3ನೇ ತರಗತಿ ಬಾಲಕನ ಭೀಭತ್ಸ ಕೃತ್ಯ..! ಕಲ್ಲಿನಿಂದ ಜಜ್ಜಿ ಬಾಲಕಿ ಹ*ತ್ಯೆ... ಭಯಾನಕ ವಿಡಿಯೋ ವೈರಲ್
ಶಾಲೆ ಒಳಗೆ ಮೂರನೇ ತರಗತಿ ವಿದ್ಯಾರ್ಥಿಯೊಬ್ಬ ಕಲ್ಲು ಹಾಗೂ ಹೂಕುಂಡದಿಂದ ಹಲ್ಲೆ ನಡೆಸಿದ್ದರಿಂದ ಎಲ್‌ಕೆಜಿ ಕಲಿಯುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡಿರುವ ವೀಭತ್ಸ ಘಟನೆ ಹರಿಯಾಣದ ಪಂಚಕುಲದಲ್ಲಿ ನಡೆದಿದೆ. ಈ ಘಟನೆಯು ಶಾಲೆಯಲ್ಲಿ ಮಕ್ಕಳ ಸುರಕ್ಷತೆ ಮತ್ತು ಶಿಕ್ಷಕರ ನಿರ್ಲಕ್ಷ್ಯದ ಬಗ್ಗೆ ತೀವ್ರ ಕಳವಳ ಮೂಡಿಸಿದೆ.
ಪಂಚಕುಲ: ಹರಿಯಾಣದ ಪಂಚಕುಲದ ಸೆಕ್ಟರ್ 20ರಲ್ಲಿರುವ ಸಂಸ್ಕೃತಿ ಮಾಡೆಲ್ ಶಾಲೆಯಲ್ಲಿ ಅತ್ಯಂತ ಆಘಾತಕಾರಿ ಘಟನೆ ನಡೆದಿದೆ. ಶಾಲೆಯ ಆವರಣದಲ್ಲೇ ಮೂರನೇ ತರಗತಿಯ ವಿದ್ಯಾರ್ಥಿಯೊಬ್ಬ ಕಲ್ಲು ಹಾಗೂ ಹೂಕುಂಡದಿಂದ ಹಲ್ಲೆ ನಡೆಸಿದ್ದರಿಂದ ಎಲ್‌ಕೆಜಿ/ಕೆಜಿ ಹರೆಯದ ಪುಟ್ಟ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದಾಳೆ. ಈ ಘಟನೆಯು ಶಾಲೆಯಲ್ಲಿ ಮಕ್ಕಳ ಸುರಕ್ಷತೆ ಮತ್ತು ಶಿಕ್ಷಕರ ನಿರ್ಲಕ್ಷ್ಯದ ಬಗ್ಗೆ ತೀವ್ರ ಕಳವಳ ಮೂಡಿಸಿದೆ.
CCTV ಯಲ್ಲಿ ಭೀಕರ ದೃಶ್ಯ ಸೆರೆ
ಲಭ್ಯವಿರುವ ಮಾಹಿತಿಯ ಪ್ರಕಾರ, ಆರೋಪಿ ಮೂರನೇ ತರಗತಿಯ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ವಿಡಿಯೋದಲ್ಲಿ ಮೊದಲು ಬಾಲಕ ಬಾಲಕಿಯ ಕೂದಲು ಹಿಡಿದು ಬೆಂಚುಗಳಿಗೆ ಡಿಕ್ಕಿ ಹೊಡೆಸಿ, ನಂತರ ಕಾಲಿನಿಂದ ಮುಖಕ್ಕೆ ಒದ್ದಿದ್ದಾನೆ. ಅಷ್ಟಕ್ಕೂ ಸುಮ್ಮನಾಗದೇ ಕಲ್ಲನ್ನು ತಂದು ಆಕೆಯ ಮುಖದ ಮೇಲೆ ಹಲವು ಬಾರಿ ಎತ್ತಿ ಹಾಕಿದ್ದಾನೆ. ಈ ಭೀಕರ ಹಲ್ಲೆಯಿಂದ ಬಾಲಕಿಗೆ ತೀವ್ರ ಪೆಟ್ಟಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೂಡಲೇ ಬಾಲಕಿಯನ್ನು ಮೊದಲು ಸೆಕ್ಟರ್ 6ರ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಚಂಡೀಘಢದ ಪಿಜಿಐ (PGI) ಆಸ್ಪತ್ರೆಗೆ ರವಾನಿಸಲಾಯಿತು. ಆರಂಭದಲ್ಲಿ ಬಾಲಕಿಯ ಸ್ಥಿತಿ ಚಿಂತಾಜನಕವಾಗಿತ್ತು ಎಂದು ವರದಿಯಾಗಿತ್ತಾದರೂ, ಪ್ರಸ್ತುತ ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ವಿಷಯ ತಿಳಿದ ತಕ್ಷಣ ಸೆಕ್ಟರ್ 20 ಪೊಲೀಸ್ ಠಾಣೆಯ ಇನ್‌ಚಾರ್ಜ್ ಯಶ್‌ದೀಪ್ ಮತ್ತು ತನಿಖಾಧಿಕಾರಿ ಪ್ರದೀಪ್ ಕುಮಾರ್ ನೇತೃತ್ವದ ಪೊಲೀಸ್ ತಂಡವು ಶಾಲಾ ಆವರಣಕ್ಕೆ ಧಾವಿಸಿ ತನಿಖೆ ಆರಂಭಿಸಿದೆ. ಶಾಲೆಯಲ್ಲಿ ಸರಿಯಾದ ಮೇಲ್ವಿಚಾರಣೆ (ಸೂಪರ್‌ವಿಷನ್) ಇತ್ತೇ ಇಲ್ಲವೇ ಎಂಬುದರ ಬಗ್ಗೆ ಶಾಲಾ ಆಡಳಿತ ಮಂಡಳಿಯನ್ನು ಪೊಲೀಸರು ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದಾರೆ.
ಅಲ್ಲದೆ, ಇಂತಹ ಕೃತ್ಯ ಎಸಗಲು ಆ ಮೂರನೇ ತರಗತಿ ವಿದ್ಯಾರ್ಥಿಗೆ ಪ್ರಚೋದನೆ ನೀಡಿದ ಅಥವಾ ಅದಕ್ಕೆ ಕಾರಣವಾದ ಪರಿಸ್ಥಿತಿಗಳೇನು ಎಂಬುದನ್ನು ತಿಳಿಯಲು ಆತನ ಪೋಷಕರನ್ನು ಕೂಡ ಪೊಲೀಸರು ಪ್ರಶ್ನಿಸುತ್ತಿದ್ದಾರೆ. ಶಾಲೆಯಲ್ಲಿ ಮಕ್ಕಳ ಸುರಕ್ಷತೆಯನ್ನು ಕಾಪಾಡುವಲ್ಲಿ ಆಡಳಿತ ಮಂಡಳಿ ವಿಫಲವಾಗಿದೆ ಎಂದು ಪೋಷಕರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಘಟನೆಯು ಶಾಲೆಗಳ ಜವಾಬ್ದಾರಿಯ ಬಗ್ಗೆ ದೊಡ್ಡ ಪ್ರಶ್ನೆ ಹುಟ್ಟುಹಾಕಿದೆ.