• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ರಾಷ್ಟ್ರೀಯ
  • /ಪಶ್ಚಿಮ ಬಂಗಾಳದಲ್ಲಿ ಖಾಕಿ ಭರ್ಜರಿ ಬೇಟೆ; TMC ಕಚೇರಿಯಲ್ಲಿ ₹1.02 ಕೋಟಿ, ರೈಲು ನಿಲ್ದಾಣದಲ್ಲಿ ₹1.40 ಕೋಟಿ ಪತ್ತೆ!

ಪಶ್ಚಿಮ ಬಂಗಾಳದಲ್ಲಿ ಖಾಕಿ ಭರ್ಜರಿ ಬೇಟೆ; TMC ಕಚೇರಿಯಲ್ಲಿ ₹1.02 ಕೋಟಿ, ರೈಲು ನಿಲ್ದಾಣದಲ್ಲಿ ₹1.40 ಕೋಟಿ ಪತ್ತೆ!

ಪಶ್ಚಿಮ ಬಂಗಾಳದಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಪೊಲೀಸರು ಒಟ್ಟು 2.42 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ಸರಿಷಾ ಪ್ರದೇಶದ ಟಿಎಂಸಿ ಕಚೇರಿಯಲ್ಲಿ 1.02 ಕೋಟಿ ರೂಪಾಯಿ ಪತ್ತೆಯಾಗಿದ್ದರೆ, ಖರಗ್‌ಪುರ ರೈಲು ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್‌ನಲ್ಲಿ 1.40 ಕೋಟಿ ರೂಪಾಯಿ ಸಿಕ್ಕಿದೆ. ಹಣದ ಮೂಲ ಹಾಗೂ ಅದರ ಉದ್ದೇಶದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Written ByPuttaraj K Alur
Published: Nov 04, 2026, 05:42 PM IST|Updated: Nov 04, 2026, 05:56 PM IST
joinshare
ಪಶ್ಚಿಮ ಬಂಗಾಳದಲ್ಲಿ ಖಾಕಿ ಭರ್ಜರಿ ಬೇಟೆ; TMC ಕಚೇರಿಯಲ್ಲಿ ₹1.02 ಕೋಟಿ, ರೈಲು ನಿಲ್ದಾಣದಲ್ಲಿ ₹1.40 ಕೋಟಿ ಪತ್ತೆ!
Image Credit: ಸಾಂದರ್ಭಿಕ ಚಿತ್ರ

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ದರ್ಶನ್ ಮನೆಗೆ ಆಟೋಗಳನ್ನು ಕಳುಹಿಸಿ ಸೆಕ್ಯೂರಿಟಿಗೆ ಧಮ್ಕಿ : ಅನಾಮಿಕನ ಆಡಿಯೋ ವೈರಲ್!

ದರ್ಶನ್ ಮನೆಗೆ ಆಟೋಗಳನ್ನು ಕಳುಹಿಸಿ ಸೆಕ್ಯೂರಿಟಿಗೆ ಧಮ್ಕಿ : ಅನಾಮಿಕನ ಆಡಿಯೋ ವೈರಲ್!

2

ಬಡತನ ನಿರ್ಮೂಲನೆಗೆ ಭಾರತದಲ್ಲಿ ಮಹತ್ವದ ಪ್ರಗತಿ : 27.1ರಿಂದ ಶೇ.2.6ಕ್ಕೆ ಇಳಿದ ಕಡು ಬಡತನ

3

ಅಡಿಕೆ ಬೆಲೆಯಲ್ಲಿ ಏರಿಳಿತ; ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಇಂದಿನ ಧಾರಣೆ? ಇಲ್ಲಿದೆ ಸಂಪೂರ್ಣ ಮಾಹಿತಿ!

4

ಪಶ್ಚಿಮ ಬಂಗಾಳದಲ್ಲಿ ಖಾಕಿ ಭರ್ಜರಿ ಬೇಟೆ; TMC ಕಚೇರಿಯಲ್ಲಿ ₹1.02 ಕೋಟಿ, ರೈಲು ನಿಲ್ದಾಣದಲ್ಲಿ ₹1.40 ಕೋಟಿ ಪತ್ತೆ!

5

‘ರಾಮಾಯಣ’ ಚಿತ್ರದಲ್ಲಿ ಯಶ್ ರಾವಣನ ಪಾತ್ರಕ್ಕೆ ಪಡೆದ ಸಂಭಾವನೆ ಎಷ್ಟು?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

West Bengal Cash Seizure: ಪಶ್ಚಿಮ ಬಂಗಾಳದಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಬರೋಬ್ಬರಿ 2.42 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಒಂದು ಕಡೆ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಕಚೇರಿಯಲ್ಲಿ 1 ಕೋಟಿ 2 ಲಕ್ಷದ 79 ಸಾವಿರ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ. ಮತ್ತೊಂದೆಡೆ ಖರಗ್‌ಪುರ ರೈಲು ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನ ಬ್ಯಾಗ್‌ನಲ್ಲಿ 1 ಕೋಟಿ 40 ಲಕ್ಷ ರೂಪಾಯಿ ಪತ್ತೆಯಾಗಿದೆ. ಈ ಎರಡೂ ಪ್ರಕರಣಗಳು ಇದೀಗ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಹಣದ ಮೂಲ ಮತ್ತು ಅದರ ಬಳಕೆಯ ಉದ್ದೇಶದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಟಿಎಂಸಿ ಕಚೇರಿಯಲ್ಲಿ 1.02 ಕೋಟಿ ರೂಪಾಯಿ ನಗದು ಪತ್ತೆ

