SOCIAL MEDIA

Newsletter

PARTNER SITES
Select Language Select State

ಈ ರಾಜ್ಯದ ಸರ್ಕಾರಿ ನೌಕರರಿಗೆ ದಸರಾ ಬಂಪರ್ ಗಿಫ್ಟ್;‌ ಶೇ 3ರಷ್ಟು DA ಶೇ 2ರಷ್ಟು HRA ಹೆಚ್ಚಳ! ಎಷ್ಟಾಗಲಿದೆ ಒಟ್ಟು ಸಂಬಳ?

ತ್ರಿಪುರಾ ಸರ್ಕಾರವು ರಾಜ್ಯದ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ದಸರಾ ಹಬ್ಬಕ್ಕೂ ಮುನ್ನ ಸಿಹಿಸುದ್ದಿ ನೀಡಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆ (DA) ಹಾಗೂ ಪಿಂಚಣಿದಾರರ ತುಟ್ಟಿಭತ್ಯೆ ಪರಿಹಾರ (DR)ವನ್ನು ಶೇ.3ರಷ್ಟು ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರ ಜೊತೆಗೆ ಮನೆ ಬಾಡಿಗೆ ಭತ್ಯೆ (HRA)ಯನ್ನೂ ಶೇ.2ರಷ್ಟು ಹೆಚ್ಚಿಸಲಾಗಿದೆ.

Written By Chetana Devarmani
Published: Oct 07, 2026, 05:13 PM IST | Updated: Oct 07, 2026, 05:14 PM IST
Join

ಅಕ್ಟೋಬರ್ 6ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಮಾಣಿಕ್ ಸಾಹಾ ಮತ್ತು ಹಣಕಾಸು ಸಚಿವ ಪ್ರಣಜಿತ್ ಸಿಂಘಾ ರಾಯ್ ಅವರು ಸರ್ಕಾರದ ನಿರ್ಧಾರದ ವಿವರಗಳನ್ನು ತಿಳಿಸಿದ್ದಾರೆ. ಪರಿಷ್ಕೃತ DA ಮತ್ತು DR ದರಗಳು 2026ರ ಅಕ್ಟೋಬರ್ 1ರಿಂದಲೇ ಜಾರಿಗೆ ಬರಲಿದ್ದು, ಅಕ್ಟೋಬರ್ ತಿಂಗಳ ವೇತನ ಮತ್ತು ಪಿಂಚಣಿಯನ್ನು ಪರಿಷ್ಕೃತ ದರದ ಆಧಾರದ ಮೇಲೆ ಪಾವತಿಸಲಾಗುತ್ತದೆ.

DA ಹೆಚ್ಚಳದ ಬಳಿಕ ತ್ರಿಪುರಾ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಮೂಲ ವೇತನದ ಶೇ.44ಕ್ಕೆ ಏರಿಕೆಯಾಗಲಿದೆ. ಇದೇ ರೀತಿ ಪಿಂಚಣಿದಾರರ DR ಕೂಡ ಶೇ.44ಕ್ಕೆ ಹೆಚ್ಚಳವಾಗಲಿದೆ. ಇದರಿಂದ ರಾಜ್ಯದ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಪ್ರತಿ ತಿಂಗಳು ಹೆಚ್ಚುವರಿ ಹಣ ದೊರೆಯಲಿದೆ. DA ಮತ್ತು DR ಹೆಚ್ಚಳದಿಂದ ತ್ರಿಪುರಾ ಸರ್ಕಾರದ ಮೇಲೆ ವಾರ್ಷಿಕ ಸುಮಾರು ₹300 ಕೋಟಿ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ ಎಂದು ಮುಖ್ಯಮಂತ್ರಿ ಮಾಣಿಕ್ ಸಾಹಾ ತಿಳಿಸಿದ್ದಾರೆ. ನೌಕರರು ಮತ್ತು ಪಿಂಚಣಿದಾರರ ಆರ್ಥಿಕ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಇನ್ನು DA ಹೆಚ್ಚಳದ ಜೊತೆಗೆ HRAಯಲ್ಲೂ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಹಿಂದೆ ಮೂಲ ವೇತನದ ಶೇ.8ರಷ್ಟು HRA ಪಡೆಯುತ್ತಿದ್ದ ನೌಕರರಿಗೆ ಇದೀಗ ಶೇ.10ರಷ್ಟು HRA ದೊರೆಯಲಿದೆ. ಅಂದರೆ HRA ದರದಲ್ಲಿ ಶೇ.2ರಷ್ಟು ಹೆಚ್ಚಳವಾಗಿದೆ. ಉದಾಹರಣೆಗೆ, ₹30,000 ಮೂಲ ವೇತನ ಪಡೆಯುವ ನೌಕರರಿಗೆ ಈ ಹಿಂದೆ HRA ರೂಪದಲ್ಲಿ ₹2,400 ಸಿಗುತ್ತಿತ್ತು. ಇದೀಗ ಶೇ.10ರ ಹೊಸ ದರ ಅನ್ವಯವಾಗುವುದರಿಂದ ₹3,000 HRA ದೊರೆಯಲಿದೆ. ಅಂದರೆ ಪ್ರತಿ ತಿಂಗಳು ₹600 ಹೆಚ್ಚುವರಿ HRA ಸಿಗಲಿದೆ.

