• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ರಾಷ್ಟ್ರೀಯ
  • /ಖರ್ಗೆ ಮನೆಯ ವರಾಂಡಾದಲ್ಲಷ್ಟೇ ರಾಹುಲ್ ಗಾಂಧಿ ಪ್ರಧಾನಿಯಾಗಬಹುದು; ಹಿಮಂತ ಬಿಸ್ವ ಶರ್ಮಾ ವ್ಯಂಗ್ಯ!

ಖರ್ಗೆ ಮನೆಯ ವರಾಂಡಾದಲ್ಲಷ್ಟೇ ರಾಹುಲ್ ಗಾಂಧಿ ಪ್ರಧಾನಿಯಾಗಬಹುದು; ಹಿಮಂತ ಬಿಸ್ವ ಶರ್ಮಾ ವ್ಯಂಗ್ಯ!

Himanta Biswa Sarma on Rahul Gandhi: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನಡುವೆ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಾರ್ವಜನಿಕ ಚರ್ಚೆ ನಡೆಸುವಂತೆ ರಾಹುಲ್ ಗಾಂಧಿ ಸವಾಲು ಹಾಕಿರುವ ಬೆನ್ನಲ್ಲೇ, ಹಿಮಂತ ಬಿಸ್ವ ಶರ್ಮಾ ತಿರುಗೇಟು ನೀಡಿದ್ದಾರೆ. ರಾಹುಲ್ ಗಾಂಧಿ ನಿಜವಾದ ಸಂಸತ್ತಿನಲ್ಲಿ ಪ್ರಧಾನಿಯಾಗಲು ಸಾಧ್ಯವಿಲ್ಲ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ವರಾಂಡಾದಲ್ಲಿ ನಡೆದ ಅಣಕು ಸಂಸತ್ತಿನಲ್ಲಿ ಮಾತ್ರ ಪ್ರಧಾನಿಯಾಗಬಹುದು ಎಂದು ವ್ಯಂಗ್ಯವಾಡಿದ್ದಾರೆ.

Written ByPuttaraj K Alur
Published: Nov 04, 2026, 08:23 PM IST|Updated: Nov 04, 2026, 08:37 PM IST
joinshare
ಖರ್ಗೆ ಮನೆಯ ವರಾಂಡಾದಲ್ಲಷ್ಟೇ ರಾಹುಲ್ ಗಾಂಧಿ ಪ್ರಧಾನಿಯಾಗಬಹುದು; ಹಿಮಂತ ಬಿಸ್ವ ಶರ್ಮಾ ವ್ಯಂಗ್ಯ!
Image Credit: Rahul Gandhi

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಗರ್ಭಿಣಿಯಾಗಿದ್ದಾಗ ಕೈಕೊಟ್ಟ : ಚಾಹಲ್ ಬಗ್ಗೆ ಆರ್‌ಜೆ ಮಹ್ವಾಶ್ ಸ್ಫೋಟಕ ಹೇಳಿಕೆ

ಗರ್ಭಿಣಿಯಾಗಿದ್ದಾಗ ಕೈಕೊಟ್ಟ : ಚಾಹಲ್ ಬಗ್ಗೆ ಆರ್‌ಜೆ ಮಹ್ವಾಶ್ ಸ್ಫೋಟಕ ಹೇಳಿಕೆ

2

ಬಿಗ್‌ ಬಾಸ್‌ ಕನ್ನಡ ಶೋ ಗೆ ಶೀಘ್ರದಲ್ಲೇ ಕಾದಿದೆ ಭಾರೀ ಕಂಟಕ!

3

ಹಬ್ಬದ ಸೀಸನ್‌ನಲ್ಲಿ ಹೊಸ ವಾಹನ ಖರೀದಿಯ ಉತ್ಸಾಹ : ಈ ತಪ್ಪುಗಳನ್ನು ಮಾಡಿದ್ರೆ ನಷ್ಟ ಗ್ಯಾರಂಟಿ!