ಪಶ್ಚಿಮ ಬಂಗಾಳದ ಸರಿಷಾ ಪ್ರದೇಶದಲ್ಲಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಬರೋಬ್ಬರಿ 1 ಕೋಟಿ 2 ಲಕ್ಷದ 79 ಸಾವಿರ ರೂಪಾಯಿ ನಗದು ಪತ್ತೆಯಾಗಿದೆ. ಈ ಕಚೇರಿಯು ಮಗ್ರಾಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರದ ಟಿಎಂಸಿ ಶಾಸಕ ಶಮೀಮ್ ಅಹ್ಮದ್ ಅವರಿಗೆ ಸೇರಿದ್ದು ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಶದಲ್ಲಿರುವ ಅಭಿಷೇಕ್ ಬ್ಯಾನರ್ಜಿ ಅವರ ಆಪ್ತ ಸಹಾಯಕ ಸುಮಿತ್ ರಾಯ್ ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಸುಮಿತ್ ರಾಯ್ ಅವರನ್ನ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಟಿಎಂಸಿ ಕಚೇರಿಯಲ್ಲಿ ದೊಡ್ಡ ಪ್ರಮಾಣದ ಹಣ ಇರಿಸಿರುವ ಬಗ್ಗೆ ಮಹತ್ವದ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ. ಈ ಸುಳಿವಿನ ಆಧಾರದ ಮೇಲೆ ಪೊಲೀಸರು ಸರಿಷಾ ಪ್ರದೇಶದಲ್ಲಿರುವ ಪಕ್ಷದ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಒಟ್ಟು 1,02,79,000 ರೂಪಾಯಿ ನಗದು ಪತ್ತೆಯಾಗಿದ್ದು, ಅದನ್ನ ವಶಕ್ಕೆ ಪಡೆಯಲಾಗಿದೆ. ಪಕ್ಷದ ಕಚೇರಿಯಲ್ಲಿ ಇಷ್ಟು ದೊಡ್ಡ ಮೊತ್ತದ ಹಣ ಪತ್ತೆಯಾಗಿರುವುದು ಹಲವು ಪ್ರಶ್ನೆಗಳನ್ನ ಹುಟ್ಟುಹಾಕಿದೆ.

ಹಣವನ್ನ ಅಲ್ಲಿಗೆ ಯಾರು ತಂದಿದ್ದರು? ಯಾವ ಉದ್ದೇಶಕ್ಕಾಗಿ ಸಂಗ್ರಹಿಸಿಡಲಾಗಿತ್ತು? ಹಣದ ಮೂಲ ಯಾವುದು? ಎಂಬ ಹಲವು ವಿಚಾರಗಳ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಈ ಸಂಬಂಧ ಸುಮಿತ್ ರಾಯ್ ವಿಚಾರಣೆಯಲ್ಲಿ ನೀಡಿರುವ ಮಾಹಿತಿ ಹಾಗೂ ಹಣ ಪತ್ತೆಯಾದ ಕಚೇರಿಯ ಹಿನ್ನೆಲೆಯನ್ನ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಹಣದ ಮೂಲ ಮತ್ತು ಅದನ್ನ ಕಚೇರಿಯಲ್ಲಿ ಇರಿಸಿದ್ದ ಉದ್ದೇಶವನ್ನ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

ಖರಗ್‌ಪುರ ರೈಲು ನಿಲ್ದಾಣದಲ್ಲಿ 1.40 ಕೋಟಿ ರೂಪಾಯಿ ಪತ್ತೆ

ಇದೇ ವೇಳೆ ಪಶ್ಚಿಮ ಬಂಗಾಳದ ಖರಗ್‌ಪುರ ರೈಲು ನಿಲ್ದಾಣದಲ್ಲಿಯೂ ಮತ್ತೊಂದು ಭಾರೀ ನಗದು ಪತ್ತೆ ಪ್ರಕರಣ ಬೆಳಕಿಗೆ ಬಂದಿದೆ. ಜನಶತಾಬ್ದಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿ ಬಂದಿದ್ದ ರಾಹುಲ್ ಸೋನಿ ಎಂಬ ವ್ಯಕ್ತಿಯ ಬ್ಯಾಗ್‌ನಲ್ಲಿ ಬರೋಬ್ಬರಿ 1 ಕೋಟಿ 40 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.

