• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ರಾಷ್ಟ್ರೀಯ
  • /ಕ್ಷೇತ್ರ ವಿಂಗಡಣೆಯಿಂದ ಯಾರಿಗೆ ಲಾಭ, ಯಾರಿಗೆ ನಷ್ಟ? ಡಿಲಿಮಿಟೇಶನ್ ಅರ್ಥವೇನು?

ಕ್ಷೇತ್ರ ವಿಂಗಡಣೆಯಿಂದ ಯಾರಿಗೆ ಲಾಭ, ಯಾರಿಗೆ ನಷ್ಟ? ಡಿಲಿಮಿಟೇಶನ್ ಅರ್ಥವೇನು?

ಕೇಂದ್ರ ಸರ್ಕಾರವು ಪರಿಷ್ಕೃತ ಡಿಲಿಮಿಟೇಶನ್ (ಎರಡನೇ) ಮಸೂದೆ, 2026 ಮತ್ತು ಸಂವಿಧಾನ (132ನೇ ತಿದ್ದುಪಡಿ) ಮಸೂದೆ, 2026 ಅನ್ನು ನಾಳೆ (ನವೆಂಬರ್ 30, 2026) ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡಿಸಲು ಮುಂದಾಗಿದೆ. ಇದರ ನಡುವೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ.. ಇದರ ನಡುವೆ ಅನೇಕ ಜನರಿಗೆ ಡಿಲಿಮಿಟೇಶನ್‌ ಅಂದ್ರೆ ಏನು..? ಅಂತ ಗೊತ್ತಿಲ್ಲ.. ಈ ಕುರಿತು ಸ್ಪಷ್ಟವಾಗಿ ತಿಳಿಯೋಣ..

Written ByKrishna NK
Published: Nov 29, 2026, 20:59 IST|Updated: Nov 29, 2026, 21:04 IST
joinshare
ಕ್ಷೇತ್ರ ವಿಂಗಡಣೆಯಿಂದ ಯಾರಿಗೆ ಲಾಭ, ಯಾರಿಗೆ ನಷ್ಟ? ಡಿಲಿಮಿಟೇಶನ್ ಅರ್ಥವೇನು?
Image Credit: delimitation bill

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಮನವೊಲಿಕೆ ವಿಶ್ವಾದಲ್ಲಿದ್ದ ಕಾಂಗ್ರೆಸ್‌ಗೆ ಮಿತ್ರಪಕ್ಷದಿಂದಲೇ ಭಾರೀ ಮುಖಭಂಗ

ಮನವೊಲಿಕೆ ವಿಶ್ವಾದಲ್ಲಿದ್ದ ಕಾಂಗ್ರೆಸ್‌ಗೆ ಮಿತ್ರಪಕ್ಷದಿಂದಲೇ ಭಾರೀ ಮುಖಭಂಗ

2

ಕ್ಷೇತ್ರ ವಿಂಗಡಣೆಯಿಂದ ಯಾರಿಗೆ ಲಾಭ, ಯಾರಿಗೆ ನಷ್ಟ? ಡಿಲಿಮಿಟೇಶನ್ ಅರ್ಥವೇನು?

3

ಬೆಳಿಗ್ಗೆ ಚಹಾ ಕುಡಿಯಬೇಕೋ ಅಥವಾ ಕಾಫಿನೋ? ಆಹಾರ ತಜ್ಞರ ಸಲಹೆ ಕೇಳಿದ್ರೆ ಶಾಕ್‌ ಆಗ್ತೀರಾ

4

ಡಿಸೆಂಬರ್‌ನಲ್ಲಿ 3 ರಾಶಿಗಳಿಗೆ ಲಕ್ಷ್ಮಿ ಕೃಪೆ.. ಹಣದ ಸಮಸ್ಯೆ ಅಂತ್ಯ, ಆದಾಯದ ಹೊಸ ದಾರಿ ಓಪನ್!

