• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ರಾಷ್ಟ್ರೀಯ
  • /ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳಿಂದ ತುಂಬಿದ್ದ ಬಸ್‌ನಲ್ಲಿ ಬೆಂಕಿ ಅವಘಡ..! ಸಂಪೂರ್ಣ ಸುಟ್ಟು ಭಸ್ಮ

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳಿಂದ ತುಂಬಿದ್ದ ಬಸ್‌ನಲ್ಲಿ ಬೆಂಕಿ ಅವಘಡ..! ಸಂಪೂರ್ಣ ಸುಟ್ಟು ಭಸ್ಮ

ಕೊಡೈಕೆನಾಲ್ ಪ್ರವಾಸ ಮುಗಿಸಿ ವಾಪಸಾಗುತ್ತಿದ್ದ ಶಾಲಾ ವಿದ್ಯಾರ್ಥಿಗಳಿದ್ದ ಬಸ್‌ಗೆ ಹಠಾತ್ತನೆ ಬೆಂಕಿ ಹೊತ್ತಿಕೊಂಡ ಘಟನೆಯು ಥೇಣಿ ಜಿಲ್ಲೆಯ ದೇವಧನಪಟ್ಟಿ ಸಮೀಪ ವರದಿಯಾಗಿದೆ. ಬಸ್ಸಿನಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದರು ಎನ್ನಲಾಗಿದೆ.. ಈ ಕುರಿತು ಸಂಪೂರ್ಣ ವರದಿ ಇಲ್ಲಿದೆ..

Written ByKrishna NK
Published: Nov 08, 2026, 16:28 IST|Updated: Nov 08, 2026, 16:32 IST
joinshare
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳಿಂದ ತುಂಬಿದ್ದ ಬಸ್‌ನಲ್ಲಿ ಬೆಂಕಿ ಅವಘಡ..! ಸಂಪೂರ್ಣ ಸುಟ್ಟು ಭಸ್ಮ
Image Credit: Theni bus accident

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ತಮಿಳುನಾಡು : ಕೊಡೈಕೆನಾಲ್ ಪ್ರವಾಸ ಮುಗಿಸಿ ವಾಪಸಾಗುತ್ತಿದ್ದ ಕೇರಳದ ಶಾಲಾ ವಿದ್ಯಾರ್ಥಿಗಳಿದ್ದ ಬಸ್‌ಗೆ ಹಠಾತ್ತನೆ ಬೆಂಕಿ ಹೊತ್ತಿಕೊಂಡ ಘಟನೆಯು ಥೇಣಿ ಜಿಲ್ಲೆಯ ದೇವಧನಪಟ್ಟಿ ಸಮೀಪ ವರದಿಯಾಗಿದೆ. ಅದೃಷ್ಟವಶಾತ್ ಚಾಲಕನ ಸಮಯೋಚಿತ ನಿರ್ಧಾರದಿಂದ ಬಸ್ಸಿನಲ್ಲಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯಾವುದೇ ಪ್ರಾಣಾಪಾಯವಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ. ಈ ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಭಾರಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಹೌದು.. ಕೇರಳದ ಪಾಲಕ್ಕಾಡ್‌ನಲ್ಲಿರುವ ಸರ್ಕಾರಿ ಅನುದಾನಿತ ಶಾಲೆಯೊಂದರ ವಿದ್ಯಾರ್ಥಿಗಳು ನಿರಂತರ ರಜೆ ಇದ್ದ ಕಾರಣ ನವೆಂಬರ್ 7ರಂದು ಕೊಡೈಕೆನಾಲ್‌ಗೆ ಪ್ರವಾಸ ಕೈಗೊಂಡಿದ್ದರು. ಕೊಡೈಕೆನಾಲ್‌ನ ಸುಂದರ ತಾಣಗಳನ್ನು ವೀಕ್ಷಿಸಿದ ನಂತರ, ಅಲ್ಲಿಂದ ಕೇರಳದ ಮುನ್ನಾರ್ ಕಡೆಗೆ ಪ್ರಯಾಣ ಬೆಳೆಸಲು ಯೋಜಿಸಿದ್ದರು. ಅದರಂತೆ ನವೆಂಬರ್ 8ರಂದು ಮುಂಜಾನೆ ಬಸ್‌ನಲ್ಲಿ ಪ್ರವಾಸ ಮುಂದುವರಿಸಿದ್ದರು.