ರೈಲು ನಿಲ್ದಾಣದಲ್ಲಿ ಗಸ್ತು ತಿರುಗುತ್ತಿದ್ದ ಸರ್ಕಾರಿ ರೈಲ್ವೆ ಪೊಲೀಸ್ (GRP) ಸಿಬ್ಬಂದಿಗೆ ಪ್ರಯಾಣಿಕನ ಚಲನವಲನದ ಬಗ್ಗೆ ಅನುಮಾನ ಮೂಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ರಾಹುಲ್ ಸೋನಿ ಅವರ ಬ್ಯಾಗ್ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಬ್ಯಾಗ್‌ನಲ್ಲಿ 500 ರೂಪಾಯಿ ಮುಖಬೆಲೆಯ ನೋಟುಗಳ ಕಂತೆಗಳು ಪತ್ತೆಯಾಗಿವೆ. ಹಣವನ್ನ ಎಣಿಕೆ ಮಾಡಿದಾಗ ಒಟ್ಟು ಮೊತ್ತ 1 ಕೋಟಿ 40 ಲಕ್ಷ ರೂಪಾಯಿ ಇರುವುದು ತಿಳಿದುಬಂದಿದೆ.

ಇಷ್ಟು ದೊಡ್ಡ ಪ್ರಮಾಣದ ಹಣವನ್ನ ಪ್ರಯಾಣಿಕನೊಬ್ಬ ಬ್ಯಾಗ್‌ನಲ್ಲಿ ಸಾಗಿಸುತ್ತಿದ್ದ ವಿಚಾರ ಪೊಲೀಸರ ಗಮನ ಸೆಳೆದಿದೆ. ತಕ್ಷಣವೇ ಹಣವನ್ನ ವಶಕ್ಕೆ ಪಡೆದು ಅದರ ಮೂಲದ ಬಗ್ಗೆ ಪರಿಶೀಲನೆ ಆರಂಭಿಸಲಾಗಿದೆ. ರಾಹುಲ್ ಸೋನಿ ಬಳಿ ಪತ್ತೆಯಾದ ಹಣ ಎಲ್ಲಿಂದ ಬಂದಿದೆ? ಅದನ್ನ ಯಾರಿಗೆ ತಲುಪಿಸಲು ತೆಗೆದುಕೊಂಡು ಹೋಗಲಾಗುತ್ತಿತ್ತು? ಯಾವ ಉದ್ದೇಶಕ್ಕಾಗಿ ಇಷ್ಟು ದೊಡ್ಡ ಮೊತ್ತವನ್ನ ರೈಲಿನಲ್ಲಿ ಸಾಗಿಸಲಾಗುತ್ತಿತ್ತು? ಎಂಬ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಒಂದೇ ರಾಜ್ಯದಲ್ಲಿ ಎರಡು ಪ್ರತ್ಯೇಕ ಪ್ರಕರಣ

ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಈ ಎರಡು ಘಟನೆಗಳಲ್ಲಿ ಒಟ್ಟು 2 ಕೋಟಿ 42 ಲಕ್ಷದ 79 ಸಾವಿರ ರೂಪಾಯಿ ನಗದು ಪತ್ತೆಯಾಗಿದೆ. ಸರಿಷಾದ ಟಿಎಂಸಿ ಕಚೇರಿಯಲ್ಲಿ 1,02,79,000 ರೂಪಾಯಿ ಹಾಗೂ ಖರಗ್‌ಪುರ ರೈಲು ನಿಲ್ದಾಣದಲ್ಲಿ 1,40,00,000 ರೂಪಾಯಿ ವಶಪಡಿಸಿಕೊಳ್ಳಲಾಗಿದೆ. ಎರಡೂ ಪ್ರಕರಣಗಳು ಪ್ರತ್ಯೇಕವಾಗಿದ್ದು, ಹಣ ಪತ್ತೆಯಾದ ಸ್ಥಳ, ಅದರ ಹಿನ್ನೆಲೆ ಹಾಗೂ ಸಂಬಂಧಪಟ್ಟ ವ್ಯಕ್ತಿಗಳ ವಿವರಗಳೂ ವಿಭಿನ್ನವಾಗಿವೆ.

ಒಂದು ಪ್ರಕರಣದಲ್ಲಿ ಪಕ್ಷದ ಕಚೇರಿಯಲ್ಲಿ ಹಣ ಪತ್ತೆಯಾಗಿದ್ದರೆ, ಮತ್ತೊಂದು ಪ್ರಕರಣದಲ್ಲಿ ರೈಲಿನಲ್ಲಿ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ ಭಾರೀ ಮೊತ್ತದ ನಗದು ಸಿಕ್ಕಿದೆ. ಸದ್ಯ ಎರಡೂ ಪ್ರಕರಣಗಳಲ್ಲಿ ಹಣದ ಮೂಲ ಮತ್ತು ಅದನ್ನ ಇರಿಸಿದ್ದ ಅಥವಾ ಸಾಗಿಸುತ್ತಿದ್ದ ಉದ್ದೇಶದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ತನಿಖೆಯ ನಂತರವೇ ಈ ಹಣದ ಹಿಂದಿನ ಸಂಪೂರ್ಣ ವಿವರಗಳು ಬಹಿರಂಗವಾಗಬೇಕಿದೆ.

Add Zee News as a Preferred Source
TAGS:
Kannada News