• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ರಾಷ್ಟ್ರೀಯ
  • /ಮಧ್ಯಪ್ರದೇಶದಲ್ಲಿ ಭೀಕರ ದುರಂತ: ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತರ ಮೇಲೆ ಹರಿದ ಟ್ರಕ್‌, 12 ಮಂದಿ ಸಾ*ವು!

ಮಧ್ಯಪ್ರದೇಶದಲ್ಲಿ ಭೀಕರ ದುರಂತ: ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತರ ಮೇಲೆ ಹರಿದ ಟ್ರಕ್‌, 12 ಮಂದಿ ಸಾ*ವು!

ಮಧ್ಯಪ್ರದೇಶದ ಗ್ವಾಲಿಯರ್‌ನ ಶೀತಲಾ ಮಾತಾ ದೇವಸ್ಥಾನದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿದ ಭತ್ತ ತುಂಬಿದ ಟ್ರಕ್ ಭಕ್ತರ ಮೇಲೆ ಹರಿದ ಪರಿಣಾಮ 12 ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ನವರಾತ್ರಿ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧವಿದ್ದರೂ ಟ್ರಕ್ ದೇವಸ್ಥಾನದ ರಸ್ತೆಗೆ ಪ್ರವೇಶಿಸಿದ್ದು ಹೇಗೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Written ByPuttaraj K Alur
Published: Oct 18, 2026, 07:47 AM IST|Updated: Oct 18, 2026, 08:00 AM IST
joinshare
ಮಧ್ಯಪ್ರದೇಶದಲ್ಲಿ ಭೀಕರ ದುರಂತ: ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತರ ಮೇಲೆ ಹರಿದ ಟ್ರಕ್‌, 12 ಮಂದಿ ಸಾ*ವು!
Image Credit: Truck Accident

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ರಾಯಲ್ ಎನ್‌ಫೀಲ್ಡ್‌ನ ಹೊಸ ಬೈಕ್‌ ಲಾಂಚ್‌! ಬಣ್ಣ ಬದಲಿಸುವ ಲುಕ್‌; ಕೇವಲ 125 ಬೈಕ್‌ಗಳಷ್ಟೇ ಲಭ್ಯ!

ರಾಯಲ್ ಎನ್‌ಫೀಲ್ಡ್‌ನ ಹೊಸ ಬೈಕ್‌ ಲಾಂಚ್‌! ಬಣ್ಣ ಬದಲಿಸುವ ಲುಕ್‌; ಕೇವಲ 125 ಬೈಕ್‌ಗಳಷ್ಟೇ ಲಭ್ಯ!

2

ಮಧ್ಯಪ್ರದೇಶದಲ್ಲಿ ಭೀಕರ ದುರಂತ: ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತರ ಮೇಲೆ ಹರಿದ ಟ್ರಕ್‌, 12 ಮಂದಿ ಸಾ*ವು!

3

Today Horoscope: ಈ 4 ರಾಶಿಯವರಿಗೆ ಅದೃಷ್ಟದ ಬಾಗಿಲು ಓಪನ್‌! ಹಣಕಾಸು, ಉದ್ಯೋಗದಲ್ಲಿ ಶುಭಸುದ್ದಿ

4

ದುರ್ಗಾ ಪೂಜೆಯಲ್ಲಿ ಘೋರ ದುರಂತ: ಕಾಲ್ತುಳಿತಕ್ಕೆ 19 ಮಂದಿ ಬಲಿ, 35ಕ್ಕೂ ಹೆಚ್ಚು ಜನರಿಗೆ ಗಾಯ!

5

ಕೆಪಿಎಸ್‌ಸಿ ಹಗರಣ ಬಿಜೆಪಿಯ ಕೂಸು: ಸಿಎಂ ಡಿ ಕೆ ಶಿವಕುಮಾರ್

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Gwalior Truck Accident: ನವರಾತ್ರಿ ಸಂಭ್ರಮದ ನಡುವೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶೀತಲಾ ಮಾತಾ ದೇವಸ್ಥಾನಕ್ಕೆ ದರ್ಶನ ಪಡೆಯಲು ತೆರಳುತ್ತಿದ್ದ ಭಕ್ತರ ಮೇಲೆ ಭತ್ತ ತುಂಬಿದ್ದ ನಿಯಂತ್ರಣ ತಪ್ಪಿದ ಟ್ರಕ್ ಹರಿದ ಪರಿಣಾಮ ಕನಿಷ್ಠ 12 ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಭಾನುವಾರ (ಅಕ್ಟೋಬರ್ 18) ಮುಂಜಾನೆ ಸುಮಾರು 1.30ರ ವೇಳೆಗೆ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ. 

ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತರ ಮೇಲೆ ಹರಿದ ಟ್ರಕ್‌

ನವರಾತ್ರಿಯ ಸಪ್ತಮಿ ಅಂಗವಾಗಿ ಶೀತಲಾ ಮಾತಾ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಛಿನೋರ್ ಕಡೆಯಿಂದ ದೇವಸ್ಥಾನದತ್ತ ಬರುತ್ತಿದ್ದ ಭತ್ತ ತುಂಬಿದ ಟ್ರಕ್‌ ಬೆಟ್ಟದ ಇಳಿಜಾರಿನಲ್ಲಿ ನಿಯಂತ್ರಣ ಕಳೆದುಕೊಂಡಿದೆ ಎನ್ನಲಾಗಿದೆ. ವೇಗವಾಗಿ ಕೆಳಕ್ಕೆ ಬಂದ ಟ್ರಕ್‌ ರಸ್ತೆಯಲ್ಲಿ ಸಾಗುತ್ತಿದ್ದ ಭಕ್ತರ ಗುಂಪಿನ ಮೇಲೆ ಹರಿದಿದ್ದು, ಬಳಿಕ ದೇವಸ್ಥಾನದ ಪ್ರವೇಶ ದ್ವಾರ ಮತ್ತು ಹೊರಗೋಡೆಗೆ ಡಿ*ಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ದೇವಸ್ಥಾನದ ಪ್ರವೇಶ ಭಾಗಕ್ಕೂ ಹಾನಿಯಾಗಿದೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಭಕ್ತರ ಆಕ್ರಂದನ ಮುಗಿಲುಮುಟ್ಟಿದೆ. 

ಪೊಲೀಸ್ ಬ್ಯಾರಿಕೇಡ್‌ ಮುರಿದು ಬಂದ ಟ್ರಕ್‌!

 

Massive killer mishap in Gwalior. 13 devotees killed, at least 29 others injured, after an uncontrolled truck ran over them fatally outside the Shitla Mata Temple in Gwalior on Sat-Sun intervening night. 7 injured are stated critical. @NewIndianXpress @santwana99 @jayanthjacob https://t.co/yjWv4x8Mp6

— Anuraag Singh (@anuraag_niebpl) October 18, 2026

 ಅಪಘಾತ ಸಂಭವಿಸಿದ ರಸ್ತೆಯಲ್ಲಿ ನವರಾತ್ರಿ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರವನ್ನ ನಿರ್ಬಂಧಿಸಲಾಗಿತ್ತು. ಈ ಉದ್ದೇಶದಿಂದ ಪೊಲೀಸ್ ಚೆಕ್‌ಪೋಸ್ಟ್‌ ಹಾಗೂ ಬ್ಯಾರಿಕೇಡ್‌ಗಳನ್ನ ಅಳವಡಿಸಲಾಗಿತ್ತು. ಆದರೂ ಟ್ರಕ್‌ ಬ್ಯಾರಿಕೇಡ್‌ಗಳನ್ನ ದಾಟಿ ದೇವಸ್ಥಾನದ ರಸ್ತೆಗೆ ಹೇಗೆ ಪ್ರವೇಶಿಸಿತು ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಗ್ವಾಲಿಯರ್ ಹಿರಿಯ ಪೊಲೀಸ್ ಅಧೀಕ್ಷಕ ಧರ್ಮವೀರ್ ಸಿಂಗ್ ಅವರ ಪ್ರಕಾರ, ಇಳಿಜಾರಿನಲ್ಲಿ ಟ್ರಕ್‌ ನಿಯಂತ್ರಣ ಕಳೆದುಕೊಂಡು ಭಕ್ತರ ಮೇಲೆ ಹರಿದಿದೆ. ಘಟನೆಯ ವೇಳೆ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 

