ರಾಜ್ಯದಾದ್ಯಂತ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಲು ಸರತಿ ಸಾಲಿನಲ್ಲಿ ನಿಲ್ಲುವ ಅಥವಾ ಕಚೇರಿಗಳಿಗೆ ಅಲೆಯುವ ತಾಪತ್ರಯಕ್ಕೆ ತೆರೆ ಬೀಳಲಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು 'ಅನ್ನ ಸೇವೆ' ಎಂಬ ನೂತನ ಮೊಬೈಲ್ ಆ್ಯಪ್ ಅನ್ನು ಲೋಕಾರ್ಪಣೆ ಮಾಡಿದ್ದು, ಇನ್ನು ಮುಂದೆ ಮನೆಯಲ್ಲೇ ಕುಳಿತು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದಾಗಿದೆ.
1/6
ರೇಷನ್ ಕಾರ್ಡ್ ಇ-ಕೆವೈಸಿ
ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಲು ಇನ್ಮುಂದೆ ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಕ್ಯೂ ನಿಲ್ಲಬೇಕಿಲ್ಲ. ಮನೆಯಲ್ಲೇ ಕುಳಿತು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಪೂರ್ಣಗೊಳಿಸಬಹುದು.
2/6
ಆಹಾರ ಇಲಾಖೆಯಿಂದ ಹೊಸ ಆ್ಯಪ್
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ರೇಷನ್ ಕಾರ್ಡ್ ಇ-ಕೆವೈಸಿ ಪೂರ್ಣಗೊಳಿಸಲು ಅನುಕೂಲವಾಗಲೆಂದು 'ಅನ್ನ ಸೇವೆ' ಎಂಬ ಆ್ಯಪ್ ಬಿಡುಗಡೆ ಮಾಡಿದೆ.
3/6
ಅನ್ನ ಸೇವೆ ಆ್ಯಪ್‌ನಿಂದ ಏನು ಪ್ರಯೋಜನ
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬಿಡುಗಡೆ ಮಾಡಿರುವ ಅನ್ನ ಸೇವೆ ಆ್ಯಪ್‌ನಿಂದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್‌ಗಳ e-KYCಯನ್ನು ಪಡಿತರ ಚೀಟಿದಾರರು ತಾವಿರುವ ಸ್ಥಳದಲ್ಲೇ ಸುಲಭವಾಗಿ ಪೂರ್ಣಗೊಳಿಸಬಹುದಾಗಿದೆ.
4/6
‘ಅನ್ನ ಸೇವೆ’ ಆ್ಯಪ್ ಬಗ್ಗೆ ಸಚಿವರ ಮಾತು
ಬೆಂಗಳೂರಿನ ಶಿವಾಜಿನಗರದ ಬ್ರಾಡ್‌ವೇನಲ್ಲಿ ನಡೆದ ಕಾರ್ಯಕ್ರಮದಲ್ಲಿ ʼಅನ್ನ ಸೇವೆʼ ಆ್ಯಪ್ ಬಿಡುಗಡೆ ಮಾಡಿ ಮಾತನಾಡಿದ ಆಹಾರ ಇಲಾಖೆ ಸಚಿವ ರಿಜ್ವಾನ್ ಅರ್ಷದ್, ಬಡವರಿಗೆ ರೇಷನ್ ಪಡೆಯುವಲ್ಲಿ ಯಾವುದೇ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಈ ತಾಂತ್ರಿಕ ಬದಲಾವಣೆ ತರುತ್ತಿದ್ದೇವೆ ಎಂದು ಹೇಳಿದ್ದಾರೆ.
5/6
ಇದೊಂದು ಪೈಲೆಟ್ ಪ್ರಾಜೆಕ್ಟ್
ರಾಜ್ಯದಲ್ಲಿ ಸುಮಾರು 4.5 ಕೋಟಿ ಜನರು ಇದರ ಫಲಾನುಭವಿಗಳಾಗಿದ್ದು, e-KYC ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ ಈ ಪೈಲಟ್ ಯೋಜನೆ ಜಾರಿಗೆ ತರಲಾಗಿದೆ.
6/6
‘ಅನ್ನ ಸೇವೆ’ ಆ್ಯಪ್
ಮೊದಲ ಹಂತದಲ್ಲಿ ಈ 'ಅನ್ನ ಸೇವೆ' ಆ್ಯಪ್ ಅನ್ನು ಪ್ರಾಯೋಗಿಕ ಯೋಜನೆ ಆಗಿ ರಾಜ್ಯದ 8 ಜಿಲ್ಲೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ಸದ್ಯ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಉಡುಪಿ, ಹಾವೇರಿ, ಕಾರವಾರ, ಬಳ್ಳಾರಿ, ಬೀದರ್ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಆ್ಯಪ್ ಸೇವೆ ಆರಂಭಿಸಲಾಗಿದೆ. ಹಂತ ಹಂತವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸುವುದಾಗಿ ಸಚಿವರು ತಿಳಿಸಿದ್ದಾರೆ.