• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ರಾಷ್ಟ್ರೀಯ
  • /ಕುಲ್ಗಾಮ್‌ನಲ್ಲಿ 7ನೇ ದಿನವೂ ಉಗ್ರರ ವಿರುದ್ಧ ಮುಂದುವರೆದ ಕಾರ್ಯಾಚರಣೆ : ಲಷ್ಕರ್‌ ಸಹಚರನ ಮೃತದೇಹ ಪತ್ತೆ

ಕುಲ್ಗಾಮ್‌ನಲ್ಲಿ 7ನೇ ದಿನವೂ ಉಗ್ರರ ವಿರುದ್ಧ ಮುಂದುವರೆದ ಕಾರ್ಯಾಚರಣೆ : ಲಷ್ಕರ್‌ ಸಹಚರನ ಮೃತದೇಹ ಪತ್ತೆ

ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯು ಮಂಗಳವಾರ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಲಷ್ಕರ್-ಎ- ತೊಯ್ಡಾ ಉಗ್ರ ಲತೀಫ್ ಭಟ್‌ನ ಸ್ಥಳೀಯ ಸಹಚರನ ಮೃತದೇಹ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಕಟ್ಟು ನಿಟ್ಟಿನ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

Written ByYashaswini V
Published: Nov 18, 2026, 10:14 IST|Updated: Nov 18, 2026, 10:27 IST
joinshare
ಕುಲ್ಗಾಮ್‌ನಲ್ಲಿ 7ನೇ ದಿನವೂ ಉಗ್ರರ ವಿರುದ್ಧ ಮುಂದುವರೆದ ಕಾರ್ಯಾಚರಣೆ : ಲಷ್ಕರ್‌ ಸಹಚರನ ಮೃತದೇಹ ಪತ್ತೆ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಶ್ರೀ ನಗರ :  ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಭದ್ರತಾ ಪಡೆಗಳ ಕಾರ್ಯಾಚರಣೆ ಏಳನೇ ದಿನವೂ ಮುಂದುವರೆದಿದೆ. ಈ ನಡುವೆ, ಲಷ್ಕರ್‌-ಎ-ತೊಯ್ಡಾ (LeT) ಉಗ್ರ ಲತೀಫ್‌ ಭಟ್‌ನ ಸ್ಥಳೀಯ ಸಹಚರ ಎನ್ನಲಾದ ವ್ಯಕ್ತಿಯ ಮೃತ ದೇಹವನ್ನು ಎನ್‌ಕೌಂಟರ್‌ ನಡೆದ ಸ್ಥಳದಲ್ಲಿ ಪತ್ತೆ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Kulgam, Jammu & Kashmir | The body of one neutralised terrorist, along with a weapon, has been recovered from the encounter site in Kulgam district. The identification process is underway, and further details are awaited: Police The encounter broke out early this morning in the Zangalpora area after security forces cordoned off the locality based on credible intelligence inputs.

— ANI (@ANI) November 18, 2026

ಕುಲ್ಗಾಮ್‌ ಲರೂ ಬೈಪಾಸ್‌ ಪ್ರದೇಶದಲ್ಲಿ ಕಳೆದ 7 ದಿನಗಳಿಂದ ಭದ್ರತಾ ಪಡೆಗಳು ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಈ ಪ್ರದೇಶದಲ್ಲಿ ಲಷ್ಕರ್‌ ಉಗ್ರ ಲತೀಫ್‌ ಭಟ್‌ ಅಡಗಿದ್ದಾನೆ ಎಂಬ ಗುಪ್ತಚರರ ಮಾಹಿತಿ ಹಿನ್ನಲೆಯಲ್ಲಿ ಆತನ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆಸಲಾಗಿತ್ತು. ಇದೀಗ, ಭಾರತೀಯ ಸೇನೆ ಎನ್ಕೌಂಟರ್‌ನಲ್ಲಿ ಆತನನ್ನು ಹೊಡೆದುರುಳಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. 