 

39 ಮಂದಿ ಆಸ್ಪತ್ರೆಗೆ ದಾಖಲು; ಹಲವರ ಸ್ಥಿತಿ ಗಂಭೀರ

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು, ಆಂಬ್ಯುಲೆನ್ಸ್‌ಗಳು ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಗಾಯಗೊಂಡವರನ್ನ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಒಟ್ಟು 39 ಮಂದಿಯನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ಐದರಿಂದ ಆರು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಉಳಿದವರಿಗೆ ವಿವಿಧ ಪ್ರಮಾಣದ ಗಾಯಗಳಾಗಿವೆ. ಗಾಯಾಳುಗಳ ಚಿಕಿತ್ಸೆಗೆ ವೈದ್ಯಕೀಯ ತಂಡಗಳು ಕಾರ್ಯನಿರ್ವಹಿಸುತ್ತಿವೆ. 

ಟ್ರಕ್‌ ತಾಂತ್ರಿಕ ದೋಷದ ಬಗ್ಗೆ ತನಿಖೆ

ಈ ಘಟನೆಯ ಕುರಿತು ಜಿಲ್ಲಾಡಳಿತ ಹಾಗೂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನವರಾತ್ರಿ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರ ನಿರ್ಬಂಧಿಸಿದ್ದರೂ ಟ್ರಕ್‌ ಬ್ಯಾರಿಕೇಡ್‌ಗಳನ್ನ ದಾಟಿ ಬಂದಿದ್ದು ಹೇಗೆ ಎಂಬುದನ್ನ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಟ್ರಕ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿತ್ತೇ, ಚಾಲಕನ ನಿಯಂತ್ರಣ ತಪ್ಪಲು ನಿಖರ ಕಾರಣವೇನು ಎಂಬುದನ್ನ ಪತ್ತೆಹಚ್ಚಲು ಪ್ರಾದೇಶಿಕ ಸಾರಿಗೆ ಕಚೇರಿ (RTO) ತಂಡದಿಂದ ವಾಹನದ ತಾಂತ್ರಿಕ ತಪಾಸಣೆ ನಡೆಸಲಾಗುತ್ತಿದೆ. ತನಿಖೆಯ ನಂತರ ಅಪಘಾತದ ನಿಖರ ಕಾರಣ ಸ್ಪಷ್ಟವಾಗುವ ನಿರೀಕ್ಷೆಯಿದೆ. 

ನವರಾತ್ರಿ ಸಂಭ್ರಮದ ನಡುವೆ ಸೂತಕದ ಛಾಯೆ

ದೇವಿಯ ದರ್ಶನಕ್ಕಾಗಿ ತೆರಳಿದ್ದ ಭಕ್ತರು ದುರಂತಕ್ಕೆ ಬಲಿಯಾಗಿರುವುದು ಸ್ಥಳೀಯರಲ್ಲಿ ತೀವ್ರ ದುಃಖ ಮೂಡಿಸಿದೆ. ಧಾರ್ಮಿಕ ಸ್ಥಳಗಳಿಗೆ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವುದರಿಂದ, ವಾಹನ ಸಂಚಾರ ನಿಯಂತ್ರಣ, ಸುರಕ್ಷತಾ ವ್ಯವಸ್ಥೆ ಹಾಗೂ ತುರ್ತು ರಕ್ಷಣಾ ಕ್ರಮಗಳ ಅಗತ್ಯ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ಘಟನೆಯ ಕುರಿತು ತನಿಖೆ ಮುಂದುವರಿದಿದ್ದು, ಗಾಯಾಳುಗಳ ಆರೋಗ್ಯದ ಬಗ್ಗೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ. ಹೆಚ್ಚಿನ ವಿವರಗಳು ಲಭ್ಯವಾದಂತೆ ಪ್ರಕರಣದ ಸಂಪೂರ್ಣ ಚಿತ್ರಣ ಹೊರಬರಲಿದೆ.

Add Zee News as a Preferred Source
TAGS:
Kannada News