಟ್‌ ಸೇರಿ 6 ಮಂದಿ ಸಾವು

ಉತ್ತರಾಖಂಡ : ಚಮೋಲಿ ಜಿಲ್ಲೆಯ ಜೋಶಿಮಠದಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಪೈಲಟ್ ಸೇರಿದಂತೆ ಒಟ್ಟು ಆರು ಸಾವನ್ನಪ್ಪಿದ್ದಾರೆ. ಟ್ರಾನ್ಸ್ ಭಾರತ್ (Trans Bharat) ಸಂಸ್ಥೆಗೆ ಸೇರಿದ VT-HCX ನಂಬರಿನ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗುತ್ತಿದೆ. ಹೆಲಿಕಾಪ್ಟರ್‌ನಲ್ಲಿ ಪೈಲಟ್ ಸೇರಿದಂತೆ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಹೆಲಿಕಾಪ್ಟರ್ ಫಟಾದಿಂದ (Fata) ಬದ್ರಿನಾಥ ದೇವಾಲಯಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

Written ByKrishna NK
Published: Oct 30, 2026, 02:58 PM IST|Updated: Oct 30, 2026, 03:15 PM IST
joinshare
ಬದರಿನಾಥ ಧಾಮದಿಂದ ಹಿಂತಿರುಗುತ್ತಿದ್ದ ಹೆಲಿಕಾಪ್ಟರ್‌ ಪತನ: ಪೈಲಟ್‌ ಸೇರಿ 6 ಮಂದಿ ಸಾವು
Image Credit: badrinath helicopter

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

Trending

  • News
  • Photos
  • Videos
ಕರ್ನಾಟಕದಲ್ಲಿ ಬಿಯರ್ ಮಾರಾಟದಿಂದ ಸರ್ಕಾರಕ್ಕೆ ಭರ್ಜರಿ ಆದಾಯ! 6 ತಿಂಗಳಲ್ಲಿ ₹3,377 ಕೋಟಿ ಸಂಗ್ರಹ

ಕರ್ನಾಟಕದಲ್ಲಿ ಬಿಯರ್ ಮಾರಾಟದಿಂದ ಸರ್ಕಾರಕ್ಕೆ ಭರ್ಜರಿ ಆದಾಯ! 6 ತಿಂಗಳಲ್ಲಿ ₹3,377 ಕೋಟಿ ಸಂಗ್ರಹ

2

ನಿರುದ್ಯೋಗಿಗಳಿಗೆ ಭರ್ಜರಿ ಗುಡ್‌ನ್ಯೂಸ್‌: ಬರೋಬ್ಬರಿ 5,431 FDA, SDA ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

3

ಬದರಿನಾಥ ಧಾಮದಿಂದ ಹಿಂತಿರುಗುತ್ತಿದ್ದ ಹೆಲಿಕಾಪ್ಟರ್‌ ಪತನ: ಪೈಲಟ್‌ ಸೇರಿ 6 ಮಂದಿ ಸಾವು

4

ಜನಸಾಮಾನ್ಯರಿಗೆ ಮತ್ತೊಂದು ಬಿಗ್‌ ಶಾಕ್! ಹಾಲಿನ ದರ ಏರಿಕೆ ಬೆನ್ನಲ್ಲೇ ಟೀ, ಕಾಫಿ ಬೆಲೆ ಹೆಚ್ಚಳದ ಬಿಸಿ! ‌

