SOCIAL MEDIA

Newsletter

PARTNER SITES
Select Language Select State

ಜ್ಞಾನ ದೇಗುಲವೇ ರಕ್ತ*ಸಿಕ್ತ, ಶಾಲೆಯಲ್ಲೇ ವಿದ್ಯಾರ್ಥಿನಿಯ ಮೇಲೆ ಗರಗಸದಿಂದ ದಾಳಿ! ಬೆಚ್ಚಿ ಬಿದ್ದ ಪೋಷಕರು

ಶಾಲೆಯೊಂದರಲ್ಲಿ ನಡೆದ ಅತ್ಯಂತ ಆಘಾತಕಾರಿ ಮತ್ತು ಭೀಕರ ಘಟನೆಯೊಂದು ಇಡೀ ರಾಜ್ಯದ ಪೋಷಕರನ್ನು ಬೆಚ್ಚಿ ಬೀಳಿಸಿದೆ. ಶಾಲೆಯಲ್ಲೇ ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳ ಮೇಲೆ ದುಷ್ಕರ್ಮಿಯೊಬ್ಬ ಗರಗಸದಿಂದ ದಾಳಿ ನಡೆಸಿರುವ ದಾರುಣ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ವರದಿಯಾಗಿದೆ... ಭೀಕರ ಘಟನೆ ರೋಚಕ ವರದಿ ಇಲ್ಲಿದೆ..

Written By Krishna NK
Published: Oct 31, 2026, 02:27 PM IST | Updated: Oct 31, 2026, 02:29 PM IST
Image Credit: Crime news
Join

Anantapur Girl Incident : ಶಾಲೆ ಎಂದರೆ ಮಕ್ಕಳ ಪಾಲಿಗೆ ಜ್ಞಾನ ದೇಗುಲ.. ಅತ್ಯಂತ ಸುರಕ್ಷಿತ ಜಾಗ ಅಂತ ಹೇಳಲಾಗುತ್ತೆ.. ಆದರೆ, ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದ ಒಂದು ಅತ್ಯಂತ ಭೀಕರ ಮತ್ತು ಆಘಾತಕಾರಿ ಘಟನೆ ಈ ಮಾತನ್ನು ಸುಳ್ಳಾಗಿಸಿದೆ.. ಶಾಲೆಯಲ್ಲಿಯೇ ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳ ಮೇಲೆ ದುಷ್ಕರ್ಮಿಯೊಬ್ಬ ಪೆಟ್ರೋಲ್‌ ಚಾಲಿತ ಗರಗಸ (Petrol Chainsaw) ದಿಂದ ಮನಬಂದಂತೆ ಹಲ್ಲೆ ನಡೆಸಿರುವ ದಾರುಣ ಘಟನೆ ನಡೆದಿದ್ದು, ಪೋಷಕರನ್ನು ಬೆಚ್ಚಿ ಬೀಳಿಸಿದೆ..

ಹೌದು.. ಅನಂತಪುರ ಜಿಲ್ಲೆಯ ರಾಪ್ತಾಡು ಮಂಡಲದ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ ಶಾಲೆ ಆರಂಭವಾಗಿ ಕೆಲವೇ ನಿಮಿಷಗಳಾಗಿದ್ದವು. ಎಂದಿನಂತೆ ಹತ್ತನೇ ತರಗತಿಯ ವಿದ್ಯಾರ್ಥಿನಿಯರು ತಮ್ಮ ಸಹಪಾಠಿಗಳೊಂದಿಗೆ ತರಗತಿಯಲ್ಲಿ ಕುಳಿತು ಓದುತ್ತಿದ್ದರು. ಅದೇ ಸಮಯದಲ್ಲಿ ಯಾರೋ ಅಪರಿಚಿತ ಯುವಕನೊಬ್ಬ ನೇರವಾಗಿ ಶಾಲೆಯ ಒಳಗೆ ನುಗ್ಗಿದ್ದಾನೆ.

ಆ ವ್ಯಕ್ತಿ ಮರಗಳ ಕೊಂಬೆಗಳನ್ನು ಕಡಿಯಲು ಬಳಸುವ ಪೆಟ್ರೋಲ್‌ ಚಾಲಿತ ಚೈನ್ ಗರಗಸವನ್ನು ತಂದು ಏಕಾಎಕಿ ದಾಳಿ ಮಾಡಿದ್ದಾನೆ.. ಇದರಿಂದ ಬಾಲಕಿಯ ಮುಖ, ತಲೆ ಹಾಗೂ ಬೆನ್ನಿನ ಭಾಗಕ್ಕೆ ಅತ್ಯಂತ ಗಂಭೀರವಾದ ಗಾಯಗಳಾಗಿವೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಆ ಬಾಲಕಿಯನ್ನು ಕಂಡು ಅಲ್ಲಿದ್ದ ಸಹಪಾಠಿಗಳು ಮತ್ತು ಶಿಕ್ಷಕರು ಬೆಚ್ಚಿಬಿದ್ದಿದ್ದಾರೆ. ಈ ವೇಳೆ ತನ್ನ ಸ್ನೇಹಿತೆಯನ್ನು ರಕ್ಷಿಸಲು ಮುಂದಾದ ಮತ್ತೊಬ್ಬ ವಿದ್ಯಾರ್ಥಿನಿಯ ಮೇಲೂ ಆ ದುಷ್ಕರ್ಮಿ ಹಲ್ಲೆ ನಡೆಸಿದ್ದು, ಆಕೆಯೂ ಗಾಯಗೊಂಡಿದ್ದಾಳೆ.