5

ಹೋಂಡಾದ ಮೊದಲ ಮೇಡ್‌ ಇನ್‌ ಇಂಡಿಯಾ ಎಲೆಕ್ಟ್ರಿಕ್‌ SUV! ಶೀಘ್ರವೇ ಮಾರುಕಟ್ಟೆಗೆ ಎಂಟ್ರಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ನವದೆಹಲಿ: ದಕ್ಷಿಣ ಭಾರತದ ರಾಜ್ಯಗಳ ಆತಂಕಗಳನ್ನು ಬಗೆಹರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪರಿಷ್ಕೃತ ಡಿಲಿಮಿಟೇಶನ್ (ಎರಡನೇ) ಮಸೂದೆ, 2026 ಮತ್ತು ಸಂವಿಧಾನ (132ನೇ ತಿದ್ದುಪಡಿ) ಮಸೂದೆ, 2026 ಅನ್ನು ನಾಳೆ (ನವೆಂಬರ್ 30, 2026) ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡಿಸಲು ಸಜ್ಜಾಗಿದೆ. ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಲೋಕಸಭೆಯಲ್ಲಿ ಈ ಮಹತ್ವದ ಮಸೂದೆಗಳನ್ನು ಮಂಡಿಸಲಿದ್ದಾರೆ.

ಈಗಾಗಲೇ ಕೇಂದ್ರ ಸಚಿವ ಸಂಪುಟವು ಈ ಮಸೂದೆಗಳಿಗೆ ಒಪ್ಪಿಗೆ ನೀಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಶಿಫಾರಸೂ ದೊರೆತಿದೆ. ಕಳೆದ ಏಪ್ರಿಲ್‌ನಲ್ಲಿ ಮಂಡಿಸಲಾಗಿದ್ದ ಸಂವಿಧಾನ (131ನೇ ತಿದ್ದುಪಡಿ) ಮಸೂದೆಗೆ ಅಗತ್ಯ ಬಹುಮತ ಸಿಗದ ಹಿನ್ನೆಲೆಯಲ್ಲಿ, ರಾಜ್ಯಗಳ ಹಿತಾಸಕ್ತಿ ಕಾಯುವ ದೃಷ್ಟಿಯಿಂದ ಸರ್ಕಾರ ಈ ಹೊಸ ಪರಿಷ್ಕೃತ ಮಸೂದೆಗಳನ್ನು ತರುತ್ತಿದೆ.

ಮಸೂದೆಯ ಪ್ರಮುಖ ಅಂಶಗಳು ಏನೇನು?
ಲೋಕಸಭಾ ಸ್ಥಾನಗಳಲ್ಲಿ ಶೇ. 50ರಷ್ಟು ಹೆಚ್ಚಳ: ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಹಾಲಿ ಇರುವ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ. 50 ರಷ್ಟು ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ. ಇದರಿಂದ ಲೋಕಸಭೆಯ ಒಟ್ಟು ಗರಿಷ್ಠ ಸಾಮರ್ಥ್ಯ 543 ರಿಂದ 850 ಕ್ಕೆ ಏರಿಕೆಯಾಗಲಿದೆ (ರಾಜ್ಯಗಳಿಂದ 815 ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ 35 ಸ್ಥಾನಗಳು). ಇದರನ್ವಯ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42 ಕ್ಕೆ ಹೆಚ್ಚಾಗಲಿದೆ.

ವಿಧಾನಸಭಾ ಸ್ಥಾನಗಳ ಏರಿಕೆ: ರಾಜ್ಯ ವಿಧಾನಸಭೆಗಳ ಒಟ್ಟು ಸ್ಥಾನಗಳ ಸಂಖ್ಯೆಯನ್ನೂ ಶೇ. 50 ರಷ್ಟು ಹೆಚ್ಚಿಸಲು ಅವಕಾಶ ಕಲ್ಪಿಸಲಾಗಿದ್ದು, ವಿಧಾನಸಭೆಯ ಗರಿಷ್ಠ ಮಿತಿಯನ್ನು 500 ರಿಂದ 650 ಕ್ಕೆ ಏರಿಸಲಾಗುತ್ತಿದೆ.

2051 ರವರೆಗೆ ರಾಜ್ಯಗಳ ಪ್ರಾತಿನಿಧ್ಯಕ್ಕೆ ರಕ್ಷಣೆ: ಜನಸಂಖ್ಯೆ ನಿಯಂತ್ರಣ ಮಾಡಿದ ರಾಜ್ಯಗಳಿಗೆ ಮುಂದಿನ ದಿನಗಳಲ್ಲಿ ಅನ್ಯಾಯವಾಗದಂತೆ ತಡೆಯಲು, 2051 ರ ನಂತರ ನಡೆಯುವ ಮೊದಲ ಜನಗಣತಿಯ ಅಂಕಿಅಂಶಗಳು ಪ್ರಕಟವಾಗುವವರೆಗೆ ರಾಜ್ಯಗಳ ನಡುವಿನ ಹಾಲಿ ಸ್ಥಾನಗಳ ಅನುಪಾತವನ್ನು (Relative share) ಯಥಾಸ್ಥಿತಿಯಲ್ಲಿ ಕಾಯ್ದುಕೊಳ್ಳಲಾಗುವುದು.

