• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ರಾಷ್ಟ್ರೀಯ
  • /ಡಾ.ರಾಜ್ ಸಂಬಂಧಿ ಮನೆಯಲ್ಲಿ ಸ್ಫೋಟ: ಬಾಗಿಲು, ಕಿಟಕಿ ಪೀಸ್-ಪೀಸ್

ಡಾ.ರಾಜ್ ಸಂಬಂಧಿ ಮನೆಯಲ್ಲಿ ಸ್ಫೋಟ: ಬಾಗಿಲು, ಕಿಟಕಿ ಪೀಸ್-ಪೀಸ್

ದೀಪಾವಳಿ ಹಬ್ಬದ ದಿನ ಅಣ್ಣಾವ್ರ ಸಂಬಂಧಿಗಳ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ತಾವೇ ಕೃತ್ಯ ಎಸಗಿರುವುದಾಗಿ ಇಬ್ಬರು ತಪ್ಪೊಪ್ಪಿಕೊಂಡಿದ್ದಾರೆ. ಆದರೆ ಪೊಲೀಸರೇ ಕೇಸ್ ಮುಚ್ಚಿಹಾಕುವ ಯತ್ನ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

Written ByYashaswini V
Published: Nov 10, 2026, 16:33 IST|Updated: Nov 10, 2026, 16:35 IST
joinshare
ಡಾ.ರಾಜ್ ಸಂಬಂಧಿ ಮನೆಯಲ್ಲಿ ಸ್ಫೋಟ: ಬಾಗಿಲು, ಕಿಟಕಿ ಪೀಸ್-ಪೀಸ್

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ವರನಟ ಡಾ. ರಾಜ್‌ಕುಮಾರ ರವರ ಹತ್ತಿರದ ಸಂಬಂಧಿ ಮನೋಹರ್ ಅವರ ಮನೆ ಮೇಲೆ ಕಚ್ಚಾ ಬಾಂಬ್ ದಾಳಿ ನಡೆದಿದೆಯಾ ಅನ್ನೋ ದೊಡ್ಡ ಶಂಕೆ ವ್ಯಕ್ತವಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ಕಿಟಕಿ ಗಾಜುಗಳು, ಬಾಗಿಲಿನ ಚೌಕಟ್ಟು ಹಾಗೂ ಹಣತೆಗಳು ಪೀಸ್ ಪೀಸ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಜನೂರು ಗ್ರಾಮದ ಇಬ್ಬರು ಯುವಕರು ತಾವೇ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಆದರೆ, ಇದು ಕೇವಲ ಪಟಾಕಿ ಸ್ಫೋಟ ಎಂದು ತಮಿಳುನಾಡು ಪೊಲೀಸರು ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ತಮಿಳುನಾಡಿನ ಈರೋಡು ಜಿಲ್ಲೆಯ ತಾಳವಾಡಿ ತಾಲೂಕಿನ ಗಾಜನೂರು ಗ್ರಾಮ ಸಾಂಸ್ಕೃತಿಕ ರಾಯಭಾರಿ ವರನಟ ಡಾ. ರಾಜ್‌ಕುಮಾರ್ ಅವರ ಹುಟ್ಟೂರು. ನಿನ್ನೆ ತಡರಾತ್ರಿ 10.20ರ ಸುಮಾರಿಗೆ ಅಣ್ಣಾವ್ರ ಸಂಬಂಧಿ ಮನೋಹರ್ ಅವರ ನಿವಾಸದಲ್ಲಿ ಸ್ಫೋಟವೊಂದು ಸಂಭವಿಸಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಮನೆಯ ಕಿಟಕಿ ಗಾಜುಗಳು ಸಂಪೂರ್ಣ ಪುಡಿಪುಡಿಯಾಗಿದ್ದು, ಬಾಗಿಲು ಮುರಿದು ಬಿದ್ದಿದೆ. ಸ್ಥಳದಲ್ಲಿದ್ದ ಸೋಫಾಗೂ ಬೆಂಕಿ ತಗುಲಿದೆ. ಘಟನೆಯಿಂದ ಮನೆಯಲ್ಲಿದ್ದ ಡಾ. ರಾಜ್ ಕುಟುಂಬಸ್ಥರು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಇನ್ನೂ ನಮ್ಮ ಮನೆ ಮೇಲೆ ನಡೆದಿರುವುದು ಕಚ್ಚಾ ಬಾಂಬ್ ದಾಳಿಯೇ ಸರಿ, ಘಟನೆಯ ಸತ್ಯಾಸತ್ಯತೆಯನ್ನು ಹೊರತರಬೇಕು. ಯಾವುದೇ ಕಾರಣಕ್ಕೂ ಪ್ರಕರಣವನ್ನು ಮುಚ್ಚಿಹಾಕುವ ಕೆಲಸವಾಗಬಾರದು ಎಂದು ಡಾ. ರಾಜ್‌ಕುಮಾರ್ ಅವರ ಸಂಬಂಧಿಕರಾದ ಮನೋಹರ್ ಹಾಗೂ ಮನೋಜ್ಞಾ ಆಗ್ರಹಿಸಿದ್ದಾರೆ.