HRAಗೆ ಸಂಬಂಧಿಸಿದ ಗರಿಷ್ಠ ಮಿತಿಯನ್ನೂ ಸರ್ಕಾರ ಹೆಚ್ಚಿಸಿದೆ. ಈ ಹಿಂದೆ ತಿಂಗಳಿಗೆ ಗರಿಷ್ಠ ₹3,000 HRA ಪಡೆಯಬಹುದಾಗಿತ್ತು. ಇದೀಗ ಈ ಮಿತಿಯನ್ನು ₹10,000ಕ್ಕೆ ಏರಿಸಲಾಗಿದೆ. ಇದರಿಂದ ಹೆಚ್ಚಿನ ಮೂಲ ವೇತನ ಹೊಂದಿರುವ ನೌಕರರಿಗೆ ಹಿಂದಿನ ಮಿತಿಗಿಂತ ಹೆಚ್ಚಿನ ಮನೆ ಬಾಡಿಗೆ ಭತ್ಯೆ ಪಡೆಯಲು ಅವಕಾಶ ಸಿಗಲಿದೆ. ಉದಾಹರಣೆಗೆ, ₹70,000 ಮೂಲ ವೇತನ ಹೊಂದಿರುವ ನೌಕರರಿಗೆ ಶೇ.10ರ ದರದಲ್ಲಿ ₹7,000 HRA ದೊರೆಯಲಿದೆ. ಈ ಹಿಂದೆ ಇದ್ದ ₹3,000 ಗರಿಷ್ಠ ಮಿತಿಗೆ ಹೋಲಿಸಿದರೆ ಇದು ಗಮನಾರ್ಹ ಹೆಚ್ಚಳವಾಗಿದೆ.

ತ್ರಿಪುರಾದಲ್ಲಿ 2018ರಿಂದ 7ನೇ ವೇತನ ಆಯೋಗದ ಶಿಫಾರಸುಗಳು ಜಾರಿಯಲ್ಲಿವೆ. ಆದರೆ DA ವಿಚಾರದಲ್ಲಿ ರಾಜ್ಯ ಸರ್ಕಾರಿ ನೌಕರರು ಕೇಂದ್ರ ಸರ್ಕಾರಿ ನೌಕರರಿಗಿಂತ ಕಡಿಮೆ ದರ ಪಡೆಯುತ್ತಿದ್ದಾರೆ. ಈ ಅಂತರವನ್ನು ಹಂತಹಂತವಾಗಿ ಕಡಿಮೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಮಾಣಿಕ್ ಸಾಹಾ ತಿಳಿಸಿದ್ದಾರೆ. ಕೇಂದ್ರ ಸರ್ಕಾರಿ ನೌಕರರು ಪ್ರಸ್ತುತ ಪಡೆಯುತ್ತಿರುವ DA ದರ ಮತ್ತು ತ್ರಿಪುರಾ ರಾಜ್ಯ ಸರ್ಕಾರಿ ನೌಕರರ DA ದರದ ನಡುವೆ ಇರುವ ವ್ಯತ್ಯಾಸವೂ ಈ ಹಿನ್ನೆಲೆಯಲ್ಲಿ ಗಮನ ಸೆಳೆಯುತ್ತಿದೆ. ರಾಜ್ಯ ಸರ್ಕಾರವು ತನ್ನ ನೌಕರರ ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ವಿಚಾರಗಳನ್ನು ಸಕ್ರಿಯವಾಗಿ ಪರಿಶೀಲಿಸುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇನ್ನು 8ನೇ ವೇತನ ಆಯೋಗದ ಜಾರಿಗೆ ಸಂಬಂಧಿಸಿದ ವಿಚಾರವೂ ರಾಜ್ಯ ಸರ್ಕಾರಿ ನೌಕರರಲ್ಲಿ ಕುತೂಹಲ ಮೂಡಿಸಿದೆ. ಕೇಂದ್ರ ಸರ್ಕಾರ 8ನೇ ವೇತನ ಆಯೋಗದ ಪ್ರಕ್ರಿಯೆಯನ್ನು ಆರಂಭಿಸಿರುವ ಹಿನ್ನೆಲೆಯಲ್ಲಿ ತ್ರಿಪುರಾ ಸರ್ಕಾರವೂ ಈ ಬೆಳವಣಿಗೆಯನ್ನು ಗಮನಿಸುತ್ತಿದೆ. ಮುಂದಿನ ದಿನಗಳಲ್ಲಿ ಕೇಂದ್ರದ ಶಿಫಾರಸುಗಳು ಮತ್ತು ಅವುಗಳ ಅನುಷ್ಠಾನದ ಆಧಾರದ ಮೇಲೆ ರಾಜ್ಯದಲ್ಲೂ ವೇತನ ಪರಿಷ್ಕರಣೆ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ತ್ರಿಪುರಾ ಸರ್ಕಾರದ ಇತ್ತೀಚಿನ ನಿರ್ಧಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ DAಯಲ್ಲಿ ಶೇ.3ರಷ್ಟು ಮತ್ತು HRAಯಲ್ಲಿ ಶೇ.2ರಷ್ಟು ಹೆಚ್ಚಳವಾಗಲಿದೆ. ಪಿಂಚಣಿದಾರರ DR ಕೂಡ ಶೇ.3ರಷ್ಟು ಏರಿಕೆಯಾಗಲಿದೆ. ಈ ಪರಿಷ್ಕರಣೆಗಳು ಅಕ್ಟೋಬರ್ 1, 2026ರಿಂದ ಜಾರಿಗೆ ಬರಲಿದ್ದು, ಅಕ್ಟೋಬರ್ ತಿಂಗಳ ವೇತನ ಮತ್ತು ಪಿಂಚಣಿಯಲ್ಲಿ ಇದರ ಪ್ರಯೋಜನ ದೊರೆಯಲಿದೆ

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES