• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಫೋಟೋಗ್ಯಾಲರಿ
  • /ನವೆಂಬರ್ 9, 10ರಂದು ರಾಜ್ಯದಲ್ಲಿ ಮಳೆ ಆಟ.. ಯಾವ ಜಿಲ್ಲೆಗಳಿಗೆ ಅಲರ್ಟ್?

ನವೆಂಬರ್ 9, 10ರಂದು ರಾಜ್ಯದಲ್ಲಿ ಮಳೆ ಆಟ.. ಯಾವ ಜಿಲ್ಲೆಗಳಿಗೆ ಅಲರ್ಟ್?

Written ByRamya. R. Gowda
Published: Nov 09, 2026, 10:11 IST|Updated: Nov 09, 2026, 10:20 IST
joinshare
ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ತಗ್ಗಿದ್ರೂ, ಕೆಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಮುಂದುವರಿದಿದೆ. ನವೆಂಬರ್ 9 ಮತ್ತು 10ರಂದು ಕರ್ನಾಟಕದ ಹವಾಮಾನದಲ್ಲಿ ಮಿಶ್ರ ಬದಲಾವಣೆಯಾಗುವ ಸಾಧ್ಯತೆಯಿದೆ.


ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ತಗ್ಗಿದ್ರೂ, ಕೆಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಮುಂದುವರಿದಿದೆ. ನವೆಂಬರ್ 9 ಮತ್ತು 10ರಂದು ಕರ್ನಾಟಕದ ಹವಾಮಾನದಲ್ಲಿ ಮಿಶ್ರ ಬದಲಾವಣೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾದ್ರೆ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಹಾಗಾದ್ರೆ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಯಾವ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ? ಇಲ್ಲಿದೆ ಹವಾಮಾನದ ಕಂಪ್ಲೀಟ್ ರಿಪೋರ್ಟ್.
 

Rain alert 1/5

ಮಳೆ ಅಬ್ಬರ

ಕರಾವಳಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾದ್ರೆ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಹಾಗಾದ್ರೆ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಯಾವ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ? ಎಂದು ತಿಳಿಯಲು ಈ ಸ್ಟೋರಿ ಓದಿ.
Rain alert 2/5

ಮಳೆ ಅಲರ್ಟ್

ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ತುಂತುರು ಮಳೆಯಾಗಬಹುದು. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ. ಸದ್ಯಕ್ಕೆ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇಲ್ಲ.
Rain alert 3/5

ದಕ್ಷಿಣ ಒಳನಾಡಿನಲ್ಲಿ ಮುಂದುವರಿಯಲಿದೆ ಮಳೆ

ದಕ್ಷಿಣ ಒಳನಾಡಿನ ಕೊಡಗು, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 9 ಮತ್ತು 10ರಂದು ಈ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ತುಂತುರು ಮಳೆಯಾಗುವ ನಿರೀಕ್ಷೆಯಿದೆ.
Rain alert 4/5

Rain alert

ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ಇಲ್ಲ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
Rain alert 5/5

Rain alert

ರಾಜಧಾನಿ ಬೆಂಗಳೂರಿನಲ್ಲೂ ಸದ್ಯಕ್ಕೆ ಮಳೆಯಾಗುವ ಮುನ್ಸೂಚನೆ ಇಲ್ಲ. ಒಟ್ಟಾರೆ ರಾಜ್ಯದ ಕೆಲ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾತ್ರ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು ಸೇರಿದಂತೆ ಉಳಿದ ಪ್ರದೇಶಗಳಲ್ಲಿ ಒಣಹವೆ ಮುಂದುವರಿಯಲಿದೆ.ಇನ್ನು ಮುಂದಿನ ದಿನಗಳಲ್ಲಿ ಹವಾಮಾನದಲ್ಲಿ ಆಗುವ ಬದಲಾವಣೆಗಳ ಬಗ್ಗೆ ಹವಾಮಾನ ಇಲಾಖೆ ನೀಡುವ ಮುನ್ಸೂಚನೆ ಮೇಲೆ ಎಲ್ಲರ ಕಣ್ಣಿದೆ.
TAGS:
Kannada News

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.