ಸ್ಫೋಟ ಸಂಭವಿಸಿದ ತಕ್ಷಣ ಸ್ಥಳದಲ್ಲೇ ಇದ್ದ ಐದು ಜನ ಯುವಕರ ಚಲನವಲನವನ್ನು ಅಣ್ಣಾವ್ರ ಸಂಬಂಧಿ ಮನೋಜ್ಞ ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡಿದ್ದರು. ಈ ವಿಡಿಯೋ ಆಧರಿಸಿ ತಾಳವಾಡಿ ಠಾಣೆ ಪೊಲೀಸರು ಸ್ಥಳೀಯ ಐವರು ಯುವಕರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಜನೂರು ಗ್ರಾಮದ ಇಬ್ಬರು ಯುವಕರು ತಾವೇ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಪೊಲೀಸರು ಯುವಕರನ್ನು ಘಟನಾ ಸ್ಥಳಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದರು. 3 ರಿಂದ 4 ಪಟಾಕಿ ಬಾಂಬ್‌ಗಳನ್ನು ಜಂಟಿಯಾಗಿ ಕಟ್ಟಿ ಸ್ಪೋಟಿಸಿದ್ದಾಗಿ ಯುವಕರು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ಥಳ ಮಹಜರು ಪೂರ್ಣಗೊಳಿಸಿದ ಪೊಲೀಸರು ಆರೋಪಿಗಳನ್ನು ವಾಪಸ್ ಠಾಣೆಗೆ ಕರೆದೊಯ್ದಿದ್ದಾರೆ. ಆದರೆ, ಸ್ಥಳ ಮಹಜರು ವೇಳೆ ರಾಜ್ ಸಂಬಂಧಿಗಳಿಗೆ ಯಾವುದೇ ಅಧಿಕೃತ ಮಾಹಿತಿ ನೀಡದೆ ಪೊಲೀಸರು ತೆರಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಈರೋಡು ಜಿಲ್ಲಾ ಪೊಲೀಸರು ಹೊರಡಿಸಿರುವ ಪತ್ರಿಕಾ ಪ್ರಕಟಣೆ ಈಗ ಭಾರೀ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಇದು ನಾಡ ಬಾಂಬ್ ಅಥವಾ ಕಚ್ಚಾ ಬಾಂಬ್ ಅಲ್ಲ, ಕೇವಲ ಪಟಾಕಿ ಸ್ಫೋಟ ಎಂದಿದ್ದಾರೆ. ಸಾರ್ವಜನಿಕರು ಪಟಾಕಿ ಹೊಡೆದಿದ್ದಾರೆ, ಆ ಶಬ್ದಕ್ಕೆ ಗಾಜು ಒಡೆದಿದೆ ಎಂದು ಪೊಲೀಸರು ಸಮಜಾಯಿಷಿ ನೀಡಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಇನ್ನೂ ಸ್ಥಳಕ್ಕೆ ಪಟಾಕಿ ಹಿಡಿದುಕೊಂಡು ಬಂದ ಮಫ್ತಿ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರು, ಇದು ಪಟಾಕಿಯಿಂದ ಆಗಿರುವ ಹಾನಿ ಎಂದು ಸಮರ್ಥಿಸಿಕೊಳ್ಳಲು ಬಂದಾಗ ಅಣ್ಣಾವ್ರ ಸಂಬಂಧಿಕರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಪಟಾಕಿ ಹೊಡೆದರೆ ಮನೆ ಬಾಗಿಲು ಮುರಿದುಬೀಳಲು ಸಾಧ್ಯವೇ? ಕಿಟಕಿ ಗಾಜುಗಳು ಈ ರೀತಿ ಪುಡಿಪುಡಿಯಾಗುತ್ತವಾ?" ಎಂದು ಮನೋಜ್ಞ ಪೊಲೀಸರನ್ನು ನೇರವಾಗಿ ಪ್ರಶ್ನಿಸಿದರು. ಅಲ್ಲದೆ, ನೀವು ತಂದಿರುವ ಪಟಾಕಿಯನ್ನೇ ಈಗ ಇಲ್ಲಿ ಹೊಡೆದು ತೋರಿಸಿ, ಈ ರೀತಿಯೇ ಹಾನಿಯಾದರೆ ನಾವು ಒಪ್ಪಿಕೊಳ್ಳುತ್ತೇವೆ ಎಂದು ಸವಾಲು ಎಸೆದರು.

ಒಟ್ಟಿನಲ್ಲಿ, ಪಟಾಕಿ ಶಬ್ದಕ್ಕೆ ಮನೆಯ ಬಾಗಿಲು, ಕಿಟಕಿ ಗಾಜುಗಳು ಪುಡಿಯಾಗಲು ಸಾಧ್ಯವೇ ಅನ್ನೋ ಪ್ರಶ್ನೆ ಎಲ್ಲರನ್ನೂ ಕಾಡ್ತಿದೆ. ತಮಿಳುನಾಡು ಪೊಲೀಸರ ಪತ್ರಿಕಾ ಪ್ರಕಟಣೆ ಹಾಗೂ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ನಿಜಕ್ಕೂ ಯಾವ ಕಾರಣಕ್ಕೆ ಸ್ಪೋಟ ಮಾಡಲಾಗಿದೆ ಅಥವಾ ಆಕಸ್ಮಿಕವಾಗಿಯೇ ಘಟನೆ ನಡೆದಿದೆಯೇ ಎನ್ನುವುದರ ಸತ್ಯಾಸತ್ಯತೆ ಹೊರಬರಬೇಕಿದೆ. 
 

Add Zee News as a Preferred Source
TAGS:
Diwali
Kannada News
Cinema