ಮಂಗಳವಾರ (ನ.17) ಬೆಳಗ್ಗೆಯಿಂದಲೇ ಭದ್ರತಾ ಪಡೆಗಳು ಮತ್ತೆ ಕಾರ್ಯಾಚರಣೆ ಆರಂಭಿಸಿದ್ದವು. ಈ ಹಿನ್ನಲೆಯಲ್ಲಿ ಎನ್‌ಕೌಂಟರ್‌ ನಡೆದ ಲರೂ ಬೈಪಾಸ್‌ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಎಲ್ಲಾ ಎಂಟ್ರಿ ಮತ್ತು ಎಕ್ಸಿಟ್‌ ಮಾರ್ಗಗಳನ್ನು ಸಂಪೂರ್ಣವಾಗಿ ಬಂದ್‌ ಮಾಡಲಾಗಿದೆ. ಉಗ್ರ ಯಾವ  ಮಾರ್ಗದಿಂದಲೂ ತಪ್ಪಿಸಿಕೊಂಡು ಹೋಗದಂತೆ ಭದ್ರತಾ ಸಿಬ್ಬಂದಿ ಕಟ್ಟೆಚ್ಚರ ವಹಿಸಿದ್ದಾರೆ. ಪ್ರದೇಶದಾದ್ಯಂತ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ತೀವ್ರ ನಿಗಾ ಇರಿಸಲಾಗಿದೆ.

#WATCH | Kulgam encounter: An exchange of fire is underway in the Zangalpora area of Kulgam district, Jammu & Kashmir The operation is underway to neutralise Lashkar-e-Taiba (LeT) commander Lateef Bhat, who has been cornered inside a local mosque after refusing repeated surrender appeals. (Visuals deferred by unspecified time; no live operational details disclosed)

— ANI (@ANI) November 18, 2026

ಇದೇ ವೇಳೆ ಸ್ಥಳೀಯ ನಿವಾಸಿಗಳ ತಪಾಸಣೆ, ಮನೆ ಮನೆಗೆ ತೆರಳಿ ಪರಿಶೀಲನೆ ಸುತ್ತ ಮುತ್ತಲಿನ ತೋಟಗಳಲ್ಲಿ ಮತ್ತು ನಿರ್ಜನ ಪ್ರದೇಶಗಳಲ್ಲಿ ಶೋಧ ಕಾರ್ಯ ಕಟ್ಟು ನಿಟ್ಟಾಗಿ ನಡೆಯುತ್ತಿದೆ. ಉಗ್ರರು ಅಡಗಿರಬಹುದು ಎಂಬ ಶಂಕೆಯಿಂದ ಮನೆಗಳು ಮತ್ತು ಸುತ್ತ ಮುತ್ತಲಿನ ಪ್ರದೇಶಗಳನ್ನು ಭದ್ರತಾ ಪಡೆಗಳು ಎಚ್ಚರಿಕೆಯಿಂದ ಪರಿಶೀಲಿಸುತ್ತಿವೆ.

VIDEO | Jammu and Kashmir: Security beefed up in Kulgam, intense checking by security forces Top LeT terrorist Lateef Bhat has been killed in encounter with security forces in Kulgam. #KulgamEncounter #JammuAndKashmir (Visuals deferred by unspecified time) (Full video available on PTI Videos - https://t.co/bIyFWTfmBd)

— Press Trust of India (@PTI_News) November 18, 2026

ಮಂಗಳವಾರ ಮಧ್ಯಾಹ್ನದ ವರೆಗೂ ಈ ಕಾರ್ಯಾಚರಣೆ ನಡೆಯುತ್ತಿದ್ದ ಸ್ಥಳದಲ್ಲಿ ಯಾವುದೇ ಗುಂಡಿನ ಚಕಮಕಿ ನಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಆದರೂ, ಲತೀಫ್‌ ಭಟ್‌ನ ಇರುವಿಕೆಯ ಸುಳಿವು ಪತ್ತೆಹಚ್ಚಲು ಭದ್ರತಾ ಪಡೆಗಳು ಕಾರ್ಯಾಚರಣೆ ಮುಂದುವರಿಸಿದೆ. ಈ ವೇಳೆ, ಎನ್‌ಕೌಂಟರ್‌ ನಡೆದ ಸ್ಥಳದಲ್ಲಿ ಪತ್ತೆಯಾದ ಮೃತ ದೇಹದ ಗುರುತು ಮತ್ತು ಉಗ್ರನೊಂದಿಗಿ ಸಂಪರ್ಕದ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಇನ್ನು ಮತ್ತೊಂದೆಡೆ, ಕುಲ್ಗಾಮ್‌ನ ನಿವಾಸಿಗಳು ವಾಸಿಸುವ ಪ್ರದೇಶಗಳಲ್ಲಿ ಸತತ ಏಳು ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿರುವ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಹಲವು ರಾಜಕೀಯ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಆಡಳಿತರೂಢ ನ್ಯಾಷನಲ್‌ ಕಾನ್ಫರೆನ್ಸ್‌(NC) ಸೇರಿದಂತೆ ಹಲವು ಪಕ್ಷಗಳು, ಸಾರ್ವಜನಿಕ ಪ್ರದೇಶಗಳಲ್ಲಿ ಇಷ್ಟು ದೀರ್ಘಕಾಲ ಶೋಧ ಕಾರ್ಯಾಚರಣೆ ನಡೆಸುತ್ತಿರುವುದರ ಬಗ್ಗೆ ಪ್ರಶ್ನೆ ಎತ್ತಿವೆ. ಕಾರ್ಯಾಚರಣೆಯಿಂದ ಸ್ಥಳೀಯ ಜನರ ದೈನಂದಿನ ಜೀವನಕ್ಕೆ ತೊಂದರೆಯಾಗುತ್ತಿರುವ ಸಾಧ್ಯತೆಯ ಇದೆ ಎಂದು ಆರೋಪಿಸಿದ್ದಾರೆ.