4

332 ಕಿ.ಮೀ ರೇಂಜ್, ಐಷಾರಾಮಿ ಫೀಚರ್ಸ್‌ಗಳೇ ಹೈಲೈಟ್! MG ವಿಂಡ್ಸರ್‌ನ ಹೊಸ ಅವತಾರ ಅನಾವರಣ

5

WPL 2027 ವೇಳಾಪಟ್ಟಿ ಪ್ರಕಟ : ಜನವರಿ 14 ರಿಂದ ಕ್ರಿಕೆಟ್ ಹಬ್ಬ ಆರಂಭ.. ಮೊದಲ ಮ್ಯಾಚ್‌ ಎಲ್ಲಿ..?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Himanta Biswa Sarma on Rahul Gandhi: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನಡುವೆ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಾರ್ವಜನಿಕ ಚರ್ಚೆ ನಡೆಸುವಂತೆ ರಾಹುಲ್ ಗಾಂಧಿ ಸವಾಲು ಹಾಕಿರುವ ಬೆನ್ನಲ್ಲೇ, ಹಿಮಂತ ಬಿಸ್ವ ಶರ್ಮಾ ತಿರುಗೇಟು ನೀಡಿದ್ದಾರೆ. ರಾಹುಲ್ ಗಾಂಧಿ ನಿಜವಾದ ಸಂಸತ್ತಿನಲ್ಲಿ ಪ್ರಧಾನಿಯಾಗಲು ಸಾಧ್ಯವಿಲ್ಲ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ವರಾಂಡಾದಲ್ಲಿ ನಡೆದ ಅಣಕು ಸಂಸತ್ತಿನಲ್ಲಿ ಮಾತ್ರ ಪ್ರಧಾನಿಯಾಗಬಹುದು ಎಂದು ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ಮೋದಿ ಅವರೊಂದಿಗೆ ಚರ್ಚೆ ನಡೆಸಬೇಕಾದರೆ ಅದಕ್ಕೆ ಸೂಕ್ತ ವೇದಿಕೆ ಸಂಸತ್ತು. ಬೀದಿಗಳಲ್ಲಿ ಅಥವಾ ಬೇರೆಡೆ ಚರ್ಚೆ ನಡೆಸುವ ಬದಲು ಸಂಸತ್ತಿನಲ್ಲೇ ವಿಷಯಗಳನ್ನ ಪ್ರಸ್ತಾಪಿಸಬೇಕು ಎಂದು ಹಿಮಂತ ಶರ್ಮಾ ಹೇಳಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಅವರ ಸಾರ್ವಜನಿಕ ಚರ್ಚೆಯ ಸವಾಲಿಗೆ ರಾಜಕೀಯವಾಗಿ ಪ್ರತಿಕ್ರಿಯಿಸಿದ್ದಾರೆ.

ಖರ್ಗೆ ನಿವಾಸದ ಅಣಕು ಸಂಸತ್ತಿನ ಬಗ್ಗೆ ಟೀಕೆ

ಅಕ್ಟೋಬರ್ 31ರಂದು ನವದೆಹಲಿಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರು ಅಣಕು ಸಂಸತ್ತಿನ ಅಧಿವೇಶನ ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುವ ನಿರ್ಣಯವನ್ನೂ ಈ ಸಂದರ್ಭದಲ್ಲಿ ಮಂಡಿಸಲಾಗಿತ್ತು. ರಾಹುಲ್ ಗಾಂಧಿ ಕಾರ್ಯಕ್ರಮದ ಸಮಾರೋಪ ಭಾಷಣ ಮಾಡಿದ್ದರು. ಚುನಾವಣಾ ಆಯೋಗದ ಕಾರ್ಯವೈಖರಿ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ವಿರೋಧ ಪಕ್ಷಗಳು ಈ ಕಾರ್ಯಕ್ರಮದಲ್ಲಿ ತಮ್ಮ ಆಕ್ಷೇಪಗಳನ್ನ ವ್ಯಕ್ತಪಡಿಸಿದ್ದವು. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಹಾಗೂ ಮತದಾರರ ಹಕ್ಕುಗಳ ಕುರಿತು ಪ್ರಶ್ನೆಗಳನ್ನ ಎತ್ತಿದ್ದವು.