ಮಹಿಳಾ ಮೀಸಲಾತಿ ಜಾರಿ: 2029 ರ ಲೋಕಸಭಾ ಚುನಾವಣೆ ಹಾಗೂ ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತರಲು ಈ ಮಸೂದೆ ಅನುವು ಮಾಡಿಕೊಡುತ್ತದೆ.

2011 ರ ಜನಗಣತಿ ಆಧಾರ: ಕ್ಷೇತ್ರಗಳ ಗಡಿ ಪುನರ್ವಿಂಗಡಣೆಯನ್ನು 2011 ರ ಜನಗಣತಿಯ ಅಂಕಿಅಂಶಗಳ ಆಧಾರದ ಮೇಲೆ ನಡೆಸಲಾಗುವುದು. ಇದಕ್ಕಾಗಿ ಕೇಂದ್ರ ಸರ್ಕಾರವು ಡಿಲಿಮಿಟೇಶನ್ ಆಯೋಗವನ್ನು ರಚಿಸಲಿದೆ.

370ಕ್ಕೂ ಹೆಚ್ಚು ಸಂಸದರ ಬೆಂಬಲದ ವಿಶ್ವಾಸ
ಸಂವಿಧಾನ ತಿದ್ದುಪಡಿ ಮಸೂದೆ ಅಂಗೀಕಾರವಾಗಲು ಲೋಕಸಭೆಯಲ್ಲಿ ಮೂರನೇ ಎರಡರಷ್ಟು ಬಹುಮತ (ಸುಮಾರು 360 ಮತಗಳು) ಅಗತ್ಯವಿದೆ. ಎನ್‌ಡಿಎ ಮೈತ್ರಿಕೂಟದ ಜೊತೆಗೆ ಡಿಎಂಕೆ, ಟಿಡಿಪಿ, ವೈಎಸ್‌ಆರ್‌ಸಿಪಿ, ಬಿಆರ್‌ಎಸ್, ಜನಸೇನಾ ಮತ್ತು ಜೆಡಿಎಸ್ ಪಕ್ಷಗಳ ಬೆಂಬಲ ಸೇರಿ ತಮಗೆ 370 ಕ್ಕೂ ಹೆಚ್ಚು ಸಂಸದರ ಬೆಂಬಲವಿದೆ ಎಂದು ಸರ್ಕಾರಿ ಮೂಲಗಳು ವಿಶ್ವಾಸ ವ್ಯಕ್ತಪಡಿಸಿವೆ.

ವಿಪಕ್ಷಗಳ ವಿರೋಧ, ಸ್ಟಾಲಿನ್ ನಿಲುವು ಅಚಲ
ಕಾಂಗ್ರೆಸ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷಗಳು ಈ ಮಸೂದೆಯನ್ನು ವಿರೋಧಿಸುತ್ತಿವೆ. ಹಾಲಿ ಇರುವ 543 ಸ್ಥಾನಗಳಲ್ಲೇ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಬೇಕು ಮತ್ತು 2027 ರ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ವಿಂಗಡಣೆ ನಡೆಯಬೇಕು ಎಂಬುದು ಕಾಂಗ್ರೆಸ್‌ನ ಆಗ್ರಹವಾಗಿದೆ.

ಇಂದು (ನವೆಂಬರ್ 29) ಚೆನ್ನೈನಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ನಾಯಕರು, ಮಸೂದೆಗೆ ನೀಡಿರುವ ಬೆಂಬಲ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ಆದರೆ, ಈ ಮಸೂದೆಯಿಂದ ತಮಿಳುನಾಡಿಗೆ ರಕ್ಷಣೆ ಸಿಗಲಿದೆ ಎಂದು ಸ್ಪಷ್ಟಪಡಿಸಿರುವ ಸ್ಟಾಲಿನ್, ತಮ್ಮ ಬೆಂಬಲವನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ.

Add Zee News as a Preferred Source
TAGS:
Kannada News