ಮನೆಗಳ ಪರಿಶೀಲನೆ, ಜನರ ತಪಾಸಣೆ ಮತ್ತು ಸಂಚಾರ ನಿರ್ಬಂಧಗಳಿಂದಾಗಿ ಸ್ಥಳೀಯ ನಿವಾಸಿಗಳು ಸಮಸ್ಯೆ ಎದುರಿಸುವಂತಾಗಿದೆ. ಈ ಹಿನ್ನಲೆಯಲ್ಲಿ ಕಾರ್ಯಾಚರಣೆಯ ಅವಧಿ ಮತ್ತು ಸಾರ್ವಜನಿಕರ ಸುರಕ್ಷತೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಯಾವುದೇ ಸಮಸ್ಯೆಗಳು ಎದುರಾಗದಂತೆ ಶೋಧ ಕಾರ್ಯಾಚರಣೆ ನೆರವೇರಿಸಿ ಎಂದು ಕೆಲವು ರಾಜಕೀಯ ಪಕ್ಷಗಳು ಆಗ್ರಹಿಸಿವೆ.

ಇನ್ನೊಂದೆಡೆ, ಉಗ್ರರ ಇರುವಿಕೆಯ ಬಗ್ಗೆ ಲಭ್ಯವಿರುವ ಮಾಹಿತಿಯನ್ನು ಆಧರಿಸಿ ಭದ್ರತಾ ಪಡೆಗಳು ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರ ಲತೀಫ್‌ ಭಟ್‌ನ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಪರಿಸ್ಥಿತಿಯ ಮೇಲೆ ಭದ್ರತಾ ಪಡೆಗಳು ನಿರಂತರ ನಿಗಾ ಇರಿಸಿವೆ. ಮುಂದಿನ ದಿನಗಳಲ್ಲಿ ಕಾರ್ಯಾಚರಣೆ ಯಾವ ರೀತಿಯ ತಿರುವು ಪಡೆದುಕೊಳ್ಳಲಿದೆ ಎಂಬುದರ ಬಗ್ಗೆ ಕುಲ್ಗಾಮ್‌ ಮಾತ್ರವಲ್ಲದೇ ಇಡೀ ಕಾಶ್ಮೀರ ಕಣಿವೆಯ ಗಮನ ನೆಟ್ಟಿದೆ.  ಮತ್ತೊಂದೆಡೆ ದೀರ್ಘಕಾಲದ ಕಾರ್ಯಾಚರಣೆಯಿಂದ ಜನ ಸಾಮಾನ್ಯರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂಬ ಒತ್ತಾಯವೂ ಕೇಳಿ ಬಂದಿದೆ. ಹೀಗಾಗಿ ಉಗ್ರರ ವಿರುದ್ಧದ ಕಾರ್ಯಾಚರಣೆ ಜೊತೆಗೆ ನಾಗರಿಕ ಹಿತಾಸಕ್ತಿ ಮತ್ತು ಸಹಜ ಜನ ಜೀವನಕ್ಕೆ ಆದ್ಯತೆ ನೀಡುವುದು ಸದ್ಯದ ಪ್ರಮುಖ ಸವಾಲಾಗಿದೆ.

 

Add Zee News as a Preferred Source
TAGS:
India Pakistan News
India