ಪ್ರಯಾಣದ ಮಧ್ಯೆ ಥೇಣಿ ಜಿಲ್ಲೆಯ ದೇವಧನಪಟ್ಟಿ ಬಳಿ ಬಸ್ ಸಾಗುತ್ತಿದ್ದಾಗ, ಹಠಾತ್ತನೆ ಬಸ್ಸಿನ ಟೈರ್ ಒಡೆದು ದೊಡ್ಡ ಶಬ್ದ ಉಂಟಾಗಿದೆ. ಕೆಲವೇ ಕ್ಷಣಗಳಲ್ಲಿ ಬಸ್‌ನ ಕೆಳಭಾಗದಿಂದ ದಟ್ಟವಾದ ಹೊಗೆ ಬರಲು ಪ್ರಾರಂಭಿಸಿದೆ. ಇದನ್ನು ಗಮನಿಸಿದ ವಿದ್ಯಾರ್ಥಿಗಳು ಭಯಭೀತರಾಗಿ ಕಿರುಚಾಡಲು ಆರಂಭಿಸಿದ್ದಾರೆ. ಕೂಡಲೇ ಎಚ್ಚೆತ್ತ ಚಾಲಕ ಯಾವುದೇ ಅಡಚಣೆಗೆ ಅವಕಾಶ ನೀಡದೆ ತಕ್ಷಣವೇ ರಸ್ತೆಯ ಬದಿಗೆ ಬಸ್ ಅನ್ನು ನಿಲ್ಲಿಸಿದ್ದಾನೆ. ಕೂಡಲೇ ಎಲ್ಲಾ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲಾಗಿದೆ.

ವಿದಾರ್ಥಿಗಳು ಕೆಳಗೆ ಇಳಿದ ಕೆಲವೇ ನಿಮಿಷಗಳಲ್ಲಿ ಬಸ್‌ಗೆ ಬೆಂಕಿ ವ್ಯಾಪಿಸಿ, ದೆಹಲಿ ಮಟ್ಟಕ್ಕೆ ಹೊಗೆಯಾಡಲಾರಂಭಿಸಿತು. ಸ್ಥಳೀಯರ ಸಹಾಯದಿಂದ ಕೆಲವರು ನೀರು ಹಾಕಿ ಬೆಂಕಿ ನಂದಿಸಲು ಹರಸಾಹಸ ಪಟ್ಟರಾದರೂ, ಬೆಂಕಿಯ ತೀವ್ರತೆ ಹೆಚ್ಚುತ್ತಿರುವುದನ್ನು ಕಂಡು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು.

ಸುದ್ದಿ ತಿಳಿದ ಕೂಡಲೇ ಪೆರಿಯಾಕುಲಂ ಮತ್ತು ವಟ್ಟಲಕುಂಡು ಪ್ರದೇಶಗಳಿಂದ ಧಾವಿಸಿಬಂದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಶ್ರಮಿಸಿ ಬೆಂಕಿಯನ್ನು ಸಂಪೂರ್ಣವಾಗಿ ಹತೋಟಿಗೆ ತಂದರು. ಆದರೆ, ಅಷ್ಟೊತ್ತಿಗಾಗಲೇ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ಬಸ್‌ನಲ್ಲಿದ್ದ ವಿದ್ಯಾರ್ಥಿಗಳ ಬ್ಯಾಗ್‌ಗಳು, ಬಟ್ಟೆಗಳು ಹಾಗೂ ಇತರ ವಸ್ತುಗಳು ಬೆಂಕಿಗೆ ಆಹುತಿಯಾಗಿ ಬೂದಿಯಾಗಿವೆ.

ಪ್ರಾಥಮಿಕ ತನಿಖೆಯ ಪ್ರಕಾರ, ಟೈರ್ ಸಿಡಿದ ಪರಿಣಾಮ ಉಂಟಾದ ತೀವ್ರ ಘರ್ಷಣೆಯಿಂದಾಗಿ ಬೆಂಕಿ ಹತ್ತಿಕೊಂಡಿರಬಹುದು ಮತ್ತು ಬಸ್ಸಿನ ಹವಾನಿಯಂತ್ರಣ ವ್ಯವಸ್ಥೆಯ ಸಿಲಿಂಡರ್‌ಗೆ ಬೆಂಕಿ ತಗುಲಿ ಇಡೀ ಬಸ್ ವ್ಯಾಪಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನೆಯಿಂದಾಗಿ ಮಧುರೆ-ಕೊಡೈಕೆನಾಲ್ ಮಾರ್ಗದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸಂಪೂರ್ಣಸ್ತಬ್ಧಗೊಂಡು ಭಾರಿ ದಟ್ಟಣೆ ಉಂಟಾಯಿತು.

ಸ್ಥಳಕ್ಕೆ ದೌಡಾಯಿಸಿದ ದೇವಧನಪಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಪ್ರವಾಸದ ಖುಷಿಯಲ್ಲಿದ್ದ ಮಕ್ಕಳಿಗೆ ಈ ಅಚಾನಕ್ ದುರ್ಘಟನೆಯಿಂದ ಆಘಾತ ಉಂಟಾಗಿದ್ದು, ನಂತರ ಪೊಲೀಸರು ಮತ್ತು ಶಾಲಾ ಆಡಳಿತ ಮಂಡಳಿಯವರು ಪರ್ಯಾಯ ವ್ಯವಸ್ಥೆ ಕಲ್ಪಿಸಿ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕೇರಳದ ಪಾಲಕ್ಕಾಡ್‌ಗೆ ಕಳುಹಿಸಿಕೊಟ್ಟಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ದೊಡ್ಡ ದುರಂತವೊಂದು ತಪ್ಪಿದಂತಾಗಿದ್ದು, ಪೋಷಕರು ಹಾಗೂ ಸಾರ್ವಜನಿಕರು ನಿರಾಳರಾಗಿದ್ದಾರೆ.

Add Zee News as a Preferred Source
TAGS:
Kannada News