ಶಾಲೆ ಆರಂಭವಾದ ಕೆಲವೇ ಸಮಯದಲ್ಲಿ ಈ ರೀತಿಯ ಭೀಕರ ದಾಳಿ ನಡೆದಿದ್ದರಿಂದ ಇಡೀ ಶಾಲಾ ಆವರಣದಲ್ಲಿ ಭಾರೀ ಆತಂಕ ಮತ್ತು ಕೋಲಾಹಲ ಉಂಟಾಯಿತು. ಏನಾಗುತ್ತಿದೆ ಎಂದೇ ತಿಳಿಯದೆ ಪ್ರಾಣಭಯದಿಂದ ವಿದ್ಯಾರ್ಥಿಗಳು ತರಗತಿಗಳಿಂದ ಹೊರಗೆ ಓಡಿಹೋಗಿ ಜೀವ ಉಳಿಸಿಕೊಳ್ಳಬೇಕಾಯಿತು. ತಕ್ಷಣ ಎಚ್ಚೆತ್ತುಕೊಂಡ ಶಿಕ್ಷಕರು ಮತ್ತು ಸ್ಥಳೀಯರು ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮುಖ್ಯ ಸಂತ್ರಸ್ತ ಬಾಲಕಿಯನ್ನು ತುರ್ತು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದರು. ಸದ್ಯ ಆ ಬಾಲಕಿ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾಳೆ.

ಈ ಕೃತ್ಯ ಎಸಗಿದ ವ್ಯಕ್ತಿ ಯಾರು? ಆ ವಿದ್ಯಾರ್ಥಿನಿಗೆ ಆತ ಮೊದಲೇ ಪರಿಚಿತನೇ? ಅಥವಾ ಇವರ ನಡುವೆ ಯಾವುದೇ ವೈಯಕ್ತಿಕ ದ್ವೇಷವಿತ್ತೇ ಎಂಬ ಗಂಭೀರ ಪ್ರಶ್ನೆಗಳು ಈಗ ಮೂಡಿವೆ. ಸದ್ಯಕ್ಕೆ ದಾಳಿಗೆ ನಿಖರವಾದ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ರಾಪ್ತಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಮಗ್ರ ತನಿಖೆ ಕೈಗೊಂಡಿದ್ದಾರೆ. ಕೃತ್ಯ ಎಸಗಿ ತಲೆಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಮಕ್ಕಳ ಸುರಕ್ಷತೆಗೆ ಅತ್ಯಂತ ಹೆಚ್ಚಿನ ಆದ್ಯತೆ ನೀಡಬೇಕಾದ ಶಿಕ್ಷಣ ಸಂಸ್ಥೆಯಲ್ಲಿ ಇಂತಹ ಘಟನೆ ನಡೆದಿರುವುದು ಪೋಷಕರಲ್ಲಿ ತೀವ್ರ ಕಳವಳವನ್ನುಂಟು ಮಾಡಿದೆ. ಬೆಳಿಗ್ಗೆ ಶಾಲೆಗೆ ಯಾರೋ ಹೊರಗಿನ ವ್ಯಕ್ತಿ ಧೈರ್ಯವಾಗಿ ಒಳಗೆ ನುಗ್ಗಿ ವಿದ್ಯಾರ್ಥಿನಿಯರ ಮೇಲೆ ಇಷ್ಟು ಕ್ರೂರವಾಗಿ ಹಲ್ಲೆ ನಡೆಸಲು ಸಾಧ್ಯವಾಯಿತೆಂದರೆ, ಶಾಲೆಗಳಲ್ಲಿ ಮಕ್ಕಳ ಭದ್ರತೆ ಮತ್ತು ಸುರಕ್ಷತೆಯ ಪರಿಸ್ಥಿತಿ ಹೇಗಿದೆ ಎಂಬ ಗಂಭೀರ ಪ್ರಶ್ನೆಗಳು ಈಗ ಸಾರ್ವಜನಿಕ ವಲಯದಲ್ಲಿ ಎದ್ದಿವೆ. ಶಾಲೆಗೆ ಬರುವ ಮಕ್ಕಳ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ತಪ್ಪಿತಸ್ಥ ಆರೋಪಿಯನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಸ್ಥಳೀಯರು ಮತ್ತು ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ZEENEWS TRENDING STORIES