ಈ ಅಣಕು ಸಂಸತ್ತಿನ ಕುರಿತು ಪ್ರತಿಕ್ರಿಯಿಸಿದ ಹಿಮಂತ ಬಿಸ್ವ ಶರ್ಮಾ, ಕಾಂಗ್ರೆಸ್ ನಾಯಕತ್ವವನ್ನ ಟೀಕಿಸಿದರು. ರಾಹುಲ್ ಗಾಂಧಿ ಅವರನ್ನ ಪ್ರಧಾನಿಯನ್ನಾಗಿ ಮಾಡಲು ಸೋನಿಯಾ ಗಾಂಧಿ ಸಾಕಷ್ಟು ಪ್ರಯತ್ನ ನಡೆಸಿದ್ದರು. ಹಲವು ಪ್ರಯತ್ನಗಳ ಬಳಿಕವೂ ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಖರ್ಗೆ ಅವರ ಮನೆಯ ಆವರಣದಲ್ಲಿ ಅಣಕು ಸಂಸತ್ತು ನಡೆಸಿ ರಾಹುಲ್ ಅವರನ್ನ ಪ್ರಧಾನಿಯನ್ನಾಗಿ ಮಾಡಲಾಗಿದೆ ಎಂದು ವ್ಯಂಗ್ಯವಾಡಿದರು. ನಿಜವಾದ ಸಂಸತ್ತಿನಲ್ಲಿ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ. ಅಣಕು ಸಂಸತ್ತಿನಲ್ಲಿ ಮಾತ್ರ ರಾಹುಲ್ ಗಾಂಧಿ ಪ್ರಧಾನಿಯಾಗಬಹುದು ಎಂಬರ್ಥದಲ್ಲಿ ಹಿಮಂತ ಶರ್ಮಾ ಹೇಳಿಕೆ ನೀಡಿದ್ದಾರೆ.

ಮೋದಿಗೆ ಸಾರ್ವಜನಿಕ ಚರ್ಚೆಯ ಸವಾಲು ಹಾಕಿದ್ದ ರಾಹುಲ್

ಇದಕ್ಕೂ ಮುನ್ನ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾರ್ವಜನಿಕ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದರು. ಮಾಧ್ಯಮಗಳು ಹಾಗೂ ದೇಶದ ಯುವಜನರ ಸಮ್ಮುಖದಲ್ಲಿ ಇಬ್ಬರೂ ನಾಯಕರು ಮುಖಾಮುಖಿಯಾಗಿ ಚರ್ಚೆ ನಡೆಸಬೇಕೆಂದು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ವಿರೋಧ ಪಕ್ಷವನ್ನು ದೇಶವಿರೋಧಿ ಎಂದು ಆರೋಪಿಸಲಾಗುತ್ತಿದೆ. ಹಾಗಾದರೆ ನಿಜವಾಗಿಯೂ ದೇಶವಿರೋಧಿಗಳು ಯಾರು? ವಿದೇಶಿ ಶಕ್ತಿಗಳೊಂದಿಗೆ ಯಾರಿಗೆ ಸಂಪರ್ಕವಿದೆ ಮತ್ತು ಆ ಸಂಪರ್ಕಗಳ ಸ್ವರೂಪವೇನು ಎಂಬುದನ್ನ ಚರ್ಚಿಸೋಣವೆಂದು ರಾಹುಲ್ ಗಾಂಧಿ ಸವಾಲು ಹಾಕಿದ್ದರು.

ಚರ್ಚೆ ನಡೆಯುವ ಸ್ಥಳ ಮತ್ತು ವೇದಿಕೆಯನ್ನ ಪ್ರಧಾನಿ ನರೇಂದ್ರ ಮೋದಿ ಅವರೇ ಆಯ್ಕೆ ಮಾಡಬಹುದು ಎಂದೂ ತಿಳಿಸಿದ್ದರು. ಇಬ್ಬರೂ ನಾಯಕರು ಒಂದೇ ಮೇಜಿನ ಎದುರು ಕುಳಿತು ಚರ್ಚೆ ನಡೆಸಬಹುದು. ಈ ಚರ್ಚೆಗೆ ನಿರ್ಣಾಯಕರನ್ನ ಆಯ್ಕೆ ಮಾಡುವ ಅವಕಾಶವನ್ನೂ ಪ್ರಧಾನಿಗೆ ನೀಡುವುದಾಗಿ ಹೇಳಿದ್ದರು. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನೂ ನಿರ್ಣಾಯಕರನ್ನಾಗಿ ನೇಮಿಸಬಹುದು ಎಂದು ರಾಹುಲ್ ಪ್ರಸ್ತಾಪಿಸಿದ್ದರು.