5

ನಾಳೆ ಬೆಂಗಳೂರಿನ 50ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಉತ್ತರಾಖಂಡ : ಪವಿತ್ರ ಚಾರ್ ಧಾಮ್‌ಗಳಲ್ಲಿ ಒಂದಾದ ಬದರಿನಾಥದಿಂದ ಯಾತ್ರಾರ್ಥಿಗಳನ್ನು ಹೊತ್ತು ಬರುತ್ತಿದ್ದ ಹೆಲಿಕಾಪ್ಟರೊಂದು ಜೋಶಿಮಠ ಬಳಿ ಭೀಕರ ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಪೈಲಟ್ ಹಾಗೂ ಐವರು ಪ್ರಯಾಣಿಕರು ಸೇರಿದಂತೆ ಒಟ್ಟು ಆರು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಲಭ್ಯವಿರುವ ಮಾಹಿತಿಯ ಪ್ರಕಾರ, ಅಪಘಾತಕ್ಕೀಡಾದ ಹೆಲಿಕಾಪ್ಟರ್‌ ಟ್ರಾನ್ಸ್ ಭಾರತ್ ಏವಿಯೇಷನ್ ಕಂಪನಿಗೆ ಸೇರಿದ್ದ VT-HCX ಎಂದು ತಿಳಿದು ಬಂದಿದೆ. ಈ ಹೆಲಿಕಾಪ್ಟರ್ ಬದರಿನಾಥ ಧಾಮದಿಂದ ಫಾಟಾ ಅಥವಾ ಡೆಹ್ರಾಡೂನ್ ಕಡೆಗೆ ತೆರಳುತ್ತಿತ್ತು. ಹಾರಾಟದ ಮಧ್ಯೆ, ಜೋಶಿಮಠದ ಮಾರ್ವಾಡಿ ಪ್ರದೇಶದ ಬಳಿಯಿರುವ ಚಾಯ್ ಗ್ರಾಮದ ಬೆಟ್ಟಗಳ ಹತ್ತಿರ ಬರುತ್ತಿದ್ದಂತೆ ಹಠಾತ್ ಆಗಿ ಏರ್‌ ಟ್ರಾಫಿಕ್ ಕಂಟ್ರೋಲ್ ಮತ್ತು ಗ್ರೌಂಡ್ ಸ್ಟೇಷನ್‌ನೊಂದಿಗೆ ಇದ್ದಕ್ಕಿದ್ದಂತೆ ಸಂಪರ್ಕ ಕಳೆದುಕೊಂಡಿತು. ಇದರ ಬೆನ್ನಲ್ಲೇ ಅಪಘಾತಕ್ಕೀಡಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ..

ಇನ್ನು ಈ ಘಟನೆ ಕುರಿತು ಚಮೋಲಿಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿವೇಕ್ ಪ್ರಕಾಶ್ ಅವರು ಮಾತನಾಡಿ, ಘಟನೆಯ ಮಾಹಿತಿ ದೊರೆತ ಕೂಡಲೇ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಅಪಘಾತ ಸಂಭವಿಸಿದ ಪ್ರದೇಶವು ಕಡಿದಾದ ಬೆಟ್ಟಗಳು ಮತ್ತು ಪ್ರತಿಕೂಲ ಹವಾಮಾನದಿಂದ ಕೂಡಿದ್ದು, ರಕ್ಷಣಾ ಸಿಬ್ಬಂದಿಗೆ ಕಾರ್ಯಾಚರಣೆ ನಡೆಸುವುದು ಸವಾಲಿನಿಂದ ಕೂಡಿದೆ. ಆದರೂ, ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF), ಸ್ಥಳೀಯ ಪೊಲೀಸರು ಹಾಗೂ ಆಡಳಿತಾತ್ಮಕ ತಂಡಗಳು ಘಟನಾ ಸ್ಥಳದಲ್ಲಿ ಭಾರಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿವೆ.

ಪವಿತ್ರ ಯಾತ್ರೆ ಮುಗಿಸಿಕೊಂಡು ವಾಪಸಾಗುತ್ತಿದ್ದ ಭಕ್ತರು ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿರುವುದು ನಿಜಕ್ಕೂ ದುರಂತವೇ ಸರಿ.. ಪ್ರಸ್ತುತ ಈ ದುರಂತಕ್ಕೆ ಹವಾಮಾನ ವೈಪರೀತ್ಯ ಕಾರಣವಿರಬಹುದೇ ಅಥವಾ ತಾಂತ್ರಿಕ ದೋಷವೇ ಎಂಬ ಬಗ್ಗೆ ಸಂಬಂಧಪಟ್ಟ ಇಲಾಖೆಯಿಂದ ಅಧಿಕೃತ ತನಿಖೆ ನಡೆಯಬೇಕಿದೆ.

Add Zee News as a Preferred Source
TAGS:
Accident