• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ರಾಷ್ಟ್ರೀಯ
  • /ನ.13ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ: ಇಲ್ಲಿದೆ ಪ್ರವಾಸದ ಸಂಪೂರ್ಣ ವೇಳಾಪಟ್ಟಿ

ನ.13ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ: ಇಲ್ಲಿದೆ ಪ್ರವಾಸದ ಸಂಪೂರ್ಣ ವೇಳಾಪಟ್ಟಿ

ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆ ತರಲಿರುವ ನಮ್ಮ ಮೆಟ್ರೋದ ಗುಲಾಬಿ ಮಾರ್ಗದ ಮೊದಲ ಹಂತ ನವೆಂಬರ್ 13ರಂದು ಕಾರ್ಯಾರಂಭ ಮಾಡಲಿದೆ. ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಮಾರ್ಗವನ್ನ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

Written ByPuttaraj K Alur
Published: Nov 06, 2026, 21:04 IST|Updated: Nov 06, 2026, 21:13 IST
joinshare
ನ.13ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ: ಇಲ್ಲಿದೆ ಪ್ರವಾಸದ ಸಂಪೂರ್ಣ ವೇಳಾಪಟ್ಟಿ
Image Credit: PM Modi

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

PM Modi Bengaluru Visit: ಕರ್ನಾಟಕದ ಜನರಿಗೆ, ಅದರಲ್ಲೂ ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಬಹುನಿರೀಕ್ಷಿತ ನಮ್ಮ ಮೆಟ್ರೋದ ಪಿಂಕ್ ಲೈನ್‌ಗೆ ನವೆಂಬರ್ 13ರಂದು ಚಾಲನೆ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿ ಪಿಂಕ್ ಲೈನ್ ಮೆಟ್ರೋ ಮಾರ್ಗವನ್ನ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಪ್ರಧಾನಿ, ಬಳಿಕ ಮೈಸೂರಿಗೂ ತೆರಳಿ ಹಲವು ಮಹತ್ವದ ಯೋಜನೆಗಳನ್ನ ಲೋಕಾರ್ಪಣೆ ಮಾಡಲಿದ್ದಾರೆ. ಪ್ರಧಾನಿ ಮೋದಿಯವರ ಕರ್ನಾಟಕ ಪ್ರವಾಸದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ.

ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆ ತರಲಿರುವ ನಮ್ಮ ಮೆಟ್ರೋದ ಗುಲಾಬಿ ಮಾರ್ಗದ ಮೊದಲ ಹಂತ ನವೆಂಬರ್ 13ರಂದು ಕಾರ್ಯಾರಂಭ ಮಾಡಲಿದೆ. ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಮಾರ್ಗವನ್ನ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಮಾರ್ಗ ಆರಂಭವಾಗುವುದರಿಂದ ಬನ್ನೇರುಘಟ್ಟ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗುವ ನಿರೀಕ್ಷೆಯಿದೆ. ಸಂಸದ ತೇಜಸ್ವಿ ಸೂರ್ಯ ಕೂಡ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಪ್ರಧಾನಿ ಮೋದಿ ಅವರು ತಾವರೆಕೆರೆ ಮೆಟ್ರೋ ನಿಲ್ದಾಣದಿಂದ ಐಐಎಂಬಿ-ಬೈಲೇಕಹಳ್ಳಿ ನಿಲ್ದಾಣದವರೆಗೆ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ. ಬಳಿಕ ಹೊಸ ಮಾರ್ಗದ ಸೇವೆಗಳಿಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಪ್ರಧಾನಿ ಮೋದಿಯವರ ಬೆಂಗಳೂರಿನ ಕಾರ್ಯಕ್ರಮಗಳ ವೇಳಾಪಟ್ಟಿ

ನವೆಂಬರ್ 13ರಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಿಂದ ಹೊರಟು ಬೆಳಗ್ಗೆ 10.05ಕ್ಕೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 10.45ಕ್ಕೆ ಬೆಂಗಳೂರಿನ ಪ್ರಶಾಂತಿ ಕುಟೀರಂನಲ್ಲಿ ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 12.40ಕ್ಕೆ ತಾವರೆಕೆರೆ ಮೆಟ್ರೋ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಮಧ್ಯಾಹ್ನ 12.45ಕ್ಕೆ ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ಪಿಂಕ್ ಲೈನ್‌ಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ನಂತರ ಮೆಟ್ರೋ ರೈಲಿನಲ್ಲಿ ಐಐಎಂಬಿ ನಿಲ್ದಾಣದವರೆಗೆ ಪ್ರಯಾಣಿಸಲಿದ್ದಾರೆ. ಮಧ್ಯಾಹ್ನ 1.15ಕ್ಕೆ ಐಐಎಂಬಿ ಆಡಿಟೋರಿಯಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ವಿವಿಧ ಯೋಜನೆಗಳ ಶಂಕುಸ್ಥಾಪನೆ, ರಾಷ್ಟ್ರಕ್ಕೆ ಸಮರ್ಪಣೆ ಹಾಗೂ ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮಗಳು ನಡೆಯಲಿವೆ.