ಗುಲಾಬಿ ಹೂವಿನ ವಿಚಾರದಲ್ಲೂ ರಾಹುಲ್‌ಗೆ ತಿರುಗೇಟು

ದೀಪಾವಳಿ ಸಂದರ್ಭದಲ್ಲಿ ರಾಹುಲ್ ಗಾಂಧಿ ಗುಲಾಬಿ ಹೂ ಹಿಡಿದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಬ್ಬದ ಶುಭಾಶಯ ತಿಳಿಸಿದ್ದರು. ಈ ವಿಡಿಯೋ ವಿಚಾರವನ್ನೂ ಹಿಮಂತ ಬಿಸ್ವ ಶರ್ಮಾ ತಮ್ಮ ಪ್ರತಿಕ್ರಿಯೆಯಲ್ಲಿ ಪ್ರಸ್ತಾಪಿಸಿದ್ದಾರೆ. ಗುಲಾಬಿ ಹೂವುಗಳನ್ನ ಪ್ರೇಮಿಗಳ ದಿನದಂದು ನೀಡುತ್ತಾರೆ, ದೀಪಾವಳಿಯಂದು ಅಲ್ಲವೆಂದು ರಾಹುಲ್ ಗಾಂಧಿಯನ್ನ ಉದ್ದೇಶಿಸಿ ವ್ಯಂಗ್ಯವಾಡಿದ್ದಾರೆ. ಇದೇ ವೇಳೆ ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ತಮ್ಮ ಜವಾಬ್ದಾರಿಯನ್ನ ಅರಿತುಕೊಳ್ಳಬೇಕು. ಪ್ರಧಾನಿಯೊಂದಿಗೆ ಚರ್ಚೆ ನಡೆಸಲು ಸಂಸತ್ತೇ ಸೂಕ್ತ ಸ್ಥಳವೆಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಚರ್ಚೆಗೆ ಹಿಮಂತ ಸಲಹೆ

ಸಂಸತ್ತಿನಲ್ಲಿ ಚರ್ಚೆ ನಡೆದರೆ ಬೋಫೋರ್ಸ್ ವಿವಾದದಿಂದ ಹಿಡಿದು ಭೋಪಾಲ್ ಅನಿಲ ದುರಂತದವರೆಗೆ ಹಲವು ವಿಚಾರಗಳನ್ನ ಪ್ರಸ್ತಾಪಿಸಬಹುದು ಎಂದು ಹಿಮಂತ ಶರ್ಮಾ ಹೇಳಿದ್ದಾರೆ. ರಾಹುಲ್ ಗಾಂಧಿ ಚರ್ಚೆಯನ್ನ ಆರಂಭಿಸಲಿ, ಪ್ರಧಾನಿ ನರೇಂದ್ರ ಮೋದಿ ಅದಕ್ಕೆ ಉತ್ತರ ನೀಡಲಿದ್ದಾರೆ ಎಂದೂ ತಿಳಿಸಿದ್ದಾರೆ. ಸಂಸತ್ತಿನ ಹೊರಗೆ ಜನರನ್ನ ಸೇರಿಸಿ ಚರ್ಚೆ ನಡೆಸುವ ಬದಲು ಸದನದಲ್ಲೇ ತಮ್ಮ ಪ್ರಶ್ನೆಗಳನ್ನ ಮುಂದಿಡಬೇಕು ಎಂಬುದು ಹಿಮಂತ ಶರ್ಮಾರ ವಾದವಾಗಿದೆ. ಸಂಸತ್ತಿನಲ್ಲಿ ಚರ್ಚೆ ನಡೆಯುವಾಗ ಗದ್ದಲ ಸೃಷ್ಟಿಸದೆ ವಿಷಯಗಳ ಕುರಿತು ಮಾತನಾಡಬೇಕೆಂದು ಕಾಂಗ್ರೆಸ್ ನಾಯಕರಿಗೆ ಸಲಹೆ ನೀಡಿದ್ದಾರೆ.

ಒಟ್ನಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸಾರ್ವಜನಿಕ ಚರ್ಚೆ ನಡೆಸುವಂತೆ ರಾಹುಲ್ ಗಾಂಧಿ ಹಾಕಿರುವ ಸವಾಲಿಗೆ ಹಿಮಂತ ಬಿಸ್ವ ಶರ್ಮಾ ತಿರುಗೇಟು ನೀಡಿದ್ದು, ಖರ್ಗೆ ನಿವಾಸದಲ್ಲಿ ನಡೆದ ಅಣಕು ಸಂಸತ್ತನ್ನ ಉಲ್ಲೇಖಿಸಿ ರಾಹುಲ್ ಗಾಂಧಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಈ ಹೇಳಿಕೆಗಳೊಂದಿಗೆ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಿನ ರಾಜಕೀಯ ವಾಕ್ಸಮರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

Add Zee News as a Preferred Source
TAGS:
Karnataka Politics
Narendra Modi
Kannada News