ಮಧ್ಯಾಹ್ನ ಮೈಸೂರಿಗೆ ಪ್ರಧಾನಿ ಮೋದಿ ಪ್ರಯಾಣ

ಬೆಂಗಳೂರಿನ ಕಾರ್ಯಕ್ರಮಗಳನ್ನ ಮುಗಿಸಿದ ಬಳಿಕ ಪ್ರಧಾನಿ ಮೋದಿ ಮಧ್ಯಾಹ್ನ 2.30ಕ್ಕೆ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಪ್ರಯಾಣಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಮೈಸೂರಿನ ಕೆ.ಸಿ.ಲೇಔಟ್ ಪಾರ್ಕ್‌ನಲ್ಲಿ ನಡೆಯಲಿರುವ ಭಾರತ್ ವ್ಯಾನ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 4 ಗಂಟೆಗೆ ಮೈಸೂರಿನಲ್ಲಿ ನಿರ್ಮಾಣವಾಗಿರುವ ಅತ್ಯಾಧುನಿಕ ತಾರಾಲಯವನ್ನ ಉದ್ಘಾಟಿಸಲಿದ್ದಾರೆ. ಈ ಯೋಜನೆಗೆ ‘ಮೈಸೂರು ಕಾಸ್ಮೋಸ್’ ಎಂದು ಹೆಸರಿಡಲಾಗಿದೆ. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿರ್ಮಾಣವಾಗಿರುವ ಈ ತಾರಾಲಯ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ಪ್ಲಾನೆಟೋರಿಯಂ ಎಂಬ ವಿಶೇಷತೆಯನ್ನ ಹೊಂದಿದೆ.

ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ಪ್ಲಾನೆಟೋರಿಯಂ

ಮೈಸೂರು ವಿಶ್ವವಿದ್ಯಾನಿಲಯದ ಶ್ರೀ ಜಯಚಾಮರಾಜ ಒಡೆಯರ್ ಉನ್ನತ ಕಲಿಕಾ ಕೇಂದ್ರದ ಆವರಣದಲ್ಲಿ ಈ ಅತ್ಯಾಧುನಿಕ ತಾರಾಲಯ ನಿರ್ಮಿಸಲಾಗಿದೆ. ಯೋಜನೆಗಾಗಿ ವಿಶ್ವವಿದ್ಯಾನಿಲಯ ಮೂರು ಎಕರೆ ಜಾಗವನ್ನ ಒದಗಿಸಿದ್ದು, ಒಟ್ಟು 91 ಕೋಟಿ ರೂಪಾಯಿ ವೆಚ್ಚದಲ್ಲಿ ಇದನ್ನ ಅಭಿವೃದ್ಧಿಪಡಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ (MPLADS) ಸೇರಿದಂತೆ ಕೇಂದ್ರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಈ ಯೋಜನೆ ರೂಪುಗೊಂಡಿದೆ. ಈ ತಾರಾಲಯ ಉದ್ಘಾಟನೆಯೊಂದಿಗೆ ಮೈಸೂರಿನ ಶೈಕ್ಷಣಿಕ ಮತ್ತು ವೈಜ್ಞಾನಿಕ ಕ್ಷೇತ್ರಕ್ಕೆ ಹೊಸ ಸೌಲಭ್ಯ ಸೇರ್ಪಡೆಯಾಗಲಿದೆ.

ಸಂಜೆ 6.05ಕ್ಕೆ ದೆಹಲಿಗೆ ವಾಪಸ್

ಮೈಸೂರಿನ ಕಾರ್ಯಕ್ರಮಗಳನ್ನ ಪೂರ್ಣಗೊಳಿಸಿದ ಬಳಿಕ ಪ್ರಧಾನಿ ಮೋದಿ ಅವರು ಸಂಜೆ 6.05ಕ್ಕೆ ಮೈಸೂರಿನಿಂದ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಒಟ್ನಲ್ಲಿ ನವೆಂಬರ್ 13ರಂದು ಪ್ರಧಾನಿ ಮೋದಿ ಅವರ ಕರ್ನಾಟಕ ಪ್ರವಾಸದಲ್ಲಿ ಬೆಂಗಳೂರಿನ ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆ ಮತ್ತು ಮೈಸೂರಿನ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ಪ್ಲಾನೆಟೋರಿಯಂ ಲೋಕಾರ್ಪಣೆ ಪ್ರಮುಖ ಆಕರ್ಷಣೆಗಳಾಗಿವೆ. ಬೆಂಗಳೂರಿನ ಮೆಟ್ರೋ ಪ್ರಯಾಣಿಕರು ಬಹುದಿನಗಳಿಂದ ಕಾಯುತ್ತಿದ್ದ ಪಿಂಕ್ ಲೈನ್ ಸೇವೆಗೆ ಚಾಲನೆ ದೊರೆಯಲಿರುವುದು ಈ ಭೇಟಿಯ ಪ್ರಮುಖ ವಿಶೇಷವಾಗಿದೆ.

Add Zee News as a Preferred Source
TAGS:
Narendra Modi
Karnataka Politics
Kannada News